Just In
Don't Miss
- News
ಬೆಂಗಳೂರಿಗಾಗಿ ಹೊಸ ಮಾಸ್ಟರ್ಪ್ಲ್ಯಾನ್ ಸಿದ್ಧಪಡಿಸುತ್ತಿರುವ ಬಿಡಿಎ
- Sports
ಸ್ಟೀವ್ ಸ್ಮಿತ್ ಮತ್ತೆ ನಾಯಕನಾಗುವ ಸಾಧ್ಯತೆಯ ಬಗ್ಗೆ ಪ್ರತಿಕ್ರಿಯಿಸಿದ ಇಯಾನ್ ಚಾಪೆಲ್
- Finance
ಎಲ್ ಪಿಜಿ ಸಿಲಿಂಡರ್ ಉಚಿತವಾಗಿ ಪಡೆಯುವುದು ಹೇಗೆ? ಇಲ್ಲಿದೆ ಮಾಹಿತಿ
- Automobiles
ಜನರ ಅಸೂಯೆಗೆ ಬಲಿಪಶುವಾದ ಸೂಪರ್ ಬೈಕ್ ಸವಾರ
- Movies
KSRTC ಬಸ್ಸಿನಲ್ಲಿ ನಿರ್ಮಾಣವಾದ ವಿಶೇಷ ಸ್ತ್ರೀ ಶೌಚಾಲಯ ಪರಿಶೀಲಿಸಿದ ನಟಿ ಶ್ರುತಿ
- Lifestyle
ಚಳಿಗಾಲದಲ್ಲಿ ಚರ್ಮದ ರಕ್ಷಣೆಗೆ ಈ ಆಹಾರಗಳನ್ನು ಸೇವಿಸುವುದನ್ನು ಮರೆಯಬೇಡಿ..
- Education
BMRCL Recruitment 2021: ಸೀನಿಯರ್ ಅರ್ಬನ್ ಮತ್ತು ಟ್ರಾನ್ಸ್ ಪೋರ್ಟ್ ಪ್ಲಾನರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಮೋಟೋ G 5G ಸ್ಮಾರ್ಟ್‌ಫೋನ್ ಬಿಡುಗಡೆ ಡೇಟ್ ಫಿಕ್ಸ್!
ಟೆಕ್ ವಲಯದಲ್ಲಿ ಭಿನ್ನ ಮಾದರಿಯ ಸ್ಮಾರ್ಟ್‌ಫೊನ್‌ಗಳಿಗೆ ಮೊಟೊರೊಲಾ ಕಂಪೆನಿ ಸೈ ಎನಿಸಿಕೊಂಡಿದೆ. ಈಗಾಗಲೇ ಹಲವು ವೈವಿಧ್ಯಮಯ ಸ್ಮಾರ್ಟ್‌ಫೋನ್ ಪರಿಚಯಿಸಿರುವ ಮೊಟೊರೊಲಾ ಇದೀಗ ಹೊಸ ಮೋಟೋ G5 G ಸ್ಮಾರ್ಟ್‌ಫೋನ್ ಬಿಡುಗಡೆಗೆ ಸಿದ್ದತೆ ನಡೆಸಿದೆ. ಈ ಸ್ಮಾರ್ಟ್‌ಫೋನ್ ಇದೇ ನವೆಂಬರ್ 30 ರಂದು ಪಾದಾರ್ಪಣೆ ಮಾಡಲಿದೆ ಮತ್ತು ಫ್ಲಿಪ್‌ಕಾರ್ಟ್‌ನಲ್ಲಿ ಪ್ರತ್ಯೇಕವಾಗಿ ಲಭ್ಯವಾಗಲಿದೆ ಎಂದು ಹೇಳಲಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 750G ಪ್ರೊಸೆಸರ್ ಸಾಮರ್ಥ್ಯವನ್ನು ಹೊಂದಿದೆ.

ಹೌದು, ಮೊಟೊರೊಲಾ ಸಂಸ್ಥೆಯ ಹೊಸ ಮೋಟೋ G 5G ಸ್ಮಾರ್ಟ್‌ಫೋನ್ ಬಿಡುಗಡೆಯ ಡೇಟ್ ಫಿಕ್ಸ್ ಆಗಿದೆ. ಮೋಟೋ G 5G ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್ ಹೊಂದಿದ್ದು, ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿರಲಿದೆ ಎನ್ನಲಾಗಿದೆ. ಇನ್ನುಳಿದಂತೆ ಈ ಎರಡು ಸ್ಮಾರ್ಟ್‌ಫೋನ್ ಹೊಂದಿರುವ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ವಿಶೇಷತೆ
ಮೋಟೋ G 5G ಸ್ಮಾರ್ಟ್‌ಫೋನ್ 1,080x2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.7 ಇಂಚಿನ ಫುಲ್ ಹೆಚ್‌ಡಿ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಮ್ಯಾಕ್ಸ್ ವಿಷನ್ ಎಲ್‌ಸಿಡಿ ಡಿಸ್‌ಪ್ಲೇ ಆಗರಲಿದೆ. ಇನ್ನು ಈ ಡಿಸ್‌ಪ್ಲೇಯು ವಿಡಿಯೋ ಕರೆಗೆ ಯೋಗ್ಯವಾದ ಮಾದರಿಯನ್ನು ಹೊಂದಿದೆ.

ಪ್ರೊಸೆಸರ್
ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 750 G SoC ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೇಯೇ 4GB RAM ಮತ್ತು 64GB ಇಂಟರ್ ಸ್ಟೋರೇಜ್ ಅನ್ನು ಹೊಂದಿದೆ. ಇದಲ್ಲದೆ ಮೆಮೊರಿ ಕಾರ್ಡ್ ಮೂಲಕ 512GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ವಿನ್ಯಾಸ
ಇದು ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ವೈಡ್-ಆಂಗಲ್ ಸೆನ್ಸಾರ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಸೆನ್ಸಾರ್ ಹೊಂದಿದೆ. ಜೊತೆಗೆ 16 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ ಫೀಚರ್ಸ್
ಈ ಸ್ಮಾರ್ಟ್‌ಫೋನ್ 5,000mAh ಬ್ಯಾಟರಿ ಸಾಮರ್ಥ್ಯವನ್ನು ಹೊಂದಿದ್ದು, 20W ಟರ್ಬೊಪವರ್ ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ ಎಂದು ನಿರೀಕ್ಷಿಸಲಾಗಿದೆ. ಈ ಫೋನ್ 10 ಗಂಟೆಗಳವರೆಗೆ ಉಳಿಯಲು ಕೇವಲ 15 ನಿಮಿಷಗಳ ಚಾರ್ಜಿಂಗ್ ಸಾಕು ಎಂದು ಹೇಳಲಾಗಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ವೈಫೈ, ಬ್ಲೂಟೂತ್, ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್, ಯುಎಸ್‌ಬಿ ಟೈಪ್-ಸಿ, 3.5mm ಹೆಡ್‌ಸೆಟ್ ಜ್ಯಾಕ್, ಬಾಟಮ್-ಪೋರ್ಟೆಡ್ ಲೌಡ್ ಸ್ಪೀಕರ್, ಡ್ಯುಯಲ್ ಸಿಮ್ ಸಪೋರ್ಟ್ ಅನ್ನು ಒಳಗೊಂಡಿದೆ.
-
92,999
-
17,999
-
39,999
-
29,400
-
38,990
-
29,999
-
16,999
-
23,999
-
18,170
-
21,900
-
14,999
-
17,999
-
42,099
-
16,999
-
23,999
-
29,495
-
18,580
-
64,900
-
34,980
-
45,900
-
17,999
-
54,153
-
7,000
-
13,999
-
38,999
-
29,999
-
20,599
-
43,250
-
32,440
-
16,190