ಭಾರತದಲ್ಲಿ ಮೋಟೋ G 5G ಸ್ಮಾರ್ಟ್‌ಫೋನ್ ಬಿಡುಗಡೆ! ಬೆಲೆ ಎಷ್ಟು?
ಮೊಟೊರೊಲಾ ಕಂಪೆನಿ ಈಗಾಗಲೇ ಹಲವು ಆಕರ್ಷಕ ಸ್ಮಾರ್ಟ್‌ಫೋನ್‌ಗಳನ್ನ ಪರಿಚಯಿಸಿದೆ. ಇದೀಗ ತನ್ನ ಹೊಸ ಮೋಟೋ G 5G ಸ್ಮಾರ್ಟ್‌ಫೋನ್ ಅನ್ನು ಬಿಡುಗಡೆ ಮಾಡಿದೆ. ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 750 G SoC ಪ್ರೊಸೆಸರ್ ವೇಗವನ್ನು ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್ ಅನ್ನು ಒಳಗೊಂಡಿದೆ.

ಹೌದು, ಮೊಟೊರೊಲಾ ಕಂಪೆನಿ ಹೊಸ ಮೋಟೋ G 5G ಸ್ಮಾರ್ಟ್‌ಫೋನ್ ಅನ್ನು ಭಾರತದಲ್ಲಿ ಬಿಡುಗಡೆ ಮಾಡಿದೆ. ಇನ್ನು ಈ ಸ್ಮಾರ್ಟ್‌ಫೋನ್ 6.7 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದ್ದು, ಪಂಚ್ ಹೋಲ್ ಡಿಸ್‌ಪ್ಲೇ ಮಾದರಿಯನ್ನು ಒಳಗೊಂಡಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್‌ಗಳನ್ನ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಲೇ ವಿನ್ಯಾಸ
ಮೋಟೋ G 5G ಸ್ಮಾರ್ಟ್‌ಫೋನ್ 1,080x2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.7 ಇಂಚಿನ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ ಸ್ಕ್ರೀನ್ ಟು ಬಾಡಿ ನಡುವಿನ ಅನುಪಾತ 85.7% ಅನ್ನು ಹೊಂದಿದೆ. ಜೊತೆಗೆ ಡಿಸ್‌ಪ್ಲೇ ರಚನೆಯ ಅನುಪಾತ 20.9 ಹೊಂದಿದೆ.

ಪ್ರೊಸೆಸರ್ ಸಾಮರ್ಥ್ಯ
ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 750 G SoC ಪ್ರೊಸೆಸರ್ ಸಾಮರ್ಥ್ಯವನ್ನು ಹೊಂದಿದ್ದು, ಆಂಡ್ರಾಯ್ಡ್ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸುತ್ತದೆ. ಹಾಗೆಯೇ ಇದು 6GB RAM ಮತ್ತು 128GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ ಮೆಮೊರಿ ಕಾರ್ಡ್ ಮೂಲಕ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ವಿಶೇಷತೆ
ಮೋಟೋ G 5G ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ವೈಡ್ ಆಂಲ್ ಸೆನ್ಸಾರ್, ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ
ಮೋಟೋ G 5G ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್ ಅನ್ನು ಹೊಂದಿದ್ದು, 20W ಟರ್ಬೊಪವರ್ ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, NFC, ಬ್ಲೂಟೂತ್ 5.1, ವೈ-ಫೈ 802.11 AC, ಯುಎಸ್‌ಬಿ ಟೈಪ್-ಸಿ ಪೋರ್ಟ್, GPS ಅನ್ನು ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ
ಮೋಟೋ G 5G ಸ್ಮಾರ್ಟ್‌ಫೋನ್ ಭಾರತದಲ್ಲಿ 20,999 ರೂ. ಬೆಲೆಯನ್ನು ಹೊಂದಿದೆ. ಇದರ ಮೂಲ ಬೆಲೆ 24,999 ರೂ. ಆಗಿದ್ದು, ಇದನ್ನು 20,999. ರೂ ಗಳಿಗೆ ಫ್ಲಿಪ್‌ಕಾರ್ಟ್‌ನಲ್ಲಿ ಪ್ರತ್ಯೇಕವಾಗಿ ಲಭ್ಯವಿದೆ. ಎಸ್‌ಬಿಐ ಮತ್ತು ಆಕ್ಸಿಸ್ ಕಾರ್ಡ್‌ಗಳಲ್ಲಿ 5% ಕ್ಯಾಶ್‌ಬ್ಯಾಕ್ ಸೇರಿದೆ. ಜೊತೆಗೆ ಎಚ್‌ಡಿಎಫ್‌ಸಿ ಬ್ಯಾಂಕ್ ಕಾರ್ಡ್‌ಗಳಿಗೆ ರೂ. 1,000 ಕ್ಯಾಶ್‌ಬ್ಯಾಕ್ ಪಡೆಯಬಹುದಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್ ವಾಲ್ಕಾನಿಕ್ ಗ್ರೇ ಮತ್ತು ಫ್ರಾಸ್ಟೆಡ್ ಸಿಲ್ವರ್ ಬಣ್ಣ ಆಯ್ಕೆಗಳಲ್ಲಿ ಲಭ್ಯವಾಗಲಿದೆ.


Click it and Unblock the Notifications








