Home
ಸುದ್ದಿಜಾಲ

ಶೀಘ್ರದಲ್ಲೇ ಎಂಟ್ರಿ ನೀಡಲಿದೆ ಮೋಟೋ G 5G ಸ್ಮಾರ್ಟ್‌ಫೋನ್‌!

ಸ್ಮಾರ್ಟ್‌ಫೊನ್‌ ವಲಯದಲ್ಲಿ ಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳಿಗೆ ಮೊಟೊರೊಲಾ ಸಂಸ್ಥೆ ಹೆಸರುವಾಸಿಯಾಗಿದೆ. ಈಗಾಗಲೇ ಹಲವು ವೈವಿಧ್ಯಮಯ ಸ್ಮಾರ್ಟ್‌ಫೊನ್‌ಗಳನ್ನ ಪರಿಚಯಿಸಿ ತನ್ನ ಸ್ಥಾನವನ್ನ ಭದ್ರಪಡಿಸಿಕೊಂಡಿದೆ. ಇದೀಗ ತನ್ನ ಹೊಸ ಮೋಟೋ G 5G ಸ್ಮಾರ್ಟ್‌ಫೋನ್ ಬಿಡುಗಡೆ ಮಾಡುವುದಕ್ಕೆ ವೇದಿಕೆ ಸಿದ್ದಪಡಿಸಿಕೊಂಡಿದೆ. ಈ ಸ್ಮಾರ್ಟ್‌ಫೋನ್‌ ಹೊಸದಾಗಿ ಘೋಷಿಸಲಾದ ಸ್ನಾಪ್‌ಡ್ರಾಗನ್ 750G SoC ಪ್ರೊಸೆಸರ್‌ ಅನ್ನು ಹೊಂದಿರಲಿದೆ ಎಂದು ಹೇಳಲಾಗಿದೆ.

ಮೊಟೊರೊಲಾ

ಹೌದು, ಮೊಟೊರೊಲಾ ಕಂಪೆನಿ ತನ್ನ ಹೊಸ ಮೋಟೋ G 5G ಸ್ಮಾರ್ಟ್‌ಫೋನ್ ಬಿಡುಗಡೆಗೆ ತಯಾರಿ ನಡೆಸಿದೆ. ಈ ಸ್ಮಾರ್ಟ್‌ಫೋನ್‌ ಜುಲೈನಲ್ಲಿ ಬಿಡುಗಡೆಯಾದ ಮೋಟೋ G 5G ಪ್ಲಸ್‌ನ ವೆನಿಲ್ಲಾ ರೂಪಾಂತರವಾಗಿದೆ. ಇದು ಪಂಚ್‌-ಹೋಲ್‌ ಕಟೌಟ್‌ ಹೊಂದಿರುವ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಅಲ್ಲದೆ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್‌ನೊಂದಿಗೆ ಬರುತ್ತದೆ ಎಂದು ನಿರೀಕ್ಷಿಸಲಾಗಿದೆ. ಇನ್ನು ಈ ಸ್ಮಾರ್ಟ್‌ಫೊನ್‌ ವಿಶೇಷತೆ ಏನು ಅನ್ನೊದು ಆನ್‌ಲೈನ್‌ನಲ್ಲಿ ಲೀಕ್‌ ಆಗಿದ್ದು, ಇದು ಯಾವೆಲ್ಲಾ ಫೀಚರ್ಸ್‌ ಹೊಂದಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ವಿನ್ಯಾಸ

ಡಿಸ್‌ಪ್ಲೇ ವಿನ್ಯಾಸ

ಮೋಟೋ G 5G ಸ್ಮಾರ್ಟ್‌ಫೋನ್‌ 1,080x2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಹೊಂದಿದೆ. ಇದು 6.66 ಇಂಚಿನ ಫುಲ್‌-ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇಯು 60Hz ರಿಫ್ರೆಶ್ ರೇಟ್‌ ಅನ್ನು ಹೊಂದಿರಲಿದೆ ಎಂದು ಅಂದಾಜಿಸಲಾಗಿದೆ.

ಪ್ರೊಸೆಸರ್‌

ಪ್ರೊಸೆಸರ್‌

ಇದು ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್ 750 SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದ್ದು, ಆಂಡ್ರಾಯ್ಡ್‌ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಲಿಸದೆ ಎಂದು ನಿರೀಕ್ಷಿಸಲಾಗಿದೆ. ಹಾಗೇಯೇ 6GB RAM ಮತ್ತು 128GB ಸಂಗ್ರಹ ಸಾಮರ್ಥ್ಯವನ್ನು ಹೊಂದಿರಲಿದೆ ಎಂದು ಹೇಳಲಾಗಿದೆ.

ಕ್ಯಾಮೆರಾ ವಿಶೇಷತೆ

ಕ್ಯಾಮೆರಾ ವಿಶೇಷತೆ

ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿರಲಿದೆ ಎನ್ನಲಾಗಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿರಲಿದೆ ಎನ್ನಲಾಗಿದೆ. ಜೊತೆಗೆ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸೆಲ್ಫಿ ಕ್ಯಾಮೆರಾ ಹೊಂದಿರಲಿದೆ ಎಂದು ಹೇಳಲಾಗಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಮೊಟೊ G 5G ಫೋನ್ 5,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿರಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ವೈಫೈ, ಹಾಟ್‌ಸ್ಪಾಟ್‌, ಬ್ಲೂಟೂತ್‌, ಅನ್ನು ಬೆಂಬಲಿದೆ. ಅಲ್ಲದೆ ಗೂಗಲ್ ಅಸಿಸ್ಟೆಂಟ್ ಬಟನ್ ಹೊಂದಿದೆ ಎಂದು ಹೇಳಲಾಗಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ಬಿಡುಗಡೆಯ ದಿನಾಂಕ ಹಾಗೂ ಬೆಲೆಯ ದಿನಾಂಕದ ಬಗ್ಗೆ ಯಾವುದೇ ವಿವರಗಳನ್ನು ಕಂಪೆನಿ ಹಂಚಿಕೊಂಡಿಲ್ಲ.

Best Mobiles in India

English summary
The phone will be powered by the Snapdragon 750 SoC and come with 6GB of RAM with 128GB of storage.to know more visit to kannada.gizbot.com
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+