ಟೆಕ್ ವಲಯಕ್ಕೆ ಅಚ್ಚರಿಯಂತೆ ಎಂಟ್ರಿ ಕೊಟ್ಟ Moto G Play (2024)! ವಿಭಿನ್ನ ಫೀಚರ್ಸ್!
ಮೊಟೊರೊಲಾ ಕಂಪೆನಿ ಟೆಕ್ ವಲಯದಲ್ಲಿ ಮತ್ತೊಂದು ಹೊಸ ಸ್ಮಾರ್ಟ್‌ಫೋನ್ ಪರಿಚಯಿಸಿದೆ. ಇದನ್ನು ಮೊಟೊರೊಲಾ G ಪ್ಲೇ (2024) ಎಂದು ಹೆಸರಿಸಲಾಗಿದ್ದು, Moto G Play (2023)ಗೆ ಉತ್ತರಾಧಿಕಾರಿಯಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್ ಸ್ನಾಪ್‌ಡ್ರಾಗನ್ 680 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ.
ಹೌದು, Moto G Play (2024) ಸ್ಮಾರ್ಟ್‌ಫೋನ್ ಟೆಕ್ ಮಾರುಕಟ್ಟೆಗೆ ಎಂಟ್ರಿ ನೀಡಿದೆ. ಈ ಸ್ಮಾರ್ಟ್‌ಫೋನಿನ ಪವರ್ ಬಟನ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್‌ನಂತೆ ದ್ವಿಗುಣಗೊಳ್ಳುತ್ತದೆ. ಇದು ವರ್ಚುವಲ್ RAM ಜೊತೆಗೆ 6GB ವರೆಗೆ ವಿಸ್ತರಿಸಬಹುದಾದ 4GB RAM ಅನ್ನು ಒಳಗೊಂಡಿದೆ. ಹಾಗಾದ್ರೆ Moto G Play (2024) ಸ್ಮಾರ್ಟ್‌ಫೋನ್‌ನ ಫೀಚರ್ಸ್ ಹೇಗಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

Moto G Play (2024) ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ಮೊಟೊರೊಲಾ G ಪ್ಲೇ (2024) ಸ್ಮಾರ್ಟ್‌ಫೋನ್ 6.5 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 1,080x2,200 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದಲ್ಲಿ ಬರಲಿದೆ. ಇನ್ನು ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್ ಬೆಂಬಲಿಸಲಿದ್ದು, 500 nits ಗರಿಷ್ಠ ಬ್ರೈಟ್‌ನೆಸ್ ಅನ್ನು ಹೊಂದಿದೆ.
ಮೊಟೊರೊಲಾ G ಪ್ಲೇ (2024) ಪ್ರೊಸೆಸರ್ ಯಾವುದು?
ಮೊಟೊರೊಲಾ G ಪ್ಲೇ (2024) ಸ್ಮಾರ್ಟ್‌ಫೋನ್ ಸ್ನಾಪ್‌ಡ್ರಾಗನ್ 680 SoC ಪ್ರೊಸೆಸರ್ ವೇಗವನ್ನು ಹೊಂದಿದೆ. ಇದು ಆಂಡ್ರಾಯ್ಡ್ 13 ಓಎಸ್‌ನಲ್ಲಿ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 4GB RAM ಮತ್ತು 64GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಪಡೆದಿದೆ. ಇದಲ್ಲದೆ ವರ್ಚುವಲ್ RAM ಆಯ್ಕೆಯ ಮೂಲಕ RAM ಅನ್ನು 6GB ವರೆಗೆ ವಿಸ್ತರಿಸಬಹುದಾಗಿದೆ. ಇದಲ್ಲದೆ ಮೈಕ್ರೊ SD ಕಾರ್ಡ್ ಮೂಲಕ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಮೊಟೊರೊಲಾ G ಪ್ಲೇ (2024) ಕ್ಯಾಮೆರಾ ಸೆಟಪ್ ಏನಿದೆ?
ಮೊಟೊರೊಲಾ G ಪ್ಲೇ (2024) ಸ್ಮಾರ್ಟ್‌ಫೋನ್ 50 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸಿಂಗಲ್ ರಿಯರ್ ಕ್ಯಾಮೆರಾವನ್ನು ಒಳಗೊಂಡಿದೆ. ಇದರೊಂದಿಗೆ LED ಫ್ಲಾಷ್ ಘಟಕವನ್ನು ಸಹ ಜೋಡಿಸಲಾಗಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ನೀಡಲಾಗಿದೆ.
ಮೊಟೊರೊಲಾ G ಪ್ಲೇ (2024) ಬ್ಯಾಟರಿ ಮತ್ತು ಇತರೆ ಫೀಚರ್ಸ್?
ಮೊಟೊರೊಲಾ G ಪ್ಲೇ (2024) ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇದು 15W ವೇಗದ ಚಾರ್ಜಿಂಗ್‌ಗೆ ಬೆಂಬಲದೊಂದಿಗೆ ಬರಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್, ಬ್ಲೂಟೂತ್, ವೈಫೈ, ಯುಎಸ್‌ಬಿ ಸಿ ಪೋರ್ಟ್, ಹೆಡ್‌ಫೋನ್ ಜ್ಯಾಕ್ ಅನ್ನು ಹೊಂದಿರಲಿದೆ ಎಂದು ಅಂದಾಜಿಸಲಾಗಿದೆ.

ಮೊಟೊರೊಲಾ G ಪ್ಲೇ (2024) ಬೆಲೆ ಮತ್ತು ಲಭ್ಯತೆ
ಮೊಟೊರೊಲಾ G ಪ್ಲೇ (2024) ಸ್ಮಾರ್ಟ್‌ಫೋನ್ $150 (ಅಂದಾಜು 12,465ರೂ) ಬೆಲೆಯನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್ ಏಕೈಕ ನೀಲಮಣಿ ನೀಲಿ ಬಣ್ಣದ ಆಯ್ಕೆಯಲ್ಲಿ ಬರುತ್ತದೆ. ಪ್ರಸ್ತುತ ಇದು ಯುಎಸ್‌ನಲ್ಲಿ ಅನಾವರಣವಾಗಿದ್ದು, ಫೆಬ್ರವರಿ 8 ರಿಂದ ಸೇಲ್ ಆಗಲಿದೆ.
ಇದಲ್ಲದೆ ಮೊಟೊರೊಲಾ ಕಂಪೆನಿ ಇತ್ತೀಚಿಗೆ ಮೋಟೋ G34 5G ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್ ಸ್ನಾಪ್‌ಡ್ರಾಗನ್ 6-ಸರಣಿ ಚಿಪ್‌ಸೆಟ್ ನಲ್ಲಿ ಕಾರ್ಯನಿರ್ವಹಿಸಲಿದೆ. ಇನ್ನು ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಮತ್ತು ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್ ಅನ್ನು ಒಳಗೊಂಡಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಜೊತೆಗೆ 18W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ.


Click it and Unblock the Notifications








