ಭಾರತದಲ್ಲಿ ಮೋಟೋ G10 ಪವರ್ ಸ್ಮಾರ್ಟ್‌ಫೋನ್ ಲಾಂಚ್! ಬೆಲೆ ಎಷ್ಟು?
ಜನಪ್ರಿಯ ಸ್ಮಾರ್ಟ್‌ಫೋನ್ ತಯಾರಕ ಮೊಟೊರೊಲಾ ತನ್ನ ಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿದೆ. ಈಗಾಗಲೇ ಹಲವು ವಿದಧ ಸ್ಮಾರ್ಟ್‌ಫೋನ್ ಪರಿಚಯಿಸಿರುವ ಮೊಟೊರೊಲಾ ಕಂಪೆನಿ ಇದೀಗ ಮೋಟೋ G10 ಪವರ್ ಸ್ಮಾರ್ಟ್‌ಫೋನ್ ಅನ್ನು ಭಾರತದಲ್ಲಿ ಬಿಡುಗಡೆ ಮಾಡಿದೆ. ಇದು ಬಜೆಟ್ ಬೆಲೆಯ ಸ್ಮಾರ್ಟ್‌ಫೋನ್ ಆಗಿದ್ದು, ಕೈ ಗೆಟಕುವ ಬೆಲೆಯಲ್ಲಿ ದೊರೆಯಲಿದೆ.

ಹೌದು, ಮೊಟೊರೊಲಾ ಕಂಪೆನಿ ಹೊಸ ಮೋಟೋ G10 ಪವರ್ ಅನ್ನು ಭಾರತದಲ್ಲಿ ಲಾಂಚ್ ಮಾಡಿದೆ. ಇದು ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿರಲಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್ 6,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ವಿಶೇಷ
ಮೋಟೋ G10 ಪವರ್ ಸ್ಮಾರ್ಟ್‌ಫೋನ್ 720x1,600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.5-ಇಂಚಿನ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಇದು 20:9 ರಚನೆಯ ಅನುಪಾತವನ್ನು ಒಳಗೊಂಡಿದ್ದು, ಮ್ಯಾಕ್ಸ್ ವಿಷನ್ ಡಿಸ್‌ಪ್ಲೇ ಹೊಂದಿದೆ.

ಪ್ರೊಸೆಸರ್ ಬಲ
ಇದು ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 460 SoC ಪ್ರೊಸೆಸರ್ ಅನ್ನು ಒಳಗೊಂಡಿದ್ದು, ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸುತ್ತದೆ. ಹಾಗೆಯೇ ಇದು 4GB RAM ಮತ್ತು 64GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ ಮೆಮೊರಿ ಕಾರ್ಡ್ ಮೂಲಕ 128GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಕ್ಯಾಮೆರಾ
ಈ ಸ್ಮಾರ್ಟ್‌ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್ ಅಲ್ಟ್ರಾ-ವೈಡ್-ಆಂಗಲ್ ಲೆನ್ಸ್, ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ಮ್ಯಾಕ್ರೋ ಲೆನ್ಸ್ ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಅನ್ನು ಸಹ ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಹೊಂದಿದೆ.

ಬ್ಯಾಟರಿ ಮತ್ತು ಇತರೆ
ಇದು 6,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 20W ವೇಗದ ಚಾರ್ಜರ್‌ನ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್, ವೈಫೈ, ಬ್ಲೂಟೂತ್, ಯುಎಸ್‌ಬಿ ಟೈಪ್-ಸಿ ಪೋರ್ಟ್, ಐಪಿ 52 ವಾಟರ್ ರೆಸಿಸ್ಟೆನ್ಸ್, ಫಿಂಗರ್‌ಪ್ರಿಂಟ್ ಸ್ಕ್ಯಾನರ್, ಮೀಸಲಾದ ಗೂಗಲ್ ಅಸಿಸ್ಟೆಂಟ್ ಬಟನ್, ಮೋಟೋ ಆಕ್ಟಿವಿಟಿಗಳಿಗೆ ಬೆಂಬಲವನ್ನು ನೀಡಲಿದೆ.

ಬೆಲೆ ಮತ್ತು ಲಭ್ಯತೆ
ಮೊಟೊರೊಲಾ ಮೋಟೋ G10 ಪವರ್ ಸ್ಮಾರ್ಟ್‌ಫೋನ್ ಬೆಲೆ 9,999 ರೂ.ಆಗಿದೆ. ಇದು ಇದೇ ಮಾರ್ಚ್ 15 ರಿಂದ ಫ್ಲಿಪ್ಕಾರ್ಟ್ ಮೂಲಕ ಖರೀದಿಸಲು ಲಭ್ಯವಿರುತ್ತದೆ. ಇನ್ನು ಈ ಸ್ಮಾರ್ಟ್‌ಫೋನ್ ಅರೋರಾ ಗ್ರೇ ಮತ್ತು ಬ್ರೀಜ್ ಬ್ಲೂ ಬಣ್ಣಗಳ ಆಯ್ಕೆಯಲ್ಲಿ ಲಭ್ಯವಾಗಲಿದೆ.


Click it and Unblock the Notifications