ಮೋಟೋ G20 ಸ್ಮಾರ್ಟ್‌ಫೋನ್ ಬಿಡುಗಡೆ! ವಿಶೇಷತೆ ಏನು?
ಮೊಟೊರೊಲಾ ಕಂಪೆನಿ ಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿದೆ. ಈಗಾಗಲೇ ಹಲವು ವೈವಿಧ್ಯಮಯ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಗ್ರಾಹಕರ ಗಮನ ಸೆಳೆದಿದೆ. ಸದ್ಯ ಇದೀಗ ತನ್ನ ಹೊಸ ಸ್ಮಾರ್ಟ್‌ಫೋನ್ ಮೊಟೊ G20 ಯನ್ನು ಬಿಡುಗಡೆ ಮಾಡಿದೆ. ಇದು ಬಜೆಟ್ ಬೆಲೆಯ ಸ್ಮಾರ್ಟ್‌ಫೋನ್ ಆಗಿದ್ದು, ಜನಪ್ರಿಯ ಮೋಟೋ G ಸರಣಿಯ ಮತ್ತೊಂದು ಸ್ಮಾರ್ಟ್‌ಫೋನ್ ಆಗಿದೆ. ಇನ್ನು ಈ ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ ಯುನಿಸಾಕ್ T 700 ಪ್ರೊಸೆಸರ್ ಅನ್ನು ಹೊಂದಿದೆ.

ಹೌದು, ಮೊಟೊರೊಲಾ ಸಂಸ್ಥೆ ಹೊಸ ಮೋಟೋ G20 ಸ್ಮಾರ್ಟ್‌ಫೋನ್ ಅನ್ನು ಯುರೋಪಿನಲ್ಲಿ ಲಾಂಚ್ ಮಾಡಿದೆ. ಇದು 90Hz ಡಿಸ್‌ಪ್ಲೇ, 48 ಮೆಗಾಪಿಕ್ಸೆಲ್ ಸೆನ್ಸಾರ್ ಪ್ರೈಮರಿ ಕ್ಯಾಮೆರಾ ಒಳಗೊಂಡ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ಮೊಟೊರೊಲಾ ಮೋಟೋ G20 ಸ್ಮಾರ್ಟ್‌ಫೋನ್ 1,600 x 720 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.5 ಇಂಚಿನ ಹೆಚ್‌ಡಿ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್ ಅನ್ನು ಪಡೆದುಕೊಂಡಿದೆ.

ಪ್ರೊಸೆಸರ್
ಮೋಟೋ G20 ಸ್ಮಾರ್ಟ್‌ಫೋನ್ ಯುನಿಸಾಕ್ T700 ಪ್ರೊಸೆಸರ್ ಅನ್ನು ಹೊಂದಿದೆ. ಈ ಪ್ರೊಸೆಸರ್ 2x ಕಾರ್ಟೆಕ್ಸ್-ಎ 75 ಸಿಪಿಯು ಕೋರ್ಗಳು, 6 ಎಕ್ಸ್ ಕಾರ್ಟೆಕ್ಸ್-ಎ 55 ಸಿಪಿಯು ಕೋರ್ಗಳು ಮತ್ತು ಮಾಲಿ ಜಿ 52 ಜಿಪಿಯು ಹೊಂದಿದೆ. ಇದು ಆಂಡ್ರಾಯ್ಡ್ 11 ಒಎಸ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗೆಯೇ 4GB RAM + 64 GB ಮತ್ತು 4GB RAM + 128GB ಇಂಟರ್ ಸ್ಟೋರೇಜ್ ಸಾಮರ್ಥ್ಯದ ಎರಡು ವೇರಿಯೆಂಟ್ ಆಯ್ಕೆಗಳಲ್ಲಿ ಬರಲಿದೆ.

ಕ್ಯಾಮೆರಾ ವಿಶೇಷ
ಮೋಟೋ G20 ಸ್ಮಾರ್ಟ್‌ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್ ಅಲ್ಟ್ರಾವೈಡ್ ಲೆನ್ಸ್, ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ಮ್ಯಾಕ್ರೋ ಕ್ಯಾಮೆರಾ ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಹೊಂದಿದೆ. ಇದಲ್ಲದೆ 13 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಹೊಂದಿದೆ.

ಬ್ಯಾಟರಿ ಮತ್ತು ಇತರೆ
ಮೋಟೋ G20 ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, ಇದು 10W ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ VoLTE ಮತ್ತು VoWiFi ಯೊಂದಿಗೆ 4G, ಡ್ಯುಯಲ್-ಬ್ಯಾಂಡ್ ವೈ-ಫೈ ಎಸಿ, ಬ್ಲೂಟೂತ್ ವಿ 5.0, ಜಿಪಿಎಸ್, ಎನ್‌ಎಫ್‌ಸಿ, 3.5 ಎಂಎಂ ಆಡಿಯೊ ಜ್ಯಾಕ್ ಮತ್ತು ಯುಎಸ್‌ಬಿ ಟೈಪ್-ಸಿ ಪೋರ್ಟ್ ಹೊಂದಿದೆ. ಜೊತೆಗೆ ರಿಯರ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್, ಐಪಿ 52 ವಾಟರ್ ರೆಸಿಸ್ಟೆನ್ಸ್ ಮತ್ತು ಮೀಸಲಾದ ಗೂಗಲ್ ಅಸಿಸ್ಟೆಂಟ್ ಬಟನ್ ಅನ್ನು ಸಹ ಹೊಂದಿದೆ.

ಬೆಲೆ ಮತ್ತು ಲಭ್ಯತೆ
ಮೊಟೊರೊಲಾ ಮೋಟೋ G20 ಸ್ಮಾರ್ಟ್‌ಫೋನ್ ಬೆಲೆ ಯುರೋ 149 (ಅಂದಾಜು 13,000 ರೂ.)ಹೊಂದಿದೆ. ಮುಂದಿನ ವಾರದಿಂದ ಮಾರಾಟವಾಗುವ ನಿರೀಕ್ಷೆಯಿದೆ. ಇನ್ನು ಭಾರತದಲ್ಲಿ ಈ ಸ್ಮಾರ್ಟ್‌ಫೋನ್ ಯಾವಾಗ ಬಿಡುಗಡೆ ಆಗಲಿದೆ ಎಂಬುದರ ಕುರಿತು ಯಾವುದೇ ಮಾಹಿತಿ ಲಭ್ಯವಾಗಿಲ್ಲ.


Click it and Unblock the Notifications
