ಮೊಟೊರೊಲಾದಿಂದ ಎರಡು ಹೊಸ ಸ್ಮಾರ್ಟ್‌ಫೋನ್‌ ಲಾಂಚ್‌! ಫೀಚರ್ಸ್‌ ಏನು?

|

ಮೊಟೊರೊಲಾ ಕಂಪೆನಿಯ ಸ್ಮಾರ್ಟ್‌ಫೋನ್‌ಗಳು ಟೆಕ್‌ ಲೋಕದ ಅಚ್ಚರಿ ಎನ್ನುವ ಮಟ್ಟಿಗೆ ಜನಪ್ರಿಯತೆ ಪಡೆದಿವೆ. ವಿಶಿಷ್ಟವಾದ ಡಿಸೈನ್‌ ಹಾಗೂ ಲುಕ್‌ನಿಂದ ಗಮನಸೆಳೆದಿವೆ. ಅಲ್ಲದೆ ಮಾರುಕಟ್ಟೆಯಲ್ಲಿ ತಮ್ಮ ವಿವಿಧ ಬೆಲೆಯ ಫೋನ್‌ಗಳ ಮೂಲಕ ಮೊಟೊರೊಲಾ ನೆಚ್ಚಿನ ಬ್ರ್ಯಾಂಡ್‌ಗಳಲ್ಲಿ ಒಂದೆನಿಸಿಕೊಂಡಿದೆ. ಇದೀಗ ಮೊಟೊರೊಲಾ ಕಂಪೆನಿ ಮೊಟೊ G23 ಮತ್ತು ಮೊಟೊ G13 ಎನ್ನುವ ಎರಡು ಹೊಸ ಬಜೆಟ್‌ ಸ್ಮಾರ್ಟ್‌ಫೋನ್‌ಗಳನ್ನು ಜಾಗತಿಕ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಿದೆ.

ಮೊಟೊರೊಲಾ

ಹೌದು, ಮೊಟೊರೊಲಾ ಕಂಪೆನಿ ಜಾಗತಿಕವಾಗಿ ಮೊಟೊ G23 ಮತ್ತು ಮೊಟೊ G13 ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿದೆ. ಈ ಎರಡು ಸ್ಮಾರ್ಟ್‌ಫೋನ್‌ಗಳು ಫ್ಲಾಟ್‌ಫ್ರೇಮ್‌ ವಿನ್ಯಾಸದ ಮೂಲಕ ಗಮನಸೆಳೆದಿವೆ. ಜೊತೆಗೆ ಈ ಎರಡು ಸ್ಮಾರ್ಟ್‌ಫೋನ್‌ಗಳು ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿವೆ. ಅಲ್ಲದೆ ಈ ಫೋನ್‌ಗಳು ಮೀಡಿಯಾಟೆಕ್‌ ಹಿಲಿಯೋ G85 SoC ಪ್ರೊಸೆಸರ್‌ ಮೂಲಕ ಕಾರ್ಯನಿರ್ವಹಿಸಲಿವೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ಗಳು ಯಾವೆಲ್ಲಾ ಫೀಚರ್ಸ್‌ ಒಳಗೊಂಡಿವೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಫೀಚರ್ಸ್‌ ಹೇಗಿದೆ?

ಫೀಚರ್ಸ್‌ ಹೇಗಿದೆ?

ಮೊಟೊರೊಲಾ ಕಂಪೆನಿ ಪರಿಚಯಿಸಿರುವ ಈ ಎರಡು ಸ್ಮಾರ್ಟ್‌ಫೋನ್‌ಗಳು 6.5 ಇಂಚಿನ ಐಪಿಎಸ್‌ ಎಲ್‌ಸಿಡಿ ಡಿಸ್‌ಪ್ಲೇಯನ್ನು ಹೊಂದಿವೆ. ಈ ಡಿಸ್‌ಪ್ಲೇ 720 x 1600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದಿವೆ. ಇದು 90Hz ರಿಫ್ರೆಶ್‌ ರೇಟ್‌, 400 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್‌ ಹೊಂದಿದ್ದು, 83.9% ಸ್ಕ್ರೀನ್-ಟು-ಬಾಡಿ ಅನುಪಾತವನ್ನು ಒಳಗೊಂಡಿದೆ. ಜೊತೆಗೆ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಪಡೆದಿದೆ.

ಪ್ರೊಸೆಸರ್‌ ಕಾರ್ಯವೈಖರಿ ಏನಿದೆ?

ಪ್ರೊಸೆಸರ್‌ ಕಾರ್ಯವೈಖರಿ ಏನಿದೆ?

ಮೊಟೊ G23 ಮತ್ತು ಮೊಟೊ G13 ಸ್ಮಾರ್ಟ್‌ಫೋನ್‌ಗಳು ಮೀಡಿಯಾಟೆಕ್‌ ಹಿಲಿಯೋ G85 SoC ಪ್ರೊಸೆಸರ್‌ ವೇಗವನ್ನು ಪಡೆದಿದ್ದು, ಆಂಡ್ರಾಯ್ಡ್‌ 13 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿವೆ. ಹಾಗೆಯೇ 4GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯದ ಆಯ್ಕೆಯನ್ನು ಹೊಂದಿವೆ, ಇದಲ್ಲದೆ ಮೆಮೊರಿ ಕಾರ್ಡ್‌ ಮೂಲಕ ಸಂಗ್ರಹ ಸಾಮರ್ಥ್ಯವನ್ನು ಬೆಂಬಲಿಸುವ ಆಯ್ಕೆಯನ್ನು ಸಹ ನೀಡಲಾಗಿದೆ.

ಕ್ಯಾಮೆರಾ ಸೆಟ್‌ಅಪ್‌ ಎಷ್ಟಿದೆ?

ಕ್ಯಾಮೆರಾ ಸೆಟ್‌ಅಪ್‌ ಎಷ್ಟಿದೆ?

ಈ ಎರಡು ಸ್ಮಾರ್ಟ್‌ಫೋನ್‌ಗಳು ಕೂಡ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದಿವೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್‌ ಸೆನ್ಸಾರ್‌, ಎರಡನೇ ಕ್ಯಾಮೆರಾ 5 ಮೆಗಾಪಿಕ್ಸೆಲ್‌ ಅಲ್ಟ್ರಾ-ವೈಡ್ ಲೆನ್ಸ್‌ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಡೆಪ್ತ್ ಸೆನ್ಸಾರ್ ಅನ್ನು ಒಳಗೊಂಡಿದೆ. ಆದರೆ ಮೊಟೊ G23 ಸ್ಮಾರ್ಟ್‌ಫೋನ್‌ 16MP ಸೆಲ್ಫಿ ಕ್ಯಾಮೆರಾ ಹೊಂದಿದೆ. ಹಾಗೆಯೇ ಮೊಟೊ G13 ಸ್ಮಾರ್ಟ್‌ಫೋನ್‌ 8MP ಸೆಲ್ಫಿ ಕ್ಯಾಮೆರಾವನ್ನು ಪಡೆದುಕೊಂಡಿದೆ.

ಬ್ಯಾಟರಿ ಬ್ಯಾಕ್‌ಅಪ್ ಏನಿದೆ?

ಬ್ಯಾಟರಿ ಬ್ಯಾಕ್‌ಅಪ್ ಏನಿದೆ?

ಈ ಸ್ಮಾರ್ಟ್‌ಫೋನ್‌ಗಳು 5000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿವೆ. ಆದರೆ ವೇಗದ ಚಾರ್ಜಿಂಗ್‌ ಬೆಂಬಲಿಸುವುದರಲ್ಲಿ ಭಿನ್ನವಾಗಿವೆ. ಅಂದರೆ ಮೊಟೊ G13 ಸ್ಮಾರ್ಟ್‌ಫೋನ್‌ 20W ವೇಗದ ಚಾರ್ಜಿಂಗ್‌ ಬೆಂಬಲಿಸಲಿದೆ. ಮೊಟೊ G23 ಸ್ಮಾರ್ಟ್‌ಫೋನ್‌ 30W ವೇಗದ ಚಾರ್ಜಿಂಗ್‌ ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ಬ್ಲೂಟೂತ್‌, ವೈಫೈ, ಯುಎಸ್‌ಬಿ ಸಿ ಪೋರ್ಟ್‌ ಅನ್ನು ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಈ ಎರಡು ಸ್ಮಾರ್ಟ್‌ಫೋನ್‌ಗಳು ಜಾಗತಿಕ ಮಾರುಕಟ್ಟೆಯಲ್ಲಿ ಅನಾವರಣಗೊಂಡಿವೆ. ಅದರಂತೆ ಮೊಟೊ G13 ಸ್ಮಾರ್ಟ್‌ಫೋನ್‌ 4GB RAM ಮತ್ತು 128GB ಸ್ಟೋರೇಜ್‌ ಆಯ್ಕೆಗೆ EUR 179 (ಅಂದಾಜು 15,900ರೂ.) ಬೆಲೆಯನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್‌ ಮ್ಯಾಟ್ ಚಾರ್ಕೋಲ್, ಬ್ಲೂ ಲ್ಯಾವೆಂಡರ್ ಮತ್ತು ರೋಸ್ ಗೋಲ್ಡ್ ಬಣ್ಣಗಳ ಆಯ್ಕೆಯಲ್ಲಿ ಬರಲಿದೆ.
ಇನ್ನು ಮೊಟೊ G23 ಸ್ಮಾರ್ಟ್‌ಫೋನ್‌ 4GB + 128GB ಸ್ಟೋರೇಜ್ ಆಯ್ಕೆಯು EUR 199 (ಸುಮಾರು 17,600ರೂ) ಬೆಲೆಯಲ್ಲಿ ಲಭ್ಯವಾಗಲಿದೆ. ಈ ಸ್ಮಾರ್ಟ್‌ಫೋನ್‌ ಮ್ಯಾಟ್ ಚಾರ್ಕೋಲ್, ಪರ್ಲ್ ವೈಟ್ ಮತ್ತು ಸ್ಟೀಲ್ ಬ್ಲೂ ಬಣ್ಣದ ಆಯ್ಕೆಗಳಲ್ಲಿ ಲಭ್ಯವಾಗಲಿದೆ. ಈ ಸ್ಮಾರ್ಟ್‌ಫೋನ್‌ ಭಾರತದ ಮಾರುಕಟ್ಟೆಯಲ್ಲಿ ಲಭ್ಯವಾಗುವುದರ ಬಗ್ಗೆ ಯಾವುದೇ ಮಾಹಿತಿ ಬಹಿರಂಗವಾಗಿಲ್ಲ.

Best Mobiles in India

English summary
Motorola has launched new budget smartphones.know more details in kannada

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X