ಮೊಟೊ G100 ಸ್ಮಾರ್ಟ್‌ಫೋನ್ ಲಾಂಚ್; ಹಲವು ಆಕರ್ಷಕ ಫೀಚರ್ಸ್!
ಪ್ರತಿಷ್ಠಿತ ಮೊಬೈಲ್ ತಯಾರಿಕಾ ಸಂಸ್ಥೆಗಳಲ್ಲಿ ಒಂದಾದ ಮೊಟೊರೊಲಾ ಕಂಪೆನಿಯು ಈಗಾಗಲೇ G ಸರಣಿಯಲ್ಲಿ ಹಲವು ಆಕರ್ಷಕ ಸ್ಮಾರ್ಟ್‌ಫೋನ್ ಪರಿಚಯಿಸಿದೆ. ಇದೀಗ ತನ್ನ ಜನಪ್ರಿಯ G ಸರಣಿಯಲ್ಲಿಯೇ ಮತ್ತೊಂದು ಅಗ್ಗದ ಬೆಲೆಯ ಸ್ಮಾರ್ಟ್‌ಫೋನ್ ಅನ್ನು ಅನಾವರಣ ಮಾಡಿದೆ. ಈ ಸ್ಮಾರ್ಟ್‌ಫೋನ್ ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 870 SoC ಪ್ರೊಸೆಸರ್ ಹಾಗೂ ಆಕರ್ಷಕ ಕ್ಯಾಮೆರಾ ಫೀಚರ್ಸ್‌ಗಳನ್ನು ಒಳಗೊಂಡಿದೆ.

ಹೌದು, ಮೊಟೊರೊಲಾ ಕಂಪೆನಿ ನೂತನವಾಗಿ ಮೊಟೊ G100 ಸ್ಮಾರ್ಟ್‌ಫೋನ್ ಅನ್ನು ಯುರೋಪಿಯನ್ ಮಾರುಕಟ್ಟೆಯಲ್ಲಿ ಲಾಂಚ್ ಮಾಡಿದೆ. ಈ ಸ್ಮಾರ್ಟ್‌ಫೋನ್ ಕ್ವಾಡ್ ಕ್ಯಾಮೆರಾ ಸೆಟ್‌ಅಪ್ ಅನ್ನು ಪಡೆದಿದ್ದು, ಮುಖ್ಯ ಕ್ಯಾಮೆರಾವು 64 ಎಂಪಿ ಸೆನ್ಸಾರ್‌ನಲ್ಲಿದೆ. ಇದರೊಂದಿಗೆ 5,000mAh ಬ್ಯಾಟರಿ ಬಾಳಿಕೆ ಪಡೆದಿರುವುದು ಮತ್ತೊಂದು ಹೈಲೈಟ್ ಆಗಿದೆ. ಇನ್ನುಳಿದಂತೆ ಮೊಟೊ G100 ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್ ಒಳಗೊಂಡಿದೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಡಿಸ್‌ಪ್ಲೇ ರಚನೆ ಹೇಗಿದೆ
ಮೊಟೊ G100 ಸ್ಮಾರ್ಟ್‌ಫೋನ್ ತನ್ನ ವರ್ಗದಲ್ಲಿಯೇ ಉತ್ತಮ ಪಿಕ್ಸಲ್ ರೆಸಲ್ಯೂಶನ್ ಸಫೋರ್ಟ್ ಪಡೆದಿದ್ದು, 6.7 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಪಡೆದಿದೆ. ಡಿಸ್‌ಪ್ಲೇಯು 90Hz ರಿಫ್ರೆಶ್ ರೇಟ್ ಅನ್ನು ಹೊಂದಿದ್ದು, ಹಾಗೆಯೇ HDR10 ಬೆಂಬಲವನ್ನು ಒಳಗೊಂಡಿದೆ.

ಪ್ರೊಸೆಸರ್ ಕಾರ್ಯವೇನು
ಮೊಟೊ G100 ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್ಡ್ರಾಗನ್ 870 SoC ಪ್ರೊಸೆಸರ್ ವೇಗವನ್ನು ಹೊಂದಿದೆ. ಅಲ್ಲದೆ ಇತ್ತೀಚಿನ ಹೊಸ ಆಂಡ್ರಾಯ್ಡ್ ಓಎಸ್ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ ಈ ಸ್ಮಾರ್ಟ್‌ಫೋನ್ 8GB RAM + 128GB ಸ್ಟೋರೇಜ್ ವೇರಿಯಂಟ್ ಆಯ್ಕೆಯನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್ ಮೆಮೊರಿ ಕಾರ್ಡ್ ಮೂಲಕ ಸಂಗ್ರಹ ವಿಸ್ತರಣೆಗೆ ಅವಕಾಶ ನೀಡಿದೆ.

ಕ್ವಾಡ್ ಕ್ಯಾಮೆರಾ ರಚನೆ
ಮೊಟೊ G100 ಸ್ಮಾರ್ಟ್‌ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್‌ನಲ್ಲಿದೆ. ಎರಡನೇ ಕ್ಯಾಮೆರಾ 8 ಮೆಗಾ ಪಿಕ್ಸೆಲ್ ಸೆನ್ಸಾರ್‌ನಲ್ಲಿದೆ. ಮೂರನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಟೆಲಿಫೋಟೋ ಶೂಟರ್ ಹಾಗೂ ನಾಲ್ಕನೇ ಬೇಸಿಕ್ ಕ್ಯಾಮೆರಾ ಸೆನ್ಸಾರ್ ಅನ್ನು ಹೊಂದಿದೆ. ಇದರೊಂದಿಗೆ ಡ್ಯುಯಲ್ ಸೆಲ್ಫಿ ಕ್ಯಾಮೆರಾ ಇದ್ದು, ಅವುಗಳು 16 ಮೆಗಾ ಪಿಕ್ಸಲ್ ಹಾಗೂ 8 ಮೆಗಾ ಪಿಕ್ಸಲ್ ಸೆನ್ಸಾರ್‌ನಲ್ಲಿವೆ.

ಬ್ಯಾಟರಿ ಮತ್ತು ಇತರೆ
ಮೊಟೊ G100 ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್ ಅನ್ನು ಹೊಂದಿದೆ. ಹಾಗೆಯೇ 20W ಸಾಮರ್ಥ್ಯದ ಫಾಸ್ಟ್ ಚಾರ್ಜಿಂಗ್ ಸೌಲಭ್ಯವನ್ನು ಪಡೆದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5 ಜಿ, ವೈ-ಫೈ, ಬ್ಲೂಟೂತ್ 5.0, ಎನ್‌ಎಫ್‌ಸಿ, ಜಿಪಿಎಸ್, 3.5 ಎಂಎಂ ಹೆಡ್‌ಫೋನ್ ಜ್ಯಾಕ್ ಮತ್ತು ಯುಎಸ್‌ಬಿ ಟೈಪ್-ಸಿ ಪೋರ್ಟ್ ಸೇರಿವೆ.


Click it and Unblock the Notifications