ಮೋಟೋ G22 ಸ್ಮಾರ್ಟ್‌ಫೋನ್‌ ಬಿಡುಗಡೆ! ಲಾಂಚ್‌ ಆಫರ್‌ ಏನಿದೆ?

|

ಭಾರತದ ಸ್ಮಾರ್ಟ್‌ಫೋನ್‌ ವಲಯದಲ್ಲಿ ಮೊಟೊರೊಲಾ ಕಂಪೆನಿ ಆಕರ್ಷಕ ಸ್ಮಾರ್ಟ್‌ಫೋನ್‌ಗಳಿಗೆ ಪ್ರಸಿದ್ಧಿ ಪಡೆದಿದೆ. ಈಗಾಗಲೇ ಹಲವು ಆಕರ್ಷಕ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿದೆ. ಸದ್ಯ ಇದೀಗ ಭಾರತದಲ್ಲಿ ಹೊಸ ಮೋಟೋ G22 ಸ್ಮಾರ್ಟ್‌ಫೋನ್‌ ಲಾಂಚ್‌ ಮಾಡಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದು 90Hz ರಿಫ್ರೆಶ್‌ ರೇಟ್‌ ಹೊಂದಿರುವ 6.5 ಇಂಚಿನ HD+ ಡಿಸ್‌ಪ್ಲೇಯನ್ನು ಹೊಂದಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ.

ಮೊಟೊರೊಲಾ

ಹೌದು, ಮೊಟೊರೊಲಾ ಕಂಪೆನಿ ಭಾರತದಲ್ಲಿ ಹೊಸ ಮೋಟೋ G22 ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್‌ 50 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಮುಖ್ಯ ಕ್ಯಾಮೆರಾ ಹೊಂದಿದೆ. ಇದು ಆಕ್ಟಾ-ಕೋರ್ ಮಿಡಿಯಾಟೆಕ್‌ ಹಿಲಿಯೋ G37 SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಸಿಂಗಲ್‌ ಚಾರ್ಜ್‌ನಲ್ಲಿ 37.8 ಗಂಟೆಗಳ ಬ್ಯಾಕಪ್ ಅನ್ನು ನೀಡಲಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ವಿನ್ಯಾಸ

ಡಿಸ್‌ಪ್ಲೇ ವಿನ್ಯಾಸ

ಮೋಟೋ G22 ಸ್ಮಾರ್ಟ್‌ಫೋನ್‌ 720x1,600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5 ಇಂಚಿನ HD+ ಡಿಸ್‌ಪ್ಲೇ ಹೊಂದಿದೆ. ಇದು ಮ್ಯಾಕ್ಸ್ ವಿಷನ್ ಡಿಸ್‌ಪ್ಲೇ ಆಗಿದ್ದು, 20:9 ರಚನೆಯ ಅನುಪಾತವನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 90Hz ರಿಪ್ರೆಶ್‌ ರೇಟ್‌ ಅನ್ನು ಒಳಗೊಂಡಿದೆ.

ಪ್ರೊಸೆಸರ್‌ ಯಾವುದು?

ಪ್ರೊಸೆಸರ್‌ ಯಾವುದು?

ಮೋಟೋ G22 ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ ಮಿಡಿಯಾಟೆಕ್‌ ಹಿಲಿಯೋ G37 SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದೆ. ಇದು ಆಂಡ್ರಾಯ್ಡ್ 12 ಔಟ್-ಆಫ್-ಬಾಕ್ಸ್‌ನಲ್ಲಿ ಕಾರ್ಯನಿರ್ವಹಿಸುತ್ತದೆ. ಜೊತೆಗೆ IMG PowerVR GE8320 GPU ಹೊಂದಿದೆ. ಈ ಫೋನ್‌ 4GB RAM ಮತ್ತು 64GB ಇಂಟರ್‌ ಸ್ಟೋರೇಜ್‌ ಹೊಂದಿದೆ. ಇದಲ್ಲದೆ ಮೈಕ್ರೊ SD ಕಾರ್ಡ್ ಮೂಲಕ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ಯಾವುದು?

ಕ್ಯಾಮೆರಾ ಯಾವುದು?

ಮೋಟೋ G22 ಸ್ಮಾರ್ಟ್‌ಫೋನ್‌ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಶೂಟರ್, ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಶೂಟರ್ ಅನ್ನು ಸಹ ಒಳಗೊಂಡಿದೆ. ಇನ್ನು ರಿಯರ್‌ ಕ್ಯಾಮೆರಾ ಸೆಟಪ್ 30fps ಫ್ರೇಮ್ ರೇಟ್‌ನಲ್ಲಿ ಫುಲ್‌ HD ವೀಡಿಯೊಗಳನ್ನು ರೆಕಾರ್ಡ್ ಮಾಡುವ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಮೋಟೋ G22 ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ. ಇದು 20W ಟರ್ಬೋಪವರ್ ಚಾರ್ಜಿಂಗ್ ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G LTE, Wi-Fi 802.11ac, ಬ್ಲೂಟೂತ್ v5.0, FM ರೇಡಿಯೋ, GPS/ A-GPS, USB ಟೈಪ್-C, ಮತ್ತು 3.5mm ಹೆಡ್‌ಫೋನ್ ಜ್ಯಾಕ್ ಅನ್ನು ಒಳಗೊಂಡಿದೆ. ಇದಲ್ಲದೆ ಅಕ್ಸಿಲೆರೊಮೀಟರ್, ಆಂಬಿಯೆಂಟ್ ಲೈಟ್ ಸೆನ್ಸಾರ್‌, ಗೈರೊಸ್ಕೋಪ್, ಮ್ಯಾಗ್ನೆಟೋಮೀಟರ್ ಮತ್ತು ಪ್ರಾಕ್ಸಿಮಿಟಿ ಸೆನ್ಸಾರ್‌ ಹೊಂದಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಭಾರತದಲ್ಲಿ ಮೋಟೋ G22 ಸ್ಮಾರ್ಟ್‌ಫೋನ್‌ 4GB + 64GB ಸ್ಟೋರೇಜ್ ರೂಪಾಂತರಕ್ಕೆ 10,999ರೂ.ಬೆಲೆ ಹೊಂದಿದೆ. ಈ ಫೋನ್‌ ಇದೇ ಏಪ್ರಿಲ್ 13 ರಿಂದ ಫ್ಲಿಪ್‌ಕಾರ್ಟ್ ಮೂಲಕ ಲಭ್ಯವಿರುತ್ತದೆ. ಇದು ಕಾಸ್ಮಿಕ್ ಬ್ಲ್ಯಾಕ್, ಐಸ್‌ಬರ್ಗ್ ಬ್ಲೂ ಮತ್ತು ಮಿಂಟ್ ಗ್ರೀನ್ ಬಣ್ಣಗಳ ಆಯ್ಕೆಯಲ್ಲಿ ಲಭ್ಯವಾಗಲಿದೆ. ಇನ್ನು ಲಾಂಚ್‌ ಆಫರ್‌ ಮೂಲಕ 1,000ರೂ. ಬ್ಯಾಂಕ್ ರಿಯಾಯಿತಿ ಕೂಡ ದೊರೆಯಲಿದೆ.

Best Mobiles in India

English summary
Moto G22 was launched in India on Friday (April 8) as the latest budget phone by Motorola.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X