Home
ಸುದ್ದಿಜಾಲ

ಮೊಟೊ G22 ಫೋನ್‌ ಲಾಂಚ್; 50 ಮೆಗಾಪಿಕ್ಸಲ್ ಕ್ಯಾಮೆರಾ ಕಮಾಲ್!

ಟೆಕ್‌ ಮಾರುಕಟ್ಟೆಯಲ್ಲಿ ಮೊಟೊರೊಲಾ ಕಂಪೆನಿ ಭಿನ್ನ ಶ್ರೇಣಿಯ ಸ್ಮಾರ್ಟ್‌ಫೋನ್‌ಗಳಿಂದ ಗ್ರಾಹಕರ ಗಮನ ಸೆಳೆದಿದೆ. ಮೊಟೊ ಕಂಪನಿಯು G ಸರಣಿಯಲ್ಲಿ ಕೆಲವು ಸ್ಮಾರ್ಟ್‌ಫೋನ್‌ಗಳನ್ನು ಬಿಡುಗಡೆ ಮಾಡಿದೆ. ಸದ್ಯ ಇದೀಗ ಮೊಟೊ G ಸರಣಿಯಲ್ಲಿ ನೂತನವಾಗಿ ಮೊಟೊ G22 ಸ್ಮಾರ್ಟ್‌ಫೋನ್ ಅನ್ನು ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಹಿಲಿಯೋ G37 SoC ಪ್ರೊಸೆಸರ್‌ ಬಲವನ್ನು ಪಡೆದಿದೆ.

ಮೊಟೊ G22 ಫೋನ್‌ ಲಾಂಚ್; 50 ಮೆಗಾಪಿಕ್ಸಲ್ ಕ್ಯಾಮೆರಾ ಕಮಾಲ್!

ಹೌದು, ಮೊಟೊರೊಲಾ ಕಂಪೆನಿ ಹೊಸದಾಗಿ ಯುರೋಪ್ ಮಾರುಕಟ್ಟೆಗೆ ಮೊಟೊ G22 ಸ್ಮಾರ್ಟ್‌ಫೋನ್ ಅನ್ನು ಅನಾವರಣಗೊಳಿಸಿದೆ. ಈ ಸ್ಮಾರ್ಟ್‌ಫೋನ್‌ ಬಜೆಟ್‌ ಮಾದರಿಯ ಫೀಚರ್ಸ್‌ ಹೊಂದಿದ್ದು, ಆಕರ್ಷಕ ವಿನ್ಯಾಸ ಪಡೆದಿದೆ. ಹಿಂಬದಿಯಲ್ಲಿ ಕ್ವಾಡ್‌ ಕ್ಯಾಮೆರಾ ರಚನೆಯನ್ನು ಒಳಗೊಂಡಿದ್ದು, ಮುಖ್ಯ ಕ್ಯಾಮೆರಾವು 50 ಮೆಗಾ ಪಿಕ್ಸಲ್ ಸೆನ್ಸಾರ್ ರಚನೆಯನ್ನು ಪಡೆದಿದೆ. ಜೊತೆಗೆ 5,000mAh ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಒಳಗೊಂಡಿದೆ. ಹಾಗಾದರೇ ಮೊಟೊ G22 ಸ್ಮಾರ್ಟ್‌ ಫೋನ್ ಇತರೆ ಫೀಚರ್ಸ್‌ಗಳು ಹೇಗಿವೆ ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ಮೊಟೊ G22 ಫೋನ್‌ ಲಾಂಚ್; 50 ಮೆಗಾಪಿಕ್ಸಲ್ ಕ್ಯಾಮೆರಾ ಕಮಾಲ್!

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ಮೊಟೊ G22 ಸ್ಮಾರ್ಟ್‌ಫೋನ್ 720 x 1600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5 ಇಂಚಿನ HD+ ಡಿಸ್‌ಪ್ಲೇ ಹೊಂದಿದೆ. ಇನ್ನು ಈ ಡಿಸ್‌ಪ್ಲೇ IPS LCD ಸ್ಕ್ರೀನ್‌ ಹೊಂದಿದೆ. ಈ ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್‌ ಹೊಂದಿದ್ದು, ಡಿಸ್‌ಪ್ಲೇಯು 268ppi ಸಾಮರ್ಥ್ಯ ವನ್ನು ಹೊಂದಿದೆ. ಹಾಗೆಯೇ ಡಿಸ್‌ಪ್ಲೇಯ ಅನುಪಾತವು 20:9 ಆಗಿದೆ.

ಪ್ರೊಸೆಸರ್‌ ಬಲ ಯಾವುದು
ಮೊಟೊ G22 ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಹಿಲಿಯೋ G37 SoC ಪ್ರೊಸೆಸರ್‌ ಬಲವನ್ನು ಹೊಂದಿದೆ. ಇದಕ್ಕೆ ಪೂರಕವಾಗಿ ಈ ಫೋನ್ ಆಂಡ್ರಾಯ್ಡ್ 12 ಓಎಸ್‌ ಕಾರ್ಯ ನಿರ್ವಹಿಸುತ್ತದೆ. ಹಾಗೆಯೇ 4GB RAM ಮತ್ತು 64GB ಇಂಟರ್‌ ಸ್ಟೋರೇಜ್‌ ಅನ್ನು ಹೊಂದಿದೆ. ಇದಲ್ಲದೆ ಮೈಕ್ರೋ SD ಕಾರ್ಡ್ ಬಳಸಿ ಸಂಗ್ರಹ ಸಾಮರ್ಥ್ಯವನ್ನು ಇನ್ನಷ್ಟು ವಿಸ್ತರಿಸಬಹುದಾಗಿದೆ.

ಮೊಟೊ G22 ಫೋನ್‌ ಲಾಂಚ್; 50 ಮೆಗಾಪಿಕ್ಸಲ್ ಕ್ಯಾಮೆರಾ ಕಮಾಲ್!

ಕ್ವಾಡ್ ಕ್ಯಾಮೆರಾ ವಿಶೇಷ
ಮೊಟೊ G22 ಸ್ಮಾರ್ಟ್‌ಫೋನ್ ಕ್ವಾಡ್ ಕ್ಯಾಮೆರಾ ಸೆಟಪ್ ಅನ್ನು ಒಳಗೊಂಡಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 8 ಮೆಗಾ ಪಿಕ್ಸೆಲ್ ಸೆನ್ಸಾರ್‌ ಅನ್ನು ಪಡೆದಿದೆ. ಇನ್ನು ತೃತೀಯ ಹಾಗೂ ನಾಲ್ಕನೇ ಕ್ಯಾಮೆರಾವು ಕ್ರಮವಾಗಿ 2 ಮೆಗಾ ಪಿಕ್ಸಲ್ ಸೆನ್ಸಾರ್ ಪಡೆದಿವೆ. ಇದರೊಂದಿಗೆ 16 ಮೆಗಾ ಪಿಕ್ಸೆಲ್ ಸೆನ್ಸಾರ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಕೂಡ ಹೊಂದಿದೆ.

ಬ್ಯಾಟರಿ ಮತ್ತು ಇತರೆ
ಮೊಟೊ G22 ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 15W ವೇಗದ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ. ಈ ಫೋನ್ 185 ಗ್ರಾಂ ತೂಕವನ್ನು ಪಡೆದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಟಾ,್‌ ಬ್ಲೂಟೂತ್‌, ವೈಫೈ ಯನ್ನು ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ
ಮೊಟೊ G22 ಸ್ಮಾರ್ಟ್‌ಫೋನ್ US ನಲ್ಲಿ 4GB+64GB ರೂಪಾಂತರದ ಆಯ್ಕೆಗೆ EUR 169.99 (ಭಾರತದಲ್ಲಿ ಅಂದಾಜು 14,270ರೂ) ಆಗಿದೆ. ಇನ್ನು ಈ ಹೊಸ ಮೊಟೊರೊಲಾ ಸ್ಮಾರ್ಟ್‌ಫೋನ್ ಮೂರು ಬಣ್ಣ ಆಯ್ಕೆಗಳಲ್ಲಿ ಲಭ್ಯವಿದೆ. ಅವು ಕ್ರಮವಾಗಿ ಕಾಸ್ಮಿಕ್ ಬ್ಲ್ಯಾಕ್, ಐಸ್‌ಬರ್ಗ್ ಬ್ಲೂ ಮತ್ತು ಪರ್ಲ್ ವೈಟ್ ಆಗಿದೆ. ಭಾರತದಲ್ಲಿ ಈ ಫೋನ್ ಯಾವಾಗ ಎಂಟ್ರಿ ಕೊಡಲಿದೆ ಎನ್ನುವ ಬಗ್ಗೆ ಸಂಸ್ಥೆಯು ಮಾಹಿತಿ ಹೊರಹಾಕಿಲ್ಲ.

Best Mobiles in India

English summary
Moto G22 sports a 6.5-inch HD+ MaxVision LCD display with 90Hz refresh rate.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+