ಇನ್ನು ಕೆಲವೇ ದಿನಗಳಲ್ಲಿ ಈ ಅಗ್ಗದ ಸ್ಟೈಲಿಶ್ ಫೋನ್ ಖರೀದಿಗೆ ಲಭ್ಯ; ಬೆಲೆ ಎಷ್ಟು?
ಜನಪ್ರಿಯ ಮೊಬೈಲ್ ಸಂಸ್ಥೆಗಳಲ್ಲಿ ಒಂದಾದ ಮೊಟೊ ಸಂಸ್ಥೆಯು ಇತ್ತೀಚಿಗಷ್ಟೆ ಲಾಂಚ್ ಮಾಡಿರುವ ಮೊಟೊ G04s ಸ್ಮಾರ್ಟ್‌ಫೋನ್ ಫೋನ್ ತನ್ನ ಫೀಚರ್ಸ್‌ಗಳಿಂದ ಅಗ್ಗದ ಬೆಲೆಯಲ್ಲಿ ಆಕರ್ಷಕ ಫೋನ್ ಎನಿಸಿದೆ. ಈ ಫೋನ್ ಇದೇ ಜೂನ್ 5 ರಂದು ಅಧಿಕೃತ ಫ್ಲಿಪ್‌ಕಾರ್ಟ್ (Flipkart) ಇಂಡಿಯಾ ಪ್ಲಾಟ್‌ಫಾರ್ಮ್ ಮೂಲಕ ಮಾರಾಟ ಪ್ರಾರಂಭ ಮಾಡಲಿದೆ. ಎಂಟ್ರಿ ಲೆವೆಲ್ ಮಾದರಿಯಲ್ಲಿ ಕಾಣಿಸಿಕೊಂಡಿರುವ ಈ ಫೋನ್ ಕೆಲವು ಆಕರ್ಷಕ ಫೀಚರ್ಸ್‌ಗಳ ಮೂಲಕ ಗ್ರಾಹಕರನ್ನು ಸೆಳೆದಿದೆ. ಇದರ ಪ್ರಾಥಮಿಕ ಕ್ಯಾಮೆರಾವು 50 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯದಲ್ಲಿ ಇದೆ.
ಹೌದು, ಮೊಟೊ G04s (Moto G04s) ಸ್ಮಾರ್ಟ್‌ಫೋನ್ ಇದೇ ಜೂನ್ 5 ರಂದು ಪ್ರಾರಂಭ ಮಾಡಲಿದೆ. ಈ ಫೋನ್ 4 GB RAM + 64 GB ವೇರಿಯಂಟ್ ಆಯ್ಕೆ ಪಡೆದಿದ್ದು, ಇದು ಆಕ್ಟಾ ಕೋರ್ Unisoc T606 ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯದಲ್ಲಿ ಕೆಲಸ ಮಾಡಲಿದೆ.

ಮೊಟೊ G04s ಫೋನಿನ ಆರಂಭಿಕ ವೇರಿಯಂಟ್ ಬೆಲೆಯು 6,999ರೂ. ಆಗಿದ್ದು, ಕಾನ್ಕಾರ್ಡ್ ಬ್ಲಾಕ್, ಸೀ ಗ್ರೀನ್, ಸ್ಯಾಟಿನ್ ಬ್ಲೂ ಮತ್ತು ಸನ್‌ರೈಸ್ ಆರೆಂಜ್ ಕಲರ್ ಆಯ್ಕೆಗಳನ್ನು ಇದು ಪಡೆದುಕೊಂಡಿದೆ. ಹಾಗೆಯೇ ಫ್ಲಿಪ್‌ಕಾರ್ಟ್ ತಾಣದಲ್ಲಿ, ಮೊಟೊರೊಲಾ ವೆಬ್‌ಸೈಟ್‌ನಲ್ಲು ಹಾಗೂ ಪ್ರಮುಖ ರೀಟೇಲ್ ಸ್ಟೋರ್‌ಗಳಲ್ಲಿ ಇದು ಖರೀದಿದಾರರಿಗೆ ಲಭ್ಯವಾಗಲಿದೆ. ಹಾಗಾದರೆ ಮೊಟೊ G04s ಫೋನಿನ ಇತರೆ ಫೀಚರ್ಸ್ ಯಾವುವು ಹಾಗೂ ಆಫರ್ ಏನು ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.
ಮೊಟೊ G04s ಮೊಬೈಲ್ - ಫೀಚರ್ಸ್
ಮೊಟೊ G04s ಮೊಬೈಲ್ 6.56 ಇಂಚಿನ ಹೆಚ್‌ಡಿ + ಡಿಸ್‌ಪ್ಲೇ ಅನ್ನು ಪಡೆದಿದ್ದು, ಈ ಫೋನ್ ಡಿಸ್‌ಪ್ಲೇ 1,612 x 720 ಪಿಕ್ಸಲ್ ರೆಸಲ್ಯೂಶನ್ ಸೌಲಬ್ಯ ಪಡೆದಿದೆ. 90Hz ರಿಫ್ರೆಶ್ ರೇಟ್ ಆಯ್ಕೆಯೊಂದಿಗೆ, ಗೊರಿಲ್ಲಾ ಗ್ಲಾಸ್ 3 ರಕ್ಷಣೆ ಸಹ ಪಡೆದುಕೊಂಡಿದೆ.
ಮೊಟೊ G04s ಮೊಬೈಲ್ ಆಕ್ಟಾ ಕೋರ್ Unisoc T606 ಚಿಪ್‌ಸೆಟ್ ಪ್ರೊಸೆಸರ್ ಮೂಲಕ ಕೆಲಸ ನಿರ್ವಹಿಸಲಿದ್ದು, ಆಂಡ್ರಾಯ್ಡ್ 14 ಓಎಸ್ ಅನ್ನು ಬೆಂಬಲ ಸಹ ಪಡೆದಿದೆ. ಇದರೊಂದಿಗೆ 4 GB RAM + 64 GB ವೇರಿಯಂಟ್ ಆಯ್ಕೆ ಒಳಗೊಂಡಿದ್ದು, ಇದರ ಜೊತೆಗೆ ಮೈಕ್ರೊ ಎಸ್‌ಡಿ ಕಾರ್ಡ್ ಬಳಕೆ ಮಾಡಿಕೊಂಡು 1TB ವರೆಗೆ ಸ್ಟೋರೇಜ್ ಹೆಚ್ಚಿಗೆ ಮಾಡಿಕೊಳ್ಳಲು ಅವಕಾಶ ಇದೆ.
ಮೊಟೊ G04s ಫೋನ್ ಹಿಂಭಾಗದಲ್ಲಿ ಸಿಂಗಲ್ ಕ್ಯಾಮೆರಾ ರಚನೆ ಪಡೆದಿದ್ದು, ಅದು 50 ಮೆಗಾ ಪಿಕ್ಸೆಲ್ ಸೆನ್ಸಾರ್ ಸೌಲಭ್ಯದಲ್ಲಿ ಇದೆ. ಇದರೊಂದಿಗೆ ಎಲ್‌ಇಡಿ ಫ್ಲ್ಯಾಶ್ ಲೈಟ್ ಸಪೋರ್ಟ್ ಪಡೆದಿದೆ. ಇನ್ನು ಮುಂಭಾಗದಲ್ಲಿ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಈ ಫೋನ್ 5 ಮೆಗಾ ಪಿಕ್ಸೆಲ್ ಕ್ಯಾಮೆರಾ ನೀಡಲಾಗಿದೆ.
ಅಂದಹಾಗೆ ಮೊಟೊ G04s ಫೋನ್ 5,000mAh ಸಾಮರ್ಥ್ಯದ ಬ್ಯಾಟರಿ ಜೊತೆಗೆ 15W ಚಾರ್ಜಿಂಗ್ ಸಪೋರ್ಟ್ ಪಡೆದಿದೆ. ಅಲ್ಲದೇ ಇದು ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್ ಜೊತೆಗೆ 3.5 ಎಂಎಂ ಆಡಿಯೊ ಜಾಕ್ ಅನ್ನು ಹೊಂದಿದೆ. ಕನೆಕ್ಟಿವಿಟಿ ಸೌಲಭ್ಯಗಳಲ್ಲಿ ವೈ ಫೈ, ಜಿಪಿಎಸ್, ಬ್ಲೂಟೂತ್ 5.0 ಮತ್ತು ಯುಎಸ್‌ಬಿ ಟೈಪ್-ಸಿ ಆಯ್ಕೆಗಳನ್ನು ಪಡೆದಿದೆ. ಇನ್ನು ಈ ಫೋನ್ ಕಾನ್ಕಾರ್ಡ್ ಬ್ಲಾಕ್, ಸೀ ಗ್ರೀನ್, ಸ್ಯಾಟಿನ್ ಬ್ಲೂ ಮತ್ತು ಸನ್‌ರೈಸ್ ಆರೆಂಜ್ ಕಲರ್ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ ಆಗಲಿದೆ.


Click it and Unblock the Notifications








