ಇಂದು Moto G05 ಫಸ್ಟ್ ಸೇಲ್; ಅತ್ಯಂತ ಅಗ್ಗದ ಬೆಲೆ.. ಇಲ್ಲಿವೆ ಟಾಪ್ 5 ಫೀಚರ್ಸ್
ಮೊಟೊರೊಲಾ ಇತ್ತೀಚೆಗೆ ಅಗ್ಗದ ಫೋನನ್ನು ಬಿಡುಗಡೆ ಮಾಡಿದ. ಅದುವೇ ಮೊಟೊ G05 (Moto G05) ಸ್ಮಾರ್ಟ್‌ಫೋನ್ ಆಗಿದೆ. ಅಂದಹಾಗೆ, ಈ ಮೊಬೈಲ್ ಇಂದು (ಜನವರಿ 13) ಫ್ಲಿಪ್‌ಕಾರ್ಟ್ ಮೂಲಕ ತನ್ನ ಮೊದಲ ಮಾರಾಟ ಪ್ರಾರಂಭಿಸಲಿದೆ. ಇದು ಅಗ್ಗದ ದರ ಹೊಂದಿದ್ದರೂ ಕಾರ್ಯಕ್ಷಮತೆ ಮತ್ತು ವೈಶಿಷ್ಟ್ಯಗಳು ಮೊಬೈಲ್ ಪ್ರಿಯರನ್ನು ಆಕರ್ಷಿಸುತ್ತಿವೆ. ಬನ್ನಿ, ಈ ಫೋನಿನ ಆಫರ್‌ಗಳು ಮತ್ತು ಫೀಚರ್ಸ್‌ಗಳನ್ನು ತಿಳಿಯೋಣ.
ಕಂಪನಿಯು ಮೊಟೊ G05 ಅನ್ನು Moto G04 ಫೋನಿನ ಉತ್ತರಾಧಿಕಾರಿಯಾಗಿ ಪರಿಚಯಿಸಿದೆ. ಈ ಮೊಬೈಲ್ 6.67 ಇಂಚಿನ ಡಿಸ್ಪ್ಲೇ ಹೊಂದಿದೆ. ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಲಭ್ಯವಿದೆ. ಇದು ಮೀಡಿಯಾಟೆಕ್ ಹೆಲಿಯೊ G81 ಅಲ್ಟ್ರಾ ಪ್ರೊಸೆಸರ್‌ನಲ್ಲಿ ಕೆಲಸ ನಿರ್ವಹಿಸುತ್ತದೆ. ಹಾಗೆಯೇ 4GB RAM + 64GB ಸ್ಟೋರೇಜ್, 5200mAh ಬ್ಯಾಟರಿ ಮತ್ತು 18W ವೇಗದ ಚಾರ್ಜಿಂಗ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಈ ಫೋನ್ ಅತ್ಯಂತ ಅಗ್ಗದ ಬೆಲೆ ಹೊಂದಿದೆ.

ಮೊಟೊ G05 ವೈಶಿಷ್ಟ್ಯಗಳು
ಡಿಸ್ಪ್ಲೇ ಹೇಗಿದೆ
ಮೊಟೊ G05 ಫೋನ್ 90Hz ರಿಫ್ರೆಶ್ ದರದೊಂದಿಗೆ 6.67 ಇಂಚಿನ ಎಚ್‌ಡಿ ಪ್ಲಸ್ ಡಿಸ್ಪ್ಲೇ ಹೊಂದಿದೆ. ಇದು ಪಂಚ್ ಹೋಲ್ ಶೈಲಿಯ ಐಪಿಎಸ್ ಎಲ್‌ಸಿಡಿ ಡಿಸ್ಪ್ಲೇ ಆಗಿದೆ. ಈ ಡಿಸ್ಪ್ಲೇಯು 1604 × 720 ಪಿಕ್ಸೆಲ್ ರೆಸಲ್ಯೂಶನ್ ಬೆಂಬಲ ಮತ್ತು 1,000 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಬೆಂಬಲ ಹೊಂದಿದೆ. ಹಾಗೆಯೇ ಗೊರಿಲ್ಲಾ ಗ್ಲಾಸ್ 3 ರಕ್ಷಣೆ ಪಡೆದಿದೆ.
ಮೀಡಿಯಾಟೆಕ್ ಪ್ರೊಸೆಸರ್
ಮೊಟೊ G05 ಮೊಬೈಲ್ ಮೀಡಿಯಾಟೆಕ್‌ನ ಹೆಲಿಯೊ G81 ಅಲ್ಟ್ರಾ ಪ್ರೊಸೆಸರ್ ಹೊಂದಿದೆ. ಗ್ರಾಫಿಕ್ಸ್‌ಗಾಗಿ, ಇದು ಆರ್ಮ್ ಮಾಲಿ G52 MC2 ಜಿಪಿಯು ಹೊಂದಿದೆ. ಈ ಸ್ಮಾರ್ಟ್‌ಫೋನ್ ಆಂಡ್ರಾಯ್ಡ್ 15 ಆಪರೇಟಿಂಗ್ ಸಿಸ್ಟಂನಲ್ಲಿ ಕೆಲಸ ನಿರ್ವಹಿಸುತ್ತದೆ. ಈ ಮೊಬೈಲ್ 4GB RAM ಮತ್ತು 8GB ವರ್ಚುವಲ್ RAM ಹೊಂದಿದೆ. ಈ ಫೋನಿನಲ್ಲಿ 64GB ಸ್ಟೋರೇಜ್ ಇದೆ. ಮೈಕ್ರೊ ಎಸ್‌ಡಿ ಮೂಲಕ 1TB ವರೆಗೆ ಸ್ಟೋರೇಜ್ ವಿಸ್ತರಿಸಬಹುದು.
ಡ್ಯುಯಲ್ ಕ್ಯಾಮೆರಾ ಸೆಟಪ್
ನೂತನ ಮೊಟೊ G05 ಸ್ಮಾರ್ಟ್‌ಫೋನ್ ಡ್ಯುಯಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಈ ಫೋನಿನಲ್ಲಿ ಎಲ್‌ಇಡಿ ಫ್ಲಾಶ್‌ನೊಂದಿಗೆ 50 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ ಲಭ್ಯವಿದೆ. ಈ ಫೋನ್ ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, 8 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಹೊಂದಿದೆ.
ಬ್ಯಾಟರಿ ಮತ್ತು ಚಾರ್ಜಿಂಗ್
ಮೊಟೊ G05 ಫೋನ್ 5200mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ. ಇದನ್ನು ಚಾರ್ಜ್ ಮಾಡಲು, ಈ ಫೋನ್ 18W ವೇಗದ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗಿದೆ. ಈ ಬ್ಯಾಟರಿ ಸಂಪೂರ್ಣ ಚಾರ್ಜ್ ಬಳಿಕ ಎರಡು ದಿನ ಬಾಳಿಕೆ ಬರುತ್ತದೆ.
ಇತರೆ ವೈಶಿಷ್ಟ್ಯಗಳು
ಮೊಟೊ G05 ಮೊಬೈಲ್ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಹೊಂದಿದೆ. ಧೂಳು ಮತ್ತು ನೀರಿನ ವಿರುದ್ಧ ರಕ್ಷಣೆಗಾಗಿ IP52 ರೇಟಿಂಗ್ ಪಡೆದಿದೆ. ಕನೆಕ್ಟಿವಿಟಿ ಸೌಲಭ್ಯಗಳಲ್ಲಿ ಇದು ಡ್ಯುಯಲ್ ಸಿಮ್, ಬ್ಲೂಟೂತ್ 5.4, ವೈ-ಫೈ, ಜಿಪಿಎಸ್ ಮತ್ತು ಯುಎಸ್‌ಬಿ ಟೈಪ್ ಸಿ ಪೋರ್ಟ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ.
ಮೊಟೊ G05 ಬೆಲೆ ಮತ್ತು ಆಫರ್
ಮೊಟೊ G05 ಸ್ಮಾರ್ಟ್‌ಫೋನ್ 4GB + 64GB ಸ್ಟೋರೇಜ್ ಆಯ್ಕೆಯಲ್ಲಿ ಮಾರಾಟವಾಗಲಿದೆ. ನೀವು ಕೇವಲ 6,999 ರೂ.ಗೆ ಈ ಮೊಬೈಲ್ ಖರೀದಿಸಬಹುದು. ಇದು ಫಾರೆಸ್ಟ್ ಗ್ರೀನ್ ಮತ್ತು ಪ್ಲಮ್ ರೆಡ್ ಬಣ್ಣಗಳಲ್ಲಿ ಖರೀದಿಗೆ ಲಭ್ಯವಿದೆ. ಈ ಫೋನ್ ಇಂದು (ಜನವರಿ 13) ಮಧ್ಯಾಹ್ನ 12 ಗಂಟೆಯಿಂದ ಫ್ಲಿಪ್‌ಕಾರ್ಟ್, ಕಂಪನಿಯ ವೆಬ್‌ಸೈಟ್ ಮೂಲಕ ಅಧಿಕೃತವಾಗಿ ಮಾರಾಟ ಶುರು ಮಾಡಲಿದೆ.


Click it and Unblock the Notifications








