ಇಂದು ಮೊಟೊ G31 ಸ್ಮಾರ್ಟ್‌ಫೋನಿನ ಫಸ್ಟ್ ಸೇಲ್; ಬೆಲೆ ಎಷ್ಟು?
ಮೊಟೊರೊಲಾ ಸಂಸ್ಥೆಯು ಭಾರತದಲ್ಲಿ ಹೊಸದಾಗಿ ಬಿಡುಗಡೆ ಮಾಡಿರುವ ಮೊಟೊ G31 ಸ್ಮಾರ್ಟ್‌ಫೋನ್ ಆಕರ್ಷಕ ಫೀಚರ್ಸ್‌ಗಳಿಂದ ಈಗಾಗಲೇ ಗ್ರಾಹಕರನ್ನು ಸೆಳೆದಿದೆ. ಈ ಸ್ಮಾರ್ಟ್‌ಫೋನ್ ಮೊದಲ ಸೇಲ್ ಇಂದು ಮಧ್ಯಾಹ್ನ 12 ರಿಂದ ಇ ಕಾಮರ್ಸ್ ತಾಣ ಫ್ಲಿಪ್‌ಕಾರ್ಟ್ ತಾಣದಲ್ಲಿ ಮಾರಾಟ ಪ್ರಾರಂಭಿಸಲಿದೆ. ಇನ್ನು ಈ ಸ್ಮಾರ್ಟ್‌ಫೋನ್ ಮೊಟೊ G31 ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಹಿಲಿಯೋ G85 ಪ್ರೊಸೆಸರ್ ಅನ್ನು ಹೊಂದಿದೆ.

ಮೊಟೊರೊಲಾ ಕಂಪೆನಿ ನೂತನವಾಗಿ ಮೊಟೊ G31 ಸ್ಮಾರ್ಟ್‌ಫೋನ್ ಮೊದಲ ಮಾರಾಟ ಇಂದು (ಡಿ.6) ನಡೆಯಲಿದೆ. ಈ ಫೋನ್ ಎರಡು ವೇರಿಯಂಟ್ ಆಯ್ಕೆ ಹೊಂದಿದ್ದು, ಅವುಗಳು ಕ್ರಮವಾಗಿ 4GB RAM + 64GB ಮತ್ತು 6GB RAM + 128GB ಆಗಿವೆ. ಹಾಗೆಯೇ ಈ ಫೋನ್ ಬೇಬಿ ಬ್ಲೂ ಮತ್ತು ಮೆಟಿಯೊರೈಟ್ ಗ್ರೇ ಬಣ್ಣಗಳ ಆಯ್ಕೆ ಅನ್ನು ಒಳಗೊಂಡಿದೆ. ಹಾಗಾದರೇ ಮೊಟೊ G31 ಸ್ಮಾರ್ಟ್‌ಫೋನಿನ ಫೀಚರ್ಸ್‌ಗಳು ಹೇಗಿವೆ ಎಂಬುದನ್ನು ತಿಳಿಯಲು ಮುಂದೆ ಓದಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ಮೊಟೊ G31 ಸ್ಮಾರ್ಟ್‌ಫೋನ್ 1080 x 2400 ಪಿಕ್ಸಲ್ ರೆಸಲ್ಯೂಶನ್ ಸಫೋರ್ಟ್ ಪಡೆದಿದ್ದು, 6.4 ಇಂಚಿನ ಪೂರ್ಣ ಹೆಚ್‌ಡಿ OLED ಡಿಸ್‌ಪ್ಲೇ ಪಡೆದಿದೆ. ಈ ಡಿಸ್‌ಪ್ಲೇಯು 60Hz ರಿಫ್ರೆಶ್ ರೇಟ್ ಅನ್ನು ಹೊಂದಿದ್ದು, ಪ್ರತಿ ಇಂಚಿನ ಪಿಕ್ಸಲ್ ಸಾಂದ್ರತೆಯು 409ppi ಆಗಿದೆ. ಇದರೊಂದಿಗೆ ಈ ಡಿಸ್‌ಪ್ಲೇಯು 20:9 ಅನುಪಾತವನ್ನು ಪಡೆದಿದೆ.

ಪ್ರೊಸೆಸರ್ ಪವರ್ ಯಾವುದು?
ಮೊಟೊ G31 ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಹಿಲಿಯೋ G85 ಪ್ರೊಸೆಸರ್ ವೇಗವನ್ನು ಹೊಂದಿದೆ. ಅಲ್ಲದೆ ಆಂಡ್ರಾಯ್ಡ್ 11 ಓಎಸ್ ಬೆಂಬಲದೊಂದಿಗೆ ಕಾರ್ಯ ನಿರ್ವಹಿಸಲಿದೆ. ಹಾಗೇಯೇ ಈ ಸ್ಮಾರ್ಟ್‌ಫೋನ್ 4GB RAM + 64GB ಮತ್ತು 6GB RAM + 128GB ಸ್ಟೋರೇಜ್ ವೇರಿಯಂಟ್ ಆಯ್ಕೆಗಳನ್ನು ಹೊಂದಿದೆ. ಹಾಗೆಯೇ ಎಸ್‌ಡಿ ಕಾರ್ಡ್ ಮೂಲಕ ಬಾಹ್ಯ ಮೆಮೊರಿ ಸಂಗ್ರಹ ವಿಸ್ತರಣೆಗೆ ಅವಕಾಶ ನೀಡಿದೆ.

ಟ್ರಿಪಲ್ ಕ್ಯಾಮೆರಾ ರಚನೆ
ಮೊಟೊ G31 ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸಲ್ ಸೆನ್ಸಾರ್‌ನಲ್ಲಿದೆ. ಎರಡನೇ ಕ್ಯಾಮೆರಾ 8 ಮೆಗಾ ಪಿಕ್ಸೆಲ್ ಸೆನ್ಸಾರ್ ನಲ್ಲಿದೆ. ಮೂರನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಸೆನ್ಸಾರ್ ಕ್ಯಾಮೆರಾ ಅನ್ನು ಹೊಂದಿದೆ. ಇದರೊಂದಿಗೆ ಸೆಲ್ಫಿ ಕ್ಯಾಮೆರಾ 13 ಮೆಗಾ ಪಿಕ್ಸಲ್ ಸೆನ್ಸಾರ್‌ನಲ್ಲಿದೆ. ಇದರೊಂದಿಗೆ ಫೊಟೊ ಎಡಿಟಿಂಗ್ ಆಯ್ಕೆಗಳನ್ನು ಪಡೆದಿದೆ.

ಬ್ಯಾಟರಿ ಮತ್ತು ಇತರೆ
ಮೊಟೊ G31 ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್ ಅನ್ನು ಹೊಂದಿದೆ. ಹಾಗೆಯೇ 20W ಸಾಮರ್ಥ್ಯದ ಫಾಸ್ಟ್ ಚಾರ್ಜಿಂಗ್ ಸೌಲಭ್ಯವನ್ನು ಪಡೆದಿದೆ. ಹಾಗೆಯೇ ಈ ಫೋನ್ 4G LTE, ಎಫ್‌ಎಮ್ ರೇಡಿಯೋ, 3.5mm ಆಡಿಯೋ ಜ್ಯಾಕ್, ಬ್ಲೂಟೂತ್ v5, ಡ್ಯುಯಲ್ ಬ್ಯಾಂಡ್ ವೈ-ಫೈ 802.11 ac, ಮತ್ತು ಯುಎಸ್‌ಬಿ ಟೈಪ್-ಸಿ ಪೋರ್ಟ್‌ನಂತಹ ಸಾಮಾನ್ಯ ಸಂಪರ್ಕ ಆಯ್ಕೆಗಳನ್ನು ಒಳಗೊಂಡಿದೆ.

ಬೆಲೆ ಮತ್ತು ಲಭ್ಯತೆ
ಮೊಟೊ G31 ಸ್ಮಾರ್ಟ್‌ಫೋನ್ 4GB RAM + 64GB ಮತ್ತು 6GB RAM + 128GB ಸ್ಟೋರೇಜ್‌ನ ಎರಡು ವೇರಿಯಂಟ್ ಆಯ್ಕೆಗಳನ್ನು ಹೊಂದಿದೆ. 4GB RAM + 64GB ಸ್ಟೋರೇಜ್ ವೇರಿಯಂಟ್‌ನ ಬೆಲೆಯು 12,999ರೂ. ಆಗಿದೆ. 6GB RAM + 128GB ಸ್ಟೋರೇಜ್ ವೇರಿಯಂಟ್ ದರವು 14,999ರೂ. ಆಗಿದೆ. ಗ್ರೇ ಮತ್ತು ಬ್ಲೂ ಬಣ್ಣಗಳ ಆಯ್ಕೆಯನ್ನು ಪಡೆದಿದೆ. ಇಂದಿನಿಂದ (ಡಿಸೆಂಬರ್ 6ರಿಂದ) ಇ ಕಾಮರ್ಸ್ ತಾಣ ಫ್ಲಿಪ್‌ಕಾರ್ಟ್ ಮೂಲಕ ಮಾರಾಟ ಪ್ರಾರಂಭಿಸಲಿದೆ.


Click it and Unblock the Notifications








