ಮೋಟೋ G ಸ್ಟೈಲಸ್ 5G ಸ್ಮಾರ್ಟ್‌ಫೋನ್‌ ಬಿಡುಗಡೆ!

|

ಬಜೆಟ್‌ ಬೆಲೆಯ ಸ್ಮಾರ್ಟ್‌ಫೋನ್‌ಗಳಿಗೆ ಮೊಟೊರೊಲಾ ಕಂಪೆನಿ ಜನಪ್ರಿಯತೆಯನ್ನು ಪಡೆದುಕೊಂಡಿದೆ. ಈಗಾಗಲೇ ಬಜೆಟ್‌ ಪ್ರೈಸ್‌ನಲ್ಲಿ ಹಲವು ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಗ್ರಾಹಕರ ಗಮನ ಸೆಳೆದಿದೆ. ಸದ್ಯ ಇದೀಗ ಮೊಟೊರೊಲಾ ತನ್ನ ಮೋಟೋ G ಸ್ಟೈಲಸ್ 5G ಸ್ಮಾರ್ಟ್‌ಫೋನ್‌ ಹೊಸ ಆವೃತ್ತಿಯನ್ನು ಪ್ರಕಟಿಸಿದೆ. ಇದು ಸ್ಯಾಮ್‌ಸಂಗ್‌ ಗ್ಯಾಲಕ್ಸಿ ನೋಟ್‌ ಡಿವೈಸ್‌ ವಿನ್ಯಾಸವನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್‌ ಸ್ನಾಪ್‌ ಡ್ರಾಗನ್‌ 480 5G SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದೆ.

ಮೊಟೊರೊಲಾ

ಹೌದು, ಮೊಟೊರೊಲಾ ಸಂಸ್ಥೆ ಮೋಟೋ G ಸ್ಟೈಲಸ್ 5G ಸ್ಮಾರ್ಟ್‌ಫೋನ್‌ ಅನ್ನು ಲಾಂಚ್‌ ಮಾಡಿದೆ. ಇದು ಹೊಸ ಮಾದರಿಯ ವಿನ್ಯಾಸವನ್ನು ಪಡೆದುಕೊಂಡಿದೆ. ಮೊಟೊ ಕಂಪೆನಿ ಇದರಲ್ಲಿ ಹೊಸ ಫೀಚರ್ಸ್‌ ಅನ್ನು ಅಳವಡಿಸಿದ್ದು, ನೀವು ಸ್ಟೈಲಸ್ ಅನ್ನು ತೆಗೆದುಕೊಂಡಾಗ ದಿನಾಂಕ, ಸಮಯ ಮತ್ತು ಜಿಪಿಎಸ್ ಅನ್ನು ರೆಕಾರ್ಡ್ ಮಾಡಲು ಕೇಳುತ್ತದೆ. ಇನ್ನು ಈ ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಮೋಟೋ G ಸ್ಟೈಲಸ್ 5G ಸ್ಮಾರ್ಟ್‌ಫೋನ್‌ 2,400 × 1,080 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.8-ಇಂಚಿನ ಫುಲ್‌ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 20:9 ರಚನೆಯ ಅನುಪಾತ ಹೊಂದಿದೆ. ಜೊತೆಗೆ 84.8% ಸ್ಕ್ರೀನ್-ಟು-ಬಾಡಿ ಅನುಪಾತವನ್ನು ಪಡೆದುಕೊಂಡಿದೆ.

ಪ್ರೊಸೆಸರ್‌ ಯಾವುದು?

ಪ್ರೊಸೆಸರ್‌ ಯಾವುದು?

ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 480 5G SoC ಪ್ರೊಸೆಸರ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದು ಆಂಡ್ರಾಯ್ಡ್‌ 11 ಆಪರೇಟಿಂಗ್‌ ಸಿಸ್ಟಂ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 6GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ ಮೈಕ್ರೊ ಎಸ್‌ಡಿ ಕಾರ್ಡ್ ಮೂಲಕ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಕ್ಯಾಮೆರಾ

ಕ್ಯಾಮೆರಾ

ಮೋಟೋ G ಸ್ಟೈಲಸ್ 5G ಸ್ಮಾರ್ಟ್‌ಫೋನ್‌ ಕ್ವಾಡ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48ಮೆಗಾಪಿಕ್ಸೆಲ್‌ ಸೆನ್ಸಾರ್‌, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ ವೈಡ್ ಆಂಗಲ್ ಲೆನ್ಸ್, ಮೂರನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್ ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್‌ ಸೆನ್ಸಾರ್‌ ಅನ್ನು ಪಡೆದುಕೊಂಡಿದೆ. ಜೊತೆಗೆ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಇನ್ನು ಈ ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 10W ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ವೈಫೈ, ಹಾಟ್‌ಸ್ಪಾಟ್‌, ಬ್ಲೂಟೂತ್‌ ಅನ್ನು ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಮೋಟೋ G ಸ್ಟೈಲಸ್ 5G ಸ್ಮಾರ್ಟ್‌ಫೋನ್‌ ಬೆಲೆ $399 (ಅಂದಾಜು 29,121 ರೂ.) ಮತ್ತು ಜೂನ್ 14 ರಿಂದ ಯುಎಸ್ ನಲ್ಲಿ ಲಭ್ಯವಾಗಲಿದೆ. ಭಾರತ ಸೇರಿದಂತೆ ಇತರ ಅಂತರರಾಷ್ಟ್ರೀಯ ಮಾರುಕಟ್ಟೆಗಳಿಗೆ ಲಭ್ಯತೆಯ ವಿವರಗಳನ್ನು ಕಂಪನಿಯು ಇನ್ನೂ ಪ್ರಕಟಿಸಿಲ್ಲ. ಇದು ಕಂಪನಿಯ ಅಧಿಕೃತ ವೆಬ್‌ಸೈಟ್, ಬೆಸ್ಟ್ ಬೈ, ವಾಲ್ಮಾರ್ಟ್, ಬಿ & ಹೆಚ್ ಫೋಟೋ ಮತ್ತು ಅಮೆಜಾನ್ ಮೂಲಕ ಏಕೈಕ ಕಾಸ್ಮಿಕ್ ಎಮರಾಲ್ಡ್ ಬಣ್ಣಗಳ ಆಯ್ಕೆಯಲ್ಲಿ ಲಭ್ಯವಾಗಲಿದೆ.

Best Mobiles in India

English summary
Moto G Stylus 5G comes with a revamped design. The stylus is now cylindrical in shape and is earlier to put back into the smartphone.to know more visit to kannada.gizbot.com

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X