Home
ಸುದ್ದಿಜಾಲ

ಭಾರತಕ್ಕೆ ಎಂಟ್ರಿ ಕೊಟ್ಟ ಮೋಟೋ G04 ಸ್ಮಾರ್ಟ್‌ಫೋನ್‌: ಬೆಲೆ ಕೇವಲ 6,999ರೂ ಮಾತ್ರ!

ಸಾಕಷ್ಟು ನಿರೀಕ್ಷೆ ಹುಟ್ಟುಹಾಕಿದ್ದ Moto G04 ಸ್ಮಾರ್ಟ್‌ಫೋನ್‌ ಭಾರತದ ಮೊಬೈಲ್‌ ಮಾರುಕಟ್ಟೆಗೆ ಎಂಟ್ರಿ ನೀಡಿದೆ. ಈ ಸ್ಮಾರ್ಟ್‌ಫೋನ್‌ ಯುನಿಸೊಕ್ T606 SoC ಪ್ರೊಸೆಸರ್‌ ವೇಗವನ್ನು ಹೊಂದಿದೆ. ಇದು ಕೈಗೆಟಕುವ ಬೆಲೆಯಲ್ಲಿ ಬರಲಿದ್ದು, 15W ಚಾರ್ಜಿಂಗ್ ಅನ್ನು ಬೆಂಬಲಿಸುವ 5,000mAh ಬ್ಯಾಟರಿಯನ್ನು ಒಳಗೊಂಡಿದೆ.

ಹೌದು, Moto G04 ಸ್ಮಾರ್ಟ್‌ಫೋನ್‌ ಭಾರತದಲ್ಲಿ ಬಿಡುಗಡೆ ಆಗಿದೆ. ಈ ಸ್ಮಾರ್ಟ್‌ಫೋನ್‌ 90Hz ಡಿಸ್‌ಪ್ಲೇ ರಿಫ್ರೆಶ್‌ ರೇಟ್‌ ಅನ್ನು ಬೆಂಬಲಿಸಲಿದೆ. ಇದು ಇತ್ತೀಚಿನ ಆಂಡ್ರಾಯ್ಡ್‌ ಆವೃತ್ತಿಯಲ್ಲಿ ಕಾರ್ಯನಿರ್ವಹಿಸಲಿದೆ. ಇದು ಸೈಡ್-ಫೇಸಿಂಗ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಮತ್ತು ಫೇಸ್ ಅನ್‌ಲಾಕ್‌ನಂತಹ ಫೀಚರ್ಸ್‌ಗಳನ್ನು ನೀಡಲಿದೆ. ಹಾಗಾದ್ರೆ ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಭಾರತಕ್ಕೆ ಎಂಟ್ರಿ ಕೊಟ್ಟ ಮೋಟೋ G04 ಸ್ಮಾರ್ಟ್‌ಫೋನ್‌: ಬೆಲೆ ಕೇವಲ 6,999ರೂ ಮಾತ್ರ

Moto G04 ಡಿಸ್‌ಪ್ಲೇ ರಚನೆ ಮತ್ತು ಹೇಗಿದೆ?
Moto G04 ಸ್ಮಾರ್ಟ್‌ಫೋನ್‌ 6.5 ಇಂಚಿನ LCD ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇಯು 1612 x 720 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದಿದೆ. ಜೊತೆಗೆ ಡಿಸ್‌ಪ್ಲೇಯು 90Hz ರಿಫ್ರೆಶ್ ರೇಟ್‌ ಅನ್ನು ನೀಡಲಿದೆ. ಭದ್ರತೆಗಾಗಿ, ಇದು ಸೈಡ್-ಫೇಸಿಂಗ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಮತ್ತು ಫೇಸ್ ಅನ್‌ಲಾಕ್‌ನಂತಹ ಫೀಚರ್ಸ್‌ಗಳನ್ನು ಹೊಂದಿದೆ.

Moto G04 ಪ್ರೊಸೆಸರ್‌ ಯಾವುದು?
Moto G04 ಸ್ಮಾರ್ಟ್‌ಪೋನ್‌ ಯುನಿಸೊಕ್ T606 SoC ಪ್ರೊಸೆಸರ್‌ ವೇಗವನ್ನು ಹೊಂದಿದೆ. ಇದು Moto G034 My UX-ಆಧಾರಿತ ಆಂಡ್ರಾಯ್ಡ್‌ 14 ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗೆಯೇ 4GB RAM ಮತ್ತು 128GB ಹಾಗೂ 8GB RAM ಮತ್ತು 128 GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯದಲ್ಲಿ ಬರಲಿದೆ. ಇನ್ನು 8GB ವರೆಗಿನ ವರ್ಚುವಲ್ RAM ವಿಸ್ತರಿಸುವುದಕ್ಕೆ ಕೂಡ ಅವಕಾಶವಿದೆ. ಅಲ್ಲದೆ ಸ್ಮಾರ್ಟ್‌ಫೋನ್‌ ಎರಡು ವರ್ಷಗಳ ಭದ್ರತಾ ಪ್ಯಾಚ್ ನವೀಕರಣಗಳನ್ನು ಪಡೆಯುವುದನ್ನು ದೃಢೀಕರಿಸಲಾಗಿದೆ.

ಭಾರತಕ್ಕೆ ಎಂಟ್ರಿ ಕೊಟ್ಟ ಮೋಟೋ G04 ಸ್ಮಾರ್ಟ್‌ಫೋನ್‌: ಬೆಲೆ ಕೇವಲ 6,999ರೂ ಮಾತ್ರ

Moto G04 ಕ್ಯಾಮೆರಾ ಸೆಟಪ್‌ ಏನಿದೆ?
Moto G04 ಸ್ಮಾರ್ಟ್‌ಫೋನ್‌ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸಿಂಗಲ್‌ ರಿಯರ್‌ ಕ್ಯಾಮೆರಾವನ್ನು ಹೊಂದಿದೆ. ಹಿಂಭಾಗದ ಫಲಕವು LED ಫ್ಲ್ಯಾಷ್‌ನೊಂದಿಗೆ ಬರಲಿದೆ. ಇದು 5 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ನೀಡಲಿದೆ. ಇನ್ನು ಕ್ಯಾಮೆರಾ ಫೀಚರ್ಸ್‌ಗಳಲ್ಲಿ ಪೋರ್ಟ್ರೇಟ್, ಫೋಟೋ, ನೈಟ್ ವಿಷನ್, ಟೈಮರ್, ವಾಟರ್‌ಮಾರ್ಕ್, ವಿಡಿಯೋ ಟೈಮ್‌ಲ್ಯಾಪ್ಸ್, ಸ್ನ್ಯಾಪ್ ಇನ್ ವಿಡಿಯೋ ರೆಕಾರ್ಡಿಂಗ್‌ ಅನ್ನು ಕಾಣಬಹುದು.

Moto G04 ಬ್ಯಾಟರಿ ಮತ್ತು ಇತರೆ
Moto G04 ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು USB-C ಪೋರ್ಟ್ ಮೂಲಕ 15W ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಸಾಧನವು ಡ್ಯುಯಲ್ ಸಿಮ್ ಸ್ಲಾಟ್, 4G VoLTE, Wi-Fi 802.11ac, ಬ್ಲೂಟೂತ್ 5.0, GPS, Dolby Atmos ಬೆಂಬಲದೊಂದಿಗೆ ಸಿಂಗಲ್ ಸ್ಪೀಕರ್ ಹೊಂದಿದೆ. ಇದರೊಂದಿಗೆ 3.5mm ಆಡಿಯೊ ಜ್ಯಾಕ್ ಮತ್ತು ಸೈಡ್-ಫೇಸಿಂಗ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್‌ನಂತಹ ಇತರ ಫೀಚರ್ಸ್‌ಗಳನ್ನು ಸಹ ನೀಡಲಿದೆ.

ಭಾರತದಲ್ಲಿ Moto G04 ಬೆಲೆ ಮತ್ತು ಲಭ್ಯತೆ
Moto G04 ಭಾರತದಲ್ಲಿ 4GB + 64GB ಸ್ಟೋರೇಜ್‌ ರೂಪಾಂತರದ ಆಯ್ಕೆಗೆ 6,999ರೂ ಬೆಲೆಯನ್ನು ಹೊಂದಿದೆ. ಇನ್ನು 8GB + 128GB ಸ್ಟೋರೇಜ್‌ ರೂಪಾಂತರದ ಆಯ್ಕೆಯು 7,999ರೂ.ಬೆಲೆಯನ್ನು ಪಡೆದಿದೆ. ಇದಲ್ಲದೆ ಫೆಬ್ರವರಿ 22 ರಿಂದ ಫ್ಲಿಪ್‌ಕಾರ್ಟ್ ಮೂಲಕ ಖರೀದಿಸಬಹುದಾಗಿದ್ದು, ಕಾನ್ಕಾರ್ಡ್ ಬ್ಲಾಕ್, ಸೀ ಗ್ರೀನ್, ಸ್ಯಾಟಿನ್ ಬ್ಲೂ ಮತ್ತು ಸನ್‌ರೈಸ್ ಆರೆಂಜ್‌ ಕಲರ್‌ ಆಯ್ಕೆಗಳಲ್ಲಿ ಬರಲಿದೆ.

Best Mobiles in India

English summary
Moto G04 with 128GB storage launched in india: Price Details in kannada
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+