Home
ಸುದ್ದಿಜಾಲ

ಭಾರತದಲ್ಲಿ ಮೊಟೊ G24 ಪವರ್‌ ಲಾಂಚ್‌ಗೆ ಡೇಟ್‌ ಫಿಕ್ಸ್‌!..ಫೀಚರ್ಸ್‌ ಏನು?

ಮೊಟೊರೊಲಾ ಮೊಬೈಲ್‌ ಸಂಸ್ಥೆಯು ತನ್ನ ಇತ್ತೀಚಿನ ಮೊಟೊ G24 ಪವರ್‌ ಸ್ಮಾರ್ಟ್‌ಫೋನ್‌ ಅನ್ನು ಭಾರತೀಯ ಮಾರುಕಟ್ಟೆಗೆ ಪರಿಚಯಿಸಲು ಸಜ್ಜಾಗಿದೆ. ಇದೇ ಜನವರಿ 30 ರಂದು ಅಧಿಕೃತವಾಗಿ ಮೊಟೊ G24 ಫೋನ್‌ ಅನ್ನು ಲಾಂಚ್ ಮಾಡುವುದಾಗಿ ಮೊಟೊರೊಲಾ ಸಂಸ್ಥೆಯು ತನ್ನ ಅಧಿಕೃತ X ಹ್ಯಾಂಡಲ್ ಮೂಲಕ ಘೋಷಿಸಿದೆ.

ಹೌದು, ಮೊಟೊರೊಲಾ ಶೇರ್ ಮಾಡಿರುವ ಮಾಹಿತಿ ಪ್ರಕಾರ, ಜನವರಿ 30 ರಂದು ದೇಶಿಯ ಮಾರುಕಟ್ಟೆಗೆ ಮೊಟೊ G24 ಪವರ್‌ ಫೋನ್‌ ಎಂಟ್ರಿ ಕೊಡಲಿದೆ. ಈ ಫೋನ್‌ ಫ್ಲಿಪ್‌ಕಾರ್ಟ್ ಪ್ಲಾಟ್‌ಫಾರ್ಮ್‌, ಅಧಿಕೃತ ಮೊಟೊರೊಲಾ ಇಂಡಿಯಾ ವೆಬ್‌ಸೈಟ್ ಮತ್ತು ಪ್ರಮುಖ ರಿಟೆಲ್‌ ಸ್ಟೋರ್‌ಗಳ ಮೂಲಕ ದೇಶದಲ್ಲಿ ಮಾರಾಟ ಪ್ರಾರಂಭಿಸಲಿದೆ.

ಭಾರತದಲ್ಲಿ ಮೊಟೊ G24 ಪವರ್‌ ಲಾಂಚ್‌ಗೆ ಡೇಟ್‌ ಫಿಕ್ಸ್‌!..ಫೀಚರ್ಸ್‌ ಏನು?

ಅಂದಹಾಗೆ ಮೊಟೊ G24 ಮೊಬೈಲ್‌ ಪ್ರಾಥಮಿಕ ಕ್ಯಾಮೆರಾವು 50 ಮೆಗಾ ಪಿಕ್ಸಲ್‌ ಸೆನ್ಸಾರ್ ಸೌಲಭ್ಯದಲ್ಲಿ ಇದೆ. ಅದೇ ರೀತಿ ಈ ಫೋನ್‌ 6,000mAh ಬ್ಯಾಟರಿ ಬ್ಯಾಕ್‌ಅಪ್‌ ಸೌಲಭ್ಯ ಕೂಡಾ ಪಡೆದುಕೊಂಡಿದೆ. ಹಾಗೆಯೇ ಮೀಡಿಯಾ ಟೆಕ್ ಹಿಲಿಯೋ G85 ಈ ಫೋನಿನಲ್ಲಿ ಕಾಣಬಹುದಾಗಿದೆ. ಇನ್ನುಳಿದಂತೆ ಈ ಫೋನಿನ ಇತರೆ ಫೀಚರ್ಸ್‌ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಮೊಟೊ G24 ಫೋನ್‌ - ಫೀಚರ್ಸ್‌

ಮೊಟೊ ಸಂಸ್ಥೆಯ ಈ ಸ್ಮಾರ್ಟ್‌ಫೋನ್ 6.6 ಇಂಚಿನ ಹೆಚ್‌ಡಿ + ಡಿಸ್‌ಪ್ಲೇ ಅನ್ನು ಪಡೆದಿದ್ದು, ಈ ಫೋನ್ 90Hz ರಿಫ್ರೆಶ್ ರೇಟ್‌ ಆಯ್ಕೆಯೊಂದಿಗೆ , ಸ್ಟಿರಿಯೊ ಸ್ಪೀಕರ್‌ಗಳು ಮತ್ತು ಡಾಲ್ಬಿ ಅಟ್ಮಾಸ್ ಸೌಲಭ್ಯ ಪಡೆದಿದೆ. ಅಲ್ಲದೆ ಈ ಫೋನ್‌ 537 ನಿಟ್ಸ್‌ ಬ್ರೈಟ್‌ನೆಸ್‌ ಆಯ್ಕೆ ಪಡೆದುಕೊಂಡಿದೆ.

ಭಾರತದಲ್ಲಿ ಮೊಟೊ G24 ಪವರ್‌ ಲಾಂಚ್‌ಗೆ ಡೇಟ್‌ ಫಿಕ್ಸ್‌!..ಫೀಚರ್ಸ್‌ ಏನು?

ಮೊಟೊ G24 ಫೋನ್ ಆಕ್ಟಾ ಕೋರ್ ಮೀಡಿಯಾ ಟೆಕ್ ಹಿಲಿಯೋ G85 12nm ಪ್ರೊಸೆಸರ್ ಮೂಲಕ ಕಾರ್ಯ ನಿರ್ವಹಿಸಲಿದ್ದು, ಆಂಡ್ರಾಯ್ಡ್‌ 14 ಅನ್ನು ಸಪೋರ್ಟ್ ಪಡೆದಿದೆ. ಇದರೊಂದಿಗೆ 4GB RAM + 128GB ಸ್ಟೋರೇಜ್‌ ಆಯ್ಕೆ ಒಳಗೊಂಡಿದ್ದು, ಇದರ ಜೊತೆಗೆ ಮೈಕ್ರೊ ಎಸ್‌ಡಿ ಕಾರ್ಡ್‌ ಬಳಕೆ ಮಾಡಿಕೊಂಡು 1TB ವರೆಗೆ ಸ್ಟೋರೇಜ್‌ ಹೆಚ್ಚಿಗೆ ಮಾಡಿಕೊಳ್ಳಲು ಅವಕಾಶ ಇದೆ.

ಮೊಟೊ G24 ಫೋನ್ ಡ್ಯುಯಲ್‌ ಕ್ಯಾಮೆರಾ ರಚನೆ ಪಡೆದಿದ್ದು, ಪ್ರಾಥಮಿಕ ಕ್ಯಾಮೆರಾವು 50 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸೌಲಭ್ಯದಲ್ಲಿ ಇದೆ. ಈ ಪೋನಿನ ದ್ವಿತೀಯ ಕ್ಯಾಮೆರಾ 2 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಪಡೆದಿದ್ದು, ಇದೂ ಸಹ ಎಲ್‌ಇಡಿ ಫ್ಲ್ಯಾಶ್‌ ಸಪೋರ್ಟ್‌ ಪಡೆದಿದೆ. ಇದರೊಂದಿಗೆ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಈ ಫೋನ್ 8 ಮೆಗಾ ಪಿಕ್ಸೆಲ್‌ ಕ್ಯಾಮೆರಾ ನೀಡಲಾಗಿದೆ.

ಇನ್ನು ಈ ಫೋನ್ 6,000mAh ಸಾಮರ್ಥ್ಯದ ಬ್ಯಾಟರಿ ಜೊತೆಗೆ 33W ಫಾಸ್ಟ್‌ ಚಾರ್ಜಿಂಗ್ ಸಪೋರ್ಟ್‌ ಪಡೆದಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G VoLTE, ವೈ-ಫೈ 802.11 ac (2.4GHz + 5GHz), ಬ್ಲೂಟೂತ್ ಆವೃತ್ತಿ 5.0, ಜಿಪಿಎಸ್‌, ಯುಎಸ್‌ಬಿ ಟೈಪ್-ಸಿ, 3.5 ಎಂಎಂ ಆಡಿಯೊ ಜಾಕ್, ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್, ಧೂಳು ಹಾಗೂ ಸ್ಪ್ಲಾಶ್ ನಿರೋಧಕ (IP52) ಆಯ್ಕೆಗಳನ್ನು ಪಡೆದಿದೆ.

ಹಾಗೆಯೇ ಮೊಟೊ G24 ಫೋನ್ 4GB + 128GB ಹಾಗೂ 8GB RAM + 128GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ ಆಗಲಿದೆ. ಅಲ್ಲದೇ ಹೆಚ್ಚುವರಿಯಾಗಿ 8GB ವರ್ಚುವಲ್‌ RAM ಸೌಲಭ್ಯ ಕೂಡಾ ಈ ಫೋನ್‌ ಪಡೆದಿದೆ. ಇನ್ನು ಈ ಫೋನ್ ಮ್ಯಾಟ್ ಚಾರ್ಕೋಲ್, ಐಸ್ ಗ್ರೀನ್, ಬ್ಲೂಬೆರ್ರಿ ಮತ್ತು ಪಿಂಕ್ ಲ್ಯಾವೆಂಡರ್ ಬಣ್ಣದ ಆಯ್ಕೆಗಳಲ್ಲಿ ಲಭ್ಯ ಇದೆ.

Best Mobiles in India

English summary
Moto G24 Power officially will launch in India on January 30. Price, Specifications and more details in kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+