ಇಂದು ಮೊಟೊ G04s ಫೋನ್ ಖರೀದಿಗೆ ಲಭ್ಯ; ಬೆಲೆ ಜಸ್ಟ್ 6999ರೂ.!
ಮೊಟೊರೊಲಾ ಮೊಬೈಲ್ ಸಂಸ್ಥೆಯು ಇತ್ತೀಚಿಗೆ ಬಿಡುಗಡೆ ಮಾಡಿರುವ ಮೊಟೊ G04s ಮೊಬೈಲ್ ಎಂಟ್ರಿ ಲೆವೆಲ್ ಮಾದರಿಯ ಫೋನ್ ಆಗಿದೆ. ಬೆಲೆ, ಡಿಸೈನ್ ಹಾಗೂ ಕೆಲವು ಆಕರ್ಷಕ ಫೀಚರ್ಸ್‌ಗಳಿಂದ ಗಮನ ಸೆಳೆದಿರುವ ಈ ಫೋನ್ ಇಂದು (ಜೂನ್ 5 ರಂದು) ಫ್ಲಿಪ್‌ಕಾರ್ಟ್ ಇ ಕಾಮರ್ಸ್ (Flipkart) ಪ್ಲಾಟ್‌ಫಾರ್ಮ್ ಮೂಲಕ ಮೊದಲ ಮಾರಾಟ ಪ್ರಾರಂಭ ಮಾಡಲಿದೆ. ಎಂಟ್ರಿ ಲೆವೆಲ್ ಮಾದರಿಯ ಫೋನ್ ಆಗಿದ್ದರೂ, ಇದು ಮೊಬೈಲ್ ಮಾರುಕಟ್ಟೆಯಲ್ಲಿ ಆಕರ್ಷಕ ಎನಿಸಿದೆ. ಇನ್ನು ಈ ಫೋನಿನ ಆರಂಭಿಕ ಬೆಲೆಯು 6999ರೂ. ಗಳು ಆಗಿದೆ.
ಹೌದು, ಮೊಟೊ G04s (Moto G04s) ಮೊಬೈಲ್ ಇಂದು ಫ್ಲಿಪ್‌ಕಾರ್ಟ್ ಪ್ಲಾಟ್‌ಫಾರ್ಮ್ ಮೂಲಕ ಪ್ರಥಮ ಮಾರಾಟ ಪ್ರಾರಂಭ ಮಾಡಲಿದೆ. ಈ ಫೋನ್ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಪಡೆದಿರುವ ಜೊತೆಗೆ 4 GB RAM + 64 GB ಸ್ಟೋರೇಜ್ ವೇರಿಯಂಟ್ ಆಯ್ಕೆ ಹೊಂದಿದೆ. ಅಲ್ಲದೇ ಆಕ್ಟಾ ಕೋರ್ Unisoc T606 ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯ ಪಡೆದಿದೆ.

ನೂತನ ಮೊಟೊ G04s ಮೊಬೈಲ್ ಫ್ಲಿಪ್‌ಕಾರ್ಟ್ ತಾಣದಲ್ಲಿ, ಮೊಟೊರೊಲಾ ವೆಬ್‌ಸೈಟ್ ಹಾಗೂ ಪ್ರಮುಖ ರೀಟೇಲ್ ಸ್ಟೋರ್‌ಗಳಲ್ಲಿ ಖರೀದಿಗೆ ಲಭ್ಯ. ಇನ್ನು ಈ ಫೋನ್ ಕಾನ್ಕಾರ್ಡ್ ಬ್ಲಾಕ್, ಸೀ ಗ್ರೀನ್, ಸ್ಯಾಟಿನ್ ಬ್ಲೂ ಮತ್ತು ಸನ್‌ರೈಸ್ ಆರೆಂಜ್ ಕಲರ್ ಆಯ್ಕೆಗಳಲ್ಲಿ ಖರೀದಿಗೆ ದೊರೆಯುತ್ತದೆ. ಇನ್ನುಳಿದಂತೆ ಮೊಟೊ G04s ಫೋನಿನ ಇತರೆ ಫೀಚರ್ಸ್ ಯಾವುವು ಹಾಗೂ ಆಫರ್ ಏನು ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.
ಮೊಟೊ G04s ಫೀಚರ್ಸ್ ಹೀಗಿವೆ
ಮೊಟೊ G04s ಸ್ಮಾರ್ಟ್‌ಫೋನ್ 6.56 ಇಂಚಿನ ಹೆಚ್‌ಡಿ + ಡಿಸ್‌ಪ್ಲೇ ಅನ್ನು ಪಡೆದಿದ್ದು, ಈ ಫೋನ್ ಡಿಸ್‌ಪ್ಲೇ 1,612 x 720 ಪಿಕ್ಸಲ್ ರೆಸಲ್ಯೂಶನ್ ಸೌಲಬ್ಯ ಪಡೆದಿದೆ. 90Hz ರಿಫ್ರೆಶ್ ರೇಟ್ ಆಯ್ಕೆಯೊಂದಿಗೆ, ಗೊರಿಲ್ಲಾ ಗ್ಲಾಸ್ 3 ರಕ್ಷಣೆ ಸಹ ಪಡೆದುಕೊಂಡಿದೆ.
ಮೊಟೊ G04s ಸ್ಮಾರ್ಟ್‌ಫೋನ್ ಆಕ್ಟಾ ಕೋರ್ Unisoc T606 ಚಿಪ್‌ಸೆಟ್ ಪ್ರೊಸೆಸರ್ ಮೂಲಕ ಕೆಲಸ ನಿರ್ವಹಿಸಲಿದ್ದು, ಆಂಡ್ರಾಯ್ಡ್ 14 ಓಎಸ್ ಅನ್ನು ಬೆಂಬಲ ಸಹ ಪಡೆದಿದೆ. ಇದರೊಂದಿಗೆ 4 GB RAM + 64 GB ವೇರಿಯಂಟ್ ಆಯ್ಕೆ ಒಳಗೊಂಡಿದ್ದು, ಇದರ ಜೊತೆಗೆ ಮೈಕ್ರೊ ಎಸ್‌ಡಿ ಕಾರ್ಡ್ ಬಳಕೆ ಮಾಡಿಕೊಂಡು 1TB ವರೆಗೆ ಸ್ಟೋರೇಜ್ ಹೆಚ್ಚಿಗೆ ಮಾಡಿಕೊಳ್ಳಲು ಅವಕಾಶ ಇದೆ.
ಮೊಟೊ G04s ಸ್ಮಾರ್ಟ್‌ಫೋನ್ ಹಿಂಭಾಗದಲ್ಲಿ ಸಿಂಗಲ್ ಕ್ಯಾಮೆರಾ ರಚನೆ ಪಡೆದಿದ್ದು, ಅದು 50 ಮೆಗಾ ಪಿಕ್ಸೆಲ್ ಸೆನ್ಸಾರ್ ಸೌಲಭ್ಯದಲ್ಲಿ ಇದೆ. ಇದರೊಂದಿಗೆ ಎಲ್‌ಇಡಿ ಫ್ಲ್ಯಾಶ್ ಲೈಟ್ ಸಪೋರ್ಟ್ ಪಡೆದಿದೆ. ಇನ್ನು ಮುಂಭಾಗದಲ್ಲಿ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಈ ಫೋನ್ 5 ಮೆಗಾ ಪಿಕ್ಸೆಲ್ ಕ್ಯಾಮೆರಾ ನೀಡಲಾಗಿದೆ.
ಮೊಟೊ G04s ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸಪೋರ್ಟ್ ಜೊತೆಗೆ 15W ಚಾರ್ಜಿಂಗ್ ಬೆಂಬಲ ಪಡೆದಿದೆ. ಇದರೊಂದಿಗೆ ಇದು ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್ ಪಡೆದಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ ವೈ ಫೈ, ಜಿಪಿಎಸ್, ಬ್ಲೂಟೂತ್ 5.0 ಮತ್ತು ಯುಎಸ್‌ಬಿ ಟೈಪ್-ಸಿ, 3.5 ಎಂಎಂ ಆಡಿಯೊ ಜಾಕ್ ಆಯ್ಕೆಗಳನ್ನು ಪಡೆದಿದೆ. ಇನ್ನು ಈ ಮೊಬೈಲ್ ಕಾನ್ಕಾರ್ಡ್ ಬ್ಲಾಕ್, ಸೀ ಗ್ರೀನ್, ಸ್ಯಾಟಿನ್ ಬ್ಲೂ ಮತ್ತು ಸನ್‌ರೈಸ್ ಆರೆಂಜ್ ಕಲರ್ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ.


Click it and Unblock the Notifications








