Home
ಸುದ್ದಿಜಾಲ

ಶೀಘ್ರದಲ್ಲೇ ಭಾರತದಲ್ಲಿ ಲಾಂಚ್‌ ಆಗಲಿದೆ ಮೊಟೊ G13 ಫೋನ್: ಬೆಲೆ ಎಷ್ಟಿರಬಹುದು!?

ಅತ್ಯುತ್ತಮ ಕಾರ್ಯಕ್ಷಮತೆ ಇರುವ ಸ್ಮಾರ್ಟ್‌ಫೋನ್‌ ತಯಾರಿಕಾ ಸಂಸ್ಥೆಗಳಲ್ಲಿ ಮೊಟೊ ಸಹ ಒಂದಾಗಿದ್ದು, ಈ ಕಂಪೆನಿಯು ಇತ್ತೀಚೆಗೆ ನಿರಂತರವಾಗಿ ಸುಧಾರಿತ ಫೀಚರ್ಸ್‌ ಇರುವ ಸ್ಮಾರ್ಟ್‌ಫೋನ್‌ಗಳನ್ನು ಅನಾವರಣ ಮಾಡಿಕೊಂಡು ಬರುತ್ತಿದೆ. ಇದರ ಭಾಗವಾಗಿಯೇ ಇನ್ನೇನು ಕೆಲವೇ ದಿನಗಳಲ್ಲಿ ಮತ್ತೊಂದು ಫೋನ್‌ ಅನ್ನು ಲಾಂಚ್‌ ಮಾಡಲಿದೆ.

ಹೌದು, ಒಪ್ಪೋ, ಐಕ್ಯೂ, ಪೊಕೊ ಫೋನ್‌ಗಳಿಗೆ ಪೈಪೋಟಿಯಾಗಿರುವ ಮೊಟೊ ಫೋನ್‌ಗಳಿಗೆ ಮಾರುಕಟ್ಟೆಯಲ್ಲಿ ಭರ್ಜರಿ ಬೇಡಿಕೆ ಇದ್ದು, ಇದೀಗ ಭಾರತದಲ್ಲಿ ಮೊಟೊ G13 (Moto G13 )ಸ್ಮಾರ್ಟ್‌ಫೋನ್ ಅನಾವರಣಕ್ಕೆ ವೇದಿಕೆ ನಿರ್ಮಾಣ ಆಗುತ್ತಿದೆ. ಈ ಫೋನ್‌ G ಸರಣಿಯ ಅತ್ಯುತ್ತಮ ಫೋನ್‌ ಆಗಿರಲಿದ್ದು, ಮೀಡಿಯಾ ಟೆಕ್ ಹಿಲಿಯೊ G85 ಪ್ರೊಸೆಸರ್‌ ಮೂಲಕ ಕಾರ್ಯನಿರ್ವಹಿಸಲಿದೆ. ಹಾಗಿದ್ರೆ, ಇದರ ಫೀಚರ್ಸ್‌ ಹಾಗೂ ನಿರೀಕ್ಷಿತ ಬೆಲೆ ವಿವರವನ್ನು ತಿಳಿಯೋಣ ಬನ್ನಿ.

ಶೀಘ್ರದಲ್ಲೇ ಭಾರತದಲ್ಲಿ ಲಾಂಚ್‌ ಆಗಲಿದೆ ಮೊಟೊ G13 ಫೋನ್: ಬೆಲೆ ಎಷ್ಟಿರಬಹುದು!?

ಮೊಟೊ G13 ಡಿಸ್‌ಪ್ಲೇ ವಿವರ: ಜಾಗತಿಕವಾಗಿ ಈ ಫೋನ್‌ನ ಫೀಚರ್ಸ್‌ ಈಗಾಗಲೇ ತಿಳಿದಿದ್ದು, ಅದರಂತೆ ಭಾರತದಲ್ಲಿ ಲಾಂಚ್‌ ಆಗುವ ಈ ಫೋನ್ 6.5 ಇಂಚಿನ FHD+ IPS ಡಿಸ್‌ಪ್ಲೇ ಹೊಂದಿದೆ. ಇದರೊಂದಿಗೆ 90Hz ರಿಫ್ರೆಶ್ ರೇಟ್‌ ಹಾಗೂ 576Hz ಟಚ್ ಸ್ಯಾಂಪ್ಲಿಂಗ್ ದರದೊಂದಿಗೆ ಈ ಫೋನ್‌ ಕಾಣಿಸಿಕೊಂಡಿದೆ.

ಮೊಟೊ G13 ಪ್ರೊಸೆಸರ್‌ ಮಾಹಿತಿ: ಇದು ಮೀಡಿಯಾ ಟೆಕ್ ಹಿಲಿಯೊ G85 ಪ್ರೊಸೆಸರ್ ಮೂಲಕ ಕಾರ್ಯನಿರ್ವಹಿಸಲಿದ್ದು, ಆಂಡ್ರಾಯ್ಡ್‌ 13 ಓಎಸ್ ನಲ್ಲಿ ರನ್ ಆಗುತ್ತದೆ. ಜೊತೆಗೆ 4GB RAM ಹಾಗೂ 128GB ಇಂಟರ್‌ ಸ್ಟೋರೇಜ್‌ ಆಯ್ಕೆಯನ್ನು ಹೊಂದಿದ್ದು, ಸ್ಟೋರೇಜ್‌ ಅನ್ನು ವಿಸ್ತರಣೆ ಮಾಡಿಕೊಳ್ಳುವ ಸಲುವಾಗಿ ಮೈಕ್ರೋ ಎಸ್‌ಡಿ ಕಾರ್ಡ್‌ ಸೌಲಭ್ಯ ಕಲ್ಪಿಸಿಕೊಡಲಾಗಿದೆ.

ಮೊಟೊ G13 ಕ್ಯಾಮೆರಾ ರಚನೆ: ಈ ಫೋನ್‌ನ ಕ್ಯಾಮೆರಾ ವಿಚಾರಕ್ಕೆ ಬರುವುದಾದರೆ ಟ್ರಿಪಲ್‌ ರಿಯರ್‌ ಕ್ಯಾಮೆರಾ ರಚನೆ ಹೊಂದಿದ್ದು, ಇದರಲ್ಲಿ ಪ್ರಮುಖವಾಗಿ 50 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ, 2 ಮೆಗಾಪಿಕ್ಸೆಲ್ ಸೆಕೆಂಡರಿ ಸೆನ್ಸರ್‌ ಮತ್ತು 2 ಮೆಗಾಪಿಕ್ಸೆಲ್ ಮ್ಯಾಕ್ರೋ ಸೆನ್ಸರ್‌ ಆಯ್ಕೆಯನ್ನು ಹೊಂದಿದೆ. ಹಾಗೆಯೇ ಸೆಲ್ಫಿ ಉದ್ದೇಶಕ್ಕೆ 8 ಮೆಗಾಪಿಕ್ಸೆಲ್ ಕ್ಯಾಮೆರಾವನ್ನು ನೀಡಲಾಗಿದೆ.

ಶೀಘ್ರದಲ್ಲೇ ಭಾರತದಲ್ಲಿ ಲಾಂಚ್‌ ಆಗಲಿದೆ ಮೊಟೊ G13 ಫೋನ್: ಬೆಲೆ ಎಷ್ಟಿರಬಹುದು!?

ಮೊಟೊ G13 ಬ್ಯಾಟರಿ ಸಾಮರ್ಥ್ಯ ಹಾಗೂ ಇತರೆ : 5,000mAh ಸಾಮರ್ಥ್ಯದ ಬ್ಯಾಟರಿ ಆಯ್ಕೆ ಹೊಂದಿರುವ ಈ ಫೋನ್ 10W ಚಾರ್ಜಿಂಗ್ ಬೆಂಬಲ ಪಡೆದುಕೊಂಡಿದೆ. ಇದರಲ್ಲಿ ಗಮನಿಸಬೇಕಾದ ಅಂಶ ಎಂದರೆ ಬಜೆಟ್‌ ಬೆಲೆಯಲ್ಲಿ ಲಭ್ಯವಾಗುತ್ತಿರುವ ಇತರೆ ಫೋನ್‌ಗಳು ಕನಿಷ್ಠವಾದರೂ 18W ಆಯ್ಕೆ ನೀಡುತ್ತವೆ. ಆದರೆ, ಈ ವಿಚಾರದಲ್ಲಿ ಮೊಟೊ ಹಿಂದೆ ಉಳಿದಿದೆ. ಇನ್ನು ಈ ಫೋನ್‌ ಬಯೋಮೆಟ್ರಿಕ್ ದೃಢೀಕರಣಕ್ಕಾಗಿ ಸೈಡ್ ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸರ್‌ ಆಯ್ಕೆ ಹೊಂದಿದೆ.

ಭಾರತದಲ್ಲಿ ನಿರೀಕ್ಷಿತ ಬೆಲೆ ಹಾಗೂ ಲಭ್ಯತೆ: ಪ್ರಮುಖ ಮಾಹಿತಿಗೆ ಬರುವುದಾದರೆ ಭಾರತದಲ್ಲಿ ಇದು 15,000 ರೂ.ಗಳನ್ನು ಹೊಂದಿರಬಹುದು ಎನ್ನಲಾಗಿದೆ. ಆದರೆ ಈ ಫೀಚರ್ಸ್‌ ಇರುವ ಇತರೆ ಕಂಪೆನಿಯ ಸ್ಮಾರ್ಟ್‌ಫೋನ್‌ಗಳು 13,000 ರೂ.ಗಳಿಗಿಂತ ಕಡಿಮೆ ಬೆಲೆ ಹೊಂದಿದ್ದು, ಮೊಟೊ ಮೇಲೆ ತಿಳಿಸಿದ ನಿರೀಕ್ಷಿತ ಬೆಲೆಯಲ್ಲಿ ಫೋನ್‌ಗಳನ್ನು ಮಾರಾಟ ಮಾಡುವುದೇ ಅಥವಾ ಅದಕ್ಕಿಂತ ಕಡಿಮೆ ಬೆಲೆಯಲ್ಲಿ ಮಾರಾಟ ಮಾಡಲಿದೆಯೇ ಎಂಬುದನ್ನು ಕಾದು ನೋಡಬೇಕು.

ಶೀಘ್ರದಲ್ಲೇ ಭಾರತದಲ್ಲಿ ಲಾಂಚ್‌ ಆಗಲಿದೆ ಮೊಟೊ G13 ಫೋನ್: ಬೆಲೆ ಎಷ್ಟಿರಬಹುದು!?

ಹಾಗೆಯೇ ಇದರ ಲಾಂಚ್‌ ವಿಚಾರಕ್ಕೆ ಬರುವುದಾದರೆ ಈ ತಿಂಗಳ ಅಂತ್ಯದಲ್ಲಿ ಅಂದರೆ ಮುಂದಿನ ವಾರ ಮಾರ್ಚ್‌ 29 ರಂದು ಲಾಂಚ್‌ ಆಗಲಿದೆ ಎನ್ನಲಾಗಿದೆ. ಆದರೆ, ಭಾರತದಲ್ಲಿ ಈ ಫೋನ್‌ ಅನ್ನು ಅನಾವರಣ ಮಾಡುವ ಬಗ್ಗೆ ಮೊಟೊ ಯಾವುದೇ ಮಾಹಿತಿಯನ್ನು ಅಧಿಕೃತವಾಗಿ ಬಹಿರಂಗಪಡಿಸಿಲ್ಲ ಎಂಬುದನ್ನು ಗಮನಿಸಬೇಕು.

Best Mobiles in India

English summary
The stage is set for the unveiling of Moto G13 smartphone in India. This phone will be powered by MediaTek Helio G85 processor. But it is not known exactly how much it costs in India.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+