Just In
- 16 min ago
2023ರಲ್ಲಿ ಸ್ಮಾರ್ಟ್‌ಫೋನ್ ಖರೀದಿಸುವ ಮುನ್ನ ನೀವು ಗಮನಿಸಲೇಬೇಕಾದ ವಿಚಾರಗಳು!
- 30 min ago
Ooredoo ಸಂಸ್ಥೆಯಿಂದ ಮೈಕ್ರೋಸಾಫ್ಟ್ ಟೀಮ್ಸ್ ಫೋನ್ ಬಗ್ಗೆ ಘೋಷಣೆ; ಯಾರಿಗೆ ಉಪಯೋಗ!?
- 1 hr ago
ಇನ್ಸ್ಟಾಗ್ರಾಮ್ನಲ್ಲಿ ನೂತನ ಸೌಲಭ್ಯ!; ಟೀನೇಜರ್ಸ್ಗೆ ಸಖತ್ ಅನುಕೂಲ!
- 2 hrs ago
ಇನ್ಫಿನಿಕ್ಸ್ ನೋಟ್ 12i ಲಾಂಚ್ ಡೇಟ್ ಬಹಿರಂಗ! ಫೀಚರ್ಸ್ ಹೇಗಿದೆ?
Don't Miss
- Movies
ಅತ್ತೆ ಮನ ಗೆಲ್ಲುವ ಪ್ರಯತ್ನದಲ್ಲಿ ದಿವ್ಯ; ಬಾಲ ಮಾಡುತ್ತಿರುವ ಕುತಂತ್ರ ದಿವ್ಯ ಗಮನಕ್ಕೆ ಬರುತ್ತಾ?
- Automobiles
ಬಹುಬೇಡಿಕೆಯ ಹೋಂಡಾ ಆಕ್ಟಿವಾ ಸ್ಕೂಟರ್ ಮೇಲೆ ಭರ್ಜರಿ ಆಫರ್
- Sports
IND Vs NZ 2nd ODI: ಭಾರತದ ಬೌಲಿಂಗ್ ದಾಳಿಗೆ ತತ್ತರಿಸಿದ ಕಿವೀಸ್ ಪಡೆ: 108 ರನ್ಗಳಿಗೆ ಆಲೌಟ್
- News
ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ: ಬಿಜೆಪಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣ
- Finance
ಅನುಷ್ಕಾ, ಕೊಹ್ಲಿ ಬಾಡಿಗಾರ್ಡ್ ಸೋನು ವೇತನ ಎಷ್ಟಿದೆ ತಿಳಿಯಿರಿ
- Lifestyle
ದೇಹದಲ್ಲಿ ಮೆಗ್ನೇಸಿಯಂ ಕಡಿಮೆಯಾದ್ರೆ ಹೃದ್ರೋಗ ಖಚಿತ..! ಈ ಹತ್ತು ಆಹಾರಗಳು ನಿಮ್ಮ ಡಯಟ್ನಲ್ಲಿರಲಿ..
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ಮೊಟೊ G ಪ್ಲೇ 2023 ಫೋನ್ ಲಾಂಚ್! ಸ್ಟೈಲಿಶ್ ಲುಕ್! ಜಬರ್ದಸ್ತ್ ಫೀಚರ್ಸ್!
ಜನಪ್ರಿಯ ಸ್ಮಾರ್ಟ್‌ಫೋನ್ ಬ್ರ್ಯಾಂಡ್‌ಗಳಲ್ಲಿ ಮೊಟೊರೊಲಾ ಕಂಪೆನಿ ಕೂಡ ಒಂದಾಗಿದೆ. ಆಕರ್ಷಕ ಕ್ಯಾಮೆರಾ ಫೀಚರ್ಸ್ ಹಾಗೂ ಸ್ಟೈಲಿಶ್ ಲುಕ್‌ನಿಂದ ಮೊಟೊ ಫೋನ್‌ಗಳು ಗಮನಸೆಳೆದಿವೆ. ಸದ್ಯ ಇದೀಗ ಮೊಟೊರೊಲಾ ಕಂಪೆನಿ ಹೊಸದಾಗಿ ಮೊಟೊ G ಪ್ಲೇ 2023 ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್ ಮೀಡಿಯಾಟೆಕ್ ಹಿಲಿಯೋ G37 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದು ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಒಳಗೊಂಡಿದೆ.

ಹೌದು, ಮೊಟೊರೊಲಾ ಕಂಪೆನಿ ಹೊಸ ಮೊಟೊ G ಪ್ಲೇ 2023 ಫೋನ್ ಲಾಂಚ್ ಮಾಡಿದೆ. ಇದು 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಈ ಸ್ಮಾರ್ಟ್‌ಫೋನ್ 5 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಪಡೆದುಕೊಂಡಿದೆ. ಇನ್ನು ಕ್ಯಾಮೆರಾ ಫೀಚರ್ಸ್‌ಗಳಲ್ಲಿ ಆಟೋ ಸ್ಮೈಲ್ ಕ್ಯಾಪ್ಚರ್, ಸ್ಮಾರ್ಟ್ ಸಂಯೋಜನೆ ಮತ್ತು ಡ್ಯುಯಲ್ ಕ್ಯಾಪ್ಚರ್‌ನಂತಹ ಹಲವಾರು AI-ಸಕ್ರಿಯಗೊಳಿಸಿದ ಫೀಚರ್ಸ್ ಹೊಂದಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ಏನೆಲ್ಲಾ ಫೀಚರ್ಸ್ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ವಿನ್ಯಾಸ ಹೇಗಿದೆ?
ಮೊಟೊ G ಪ್ಲೇ (2023) ಸ್ಮಾರ್ಟ್‌ಫೋನ್ 6.5 ಇಂಚಿನ ಹೆಚ್‌ಡಿ ಪ್ಲಸ್ IPS TFT LCD ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ ಕರ್ವ್ಡ್ ಎಡ್ಜ್ ಡಿಸೈನ್ ಅನ್ನು ಹೊಂದಿದೆ. ಇನ್ನು ಡಿಸ್‌ಪ್ಲೇ 720 x 1600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಈ ಡಿಸ್‌ಪ್ಲೇ 90hz ರಿಫ್ರೆಶ್ ರೇಟ್ ಅನ್ನು ಬೆಂಬಲಿಸಲಿದೆ.

ಪ್ರೊಸೆಸರ್ ಯಾವುದು?
ಮೊಟೊ G ಪ್ಲೇ (2023) ಸ್ಮಾರ್ಟ್‌ಫೋನ್ ಮೀಡಿಯಾಟೆಕ್ ಹಿಲಿಯೋ G37 SoC ಪ್ರೊಸೆಸರ್ ವೇಗವನ್ನು ಹೊಂದಿದೆ. ಇದು ಆಂಡ್ರಾಯ್ಡ್ 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 3GB RAM ಮತ್ತು 32GB ಇಂಟರ್ ಸ್ಟೋರೇಜ್ ಅನ್ನು ಒಳಗೊಂಡಿದೆ. ಇದಲ್ಲದೆ ಮೈಕ್ರೋ SD ಕಾರ್ಡ್ ಮೂಲಕ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಿಕೊಳ್ಳುವುದಕ್ಕೆ ಅವಕಾಶ ನೀಡಲಿದೆ.

ಕ್ಯಾಮೆರಾ ಸೆಟ್‌ಅಪ್ ಏನಿರಲಿದೆ?
ಮೊಟೊ G ಪ್ಲೇ (2023) ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 16 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸರ್ ಅನ್ನು ಒಳಗೊಂಡಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಪಡೆದುಕೊಂಡಿದೆ. ಜೊತೆಗೆ ಆಟೋ ಸ್ಮೈಲ್ ಕ್ಯಾಪ್ಚರ್, ಸ್ಮಾರ್ಟ್ ಸಂಯೋಜನೆ ಮತ್ತು ಡ್ಯುಯಲ್ ಕ್ಯಾಪ್ಚರ್‌ನಂತಹ ಹಲವಾರು AI-ಸಕ್ರಿಯಗೊಳಿಸಿದ ಕ್ಯಾಮೆರಾ ಫೀಚರ್ಸ್ ಒಳಗೊಂಡಿದೆ.

ಬ್ಯಾಟರಿ ಮತ್ತು ಇತರೆ ಫೀಚರ್ಸ್
ಮೊಟೊ G ಪ್ಲೇ (2023) ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 10W ವೇಗದ ಚಾರ್ಜಿಂಗ್ ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 3.5mm ಹೆಡ್‌ಫೋನ್ ಜ್ಯಾಕ್, ಬ್ಲೂಟೂತ್, ಹಾಟ್‌ಸ್ಪಾಟ್, ವೈಫೈ ಅನ್ನು ಹೊಂದಿದೆ. ಇದಲ್ಲದೆ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಮತ್ತು IP52 ವಾಟರ್ ಪ್ರೂಫ್ ಅನ್ನು ಒಳಗೊಂಡಿದೆ.

ಬೆಲೆ ಮತ್ತು ಲಭ್ಯತೆ
ಮೊಟೊ G ಪ್ಲೇ (2023) ಸ್ಮಾರ್ಟ್‌ಫೋನ್ ಪ್ರಸ್ತುತ US ಮತ್ತು ಕೆನಡಾದಲ್ಲಿ ಮಾತ್ರ ಬಿಡುಗಡೆಯಾಗಿದೆ. ಇದರ ಬೆಲೆ $169.99 (ಅಂದಾಜು 13,971ರೂ) ಹೊಂದಿದೆ. ಇದು ಜನವರಿ 12, 2023 ರಂದು ಎರಡೂ ರಾಷ್ಟ್ರಗಳಲ್ಲಿ ಒಂದೇ ದಿನದಲ್ಲಿ ಅನಾವರಣಗೊಳ್ಳಲಿದೆ. ಇನ್ನು ಭಾರತದಲ್ಲಿ ಇದು ಮುಂದಿನ ವರ್ಷ ಬಿಡುಗಡೆಯಾಗಲಿದೆ ಎಂದು ಅಂದಾಜಿಸಲಾಗಿದೆ. ಆದರೆ ಇದರ ಬಿಡುಗಡೆ ದಿನಾಂಕ ಇನ್ನು ನಿಗಧಿಯಾಗಿಲ್ಲ.
-
54,999
-
36,599
-
39,999
-
38,990
-
1,29,900
-
79,990
-
38,900
-
18,999
-
19,300
-
69,999
-
79,900
-
1,09,999
-
1,19,900
-
21,999
-
1,29,900
-
12,999
-
44,999
-
15,999
-
7,332
-
17,091
-
29,999
-
7,999
-
8,999
-
45,835
-
77,935
-
48,030
-
29,616
-
57,999
-
12,670
-
79,470