Moto G Plus Stylus: ಮೊಟೊ G ಪ್ಲಸ್ ಸ್ಟೈಲಸ್ ಫೋನ್‌ನ ಫೀಚರ್ಸ್ ಬಹಿರಂಗ!
ಈಗಾಗ್ಲೆ ಟೆಕ್ ಮಾರುಕಟ್ಟೆಯಲ್ಲಿ ವಿವಿಧ ಕಂಪೆನಿಗಳ ಸ್ಮಾರ್ಟ್‌ಫೋನ್‌ಗಳು ಬಿಡುಗಡೆಯಾಗಿ ಸ್ಮಾರ್ಟ್‌ಫೋನ್ ಪ್ರಿಯರ ಮನಗೆದ್ದಿವೆ. ಸಾಕಷ್ಟು ಕಂಪೆನಿಗಳ ಸ್ಮಾರ್ಟ್‌ಫೋನ್‌ಗಳಿದ್ದರೂ ಸಹ ಗ್ರಾಹಕರು ವಿಭಿನ್ನ ಫೀಚರ್ಸ್‌ಗಳುಳ್ಳ ಸ್ಮಾರ್ಟ್‌ಫೋನ್‌ಗಳನ್ನೇ ಆಯ್ಕೆ ಮಾಡಿಕೊಳ್ಳುತ್ತಾರೆ. ಸದ್ಯ ಸ್ಮಾರ್ಟ್‌ಫೋನ್ ಮಾರುಕಟ್ಟೆಯಲ್ಲಿ ತನ್ನ ವಿಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳಿಂದ ಸೈ ಎನಿಸಿಕೊಂಡಿರುವ, ಮೊಟೊರೊಲಾ ಕಂಪೆನಿ ಹೊಸ ಆವೃತ್ತಿಯ ಸ್ಮಾರ್ಟ್‌ಫೋನ್ ಬಿಡುಗಡೆ ಮಾಡುವುದಕ್ಕೆ ಸಿದ್ದತೆ ನಡೆಸಿದೆ.

ಹೌದು, ಸ್ಮಾರ್ಟ್‌ಫೋನ್ ವಲಯದಲ್ಲಿ ತನ್ನದೇ ಶೈಲಿಯ ಸ್ಮಾರ್ಟ್‌ಫೋನ್‌ಗಳನ್ನ ಪರಿಚಯಿಸಿರೋ ಮೊಟೊರೊಲಾ ಕಂಪೆನಿ ಇದೀಗ ಮೊಟೊ ಪ್ಲಸ್ ಜಿ ಸ್ಟೈಲಸ್ ಸ್ಮಾರ್ಟ್‌ಫೋನ್ ಅನ್ನ ಪರಿಚಯಿಸಲು ಮುಂದಾಗಿದೆ. ಸದ್ಯ ಇನ್ನೇನು ಕೆಲವೇ ದಿನಗಳಲ್ಲಿ ಬಿಡುಗಡೆಯಾಗಲಿರುವ ಈ ಸ್ಮಾರ್ಟ್‌ಫೋನ್‌ನ ಫೀಚರ್ಸ್‌ಗಳೇನು ಅನ್ನೊದು ಆನ್‌ಲೈನ್‌ನಲ್ಲಿ ಲೀಕ್ ಆಗಿದೆ. ಸದ್ಯ ಲೀಕ್ ಮಾಹಿತಿ ಪ್ರಕಾರ ಯಾವೆಲ್ಲಾ ಫೀಚರ್ಸ್‌ಗಳನ್ನ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿ.

ಡಿಸ್ಪ್ಲೇ
ಮೊಟೊ ಜಿ ಪ್ಲಸ್ ಸ್ಟೈಲಸ್ ಸ್ಮಾರ್ಟ್‌ಫೋನ್ 1080 x 2340 ಪಿಕ್ಸೆಲ್ ರೆಸಲ್ಯೂಶನ್ ಹೊಂದಿರುವ 6.3 ಇಂಚಿನ ಐಪಿಎಸ್ ಎಲ್‌ಸಿಡಿ ಡಿಸ್‌ಪ್ಲೇಯನ್ನ ಹೊಂದಿದೆ. ಅಲ್ಲದೆ ಈ ಡಿಸ್‌ಪ್ಲೇಯು 409 ಪಿಪಿಐ ಪಿಕ್ಸೆಲ್ ಸಾಂದ್ರತೆಯನ್ನು ಹೊಂದಿದೆ. ಅಲ್ಲದೆ ಈ ಸ್ಮಾರ್ಟ್‌ಫೋನ್ ಪಂಚ್-ಹೋಲ್ ಡಿಸ್ಪ್ಲೇ ಅನ್ನು ಹೊಂದಿರಲಿದೆ. ಅಲ್ಲದೆ ಉತ್ತಮವಾದ ಟಚ್‌ಸ್ಕ್ರೀನ್ ಕ್ಯಾಪಸಿಟಿ ಹೊಂದಿದ್ದು, ಮಲ್ಟಿ ಟಚ್ ಸ್ಕ್ರೀನ್ ಹೊಂದಿರಲಿದೆ. ಇನ್ನು ಈ ಡಿಸ್‌ಪ್ಲೇ ವಿನ್ಯಾಸ ಉತ್ತಮ ವಿನ್ಯಾಸ ಹೊಂದಿರೊದ್ರಿಂದ ವಿಡಿಯೋ ವೀಕ್ಷಣೆಯಲ್ಲಿ ಉತ್ತಮ ಅನುಭವವನ್ನ ನೀಡಲಿದೆ.

ಪ್ರೊಸೆಸರ್
ಮೊಟೊರೊಲಾ ಕಂಪೆನಿಯ ಮೊಟೊ ಜಿ ಪ್ಲಸ್ ಸ್ಟೈಲಸ್ ಸ್ಮಾರ್ಟ್‌ಫೋನ್ ಕ್ವಾಲ್‌ಕಾಮ್ ಸ್ನಾಪ್‌ಡ್ರಾಗನ್ 600 ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್ 4GB RAM ಮತ್ತು 128GB ಶೇಖರಣಾ ಸಾಮರ್ಥ್ಯವನ್ನ ಹೊಂದಿದ್ದು ಮೆಮೊರಿ ಕಾರ್ಡ್ ಮೂಲಕ 256GB ರವರೆಗೆ ಶೇಖರಣಾ ಸಾಮರ್ಥ್ಯವನ್ನ ವಿಸ್ತರಿಸಬಹುದಾಗಿದೆ.

ಕ್ಯಾಮೆರಾ
ಈ ಸ್ಮಾರ್ಟ್‌ಫೋನ್ ಕ್ವಾಡ್‌ಕ್ಯಾಮೆರಾ ರಿಯರ್ ಸೆಟ್‌ಆಪ್ ಹೊಂದಿದ್ದು, ಮೊದಲನೇ ಕ್ಯಾಮೆರಾ 48 ಮೆಗಾ ಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 8 ಮೆಗಾ ಪಿಕ್ಸೆಲ್ ಸೆನ್ಸಾರ್, ಮೂರು ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಸೆನ್ಸಾರ್ ಒಳಗೊಂಡಿದೆ. ಜೊತೆಗೆ 13 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿರುವ ಸೆಲ್ಫಿ ಕ್ಯಾಮೆರಾವನ್ನ ನೀಡಲಾಗಿದೆ. ಇನ್ನು ರಿಯರ್ ಕ್ಯಾಮೆರಾ ಸೆಟ್‌ಆಪ್‌ನಲ್ಲಿ ಡಿಜಿಟಲ್ ಜೂಮ್, ಆಟೋ ಫ್ಲ್ಯಾಶ್, ಫೇಸ್ ಡಿಟೆಕ್ಷನ್, ಟಚ್ ಆಂಡ್ ಫೋಕಸ್ ಫೀಚರ್ಸ್‌ಗಳನ್ನ ನೀಡಲಾಗಿದೆ ಎಂದು ಹೇಳಲಾಗ್ತಿದೆ.

ಬ್ಯಾಟರಿ ಮತ್ತು ಇತರೆ
ಇನ್ನು ಮೊಟೊ ಜಿ ಪ್ಲಸ್ ಸ್ಟೈಲಸ್ ಸ್ಮಾರ್ಟ್‌ಫೋನ್ 4000 mAh ಬ್ಯಾಟರಿ ಪ್ಯಾಕ್‌ಆಪ್ ಹೊಂದಿದ್ದು. ವೇಗದ ಚಾರ್ಜಿಂಗ್ ಅನ್ನ ಬೆಂಬಲಿಸಲಿದೆ ಎನ್ನಲಾಗ್ತಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ವೈಫೈ, ಬ್ಲೂಟೂತ್, ಜಿಪಿಎಸ್, 4G ನೆಟ್‌ವರ್ಕ್ ಅನ್ನ ಬೆಂಬಲಿಸಲಿದೆ ಎಂದು ಹೇಳಲಾಗ್ತಿದ್ದು, ಈ ಸ್ಮಾರ್ಟ್‌ಫೋನ್‌ನ ಬೆಲೆಯ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಸದ್ಯ ಈ ಸ್ಮಾರ್ಟ್‌ಫೋನ್ ಫೆಬ್ರವರಿ 23 ರಂದು ಬಿಡುಗಡೆಯಾಗಲಿದೆ ಎಂದು ಅಂದಾಜಿಸಲಾಗಿದೆ.


Click it and Unblock the Notifications








