ಭಾರತದಲ್ಲಿ ಬಜೆಟ್‌ ದರದಲ್ಲಿ ಮೊಟೊ G30 ಸ್ಮಾರ್ಟ್‌ಫೋನ್ ಬಿಡುಗಡೆ!

|

ಪ್ರತಿಷ್ಠಿತ ಮೊಬೈಲ್ ತಯಾರಿಕಾ ಸಂಸ್ಥೆಗಳಲ್ಲಿ ಒಂದಾದ ಮೊಟೊರೊಲಾ ಕಂಪೆನಿಯ ತನ್ನ ಬಹುನಿರೀಕ್ಷಿತ ಮೊಟೊ G30 ಸ್ಮಾರ್ಟ್‌ಫೋನ್‌ ಅನ್ನು ಭಾರತದಲ್ಲಿ ಇಂದು (ಮಾ.9) ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್ ಬಜೆಟ್‌ ಪ್ರೈಸ್‌ಟ್ಯಾಗ್‌ನಲ್ಲಿ ಕಾಣಿಸಿಕೊಂಡಿದ್ದು, ಆಕರ್ಷಕ ಫೀಚರ್ಸ್‌ಗಳನ್ನು ಒಳಗೊಂಡದೆ. ಮುಖ್ಯವಾಗಿ ಸ್ನ್ಯಾಪ್‌ಡ್ರಾಗನ್ 662 SoC ಪ್ರೊಸೆಸರ್‌ ಹಾಗೂ ಕ್ವಾಡ್‌ ಕ್ಯಾಮೆರಾ ಆಯ್ಕೆ ಪ್ಲಸ್‌ ಪಾಯಿಂಟ್ ಆಗಿದೆ.

ಮೊಟೊರೊಲಾ

ಹೌದು, ಮೊಟೊರೊಲಾ ಕಂಪೆನಿ ನೂತನವಾಗಿ ಮೊಟೊ G30 ಸ್ಮಾರ್ಟ್‌ಫೋನ್‌ ಅನ್ನು ದೇಶಿಯ ಮಾರುಕಟ್ಟೆಯಲ್ಲಿ ಲಾಂಚ್ ಮಾಡಿದೆ. ಈ ಸ್ಮಾರ್ಟ್‌ಫೋನ್‌ ಕ್ವಾಡ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದಿದ್ದು, ಮುಖ್ಯ ಕ್ಯಾಮೆರಾವು 64ಎಂಪಿ ಸೆನ್ಸಾರ್‌ನಲ್ಲಿದೆ. ಇದರೊಂದಿಗೆ 5,000mAh ಬ್ಯಾಟರಿ ಬಾಳಿಕೆ ಪಡೆದಿರುವುದು ಮತ್ತೊಂದು ಹೈಲೈಟ್‌ ಆಗಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್‌ ಒಳಗೊಂಡಿದೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಡಿಸ್‌ಪ್ಲೇ ರಚನೆ ಹೇಗಿದೆ

ಡಿಸ್‌ಪ್ಲೇ ರಚನೆ ಹೇಗಿದೆ

ಮೊಟೊ G30 ಸ್ಮಾರ್ಟ್‌ಫೋನ್‌ 720x1,600 ಪಿಕ್ಸಲ್ ರೆಸಲ್ಯೂಶನ್ ಸಫೋರ್ಟ್‌ ಪಡೆದಿದ್ದು, 6.5 ಇಂಚಿನ ಪೂರ್ಣ ಹೆಚ್‌ಡಿ ಡಿಸ್‌ಪ್ಲೇ ಪಡೆದಿದೆ. ಡಿಸ್‌ಪ್ಲೇಯು 90Hz ರಿಫ್ರೆಶ್ ರೇಟ್‌ ಅನ್ನು ಹೊಂದಿದೆ. ಇನ್ನು ಡಿಸ್‌ಪ್ಲೇ ಅನುಪಾತವು 20:9 ಆಗಿದೆ.

ಪ್ರೊಸೆಸರ್‌ ಕಾರ್ಯವೇನು

ಪ್ರೊಸೆಸರ್‌ ಕಾರ್ಯವೇನು

ಮೊಟೊ G30 ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್ಡ್ರಾಗನ್ 662 SoC ಪ್ರೊಸೆಸರ್‌ ವೇಗವನ್ನು ಹೊಂದಿದೆ. ಅಲ್ಲದೆ ಆಂಡ್ರಾಯ್ಡ್‌ 11 ಓಎಸ್‌ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ ಈ ಸ್ಮಾರ್ಟ್‌ಫೋನ್‌ 4GB RAM + 64GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆಯನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್‌ ಮೆಮೊರಿ ಕಾರ್ಡ್‌ ಮೂಲಕ ಸಂಗ್ರಹ ವಿಸ್ತರಣೆಗೆ ಅವಕಾಶ ನೀಡಿದೆ.

ಕ್ವಾಡ್ ಕ್ಯಾಮೆರಾ ರಚನೆ

ಕ್ವಾಡ್ ಕ್ಯಾಮೆರಾ ರಚನೆ

ಮೊಟೊ G30 ಸ್ಮಾರ್ಟ್‌ಫೋನ್‌ ಕ್ವಾಡ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64ಎಂಪಿ ಸೆನ್ಸಾರ್‌ನಲ್ಲಿದೆ. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್‌ನಲ್ಲಿದೆ. ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಟೆಲಿಫೋಟೋ ಶೂಟರ್ ಹಾಗೂ ನಾಲ್ಕನೇ ಬೇಸಿಕ್ ಕ್ಯಾಮೆರಾ ಸೆನ್ಸಾರ್‌ ಅನ್ನು ಹೊಂದಿದೆ. ಇದರೊಂದಿಗೆ ಸೆಲ್ಫಿ ಕ್ಯಾಮೆರಾ 13ಎಂಪಿ ಸೆನ್ಸಾರ್‌ನಲ್ಲಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಮೊಟೊ G30 ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದೆ. ಹಾಗೆಯೇ 20W ಸಾಮರ್ಥ್ಯದ ಫಾಸ್ಟ್‌ ಚಾರ್ಜಿಂಗ್ ಸೌಲಭ್ಯವನ್ನು ಪಡೆದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4 ಜಿ, ವೈ-ಫೈ, ಬ್ಲೂಟೂತ್ 5.0, ಎನ್‌ಎಫ್‌ಸಿ, ಜಿಪಿಎಸ್, 3.5 ಎಂಎಂ ಹೆಡ್‌ಫೋನ್ ಜ್ಯಾಕ್ ಮತ್ತು ಯುಎಸ್‌ಬಿ ಟೈಪ್-ಸಿ ಪೋರ್ಟ್ ಸೇರಿವೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಮೊಟೊ G30 ಸ್ಮಾರ್ಟ್‌ಫೋನ್‌ 4GB RAM + 64GB ಸ್ಟೋರೇಜ್‌ ವೇರಿಯಂಟ್‌ ಬೆಲೆಯು ಭಾರತದಲ್ಲಿ10,999ರೂ. ಆಗಿದೆ. ಇನ್ನು ಈ ಫೋನ್ ಡಾರ್ಕ್‌ ಪರ್ಲ್‌ ಮತ್ತು ಪ್ಯಾಸ್ಟಲ್ ಸ್ಕೈ ಕಲರ್ ಆಯ್ಕೆಗಳನ್ನು ಹೊಂದಿದೆ. ಇನ್ನು ಈ ಫೋನ್ ಇದೇ ಮಾರ್ಚ್ 17ರಂದು ಫ್ಲಿಪ್‌ಕಾರ್ಟ್‌ ತಾಣದ ಮೂಲಕ ಮೊದಲ ಸೇಲ್ ಶುರು ಮಾಡಲಿದೆ.

Best Mobiles in India

English summary
Moto G30 will be available in India from March 17.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X