ಸದ್ಯದಲ್ಲೇ ಮೋಟೋ G 5G ಹಾಗೂ ಮೋಟೋ G9 ಪವರ್ ಫೋನ್ ಬಿಡುಗಡೆ!
ಮೊಟೊರೊಲಾ ಕಂಪೆನಿ ತನ್ನ ಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿದೆ. ಇತ್ತೀಚಿನ ಸ್ಮಾರ್ಟ್‌ಫೋನ್‌ಗಳು ಹಲವು ಆಕರ್ಷಕ ಫೀಚರ್ಸ್‌ಗಳನ್ನ ಒಳಗೊಂಡಿವೆ. ಸದ್ಯ ಇದೀಗ ಮೊಟೊರೊಲಾ ತನ್ನ ಹೊಸ ಮೋಟೋ G 5G ಮತ್ತು ಮೋಟೋ G9 ಪವರ್ ಸ್ಮಾರ್ಟ್‌ಫೋನ್ ಅನ್ನು ಭಾರತದಲ್ಲಿ ಬಿಡುಗಡೆ ಮಾಡಲು ಸಿದ್ದತೆ ನಡೆಸಿದೆ. ಈ ಎರಡು ಸ್ಮಾರ್ಟ್‌ಫೋನ್‌ಗಳು ಶೀಘ್ರದಲ್ಲೇ ಬಿಡುಗಡೆ ಆಗಲಿದೆ. ಇನ್ನು ಮೋಟೋ G 5G ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 750G SoC ಪ್ರೊಸೆಸರ್ ಅನ್ನು ಹೊಂದಿದ್ದು, ಮೋಟೋ G9 ಪವರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 662 SoC ಪ್ರೊಸೆಸರ್ ಹೊಂದಿದೆ.

ಹೌದು, ಮೊಟೊರೊಲಾ ಸಂಸ್ಥೆಯ ಹೊಸ ಮೋಟೋ G 5G ಹಾಗೂ ಮೋಟೋ G9 ಪವರ್ ಸ್ಮಾರ್ಟ್‌ಫೋನ್ ಶೀಘ್ರದಲ್ಲೇ ಭಾರತಕ್ಕೆ ಎಂಟ್ರಿ ನೀಡಲಿದೆ. ಇದರಲ್ಲಿ ಮೋಟೋ G 5G ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್ ಹೊಂದಿದ್ದರೆ, ಮೋಟೋ G9 ಪವರ್ 6,000mAh ಬ್ಯಾಟರಿ ಪ್ಯಾಕ್‌ಅಪ್ ಅನ್ನು ಒಳಗೊಂಡಿದೆ. ಇನ್ನುಳಿದಂತೆ ಈ ಎರಡು ಸ್ಮಾರ್ಟ್‌ಫೋನ್ ಹೊಂದಿರುವ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಮೋಟೋ G 5G ಸ್ಮಾರ್ಟ್‌ಫೋನ್
ಮೋಟೋ G 5G ಸ್ಮಾರ್ಟ್‌ಫೋನ್ 1,080x2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.7 ಇಂಚಿನ ಫುಲ್ ಹೆಚ್‌ಡಿ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 750 G SoC ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೇಯೇ 4GB RAM ಮತ್ತು 64GB ಇಂಟರ್ ಸ್ಟೋರೇಜ್ ಅನ್ನು ಹೊಂದಿದೆ. ಇದು ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ವೈಡ್-ಆಂಗಲ್ ಸೆನ್ಸಾರ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಸೆನ್ಸಾರ್ ಹೊಂದಿದೆ. ಜೊತೆಗೆ 16 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಈ 5,000mAh ಬ್ಯಾಟರಿ ಸಾಮರ್ಥ್ಯವನ್ನು ಹೊಂದಿದ್ದು, 20W ಟರ್ಬೊಪವರ್ ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ ಎಂದು ನಿರೀಕ್ಷಿಸಲಾಗಿದೆ.

ಮೋಟೋ G9 ಪವರ್ ಸ್ಮಾರ್ಟ್‌ಫೋನ್
ಮೋಟೋ G9 ಪವರ್ ಸ್ಮಾರ್ಟ್‌ಫೋನ್ 6.8-ಇಂಚಿನ ಹೆಚ್‌ಡಿ + ಐಪಿಎಸ್ ಡಿಸ್‌ಪ್ಲೇ ಹೊಂದಿದೆ. ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 662 SoC ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 4GB RAM ಮತ್ತು 128GB ಇಂಟರ್ ಸ್ಟೋರೇಜ್ ಅನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್ ಟ್ರಿಪಲ್ ಕ್ಯಾಮೆರಾ ರಿಯರ್ ಸೆಟಪ್ ಹೊಂದಿದ್ದು, ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಸೆನ್ಸರ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಹೊಂದಿದೆ. ಜೊತೆಗೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಇದು 6,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್ ಅನ್ನು ಹೊಂದಿದ್ದು, 20W ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ ಎಂದು ಅಂದಾಜಿಸಲಾಗಿದೆ

ಬೆಲೆ ಮತ್ತು ಲಭ್ಯತೆ
ಇನ್ನು ಮೋಟೋ G 5G ಯುರೋಪ್‌ನಲ್ಲಿ ಈಗಾಗಲೇ ಬಿಡುಗಡೆ ಆಗಿದ್ದು, ಇದರ ಬೆಲೆ ಯೂರೋ 299.99 ಆಗಿದೆ. ಇನ್ನು ಭಾರತದಲ್ಲಿ ಅಂದಾಜು 26,300 ರೂ ಗೆ ಲಭ್ಯ ವಾಗುವ ನಿರೀಕ್ಷೆ ಇದೆ. ಅಲ್ಲದೆ ಮೊಟೊ G9 ಪವರ್ 4 GB RAM + 128GB ಶೇಖರಣಾ ಮಾದರಿಗೆ ಅಂದಾಜು 17,500 ರೂ. ಬೆಲೆಗೆ ಲಭ್ಯವಾಗಲಿದೆ ಎಂದು ಅಂದಾಜಿಸಲಾಗಿದೆ.


Click it and Unblock the Notifications




