Home
ಸುದ್ದಿಜಾಲ

ಜ.13ಕ್ಕೆ Moto G05 ಸೇಲ್; ಅತೀ ಅಗ್ಗದ ಬೆಲೆ.. ಮಸ್ತ್ ಫೀಚರ್ಸ್‌!

ಮೊಟೊರೊಲಾ ಇತ್ತೀಚೆಗೆ ಭಾರತದಲ್ಲಿ ಹೊಸ ಅಗ್ಗದ ಫೋನನ್ನು ಬಿಡುಗಡೆ ಮಾಡಿದೆ. ಇದು ಮೊಟೊ G05 (Moto G05) ಹೆಸರಿನೊಂದಿಗೆ ಮಾರುಕಟ್ಟೆಗೆ ಎಂಟ್ರಿ ಕೊಟ್ಟಿದೆ. ಅಂದಹಾಗೆ, ಈ ಸ್ಮಾರ್ಟ್‌ಫೋನ್ ಜನವರಿ 13 ರಿಂದ ಫ್ಲಿಪ್‌ಕಾರ್ಟ್ ಮೂಲಕ ತನ್ನ ಮೊದಲ ಮಾರಾಟ ಪ್ರಾರಂಭಿಸಲಿದೆ. ಅಗ್ಗದ ದರವೆಂಬ ಕಾರಣಕ್ಕೆ ಈ ಫೋನಿನ ಕಾರ್ಯಕ್ಷಮತೆ ಮತ್ತು ವೈಶಿಷ್ಟ್ಯಗಳಲ್ಲಿ ಕಂಪನಿಯು ಯಾವುದೇ ರಾಜಿ ಮಾಡಿಕೊಂಡಿಲ್ಲ. ಬನ್ನಿ, ಈ ಫೋನಿನ ಬೆಲೆ, ಆಫರ್‌ ಮತ್ತು ವಿಶೇಷತೆಗಳನ್ನು ತಿಳಿಯೋಣ.

ಮೊಟೊ G05 (Moto G05) ಫೋನನ್ನು Moto G04 ಫೋನಿನ ಉತ್ತರಾಧಿಕಾರಿಯಾಗಿ ಬಿಡುಗಡೆ ಮಾಡಲಾಗಿದೆ. ಫೋನ್ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಹೊಂದಿದೆ. ಈ ಫೋನಿನಲ್ಲಿ 6.67 ಇಂಚಿನ ಡಿಸ್ಪ್ಲೇ ಲಭ್ಯವಿದೆ. ಇದು ಮೀಡಿಯಾಟೆಕ್ ಹೆಲಿಯೊ G81 ಅಲ್ಟ್ರಾ ಪ್ರೊಸೆಸರ್‌ನಲ್ಲಿ ಕೆಲಸ ನಿರ್ವಹಿಸುತ್ತದೆ. ಹಾಗೆಯೇ 4GB RAM + 64GB ಸ್ಟೋರೇಜ್, 5200mAh ಬ್ಯಾಟರಿ ಮತ್ತು 18W ವೇಗದ ಚಾರ್ಜಿಂಗ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಈ ಫೋನಿನ ಬೆಲೆ ತಿಳಿಯಲು ಮುಂದೆ ಓದಿ.

ಜ.13ಕ್ಕೆ Moto G05 ಸೇಲ್; ಅತೀ ಅಗ್ಗದ ಬೆಲೆ.. ಮಸ್ತ್ ಫೀಚರ್ಸ್‌!

ಮೊಟೊ G05 ವೈಶಿಷ್ಟ್ಯಗಳು

ಡಿಸ್ಪ್ಲೇ ಹೇಗಿದೆ

ಮೊಟೊ G05 ಸ್ಮಾರ್ಟ್‌ಫೋನ್‌ 6.67 ಇಂಚಿನ ಎಚ್‌ಡಿ ಪ್ಲಸ್ ಡಿಸ್ಪ್ಲೇ ಹೊಂದಿದೆ. ಇದು ಪಂಚ್ ಹೋಲ್ ಶೈಲಿಯ ಐಪಿಎಸ್‌ ಎಲ್‌ಸಿಡಿ ಡಿಸ್ಪ್ಲೇ ಆಗಿದೆ. ಈ ಡಿಸ್ಪ್ಲೇಯು 1604 × 720 ಪಿಕ್ಸೆಲ್ ರೆಸಲ್ಯೂಶನ್, 90Hz ರಿಫ್ರೆಶ್ ದರ ಮತ್ತು 1,000 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್‌ ಬೆಂಬಲ ಹೊಂದಿದೆ. ಇದು ಗೊರಿಲ್ಲಾ ಗ್ಲಾಸ್ 3 ರಕ್ಷಣೆಯನ್ನು ಹೊಂದಿದೆ.

ಪ್ರೊಸೆಸರ್ ಯಾವುದು?

ಮೊಟೊ G05 ಮೊಬೈಲ್ ಮೀಡಿಯಾಟೆಕ್‌ ಹೆಲಿಯೊ G81 ಅಲ್ಟ್ರಾ ಆಕ್ಟಾಕೋರ್ ಪ್ರೊಸೆಸರ್ ಹೊಂದಿದೆ. ಗ್ರಾಫಿಕ್ಸ್‌ಗಾಗಿ ಈ ಸ್ಮಾರ್ಟ್‌ಫೋನ್, ಆರ್ಮ್ ಮಾಲಿ G52 MC2 ಜಿಪಿಯು ಸಹ ಹೊಂದಿದೆ. ಈ ಮೊಬೈಲ್ ಆಂಡ್ರಾಯ್ಡ್‌ 15 ಆಪರೇಟಿಂಗ್ ಸಿಸ್ಟಂನಲ್ಲಿ ಕೆಲಸ ಮಾಡುತ್ತದೆ.

ಸ್ಟೋರೇಜ್ ಆಯ್ಕೆ

ಮೊಟೊ G05 ಫೋನ್ 4GB RAM ಹೊಂದಿದೆ. ಇದು 8GB ವರ್ಚುವಲ್ RAM ಸಹ ಹೊಂದಿದೆ. ಈ ಫೋನಿನಲ್ಲಿ 64GB ಸ್ಟೋರೇಜ್‌ ಆಯ್ಕೆ ಲಭ್ಯವಿದೆ. ನೀವು ಮೈಕ್ರೊ ಎಸ್‌ಡಿ ಮೂಲಕ 1TB ವರೆಗೆ ಸ್ಟೋರೇಜ್‌ ಹೆಚ್ಚಿಸಬಹುದು.

ಡ್ಯುಯಲ್ ಕ್ಯಾಮೆರಾ ಸೆಟಪ್

ಮೊಟೊ G05 ಸ್ಮಾರ್ಟ್‌ಫೋನ್‌ ಡ್ಯುಯಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಈ ಫೋನಿನಲ್ಲಿ ಎಲ್‌ಇಡಿ ಫ್ಲಾಶ್‌ನೊಂದಿಗೆ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಲಭ್ಯವಿದೆ. ಈ ಸ್ಮಾರ್ಟ್‌ಫೋನ್ ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, 8 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಹೊಂದಿದೆ.

5,200mAh ಸಾಮರ್ಥ್ಯದ ಬ್ಯಾಟರಿ

ಮೊಟೊ G05 ಮೊಬೈಲ್ 5,200mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, 18W ವೇಗದ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗಿದೆ.

ಇತರೆ ವೈಶಿಷ್ಟ್ಯಗಳು

ಮೊಟೊ G05 ಫೋನ್ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಹೊಂದಿದೆ. ಇದು ಧೂಳು ಮತ್ತು ನೀರಿನ ವಿರುದ್ಧ ರಕ್ಷಣೆಗಾಗಿ IP52 ರೇಟಿಂಗ್‌ ಪಡೆದಿದೆ. ಡ್ಯುಯಲ್ ಡಾಲ್ಬಿ ಅಟ್ಮಾಸ್, ಸ್ಟೀರಿಯೋ ಸ್ಪೀಕರ್‌ಗಳು, 3.5mm ಆಡಿಯೋ ಜಾಕ್ ಲಭ್ಯವಿದೆ. ಕನೆಕ್ಟಿವಿಟಿ ಸೌಲಭ್ಯಗಳಲ್ಲಿ ಇದು ಡ್ಯುಯಲ್ ಸಿಮ್, ಬ್ಲೂಟೂತ್ 5.4, ವೈ-ಫೈ, ಜಿಪಿಎಸ್ ಮತ್ತು ಯುಎಸ್‌ಬಿ ಟೈಪ್ ಸಿ ಪೋರ್ಟ್‌ ಸೇರಿದಂತೆ ಹಲವು ಆಯ್ಕೆಗಳನ್ನು ಒಳಗೊಂಡಿದೆ.

ಮೊಟೊ G05 ಬೆಲೆ

ಮೊಟೊ G05 ಸ್ಮಾರ್ಟ್‌ಫೋನ್ 4GB + 64GB ಸ್ಟೋರೇಜ್ ಆಯ್ಕೆಯಲ್ಲಿ ಮಾತ್ರ ಮಾರಾಟವಾಗಲಿದೆ. ಇದನ್ನು ಕೇವಲ 6,999 ರೂ.ಗೆ ಪರಿಚಯಿಸಲಾಗಿದೆ. ಈ ಫೋನ್ ಜನವರಿ 13 ರಿಂದ ಫ್ಲಿಪ್‌ಕಾರ್ಟ್, ಕಂಪನಿಯ ವೆಬ್‌ಸೈಟ್‌ ಮೂಲಕ ತನ್ನ ಮೊದಲ ಮಾರಾಟ ಪ್ರಾರಂಭಿಸಲಿದೆ. ನೀವು, ಫಾರೆಸ್ಟ್ ಗ್ರೀನ್ ಮತ್ತು ಪ್ಲಮ್ ರೆಡ್ ಬಣ್ಣಗಳಲ್ಲಿ ಖರೀದಿಸಬಹುದು.

Best Mobiles in India

English summary
Moto G05 First Sale Starts on January 13 vi Flipkart: Price, Offer and more.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+