ಮೊಟೊ G ಸ್ಟೈಲಸ್ 2023 ಸ್ಮಾರ್ಟ್‌ಫೋನ್ ಲಾಂಚ್!..ಜಬರ್ದಸ್ತ್ ಫೀಚರ್ಸ್!
ಮೊಟೊರೊಲಾ ಕಂಪೆನಿಯ ಬಹು ನಿರೀಕ್ಷಿತ ಮೊಟೊ G ಸ್ಟೈಲಸ್ 2023 ಸ್ಮಾರ್ಟ್‌ಫೋನ್ ಬಿಡುಗಡೆ ಆಗಿದ್ದು, ಈ ಸ್ಮಾರ್ಟ್‌ಫೋನ್ ಮೊಟೊ G ಸ್ಟೈಲಸ್ 2022 ರ ಉತ್ತರಾಧಿಕಾರಿಯಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್ 90hz ರಿಫ್ರೆಶ್ ರೇಟ್ ಒಳಗೊಂಡ 6.5 ಇಂಚಿನ ಎಲ್‌ಸಿಡಿ ಡಿಸ್‌ಪ್ಲೇಯನ್ನು ಹೊಂದಿದೆ.
ಹೌದು, ಮೊಟೊರೊಲಾ ಕಂಪೆನಿ ತನ್ನ ಹೊಸ ಮೊಟೊ G ಸ್ಟೈಲಸ್ 2023 ಸ್ಮಾರ್ಟ್‌ಫೋನ್ ಲಾಂಚ್ ಮಾಡಿದೆ. ಇದು ಮೀಡಿಯಾಟೆಕ್ ಹಿಲಿಯೋ G85 SoC ಪ್ರೊಸೆಸರ್ ಬಲವನ್ನು ಪಡೆದುಕೊಂಡಿದೆ. ಇನ್ನು ಈ ಸ್ಮಾರ್ಟ್‌ಫೋನ್ ಪಂಚ್ ಹೋಲ್ ಡಿಸ್‌ಪ್ಲೇ ವಿನ್ಯಾಸವನ್ನು ಒಳಗೊಂಡಿದ್ದು, 4GB RAM + 64GB ಸ್ಟೋರೇಜ್ ವೇರಿಯಂಟ್ ಆಯ್ಕೆ ಪಡೆದಿದೆ.

ಹಾಗೆಯೇ ಮೊಟೊ G ಸ್ಟೈಲಸ್ 2023 ಸ್ಮಾರ್ಟ್‌ಫೋನ್ ಡ್ಯುಯಲ್ ಕ್ಯಾಮೆರಾ ರಚನೆಯನ್ನು ಒಳಗೊಂಡಿದ್ದು, ಮುಖ್ಯ ಕ್ಯಾಮೆರಾವು 50 ಮೆಗಾ ಪಿಕ್ಸಲ್ ಸೆನ್ಸಾರ್ ಅನ್ನು ಹೊಂದಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್ 5,000 mAh ಬ್ಯಾಟರಿ ಬ್ಯಾಕ್‌ಅಪ್ ಅನ್ನು ಪಡೆದಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ಇತರೆ ಫೀಚರ್ಸ್ ಬಗ್ಗೆ ಮುಂದೆ ತಿಳಿಯೋಣ
ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ : ಮೊಟೊ G ಸ್ಟೈಲಸ್ 2023 ಸ್ಮಾರ್ಟ್‌ಫೋನ್ 1080 x 2460 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಹೊಂದಿರುವ 6.5 ಇಂಚಿನ ಎಲ್‌ಸಿಡಿ ಡಿಸ್‌ಪ್ಲೇ ಹೊಂದಿದೆ. ಇನ್ನು ಈ ಡಿಸ್‌ಪ್ಲೇ 20:9 ರಚನೆಯ ಅನುಪಾತ ಮತ್ತು 90hz ರಿಫ್ರೆಶ್ ರೇಟ್ ಒಳಗೊಂಡಿದೆ. ಇದು ವೀಡಿಯೋ ವೀಕ್ಷಣೆ ಹಾಗೂ ವೀಡಿಯೊ ಕರೆಗಳಿಗೆ ಯೋಗ್ಯವಾದ ಡಿಸ್‌ಪ್ಲೇ ಮಾದರಿ ಹೊಂದಿದೆ.

ಪ್ರೊಸೆಸರ್ ಯಾವುದು : ಮೊಟೊ G ಸ್ಟೈಲಸ್ 2023 ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಹಿಲಿಯೋ G85 SoC ಪ್ರೊಸೆಸರ್ ಬಲವನ್ನು ಪಡೆದಿದ್ದು, ಆಂಡ್ರಾಯ್ಡ್ 13 ಓಎಸ್ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 6GB RAM ಮತ್ತು 128GB ಇಂಟರ್ ಸ್ಟೋರೇಜ್ ಅನ್ನು ಹೊಂದಿದೆ. ಮೆಮೊರಿ ಕಾರ್ಡ್ ಮೂಲಕ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವ ಅವಕಾಶಗಳ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.
ಕ್ಯಾಮೆರಾ ಸೆನ್ಸಾರ್ : ಮೊಟೊ G ಸ್ಟೈಲಸ್ 2023 ಸ್ಮಾರ್ಟ್‌ಫೋನ್ ಹಿಂಭಾಗದಲ್ಲಿ ಡ್ಯುಯಲ್ ಕ್ಯಾಮೆರಾ ಹೊಂದಿದ್ದು, ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಹಾಗೆಯೇ ಎರಡನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಡೆಪ್ತ್ ಸೆನ್ಸಾರ್ ಹೊಂದಿದೆ. ಇದಲ್ಲದೆ 8 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮರಾ ಹೊಂದಿದೆ.

ಬ್ಯಾಟರಿ ಮತ್ತು ಇತರೆ ಸೌಲಭ್ಯ : ಮೊಟೊ G ಸ್ಟೈಲಸ್ 2023 ಸ್ಮಾರ್ಟ್‌ಫೋನ್ 5000 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 15W ಚಾರ್ಜಿಂಗ್ ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್, ವೈಫೈ, ಬ್ಲೂಟೂತ್ v5.0, ಸಿಂಗಲ್-ಸಿಮ್ ಕಾರ್ಡ್ ಬೆಂಬಲ, GPS ಮತ್ತು USB ಟೈಪ್-C ಪೋರ್ಟ್, 3.5 ಮಿಮೀ ಜ್ಯಾಕ್, ಫಿಂಗರ್‌ಪ್ರಿಂಟ್ ಸೆನ್ಸಾರ್, ಸಿಂಗಲ್ ಬಾಟಮ್-ಫೈರಿಂಗ್ ಸ್ಪೀಕರ್ ಅನ್ನು ಹೊಂದಿದೆ. ಅನ್ನು ಹೊಂದಿದೆ.
ಬೆಲೆ ಮತ್ತು ಲಭ್ಯತೆ : ಮೊಟೊ G ಸ್ಟೈಲಸ್ 2023 ಸ್ಮಾರ್ಟ್‌ಫೋನ್ 4GB RAM + 64GB ವೇರಿಯಂಟ್ ಆಯ್ಕೆ ಪಡೆದಿದೆ. ಇದು $200 (ಭಾರತದಲ್ಲಿ ಅಂದಾಜು 16,400ರೂ.) ಬೆಲೆಗೆ ಲಭ್ಯವಾಗಲಿದೆ. ಇದೇ ಮೇ 5 ರಿಂದ ಮೊಟೊರೊಲಾ.ಕಾಮ್ ಮತ್ತು ಅಮೆಜಾನ್.ಕಾಮ್ ತಾಣಗಳ ಮೂಲಕ ಖರೀದಿಗೆ ಲಭ್ಯವಾಗಲಿದೆ.


Click it and Unblock the Notifications








