Home
ಸುದ್ದಿಜಾಲ

ಇಂದು ಮೊಟೊ G22 ಸ್ಮಾರ್ಟ್‌ಫೋನಿನ ಫಸ್ಟ್‌ ಸೇಲ್‌; ಗ್ರಾಹಕ ಸ್ನೇಹಿ ಬೆಲೆ!

ಮೊಟೊರೊಲಾ ಸಂಸ್ಥೆಯು ಭಾರತದಲ್ಲಿ ಹೊಸದಾಗಿ ಬಿಡುಗಡೆ ಮಾಡಿರುವ ಮೊಟೊ G22 ಸ್ಮಾರ್ಟ್‌ಫೋನ್ ಆಕರ್ಷಕ ಫೀಚರ್ಸ್‌ಗಳಿಂದ ಈಗಾಗಲೇ ಗ್ರಾಹಕರನ್ನು ಸೆಳೆದಿದೆ. ಈ ಸ್ಮಾರ್ಟ್‌ಫೋನ್‌ ಮೊದಲ ಸೇಲ್ ಇಂದು ಮಧ್ಯಾಹ್ನ 12 ರಿಂದ ಇ ಕಾಮರ್ಸ್‌ ತಾಣ ಫ್ಲಿಪ್‌ಕಾರ್ಟ್‌ ತಾಣದಲ್ಲಿ ಮಾರಾಟ ಪ್ರಾರಂಭಿಸಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಮೊಟೊ G22 ಸ್ಮಾರ್ಟ್‌ಫೋನ್ ಆಕ್ಟಾ ಕೋರ್ ಮಿಡಿಯಾಟೆಕ್‌ ಹಿಲಿಯೋ G37 SoC ಪ್ರೊಸೆಸರ್‌ ಅನ್ನು ಹೊಂದಿದೆ.

ಇಂದು ಮೊಟೊ G22 ಸ್ಮಾರ್ಟ್‌ಫೋನಿನ ಫಸ್ಟ್‌ ಸೇಲ್‌; ಗ್ರಾಹಕ ಸ್ನೇಹಿ ಬೆಲೆ!

ಮೊಟೊರೊಲಾ ಕಂಪೆನಿ ನೂತನವಾಗಿ ಮೊಟೊ G22 ಸ್ಮಾರ್ಟ್‌ಫೋನ್‌ ಮೊದಲ ಮಾರಾಟ ಇಂದು (ಏ. 13) ನಡೆಯಲಿದೆ. ಈ ಫೋನ್ 4GB RAM ಮತ್ತು 64GB ಆಂತರೀಕ ಸ್ಟೋರೇಜ್ ಆಯ್ಕೆ ಪಡೆದಿದೆ. ಕ್ವಾಡ್ ಕ್ಯಾಮೆರಾ ರಚನೆ ಒಳಗೊಂಡಿದೆ. ಹಾಗೆಯೇ ಈ ಫೋನ್ ಕಾಸ್ಮಿಕ್ ಬ್ಲ್ಯಾಕ್, ಐಸ್‌ಬರ್ಗ್ ಬ್ಲೂ ಮತ್ತು ಮಿಂಟ್ ಗ್ರೀನ್ ಬಣ್ಣಗಳ ಆಯ್ಕೆ ಅನ್ನು ಒಳಗೊಂಡಿದೆ. ಇನ್ನು ಈ ಫೋನಿನ ಆರಂಭಿಕ ಬೆಲೆಯು 10,999ರೂ. ಆಗಿದೆ. ಹಾಗಾದರೇ ಮೊಟೊ G22 ಸ್ಮಾರ್ಟ್‌ಫೋನಿನ ಫೀಚರ್ಸ್‌ಗಳು ಹೇಗಿವೆ ಎಂಬುದನ್ನು ತಿಳಿಯಲು ಮುಂದೆ ಓದಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ಮೊಟೊ G22 ಸ್ಮಾರ್ಟ್‌ಫೋನ್ 720 x 1,600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5 ಇಂಚಿನ ಹೆಚ್‌ಡಿ + ಡಿಸ್‌ಪ್ಲೇ ಹೊಂದಿದೆ. ಇದು ಮ್ಯಾಕ್ಸ್ ವಿಷನ್ ಡಿಸ್‌ಪ್ಲೇ ಆಗಿದ್ದು, 20:9 ರಚನೆಯ ಅನುಪಾತವನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 90Hz ರಿಪ್ರೆಶ್‌ ರೇಟ್‌ ಅನ್ನು ಒಳಗೊಂಡಿದೆ.

ಪ್ರೊಸೆಸರ್‌ ಬಲ ಯಾವುದು
ಮೊಟೊ G22 ಸ್ಮಾರ್ಟ್‌ಫೋನ್ ಆಕ್ಟಾ ಕೋರ್ ಮಿಡಿಯಾಟೆಕ್‌ ಹಿಲಿಯೋ G37 SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದೆ. ಇದು ಆಂಡ್ರಾಯ್ಡ್ 12 ಔಟ್-ಆಫ್-ಬಾಕ್ಸ್‌ನಲ್ಲಿ ಕಾರ್ಯನಿರ್ವಹಿಸುತ್ತದೆ. ಜೊತೆಗೆ IMG PowerVR GE8320 GPU ಹೊಂದಿದೆ. ಈ ಫೋನ್‌ 4GB RAM ಮತ್ತು 64GB ಇಂಟರ್‌ ಸ್ಟೋರೇಜ್‌ ಹೊಂದಿದೆ. ಇದಲ್ಲದೆ ಮೈಕ್ರೊ SD ಕಾರ್ಡ್ ಮೂಲಕ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಇಂದು ಮೊಟೊ G22 ಸ್ಮಾರ್ಟ್‌ಫೋನಿನ ಫಸ್ಟ್‌ ಸೇಲ್‌; ಗ್ರಾಹಕ ಸ್ನೇಹಿ ಬೆಲೆ!

ಕ್ವಾಡ್ ಕ್ಯಾಮೆರಾ ವಿಶೇಷ
ಮೊಟೊ G22 ಸ್ಮಾರ್ಟ್‌ಫೋನ್ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಶೂಟರ್, ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಶೂಟರ್ ಅನ್ನು ಸಹ ಒಳಗೊಂಡಿದೆ. ಇನ್ನು ರಿಯರ್‌ ಕ್ಯಾಮೆರಾ ಸೆಟಪ್ 30fps ಫ್ರೇಮ್ ರೇಟ್‌ನಲ್ಲಿ ಫುಲ್‌ HD ವೀಡಿಯೊಗಳನ್ನು ರೆಕಾರ್ಡ್ ಮಾಡುವ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ 16 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ
ಮೊಟೊ G22 ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ. ಇದು 20W ಟರ್ಬೋಪವರ್ ಚಾರ್ಜಿಂಗ್ ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G LTE, Wi-Fi 802.11ac, ಬ್ಲೂಟೂತ್ v5.0, FM ರೇಡಿಯೋ, GPS/ A-GPS, USB ಟೈಪ್-C, ಮತ್ತು 3.5mm ಹೆಡ್‌ಫೋನ್ ಜ್ಯಾಕ್ ಅನ್ನು ಒಳಗೊಂಡಿದೆ. ಇದಲ್ಲದೆ ಅಕ್ಸಿಲೆರೊಮೀಟರ್, ಆಂಬಿಯೆಂಟ್ ಲೈಟ್ ಸೆನ್ಸಾರ್‌, ಗೈರೊಸ್ಕೋಪ್, ಮ್ಯಾಗ್ನೆಟೋಮೀಟರ್ ಮತ್ತು ಪ್ರಾಕ್ಸಿಮಿಟಿ ಸೆನ್ಸಾರ್‌ ಹೊಂದಿದೆ.

ಬೆಲೆ ಮತ್ತು ಲಭ್ಯತೆ
ಮೊಟೊ G22 ಸ್ಮಾರ್ಟ್‌ಫೋನ್ 4GB + 64GB ಸ್ಟೋರೇಜ್ ರೂಪಾಂತರಕ್ಕೆ 10,999ರೂ.ಬೆಲೆ ಹೊಂದಿದೆ. ಈ ಫೋನ್‌ ಇದೇ ಏಪ್ರಿಲ್ 13 ರಿಂದ ಫ್ಲಿಪ್‌ಕಾರ್ಟ್ ಮೂಲಕ ಲಭ್ಯವಿರುತ್ತದೆ. ಇದು ಕಾಸ್ಮಿಕ್ ಬ್ಲ್ಯಾಕ್, ಐಸ್‌ಬರ್ಗ್ ಬ್ಲೂ ಮತ್ತು ಮಿಂಟ್ ಗ್ರೀನ್ ಬಣ್ಣಗಳ ಆಯ್ಕೆಯಲ್ಲಿ ಲಭ್ಯವಾಗಲಿದೆ. ಇನ್ನು ಲಾಂಚ್‌ ಆಫರ್‌ ಮೂಲಕ 1,000ರೂ. ಬ್ಯಾಂಕ್ ರಿಯಾಯಿತಿ ಕೂಡ ದೊರೆಯಲಿದೆ.

Best Mobiles in India

English summary
Moto G22 First Sale Starts Today at 12 Noon Via Flipkart: Price.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+