ಮೊಟೊ G30 ಸ್ಮಾರ್ಟ್‌ಫೋನ್ ಬಿಡುಗಡೆ; 64ಎಂಪಿ ಕ್ಯಾಮೆರಾ ಸೆನ್ಸಾರ್!
ಸ್ಮಾರ್ಟ್‌ಫೋನ್ ವಲಯದಲ್ಲಿ ಭಿನ್ನ ಶ್ರೇಣಿಯ ಫೋನ್‌ಗಳ ಮೂಲಕ ಗುರುತಿಸಿಕೊಂಡಿರುವ ಮೊಟೊರೊಲಾ ಕಂಪೆನಿಯ ಮೊಟೊ ಸರಣಿ ಹೆಚ್ಚು ಗಮನ ಸೆಳೆದಿದೆ. ಸಂಸ್ಥೆಯು ಇದೀಗ ಮೊಟೊ ಸರಣಿಯಲ್ಲಿ ಹೊಸದಾಗಿ ಮೊಟೊ G30 ಸ್ಮಾರ್ಟ್‌ಫೋನ್ ಅನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಿದ್ದು, ಈ ಫೋನ್ ಸ್ನ್ಯಾಪ್‌ಡ್ರಾಗನ್ 662 SoC ಪ್ರೊಸೆಸರ್ ಅನ್ನು ಹೊಂದಿದೆ.

ಹೌದು, ಮೊಟೊರೊಲಾ ಕಂಪೆನಿ ನೂತನವಾಗಿ ಮೊಟೊ G30 ಸ್ಮಾರ್ಟ್‌ಫೋನ್ ಯುರೋಪ್‌ನಲ್ಲಿ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್ ಕ್ವಾಡ್ ಕ್ಯಾಮೆರಾ ಸೆಟ್‌ಅಪ್ ಅನ್ನು ಪಡೆದಿದ್ದು, 90Hz ಡಿಸ್‌ಪ್ಲೇ ರೀಫ್ರೇಶ್ ರೇಟ್ ಹೊಂದಿದೆ. ಇದರೊಂದಿಗೆ 5,000mAh ಬ್ಯಾಟರಿ ಬಾಳಿಕೆ ಪಡೆದಿರುವುದು ಮತ್ತೊಂದು ಹೈಲೈಟ್ ಆಗಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್ ಒಳಗೊಂಡಿದೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ಮೊಟೊ G30 ಸ್ಮಾರ್ಟ್‌ಫೋನ್ 720x1,600 ಪಿಕ್ಸಲ್ ರೆಸಲ್ಯೂಶನ್ ಸಫೋರ್ಟ್ ಪಡೆದಿದ್ದು, 6.5 ಇಂಚಿನ ಪೂರ್ಣ ಹೆಚ್‌ಡಿ ಡಿಸ್‌ಪ್ಲೇ ಪಡೆದಿದೆ. ಡಿಸ್‌ಪ್ಲೇಯು 90Hz ರಿಫ್ರೆಶ್ ರೇಟ್ ಅನ್ನು ಹೊಂದಿದೆ.

ಪ್ರೊಸೆಸರ್ ಕಾರ್ಯ
ಮೊಟೊ G30 ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್ಡ್ರಾಗನ್ 870 SoC 662 SoC ಪ್ರೊಸೆಸರ್ ವೇಗವನ್ನು ಹೊಂದಿದೆ. ಅಲ್ಲದೆ ಆಂಡ್ರಾಯ್ಡ್ 11 ಓಎಸ್ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೇಯೇ ಈ ಸ್ಮಾರ್ಟ್‌ಫೋನ್ 6GB RAM ಮತ್ತು 128GB ಸ್ಟೋರೇಜ್ ವೇರಿಯಂಟ್ ಆಯ್ಕೆಯನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್ ಮೆಮೊರಿ ಕಾರ್ಡ್ ಮೂಲಕ ಸಂಗ್ರಹ ವಿಸ್ತರಣೆಗೆ ಅವಕಾಶ ನೀಡಿದೆ.

ಕ್ವಾಡ್ ಕ್ಯಾಮೆರಾ ವಿನ್ಯಾಸ
ಮೊಟೊ G30 ಸ್ಮಾರ್ಟ್‌ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64ಎಂಪಿ ಸೆನ್ಸಾರ್‌ನಲ್ಲಿದೆ. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್‌ನಲ್ಲಿದೆ. ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಟೆಲಿಫೋಟೋ ಶೂಟರ್ ಹಾಗೂ ನಾಲ್ಕನೇ ಬೇಸಿಕ್ ಕ್ಯಾಮೆರಾ ಸೆನ್ಸಾರ್ ಅನ್ನು ಹೊಂದಿದೆ. ಇದರೊಂದಿಗೆ ಸೆಲ್ಫಿ ಕ್ಯಾಮೆರಾ 13ಎಂಪಿ ಸೆನ್ಸಾರ್‌ನಲ್ಲಿದೆ.

ಬ್ಯಾಟರಿ ಮತ್ತು ಇತರೆ
ಮೊಟೊ G30 ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್ ಅನ್ನು ಹೊಂದಿದೆ. ಹಾಗೆಯೇ 20W ಸಾಮರ್ಥ್ಯದ ಫಾಸ್ಟ್ ಚಾರ್ಜಿಂಗ್ ಸೌಲಭ್ಯವನ್ನು ಪಡೆದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4 ಜಿ, ವೈ-ಫೈ, ಬ್ಲೂಟೂತ್ 5.0, ಎನ್‌ಎಫ್‌ಸಿ, ಜಿಪಿಎಸ್, 3.5 ಎಂಎಂ ಹೆಡ್‌ಫೋನ್ ಜ್ಯಾಕ್ ಮತ್ತು ಯುಎಸ್‌ಬಿ ಟೈಪ್-ಸಿ ಪೋರ್ಟ್ ಸೇರಿವೆ.

ಬೆಲೆ ಮತ್ತು ಲಭ್ಯತೆ
ಮೊಟೊ G30 ಸ್ಮಾರ್ಟ್‌ಫೋನ್ ಯುರೋಪ್‌ನಲ್ಲಿ ಇದರ ಬೆಲೆಯು EUR 180 (ಭಾರತದಲ್ಲಿ ಅಂದಾಜು 15,900ರೂ.ಎನ್ನಲಾಗಿದೆ). ಇನ್ನು ಈ ಫೋನ್ ಪ್ಯಾಸ್ಟಲ್ ಸ್ಕೈ ಮತ್ತು ಫ್ಯಾಂಟಮ್ ಬ್ಲ್ಯಾಕ್ ಕಲರ್ ಆಯ್ಕೆಗಳಲ್ಲಿ ಬರುತ್ತದೆ.


Click it and Unblock the Notifications