Home
ಸುದ್ದಿಜಾಲ

ಮೊಟೊ G13 ಭಾರತದಲ್ಲಿ ಅನಾವರಣ; ಬೆಲೆ, ಫೀಚರ್ಸ್ ಬಗ್ಗೆ ತಿಳಿಯಿರಿ!

ಮೊಟೊದ ಸ್ಮಾರ್ಟ್‌ಫೋನ್‌ಗಳಿಗೆ ಬಹು ಬೇಡಿಕೆ ಇದ್ದು, ಅದರಂತೆ ಮೊಟೊ ಭಾರತದಲ್ಲಿ ನೂತನ ಸ್ಮಾರ್ಟ್‌ಫೋನ್‌ ಅನ್ನು ಅನಾವರಣ ಮಾಡಿದೆ. ಈ ಫೋನ್ ಮೀಡಿಯಾ ಟೆಕ್ ಹಿಲಿಯೊ G85 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದ್ದು, ಬಜೆಟ್‌ ಬೆಲೆಯಲ್ಲಿ ಲಭ್ಯವಾಗಲಿದೆ.

ಹೌದು, ಭಾರತದಲ್ಲಿ ಮೊಟೊ G13 (Moto G13) ಸ್ಮಾರ್ಟ್‌ಫೋನ್‌ ಅನ್ನು ಅನಾವರಣ ಮಾಡಲಾಗಿದ್ದು, ಈ ಫೋನ್ 4GB RAM ಹಾಗೂ 128GB ಇಂಟರ್‌ ಸ್ಟೋರೇಜ್‌ ಆಯ್ಕೆಯಲ್ಲಿ ಕಾಣಿಸಿಕೊಂಡಿದೆ. ಹಾಗೆಯೇ ಇದನ್ನು ವಿಸ್ತರಣೆ ಸಹ ಮಾಡಿಕೊಳ್ಳಬಹುದಾಗಿದೆ. ಜೊತೆಗೆ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸರ್‌ ಆಯ್ಕೆ ಹೊಂದಿದೆ. ಹಾಗಿದ್ರೆ, ಇದರ ಪ್ರಮುಖ ಫೀಚರ್ಸ್‌ ಹಾಗೂ ಭಾರತದಲ್ಲಿ ಇದರ ಬೆಲೆ ಎಷ್ಟು ಎಂದು ಈ ಲೇಖನದಲ್ಲಿ ತಿಳಿಸಿಕೊಡಲಾಗಿದೆ ಓದಿರಿ.

ಮೊಟೊ G13 ಭಾರತದಲ್ಲಿ ಅನಾವರಣ; ಬೆಲೆ, ಫೀಚರ್ಸ್ ಬಗ್ಗೆ ತಿಳಿಯಿರಿ!

ಮೊಟೊ G13 ಡಿಸ್‌ಪ್ಲೇ ವಿವರ: ಈ ಸ್ಮಾರ್ಟ್‌ಫೋನ್ 6.5 ಇಂಚಿನ IPS LCD ಹೆಚ್‌ ಡಿ+ ರೆಸಲ್ಯೂಶನ್‌ ಡಿಸ್‌ಪ್ಲೇ ಹೊಂದಿದ್ದು, ಇದು 576Hz ಟಚ್ ಸ್ಯಾಂಪ್ಲಿಂಗ್ ರೇಟ್‌ ಹೊಂದಿದೆ. ಹಾಗೆಯೇ 90Hz ರಿಫ್ರೆಶ್ ರೇಟ್‌ ಆಯ್ಕೆಯೊಂದಿಗೆ ಈ ಡಿಸ್‌ಪ್ಲೇ ಪಾಂಡ ಗ್ಲಾಸ್ ರಕ್ಷಣೆಯನ್ನು ಪಡೆದುಕೊಂಡಿದೆ.

ಮೊಟೊ G13 ಪ್ರೊಸೆಸರ್‌ ಯಾವುದು? : ಮೊಟೊ G13 ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಹಿಲಿಯೊ G85 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದ್ದು, ಆಂಡ್ರಾಯ್ಡ್‌ 13 ಓಎಸ್‌ ನಲ್ಲಿ ರನ್ ಆಗುತ್ತದೆ. ಇದರೊಂದಿಗೆ 4GB RAM ಹಾಗೂ 128GB ಇಂಟರ್‌ ಸ್ಟೋರೇಜ್‌ ಆಯ್ಕೆ ನೀಡಲಾಗಿದ್ದು, ಈ ಸ್ಟೋರೇಜ್‌ ಅನ್ನು ವಿಸ್ತರಣೆ ಮಾಡಿಕೊಳ್ಳಲು ಎಸ್‌ಡಿ ಕಾರ್ಡ್‌ ಸ್ಲಾಟ್‌ ಆಯ್ಕೆಯನ್ನೂ ನೀಡಲಾಗಿದೆ.

ಮೊಟೊ G13 ಕ್ಯಾಮೆರಾ ರಚನೆ: ಈ ಹೊಸ ಸ್ಮಾರ್ಟ್‌ಫೋನ್ ಟ್ರಿಪಲ್‌ ರಿಯರ್‌ ಕ್ಯಾಮೆರಾ ರಚನೆ ಹೊಂದಿದ್ದು, ಅದರಲ್ಲಿ 50 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ, 2 ಮೆಗಾಪಿಕ್ಸೆಲ್ ಸೆಕೆಂಡರಿ ಸೆನ್ಸರ್‌ ಹಾಗೂ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಸೆನ್ಸರ್‌ ಅನ್ನು ಪಡೆದಿದೆ. ಜೊತೆಗೆ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಈ ಫೋನ್ 8 ಮೆಗಾಪಿಕ್ಸೆಲ್ ಕ್ಯಾಮೆರಾವನ್ನು ಪಡೆದುಕೊಂಡಿದೆ.

ಮೊಟೊ G13 ಭಾರತದಲ್ಲಿ ಅನಾವರಣ; ಬೆಲೆ, ಫೀಚರ್ಸ್ ಬಗ್ಗೆ ತಿಳಿಯಿರಿ!

ಮೊಟೊ G13 ಬ್ಯಾಟರಿ ಸಾಮರ್ಥ್ಯ: ಮೊಟೊ G13 ಫೋನ್‌ನ ಬ್ಯಾಟರಿ ವಿಚಾರಕ್ಕೆ ಬರುವುದಾದರೆ ಇದು 5,000mAh ಸಾಮರ್ಥ್ಯದ ಬ್ಯಾಟರಿಯಿಂದ ಪ್ಯಾಕ್‌ ಆಗಿದ್ದು, 10W ಚಾರ್ಜಿಂಗ್‌ ಬೆಂಬಲ ಪಡೆದಿದೆ. ಸಾಮಾನ್ಯವಾಗಿ ಬಜೆಟ್‌ ಬೆಲೆಯಲ್ಲಿ ಲಭ್ಯವಾಗುವ ಫೋನ್‌ಗಳು ಕನಿಷ್ಠ ಎಂದರೂ 18W ಬೆಂಬಲದ ಚಾರ್ಜಿಂಗ್‌ ಆಯ್ಕೆ ಹೊಂದಿರುತ್ತವೆ. ಆದರೆ,ಈ ಫೋನ್‌ ಮಾತ್ರ 10W ಚಾರ್ಜಿಂಗ್ ಬೆಂಬಲ ಹೊಂದಿರುವುದು ನಿರಾಶಾದಾಯಕವಾಗಿದೆ.

ಮೊಟೊ G13 ಕನೆಕ್ಟಿವಿಟಿ ಹಾಗೂ ಇತರೆ: ಇನ್ನುಳಿದಂತೆ ಈ ಫೋನ್ ಬಯೋಮೆಟ್ರಿಕ್ ದೃಢೀಕರಣಕ್ಕಾಗಿ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸರ್‌ ಆಯ್ಕೆ ಹೊಂದಿದ್ದು, ಚಾರ್ಜಿಂಗ್‌ ಗಾಗಿ ಯುಎಸ್‌ಬಿ ಟೈಪ್‌ ಸಿ ಚಾರ್ಜಿಂಗ್ ಪೋರ್ಟ್‌ ಪಡೆದಿದೆ. ಇದರೊಂದಿಗೆ ಡ್ಯುಯಲ್ 4G VoLTE, ವೈ ಫೈ 802.11 ac (2.4GHz + 5GHz), ಬ್ಲೂಟೂತ್ ಆವೃತ್ತಿ 5.1, ಜಿಪಿಎಸ್‌ ಹೊಂದಿದ್ದು, 3.5 ಎಂಎಂ ಆಡಿಯೊ ಜಾಕ್, ಸ್ಟಿರಿಯೊ ಸ್ಪೀಕರ್‌ಗಳು, ಡಾಲ್ಬಿ ಅಟ್ಮಾಸ್ ಸೌಂಡ್‌ ನೊಂದಿಗೆ IP52 ರೇಟಿಂಗ್‌ ಪಡೆದಿದೆ.

ಮೊಟೊ G13 ಭಾರತದಲ್ಲಿ ಅನಾವರಣ; ಬೆಲೆ, ಫೀಚರ್ಸ್ ಬಗ್ಗೆ ತಿಳಿಯಿರಿ!

ಮೊಟೊ G13 ಬೆಲೆ ಹಾಗೂ ಲಭ್ಯತೆ : 64GB ವೇರಿಯಂಟ್‌ನ ಈ 4G ಸ್ಮಾರ್ಟ್‌ಫೋನ್ 9,499 ರೂ. ಗಳ ಬೆಲೆ ಹೊಂದಿದ್ದು, ಫ್ಲಿಪ್‌ಕಾರ್ಟ್‌ ಮೂಲಕ ಖರೀದಿ ಮಾಡಬಹುದಾಗಿದೆ. ಆದರೆ ಈ ಫೋನ್‌ ಏಪ್ರಿಲ್ 5 ರಿಂದ ಮಾರಾಟಕ್ಕೆ ಮುಕ್ತವಾಗಲಿದೆ ಎಂಬುದು ನಿಮಗೆ ತಿಳಿದಿರಲಿ.

Best Mobiles in India

English summary
Moto G13 smartphone has been unveiled in India and is priced at a budget. This phone is powered by MediaTek Helio G85 SoC processor and will run on Android 13 OS.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+