ಮೋಟೋ G 5G ಸ್ಮಾರ್ಟ್‌ಫೋನ್ ಬಿಡುಗಡೆ! ಆಕರ್ಷಕ ಫೀಚರ್ಸ್!
ಮೊಟೊರೊಲಾ ಸಂಸ್ಥೆ ಬಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳಿಂದ ಗುರುತಿಸಿಕೊಂಡಿದೆ. ಮೊಟೊರೊಲಾ ಕಂಪೆನಿಯ ಇತ್ತೀಚಿನ ಸ್ಮಾರ್ಟ್‌ಫೋನ್‌ಗಳು ಹಲವು ಆಕರ್ಷಕ ಫೀಚರ್ಸ್‌ಗಳೊಂದಿಗೆ ಗ್ರಾಹಕರನ್ನು ಸೆಳೆದಿವೆ. ಇದೀಗ ತನ್ನ ಹೊಸ ಮೊಟೊ G 5G ಸ್ಮಾರ್ಟ್‌ಫೋನ್ ಅನ್ನು ಬಿಡುಗಡೆ ಮಾಡಿದೆ. ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 750 G SoC ಪ್ರೊಸೆಸರ್ ಬಲವನ್ನು ಪಡೆದುಕೊಂಡಿದ್ದು, 5,000mAh ಬ್ಯಾಟರಿ ಪ್ಯಾಕ್‌ಪ್ ಹೊಂದಿರುವುದು ಈ ಸ್ಮಾರ್ಟ್‌ಫೋನಿನ ಹೈಲೈಟ್ ಆಗಿದೆ.

ಹೌದು, ಮೊಟೊರೊಲಾ ಸಂಸ್ಥೆ ತನ್ನ ಮೋಟೋ G 5G ಸ್ಮಾರ್ಟ್‌ಫೋನ್ ಅನ್ನು ಮಾರುಕಟ್ಟೆಗೆ ಪರಿಚಯಿಸಿದೆ. ಇದು 48 ಮೆಗಾಪಿಕ್ಸೆಲ್ ಸೆನ್ಸಾರ್ ಒಳಗೊಂಡ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್ 6.7 ಇಂಚಿನ ಡಿಸ್‌ಪ್ಲೇ ಹೊಂದಿದ್ದು, ವೊಲ್ಕ್ಯಾನಿಕ್ ಗ್ರೇ, ಫ್ರಾಸ್ಟೆಡ್ ಸಿಲ್ವರ್ ಕಲರ್ ಆಯ್ಕೆಗಳಲ್ಲಿ ಲಭ್ಯವಾಗಲಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನಿನ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ
ಮೋಟೋ G 5G ಸ್ಮಾರ್ಟ್‌ಫೋನ್ 1,080x2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.66 ಇಂಚಿನ ಫುಲ್-ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇಯು 60Hz ರಿಫ್ರೆಶ್ ರೇಟ್ ಅನ್ನು ಹೊಂದಿದೆ. ಇದು ಪರದೆಯನ್ನು HDR10 ರಿಫ್ರೆಶ್ ರೇಟ್ ಅನ್ನು ಹೊಂದಿದ್ದು, 20: 9 ಡಿಸ್‌ಪ್ಲೇ ರಚನೆ ಅನುಪಾತವನ್ನು ಹೊಂದಿದೆ.

ಪ್ರೊಸೆಸರ್ ಬಲ
ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 750 SoC ಪ್ರೊಸೆಸರ್ ಬಲವನ್ನು ಪಡೆದುಕೊಂಡಿದ್ದು, ಆಂಡ್ರಾಯ್ಡ್ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಲಿಸದೆ. ಹಾಗೇಯೇ 4GB RAM ಮತ್ತು 64GB ಸಂಗ್ರಹ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ ಮೆಮೊರಿ ಕಾರ್ಡ್ ಮೂಲಕ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವ ಆಯ್ಕೆಯನ್ನು ಸಹ ನೀಡಲಾಗಿದೆ.

ಕ್ಯಾಮೆರಾ ವಿಶೇಷ
ಮೋಟೋ G 5G ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್ 118 ಡಿಗ್ರಿ ಫಿಲ್ಡ್ ಆಪ್ ವ್ಯೂ ಅನ್ನು ಹೊಂದಿದೆ. ಮೂರನೇ ಕ್ಯಾಮೆರಾ 2-ಮೆಗಾಪಿಕ್ಸೆಲ್ ಮ್ಯಾಕ್ರೋ ಸೆನ್ಸಾರ್ ಅನ್ನು ಹೊಂದಿದೆ. ಜೊತೆಗೆ ಸೆಲ್ಫಿಗಾಗಿ 16 ಮೆಗಾಪಿಕ್ಸೆಲ್ ಸೆನ್ಸಾರ್ ಕ್ಯಾಮೆರಾವನ್ನು ನೀಡಲಾಗಿದೆ.

ಬ್ಯಾಟರಿ ಮತ್ತು ಇತರೆ
ಇದು 5,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್ ಅನ್ನು ಹೊಂದಿದ್ದು, 20W ಟರ್ಬೊಪವರ್ ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಈ ಬ್ಯಾಟರಿ ಬಾಳಿಕೆ ಎರಡು ದಿನಗಳವರೆಗೆ ಇರುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, NFC, ಬ್ಲೂಟೂತ್ 5.1, ವೈ-ಫೈ, ಯುಎಸ್‌ಬಿ ಟೈಪ್-ಸಿ ಪೋರ್ಟ್, ಜಿಪಿಎಸ್ ಅನ್ನು ಬೆಂಬಲಿಸಲಿದೆ. ಇದಲ್ಲದೆ ಫೋನ್‌ನ ಹಿಂಭಾಗದಲ್ಲಿ ಫಿಂಗರ್‌ಪ್ರಿಂಟ್ ಸೆನ್ಸಾರ್ ಇದೆ.

ಬೆಲೆ ಮತ್ತು ಲಭ್ಯತೆ
ಸದ್ಯ ಈ ಸ್ಮಾರ್ಟ್‌ಫೋನ್ ಯುರೋಪಿಯನ್ ದೇಶಗಳಲ್ಲಿ ಬಿಡುಗಡೆ ಆಗಿದ್ದು, ಇದರ ಬೆಲೆ ಯೂರೋ 299.99 (ಸುಮಾರು ರೂ. 26,200) ಆಗಿದೆ. ಇದಲ್ಲದೆ ಮುಂದಿನ ವಾರಗಳಲ್ಲಿ ಭಾರತ, ಲ್ಯಾಟಿನ್ ಅಮೆರಿಕ, ಮಧ್ಯಪ್ರಾಚ್ಯ ಮತ್ತು ಏಷ್ಯಾದ ಆಯ್ದ ದೇಶಗಳಲ್ಲೂ ಈ ಫೋನ್ ಬಿಡುಗಡೆ ಆಗಲಿದೆ ಎಂದು ಕಂಪನಿ ಬ್ಲಾಗ್ ಪೋಸ್ಟ್‌ನಲ್ಲಿ ತಿಳಿಸಿದೆ.


Click it and Unblock the Notifications