ಶೀಘ್ರದಲ್ಲೇ ಎಂಟ್ರಿ ನೀಡಲಿದೆ ಮೋಟೋ G ಪವರ್ 5G (2024) ಫೋನ್: ಏನೆಲ್ಲಾ ನಿರೀಕ್ಷೆ
ಮೊಟೊರೊಲಾ ಕಂಪೆನಿ ಶೀಘ್ರದಲ್ಲೇ ಹೊಸ Moto G Power 5G (2024) ಫೋನ್ ಪರಿಚಯಿಸಲು ತಯಾರಿ ನಡೆಸಿದೆ. ಸದ್ಯ ಇದೀಗ ಈ ಸ್ಮಾರ್ಟ್‌ಫೋನ್‌ನ 5K CAD ರೆಂಡರ್‌ಗಳು ಮತ್ತು 360-ಡಿಗ್ರಿ ವೀಡಿಯೋವನ್ನು ಹಂಚಿಕೊಂಡಿದೆ. ಇನ್ನು ಈ ಸ್ಮಾರ್ಟ್‌ಫೋನ್ ಸೆಲ್ಫಿ ಕ್ಯಾಮೆರಾವನ್ನು ಇರಿಸಲು ಸೆಂಟರ್ ಪಂಚ್ ಹೋಲ್ ಕಟೌಟ್‌ನೊಂದಿಗೆ ಬರಲಿದೆ.
ಹೌದು, Moto G Power 5G (2024) ಸ್ಮಾರ್ಟ್‌ಫೋನ್ ಮೊಟೊರೊಲಾ ಆರ್ಕಿಡ್ ಟಿಂಟ್ ಮತ್ತು ಔಟರ್ ಸ್ಪೇಸ್ ಕಲರ್‌ವೇಸ್‌ನಲ್ಲಿ ಬರಲಿದೆ. ಇದಲ್ಲದೆ ಸ್ಮಾರ್ಟ್‌ಫೋನ್ ಮೂಲೆಗಳಲ್ಲಿ ಫ್ಲಾಟ್ ಎಡ್ಜ್ ವಿನ್ಯಾಸದಲ್ಲಿ ಇರಲಿದೆ ಎನ್ನಲಾಗಿದೆ. ಇನ್ನು ಪವರ್ ಬಟನ್ ಮತ್ತು ವಾಲ್ಯೂಮ್ ರಾಕರ್‌ಗಳನ್ನು ಸ್ಮಾರ್ಟ್‌ಫೋನ್‌ನ ಬಲಭಾಗದಲ್ಲಿ ಇರಿಸಲಾಗುತ್ತದೆ. ಹಾಗಾದ್ರೆ Moto G Power 5G (2024) ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್‌ನೊಂದಿಗೆ ಬರಲಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

Moto G Power 5G (2024) ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
Moto G Power 5G (2024) ಸ್ಮಾರ್ಟ್‌ಫೋನ್ 6.7 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇಯು 1200 x 1600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದಿದೆ. ಜೊತೆಗೆ 405 ಪಿಪಿಐ ಪಿಕ್ಸೆಲ್ ಸಾಂದ್ರತೆಯನ್ನು ಒಳಗೊಂಡಿರಲಿದೆ. ಇದರೊಂದಿಗೆ ಡಿಸ್‌ಪ್ಲೇಯು 120 Hz ರಿಫ್ರೆಶ್ ರೇಟ್‌ನೊಂದಿಗೆ ಬರಲಿದೆ ಎನ್ನಲಾಗಿದೆ.
Moto G Power 5G (2024) ಪ್ರೊಸೆಸರ್ ಯಾವುದು?
Moto G Power 5G (2024) ಸ್ಮಾರ್ಟ್‌ಫೋನ್ ಮೀಡಿಯಾಟೆಕ್ ಡೈಮೆನ್ಸಿಟಿ 7050 ಚಿಪ್‌ಸೆಟ್ SoC ಪ್ರೊಸೆಸರ್ ವೇಗವನ್ನು ಹೊಂದಿದೆ. ಇದು ಆಂಡ್ರಾಯ್ಡ್ 14 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 6GB RAM ಮತ್ತು 256 GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಒಳಗೊಂಡಿದೆ. ಇದರೊಂದಿಗೆ ಮೆಮೊರಿ ಕಾರ್ಡ್ ಬೆಂಬಲದೊಂದಿಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.
Moto G Power 5G (2024) ಕ್ಯಾಮೆರಾ ಸೆಟಪ್ ಏನಿದೆ?
Moto G Power 5G (2024) ಸ್ಮಾರ್ಟ್‌ಫೋನ್ ಎಲ್ಇಡಿ ಫ್ಲ್ಯಾಷ್ ಜೊತೆಗೆ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ಇರಲಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸೆಲ್ಫಿ ಕ್ಯಾಮೆರಾದೊಂದಿಗೆ ಬರಲಿದೆ ಎಂದು ಅಂದಾಜಿಸಲಾಗಿದೆ.
Moto G Power 5G (2024) ಬ್ಯಾಟರಿ ಮತ್ತು ಇತರೆ
Moto G Power 5G (2024) ಸ್ಮಾರ್ಟ್‌ಫೋನ್ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇದು 30W ಫಾಸ್ಟ್ ಚಾರ್ಜಿಂಗ್ ಟೆಕ್ ಬೆಂಬಲದೊಂದಿಗೆ ಪಾದಾರ್ಪಣೆ ಮಾಡಲಿದೆ ಎನ್ನಲಾಗಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್, ವೈಫೈ, ಯುಎಸ್‌ಬಿ ಸಿ ಪೋರ್ಟ್, ಹೆಡ್‌ಫೋನ್ ಜ್ಯಾಕ್ ನೊಂದಿಗೆ ಬರಲಿದೆ ಎಂದು ವರದಿಯಾಗಿದೆ.
ಇದಲ್ಲದೆ ಮೊಟೊರೊಲಾ ಕಂಪೆನಿಯು ಇತ್ತೀಚಿಗೆ ಮೋಟೋ G04 ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿತ್ತು. ಈ ಸ್ಮಾರ್ಟ್‌ಫೋನ್ 6.5 ಇಂಚಿನ LCD ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇಯು 1612 x 720 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದಿದೆ. ಜೊತೆಗೆ ಡಿಸ್‌ಪ್ಲೇಯು 90Hz ರಿಫ್ರೆಶ್ ರೇಟ್ ಅನ್ನು ನೀಡಲಿದೆ. ಭದ್ರತೆಗಾಗಿ, ಇದು ಸೈಡ್-ಫೇಸಿಂಗ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಮತ್ತು ಫೇಸ್ ಅನ್‌ಲಾಕ್‌ನಂತಹ ಫೀಚರ್ಸ್‌ಗಳನ್ನು ಹೊಂದಿದೆ.
Moto G04 ಸ್ಮಾರ್ಟ್‌ಪೋನ್ ಯುನಿಸೊಕ್ T606 SoC ಪ್ರೊಸೆಸರ್ ವೇಗವನ್ನು ಹೊಂದಿದೆ. ಇದು Moto G034 My UX-ಆಧಾರಿತ ಆಂಡ್ರಾಯ್ಡ್ 14 ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗೆಯೇ 4GB RAM ಮತ್ತು 128GB ಹಾಗೂ 8GB RAM ಮತ್ತು 128 GB ಇಂಟರ್ ಸ್ಟೋರೇಜ್ ಸಾಮರ್ಥ್ಯದಲ್ಲಿ ಬರಲಿದೆ. ಇನ್ನು 8GB ವರೆಗಿನ ವರ್ಚುವಲ್ RAM ವಿಸ್ತರಿಸುವುದಕ್ಕೆ ಕೂಡ ಅವಕಾಶವಿದೆ. ಅಲ್ಲದೆ ಸ್ಮಾರ್ಟ್‌ಫೋನ್ ಎರಡು ವರ್ಷಗಳ ಭದ್ರತಾ ಪ್ಯಾಚ್ ನವೀಕರಣಗಳನ್ನು ಪಡೆಯುವುದನ್ನು ದೃಢೀಕರಿಸಲಾಗಿದೆ.


Click it and Unblock the Notifications








