Home
ಸುದ್ದಿಜಾಲ

ಮೋಟೋ G ಪವರ್‌ (2022) ಸ್ಮಾರ್ಟ್‌ಫೋನ್‌ ಬಿಡುಗಡೆ! ಫೀಚರ್ಸ್‌ ಹೇಗಿದೆ?

ಟೆಕ್‌ ವಲಯದಲ್ಲಿ ಮೊಟೊರೊಲಾ ಕಂಪೆನಿ ವೈವಿಧ್ಯಮಯ ಸ್ಮಾರ್ಟ್‌ಫೋನ್‌ಗಳಿಗೆ ಪ್ರಸಿದ್ಧಿ ಪಡೆದಿದೆ. ಈಗಾಗಲೇ ಅನೇಕ ಅಕರ್ಷಕ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿದೆ. ಸದ್ಯ ಇದೀಗ ತನ್ನ ಹೊಸ ಮೋಟೋ G ಪವರ್‌ (2022) ಅನ್ನು ಬಿಡುಗಡೆ ಮಾಡಿದೆ. ಇನ್ನು ಈ ಸ್ಮಾರ್ಟ್‌ಫೋನ್ ಈ ವರ್ಷ ಬಿಡುಗಡೆಯಾಗಿರುವ ಮೋಟೋ G Power ನ ಉತ್ತರಾಧಿಕಾರಿಯಾಗಿದೆ. ಈ ಸ್ಮಾರ್ಟ್‌ಫೋನ್‌ 6.5-ಇಂಚಿನ IPS LCD ಡಿಸ್‌ಪ್ಲೇಯನ್ನು ಹೊಂದಿದ್ದು, 90Hz ರಿಫ್ರೆಶ್‌ ರೇಟ್‌ ಹೊಂದಿದೆ.

ಮೊಟೊರೊಲಾ

ಹೌದು, ಮೊಟೊರೊಲಾ ಕಂಪೆನಿ ಹೊಸದಾಗಿ ಮಾರುಕಟ್ಟೆಗೆ ಮೋಟೋ G ಪವರ್‌ (2022) ಫೋನ್‌ ಅನ್ನು ಅನಾವರಣಗೊಳಿಸಿದೆ. ಈ ಸ್ಮಾರ್ಟ್‌ಫೋನ್‌ ಯಾವಾಗ ಖರೀದಿಗೆ ಲಬ್ಯವಾಗಲಿದೆ ಅನ್ನೊದು ತಿಳಿದುಬಂದಿಲ್ಲ. ಆದರೆ ಈ ಸ್ಮಾರ್ಟ್‌ಫೋನ್‌ ಅಧಿಕೃತವಾಗಿ ಬಿಡುಗಡೆಯಾಗಿದೆ. ಇನ್ನು ಮೋಟೋ G ಪವರ್‌ (2022) ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಹೊಂದಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 10W ವೇಗದ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ವಿಶೇಷತೆ ಹೊಂದಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಮೋಟೋ G ಪವರ್‌ (2022) ಸ್ಮಾರ್ಟ್‌ಪೋನ್‌ 720 x 1600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5 ಇಂಚಿನ HD+ ಡಿಸ್‌ಪ್ಲೇ ಹೊಂದಿದೆ. ಇನ್ನು ಈ ಡಿಸ್‌ಪ್ಲೇ IPS LCD ಸ್ಕ್ರೀನ್‌ ಹೊಂದಿದೆ. ಈ ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್‌ ಹೊಂದಿದ್ದು, ಪಂಚ್‌ಹೋಲ್‌ ನಾಚ್‌ ವಿನ್ಯಾಶವನ್ನು ಹೊಂದಿದೆ.

ಪ್ರೊಸೆಸರ್‌ ಯಾವುದು?

ಪ್ರೊಸೆಸರ್‌ ಯಾವುದು?

ಈ ಸ್ಮಾರ್ಟ್‌ಫೋನ್‌ ಮೀಡಿಯಾಟೆಕ್‌ ಹಿಲಿಯೋ G37 ಪ್ರೊಸೆಸರ್ ಬಲವನ್ನು ಹೊಂದಿದೆ. ಇದು ಆಂಡ್ರಾಯ್ಡ್ 11 ನಲ್ಲಿ ಸ್ಮಾರ್ಟ್‌ಫೋನ್ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 4GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಅನ್ನು ಹೊಂದಿದೆ. ಇದಲ್ಲದೆ ಮೈಕ್ರೋ SD ಕಾರ್ಡ್ ಬಳಸಿ ಸಂಗ್ರಹ ಸಾಮರ್ಥ್ಯವನ್ನು ಇನ್ನಷ್ಟು ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ವಿಶೇಷ

ಕ್ಯಾಮೆರಾ ವಿಶೇಷ

ಇನ್ನು ಮೋಟೋ G ಪವರ್‌ 2022 ಸ್ಮಾರ್ಟ್‌ಫೋನ್‌ ಟ್ರಿಪಲ್ ಕ್ಯಾಮೆರಾ ಸೆಟಪ್ ಅನ್ನು ಒಳಗೊಂಡಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 2MP ಮ್ಯಾಕ್ರೋ ಶೂಟರ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸರ್ ಅನ್ನು ಪಡೆದಿದೆ. ಇದರೊಂದಿಗೆ 8MP ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಕೂಡ ಹೊಂದಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಈ ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 10W ವೇಗದ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಟಾ,್‌ ಬ್ಲೂಟೂತ್‌, ವೈಫೈ ಯನ್ನು ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಮೋಟೋ G ಪವರ್‌ 2022 ಸ್ಮಾರ್ಟ್‌ಫೋನ್‌ US ನಲ್ಲಿ 4GB+64GB ರೂಪಾಂತರದ ಆಯ್ಕೆಗೆ $199 (ಸುಮಾರು 14,000ರೂ) ಬೆಲೆಯಲ್ಲಿ ಬಿಡುಗಡೆ ಮಾಡಲಾಗಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್ 4GB RAM ಮತ್ತು 128GB ರೂಪಾಂತರದೊಂದಿಗೆ ಬರುವ ಸಾದ್ಯತೆ ಕೂಡ ಇದ್ದು, ಇದು $249 ಬೆಲೆ ಹೊಂದಿರಲಿದೆ ಎನ್ನಲಾಗಿದೆ. ಭಾರತ ಸೇರಿದಂತೆ ಇತರ ದೇಶಗಳಲ್ಲಿ ಈ ಸ್ಮಾರ್ಟ್‌ಫೋನ್ ಅನ್ನು ಬಿಡುಗಡೆ ಮಾಡಲಾಗುತ್ತದೆಯೇ ಅಥವಾ ಇಲ್ಲವೇ ಎಂಬುದನ್ನು ಮೊಟೊರೊಲಾ ಘೋಷಿಸಿಲ್ಲ.

ಮೊಟೊರೊಲಾ

ಇದಲ್ಲದೆ ಮೊಟೊರೊಲಾ ಕಂಪೆನಿ ಭಾರತದಲ್ಲಿ ಇತ್ತೀಚಿಗೆ ಮೊಟೊರೊಲಾ ಎಡ್ಜ್ 20 ಪ್ರೊ ಸ್ಮಾರ್ಟ್‌ಫೋನ್‌ ಪರಿಚಯಿಸಿದೆ. ಈ ಫೋನ್‌ ಸ್ಮಾರ್ಟ್‌ಫೋನ್‌ 1,080x2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.7-ಇಂಚಿನ ಫುಲ್-HD+ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 870 ಪ್ರೊಸೆಸರ್‌ ಬಲವನ್ನು ಹೊಂದಿದ್ದು, 5G ಬೆಂಬಲಿಸಲಿದೆ. ಇನ್ನು ಈ ಫೋನ್‌ ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್ ಸೆನ್ಸಾರ್ f/1.9 ಲೆನ್ಸ್ ಹೊಂದಿದೆ. ಜೊತೆಗೆ 4,500mAh ಬ್ಯಾಟರಿಯನ್ನು ಒದಗಿಸಿದ್ದು, 30W ವೇಗದ ಚಾರ್ಜಿಂಗ್ ಬೆಂಬಲ ಒಳಗೊಂಡಿದೆ. ಈ ಫೋನ್‌ ಏಕೈಕ 8GB RAM + 128GB ಸ್ಟೋರೇಜ್ ರೂಪಾಂತರಕ್ಕೆ 36,999ರೂ ಬೆಲೆ ಹೊಂದಿದೆ.

Best Mobiles in India

English summary
Motorola has now launched the Moto G Power (2022). The smartphone is the successor to Moto G Power launched in 2021.to know more visit to kannada.gizbot.com.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+