ಭಾರತದಲ್ಲಿ ಮೋಟೋ G14 ಸ್ಮಾರ್ಟ್‌ಫೋನ್ ಬೆಲೆ ಎಷ್ಟಿರಲಿದೆ? ಲಾಂಚ್ ಯಾವಾಗ?
ಮೊಟೊರೊಲಾ ಕಂಪೆನಿಯ ಸ್ಮಾರ್ಟ್‌ಫೋನ್‌ಗಳಿಗೆ ಭಾರತದಲ್ಲಿ ಭಾರಿ ಡಿಮ್ಯಾಂಡ್ ಇದೆ. ತನ್ನ ವಿಭಿನ್ನ ಬೆಲೆ ಶ್ರೇಣಿಯ ಸ್ಮಾರ್ಟ್‌ಫೋನ್‌ಗಳ ಮೂಲಕ ಗ್ರಾಹಕರ ಗಮನಸೆಳೆದಿದೆ. ಸದ್ಯ ಇದೀಗ ತನ್ನ ಹೊಸ ಮೋಟೋ G14 ಸ್ಮಾರ್ಟ್‌ಫೋನ್ ಬಿಡುಗಡೆಗೆ ತಯಾರಿ ನಡೆಸಿದೆ. ಈ ಸ್ಮಾರ್ಟ್‌ಫೋನ್ ಇದೇ ಆಗಸ್ಟ್ 1ರಂದು ಭಾರತದಲ್ಲಿ ಬಿಡುಗಡೆ ಆಗೋದು ಪಕ್ಕಾ ಆಗಿದೆ.
ಹೌದು, ಮೋಟೋ G14 ಸ್ಮಾರ್ಟ್‌ಫೋನ್ ಆಗಸ್ಟ್ 1 ರಂದು ಭಾರತದಲ್ಲಿ ಲಾಂಚ್ ಆಗಲಿದೆ ಎನ್ನಲಾಗಿದೆ. ಈ ಸ್ಮಾರ್ಟ್‌ಫೋನ್ ಬಿಡುಗಡೆಗೂ ಮುನ್ನವೇ ಭಾರತದಲ್ಲಿ ಫೀಚರ್ಸ್ ಸೋರಿಕೆ ಆಗಿದ್ದು ಟೆಕ್ ವಲಯದಲ್ಲಿ ಭಾರಿ ಸಂಚಲನ ಸೃಷ್ಟಿಸಿದೆ. ಹಾಗಾದ್ರೆ ಮೋಟೋ G14 ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಮೋಟೋ G14 ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ಮೋಟೋ G14 ಸ್ಮಾರ್ಟ್‌ಫೋನ್ 6.5 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 1080 x 2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದು 20:9 ಡಿಸ್‌ಪ್ಲೇ ರಚನೆಯ ಅನುಪಾತವನ್ನು ಒಳಗೊಂಡಿದೆ. ಇದಲ್ಲದೆ ಡಿಸ್‌ಪ್ಲೇ 405 ಪಿಪಿಐ ಪಿಕ್ಸೆಲ್ ಸಾಂದ್ರತೆಯನ್ನು ಪಡೆದುಕೊಂಡಿದೆ.
ಮೋಟೋ G14 ಪ್ರೊಸೆಸರ್ ಯಾವುದು?
ಮೋಟೋ G14 ಸ್ಮಾರ್ಟ್‌ಫೋನ್ ಯುನಿಸೋಕ್ T616 SoC ಪ್ರೊಸೆಸರ್ ವೇಗವನ್ನು ಹೊಂದಿದೆ. ಇದು ಆಂಡ್ರಾಯ್ಡ್ 13 ಬೆಂಬಲದೊಂದಿಗೆ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 4GB RAM ಮತ್ತು 128GB ಇಂಟರ್ ಸ್ಟೋರೇಜ್‌ನೊಂದಿಗೆ ಬರಲಿದೆ. ಇದಲ್ಲದೆ ಮೈಕ್ರೊ SD ಕಾರ್ಡ್ ಬೆಂಬಲದೊಂದಿಗೆ ಮೆಮೊರಿ ಕಾರ್ಡ್ ಅನ್ನು 1TB ವರೆಗೆ ವಿಸ್ತರಿಸುವುದಕ್ಕೆ ಅವಕಾಶವನ್ನು ನೀಡಲಿದೆ.
ಮೋಟೋ G14 ಕ್ಯಾಮೆರಾ ಸೆಟ್‌ಅಪ್
ಮೋಟೋ G14 ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯವನ್ನು ಪಡೆದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.
ಮೋಟೋ G14 ಬ್ಯಾಟರಿ ಸಾಮರ್ಥ್ಯ ಏನಿದೆ?
ಮೋಟೋ G14 ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿರಲಿದೆ. ಇದು 20W ಟರ್ಬೋಪವರ್ ಚಾರ್ಜಿಂಗ್ ಬೆಂಬಲಿಸಲಿದೆ ಎನ್ನಲಾಗಿದೆ. ಇನ್ನು ಬ್ಯಾಟರಿ 34 ಗಂಟೆಗಳ ಟಾಕ್ ಟೈಮ್, 94 ಗಂಟೆಗಳವರೆಗೆ ಮ್ಯೂಸಿಕ್ ಪ್ಲೇಬ್ಯಾಕ್ ಟೈಂ ಮತ್ತು 16 ಗಂಟೆಗಳವರೆಗೆ ವೀಡಿಯೊ ಪ್ಲೇಬ್ಯಾಕ್ ಟೈಂ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್, ಬ್ಲೂಟೂತ್, ವೈಫೈ, ಯುಎಸ್‌ಬಿ ಸಿ ಪೋರ್ಟ್ ಅನ್ನು ಹೊಂದಿರಲಿದೆ ಎಂದು ಅಂದಾಜಿಸಲಾಗಿದೆ.
ಮೋಟೋ G14 ಬೆಲೆ ಮತ್ತು ಲಭ್ಯತೆ ನಿರೀಕ್ಷೆ?
ಮೋಟೋ G14 ಸ್ಮಾರ್ಟ್‌ಫೋನ್ 10,000ರೂ. ಬೆಲೆಯಲ್ಲಿ ಬರುವ ನಿರೀಕ್ಷೆಯಿದೆ. ಇದು ಭಾರತದಲ್ಲಿ ಆಗಸ್ಟ್ 1 ರಂದು ಬಿಡುಗಡೆಯಾಗಲಿದೆ ಎಂದು ಮೊಟೊರೊಲಾ ಕಂಪೆನಿ ದೃಢಪಡಿಸಿದೆ.
ಇನ್ನು ಇತ್ತೀಚಿಗೆ ಮೊಟೊರೊಲಾ ಕಂಪೆನಿಯ ಮೊಟೊ G13 ಫೋನ್ ಫ್ಲಿಪ್‌ಕಾರ್ಟ್ ನಲ್ಲಿ 28% ರಷ್ಟು ರಿಯಾಯಿತಿ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಈ ಮೊಬೈಲ್‌ನ 4 GB RAM +128 GB ROM ಆಂತರೀಕ ಸಂಗ್ರಹದ ವೇರಿಯಂಟ್ ಬೆಲೆಯು 13,999ರೂ. ದರ ಹೊಂದಿದ್ದು, ಆಫರ್‌ನಲ್ಲಿ ಇದು 9,999ರೂ. ದರದಲ್ಲಿ ಖರೀದಿಗೆ ಲಭ್ಯ ಇದೆ. ಇನ್ನು ಈ ಫೋನ್ 6.5 ಇಂಚಿನ ಹೆಚ್‌ಡಿ + ಡಿಸ್‌ಪ್ಲೇ ಹೊಂದಿದೆ. ಈ ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಹಿಲಿಯೊ G85 SoC ಪ್ರೊಸೆಸರ್‌ನಲ್ಲಿ ಕಾರ್ಯ ನಿರ್ವಹಿಸಲಿದ್ದು, ಆಂಡ್ರಾಯ್ಡ್ 13 ಓಎಸ್ ನಲ್ಲಿ ರನ್ ಆಗುತ್ತದೆ. ಇದರೊಂದಿಗೆ 4 GB RAM ಹಾಗೂ 128 GB ಇಂಟರ್ ಸ್ಟೋರೇಜ್ ಆಯ್ಕೆ ನೀಡಲಾಗಿದ್ದು, ಈ ಸ್ಟೋರೇಜ್ ಅನ್ನು ವಿಸ್ತರಣೆ ಮಾಡಿಕೊಳ್ಳಲು ಎಸ್‌ಡಿ ಕಾರ್ಡ್ ಸ್ಲಾಟ್ ಆಯ್ಕೆ ಅನ್ನು ಪಡೆದಿದೆ.


Click it and Unblock the Notifications








