Home
ಸುದ್ದಿಜಾಲ

ಶೀಘ್ರದಲ್ಲೇ ಮಾರುಕಟ್ಟೆಗೆ ಎಂಟ್ರಿ ನೀಡಲಿದೆ ಮೋಟೋ G100 ಸ್ಮಾರ್ಟ್‌ಫೋನ್‌!

ಜನಪ್ರಿಯ ಸ್ಮಾರ್ಟ್‌ಫೋನ್‌ ತಯಾರಕ ಮೊಟೊರೊಲಾ ಕಂಪೆನಿ ತನ್ನ ವೈವಿಧ್ಯಮಯ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿದೆ. ಈಗಾಗಲೇ ಹಲವು ಮಾದರಿಯ ಸ್ಮಾರ್ಟ್‌ಫೋನ್‌ಗಳನ್ನ ಪರಿಚಯಿಸಿ ತನ್ನ ಸ್ಥಾನವನ್ನು ಭದ್ರ ಪಡಿಸಿಕೊಂಡಿದೆ. ಸದ್ಯ ಇದೀಗ ಮೋಟೋ G100 ಸ್ಮಾರ್ಟ್‌ಫೋನ್‌ ಅನ್ನು ಲಾಂಚ್‌ ಮಾಡಲು ಸಿದ್ಧತೆ ನಡೆಸಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಇದೇ ಮಾರ್ಚ್ 25ರಂದು ಬಿಡುಗಡೆ ಆಗಲಿದೆ ಎಂದು ಹೇಳಲಾಗಿದೆ. ಇನ್ನು ಬಿಡುಗಡೆಗೂ ಮುನ್ನವೇ ಈ ಸ್ಮಾರ್ಟ್‌ಫೋನ್‌ ಫೀಚರ್ಸ್‌ ಬಹಿರಂಗಗೊಂಡಿದೆ.

ಮೊಟೊರೊಲಾ

ಹೌದು, ಮೊಟೊರೊಲಾ ಸಂಸ್ಥೆಯ ಮೋಟೋ G 100 ಸ್ಮಾರ್ಟ್‌ಫೋನ್‌ ಸಾಕಷ್ಟು ನಿರೀಕ್ಷೆಯನ್ನು ಹುಟ್ಟುಹಾಕಿದೆ. ಈ ಸ್ಮಾರ್ಟ್‌ಫೋನ್‌ ಫೀಚರ್ಸ್‌ ಹೇಗಿರಲಿದೆ ಅನ್ನೊದು ಆನ್‌ಲೈನ್‌ನಲ್ಲಿ ಬಹಿರಂಗವಾಗಿದೆ. ಇದು ನೀಲಿ ಬಣ್ಣದ ಆಯ್ಕೆಯಲ್ಲಿ ಬರಲಿದೆ ಎನ್ನಲಾಗಿದ್ದು, ಮೋಟೋ G 100 ಮೊಟೊರೊಲಾ ಎಡ್ಜ್ ಎಸ್‌ನ ಜಾಗತಿಕ ಆವೃತ್ತಿಯಾಗಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಮೇ ವಿಶೇಷತೆ

ಡಿಸ್‌ಪ್ಮೇ ವಿಶೇಷತೆ

ಮೋಟೋ G 100 ಸ್ಮಾರ್ಟ್‌ಫೋನ್ 1,080x2,520 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.7 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್‌ ಅನ್ನು ಹೊಂದಿದೆ ಎಂದು ನಿರೀಕ್ಷಿಸಲಾಗಿದೆ. ಈ ಡಿಸ್‌ಪ್ಲೇ 84.1% ಸ್ಕ್ರೀನ್‌ ಟು ಬಾಡಿ ಅನುಪಾತವನ್ನು ಹೊಂದಿದೆ. ಇದಲ್ಲದೆ ಈ ಡಿಸ್‌ಪ್ಲೇ 21.9 ರಚನೆಯ ಅನುಪಾತವನ್ನು ಒಳಗೊಂಡಿದೆ.

ಪ್ರೊಸೆಸರ್‌ ಸಾಮರ್ಥ್ಯ

ಪ್ರೊಸೆಸರ್‌ ಸಾಮರ್ಥ್ಯ

ಇದು ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್ 870 SoC ಪ್ರೊಸೆಸರ್‌ ಸಾಮರ್ಥ್ಯವನ್ನು ಹೊಂದಿದೆ. ಇದು ಆಂಡ್ರಾಯ್ಡ್‌ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 6GB RAM+128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿರಲಿದೆ ಎಂದು ಅಂದಾಜಿಸಲಾಗಿದೆ.

ಕ್ಯಾಮೆರಾ ವಿನ್ಯಾಸ

ಕ್ಯಾಮೆರಾ ವಿನ್ಯಾಸ

ಮೋಟೋ G100 ಸ್ಮಾರ್ಟ್‌ಫೋನ್‌ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್‌ ಸೆನ್ಸಾರ್‌, ಎರಡನೇ ಕ್ಯಾಮೆರಾ 16 ಮೆಗಾಪಿಕ್ಸೆಲ್‌ ಸೆನ್ಸಾರ್‌, ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಡೆಪ್ತ್‌ ಸೆನ್ಸಾರ್‌ ಮತ್ತು ನಾಲ್ಕನೇ ಕ್ಯಾಮೆರಾ ಟೈಮ್‌ ಆಫ್‌ ಫ್ಲೈಟ್‌ ಸೆನ್ಸಾರ್‌ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಪ್ರೈಮರಿ ಸೆನ್ಸಾರ್‌ ಮತ್ತು 8 ಮೆಗಾಪಿಕ್ಸೆಲ್‌ ಅಲ್ಟ್ರಾ-ವೈಡ್-ಆಂಗಲ್ ಲೆನ್ಸ್ ಹೊಂದಿರುವ ಡ್ಯುಯೆಲ್‌ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ ಫೀಚರ್ಸ್‌

ಬ್ಯಾಟರಿ ಮತ್ತು ಇತರೆ ಫೀಚರ್ಸ್‌

ಇದು 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 20W ಫಾಸ್ಟ್‌ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, ವೈ-ಫೈ 6, ಬ್ಲೂಟೂತ್ 5.1, ಮತ್ತು NFC ಯನ್ನು ಬೆಂಬಲಿಸಲಿದೆ. ಇನ್ನು ಮೋಟೋ G100 ಸ್ಮಾರ್ಟ್‌ಫೋನ್‌ ಇದೇ ಮಾರ್ಚ್‌ 25 ರಂದು ಬಿಡುಗಡೆ ಆಗಲಿದೆ ಎಂದು ಹೇಳಲಾಗಿದೆ. ಈ ಸ್ಮಾರ್ಟ್‌ಫೋನ್‌ 8GB RAM + 128 GB ಸ್ಟೋರೇಜ್‌ ಸಾಮರ್ಥ್ಯದ ಆಯ್ಕೆಗೆ ಬೆಲೆ ಯುರೋ 479.77 (ಸುಮಾರು ರೂ. 41,400). ಹೊಂದಿರಲಿದೆ ಎಂದು ಅಂದಾಜಿಸಲಾಗಿದೆ.

Best Mobiles in India

English summary
Moto G100 price has leaked ahead of its expected March 25 launch.to know more visit to kannada.gizbot.com
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+