ಭಾರತದಲ್ಲಿ 'ಮೊಟೊ G31' ಫೋನ್ ಬಿಡುಗಡೆ; ಬೆಲೆ ಎಷ್ಟು?..ಸೇಲ್ ಯಾವಾಗ?
ಮೊಬೈಲ್ ವಲಯದಲ್ಲಿ ಭಿನ್ನ ಶ್ರೇಣಿಯ ಫೋನ್‌ಗಳ ಮೂಲಕ ಗುರುತಿಸಿಕೊಂಡಿರುವ ಮೊಟೊರೊಲಾ ಕಂಪೆನಿಯ ಜನಪ್ರಿಯ ಮೊಟೊ ಸರಣಿ ಹೆಚ್ಚು ಗಮನ ಸೆಳೆದಿದೆ. ಮೊಟೊ ಸಂಸ್ಥೆಯ ಇದೀಗ ನೂತನವಾಗಿ ಮೊಟೊ G31 ಸ್ಮಾರ್ಟ್‌ಫೋನ್ ಅನ್ನು ಭಾರತದಲ್ಲಿ ಬಿಡುಗಡೆ ಮಾಡಿದೆ. ಈ ಫೋನ್ ಈ ಹಿಂದಿನ ಮೊಟೊ G30 ಸ್ಮಾರ್ಟ್‌ಫೋನ್ ಉತ್ತರಾಧಿಕಾರಿ ಆಗಿ ಕಾಣಿಸಿಕೊಂಡಿದೆ. ಮೊಟೊ G31 ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಹಿಲಿಯೋ G85 ಪ್ರೊಸೆಸರ್ ಅನ್ನು ಹೊಂದಿದೆ.

ಹೌದು, ಮೊಟೊರೊಲಾ ಕಂಪೆನಿ ನೂತನವಾಗಿ ಮೊಟೊ G31 ಸ್ಮಾರ್ಟ್‌ಫೋನ್ ಅನ್ನು ದೇಶಿಯ ಮಾರುಕಟ್ಟೆಯಲ್ಲಿ ಲಾಂಚ್ ಮಾಡಿದೆ. ಈ ಸ್ಮಾರ್ಟ್‌ಫೋನ್ ಟ್ರಿಪಲ್ ಕ್ಯಾಮೆರಾ ಸೆಟ್‌ಅಪ್ ಅನ್ನು ಪಡೆದಿದ್ದು, 60Hz ಡಿಸ್‌ಪ್ಲೇ ರೀಫ್ರೇಶ್ ರೇಟ್ ಹೊಂದಿದೆ. ಈ ಫೋನ್ ಬಜೆಟ್ ದರ ಹೊಂದಿರುವ ಜೊತೆಗೆ 5,000mAh ಬ್ಯಾಟರಿ ಬ್ಯಾಕ್‌ಅಪ್ ಪಡೆದಿರುವುದು ಮತ್ತೊಂದು ಪ್ರಮುಖ ಹೈಲೈಟ್ ಆಗಿದೆ ಕಾಣಿಸಿಕೊಂಡಿದೆ. ಹಾಗಾದರೇ ಮೊಟೊ G31 ಸ್ಮಾರ್ಟ್‌ಫೋನ್ ಇತರೆ ಯಾವೆಲ್ಲಾ ಫೀಚರ್ಸ್ ಒಳಗೊಂಡಿದೆ ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ಮೊಟೊ G31 ಸ್ಮಾರ್ಟ್‌ಫೋನ್ 1080 x 2400 ಪಿಕ್ಸಲ್ ರೆಸಲ್ಯೂಶನ್ ಸಫೋರ್ಟ್ ಪಡೆದಿದ್ದು, 6.4 ಇಂಚಿನ ಪೂರ್ಣ ಹೆಚ್‌ಡಿ OLED ಡಿಸ್‌ಪ್ಲೇ ಪಡೆದಿದೆ. ಈ ಡಿಸ್‌ಪ್ಲೇಯು 60Hz ರಿಫ್ರೆಶ್ ರೇಟ್ ಅನ್ನು ಹೊಂದಿದ್ದು, ಪ್ರತಿ ಇಂಚಿನ ಪಿಕ್ಸಲ್ ಸಾಂದ್ರತೆಯು 409ppi ಆಗಿದೆ. ಇದರೊಂದಿಗೆ ಈ ಡಿಸ್‌ಪ್ಲೇಯು 20:9 ಅನುಪಾತವನ್ನು ಪಡೆದಿದೆ.

ಪ್ರೊಸೆಸರ್ ಪವರ್ ಯಾವುದು?
ಮೊಟೊ G31 ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಹಿಲಿಯೋ G85 ಪ್ರೊಸೆಸರ್ ವೇಗವನ್ನು ಹೊಂದಿದೆ. ಅಲ್ಲದೆ ಆಂಡ್ರಾಯ್ಡ್ 11 ಓಎಸ್ ಬೆಂಬಲದೊಂದಿಗೆ ಕಾರ್ಯ ನಿರ್ವಹಿಸಲಿದೆ. ಹಾಗೇಯೇ ಈ ಸ್ಮಾರ್ಟ್‌ಫೋನ್ 4GB RAM + 64GB ಮತ್ತು 6GB RAM + 128GB ಸ್ಟೋರೇಜ್ ವೇರಿಯಂಟ್ ಆಯ್ಕೆಗಳನ್ನು ಹೊಂದಿದೆ. ಹಾಗೆಯೇ ಎಸ್‌ಡಿ ಕಾರ್ಡ್ ಮೂಲಕ ಬಾಹ್ಯ ಮೆಮೊರಿ ಸಂಗ್ರಹ ವಿಸ್ತರಣೆಗೆ ಅವಕಾಶ ನೀಡಿದೆ.

ಟ್ರಿಪಲ್ ಕ್ಯಾಮೆರಾ ರಚನೆ
ಮೊಟೊ G31 ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸಲ್ ಸೆನ್ಸಾರ್‌ನಲ್ಲಿದೆ. ಎರಡನೇ ಕ್ಯಾಮೆರಾ 8 ಮೆಗಾ ಪಿಕ್ಸೆಲ್ ಸೆನ್ಸಾರ್ ನಲ್ಲಿದೆ. ಮೂರನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಸೆನ್ಸಾರ್ ಕ್ಯಾಮೆರಾ ಅನ್ನು ಹೊಂದಿದೆ. ಇದರೊಂದಿಗೆ ಸೆಲ್ಫಿ ಕ್ಯಾಮೆರಾ 13 ಮೆಗಾ ಪಿಕ್ಸಲ್ ಸೆನ್ಸಾರ್‌ನಲ್ಲಿದೆ. ಇದರೊಂದಿಗೆ ಫೊಟೊ ಎಡಿಟಿಂಗ್ ಆಯ್ಕೆಗಳನ್ನು ಪಡೆದಿದೆ.

ಬ್ಯಾಟರಿ ಮತ್ತು ಇತರೆ
ಮೊಟೊ G31 ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್ ಅನ್ನು ಹೊಂದಿದೆ. ಹಾಗೆಯೇ 20W ಸಾಮರ್ಥ್ಯದ ಫಾಸ್ಟ್ ಚಾರ್ಜಿಂಗ್ ಸೌಲಭ್ಯವನ್ನು ಪಡೆದಿದೆ. ಹಾಗೆಯೇ ಈ ಫೋನ್ 4G LTE, ಎಫ್‌ಎಮ್ ರೇಡಿಯೋ, 3.5mm ಆಡಿಯೋ ಜ್ಯಾಕ್, ಬ್ಲೂಟೂತ್ v5, ಡ್ಯುಯಲ್ ಬ್ಯಾಂಡ್ ವೈ-ಫೈ 802.11 ac, ಮತ್ತು ಯುಎಸ್‌ಬಿ ಟೈಪ್-ಸಿ ಪೋರ್ಟ್‌ನಂತಹ ಸಾಮಾನ್ಯ ಸಂಪರ್ಕ ಆಯ್ಕೆಗಳನ್ನು ಒಳಗೊಂಡಿದೆ.

ಬೆಲೆ ಮತ್ತು ಲಭ್ಯತೆ
ಮೊಟೊ G31 ಸ್ಮಾರ್ಟ್‌ಫೋನ್ 4GB RAM + 64GB ಮತ್ತು 6GB RAM + 128GB ಸ್ಟೋರೇಜ್‌ನ ಎರಡು ವೇರಿಯಂಟ್ ಆಯ್ಕೆಗಳನ್ನು ಹೊಂದಿದೆ. 4GB RAM + 64GB ಸ್ಟೋರೇಜ್ ವೇರಿಯಂಟ್‌ನ ಬೆಲೆಯು 12,999ರೂ. ಆಗಿದೆ. 6GB RAM + 128GB ಸ್ಟೋರೇಜ್ ವೇರಿಯಂಟ್ ದರವು 14,999ರೂ. ಆಗಿದೆ. ಗ್ರೇ ಮತ್ತು ಬ್ಲೂ ಬಣ್ಣಗಳ ಆಯ್ಕೆಯನ್ನು ಪಡೆದಿದೆ. ಇದೇ ಡಿಸೆಂಬರ್ 6ರಿಂದ ಇ ಕಾಮರ್ಸ್ ತಾಣ ಫ್ಲಿಪ್‌ಕಾರ್ಟ್ ಮೂಲಕ ಮಾರಾಟ ಪ್ರಾರಂಭಿಸಲಿದೆ.

ಹಾಗೆಯೇ ಮೊಟೊರೊಲಾ ಕಂಪೆನಿ ಈ ಹಿಂದಿನ ಮೊಟೊ G30 ಫೋನ್ ಸಹ ಆಕರ್ಷಕ ಲುಕ್ ಪಡೆದಿದೆ. ಈ ಫೋನ್ 720 x 1,600 ಪಿಕ್ಸಲ್ ರೆಸಲ್ಯೂಶನ್ ಸಫೋರ್ಟ್ ಪಡೆದಿದ್ದು, 6.5 ಇಂಚಿನ ಪೂರ್ಣ ಹೆಚ್‌ಡಿ ಡಿಸ್‌ಪ್ಲೇ ಪಡೆದಿದೆ. ಡಿಸ್‌ಪ್ಲೇಯು 90Hz ರಿಫ್ರೆಶ್ ರೇಟ್ ಅನ್ನು ಹೊಂದಿದೆ. ಇನ್ನು ಡಿಸ್‌ಪ್ಲೇ ಅನುಪಾತವು 20:9 ಆಗಿದೆ. ಇನ್ನು ಆಕ್ಟಾ ಕೋರ್ ಕ್ವಾಲ್ಕಾಮ್ ಸ್ನಾಪ್ಡ್ರಾಗನ್ 662 SoC ಪ್ರೊಸೆಸರ್ ವೇಗವನ್ನು ಹೊಂದಿದೆ. ಅಲ್ಲದೆ ಆಂಡ್ರಾಯ್ಡ್ 11 ಓಎಸ್ ಬೆಂಬಲದೊಂದಿಗೆ ಕಾರ್ಯ ನಿರ್ವಹಿಸಲಿದೆ. ಹಾಗೆಯೇ ಈ ಸ್ಮಾರ್ಟ್‌ಫೋನ್ 4GB RAM + 64GB ಸ್ಟೋರೇಜ್ ವೇರಿಯಂಟ್ ಆಯ್ಕೆಯನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್ ಮೆಮೊರಿ ಕಾರ್ಡ್ ಮೂಲಕ ಸಂಗ್ರಹ ವಿಸ್ತರಣೆಗೆ ಅವಕಾಶ ನೀಡಿದೆ. ಅಧಿಕ ಡೇಟಾ ಅಗತ್ಯ ಇರುವ ಗೇಮ್‌ಗಳನ್ನು ಆಡಲು ಬೆಂಬಲಿಸುತ್ತದೆ.

ಇನ್ನು ಈ ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64ಎಂಪಿ ಸೆನ್ಸಾರ್‌ನಲ್ಲಿದೆ. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್‌ನಲ್ಲಿದೆ. ಮೂರನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಟೆಲಿಫೋಟೋ ಶೂಟರ್ ಹಾಗೂ ನಾಲ್ಕನೇ ಬೇಸಿಕ್ ಕ್ಯಾಮೆರಾ ಸೆನ್ಸಾರ್ ಅನ್ನು ಹೊಂದಿದೆ. ಇದರೊಂದಿಗೆ ಸೆಲ್ಫಿ ಕ್ಯಾಮೆರಾ 13 ಎಂಪಿ ಸೆನ್ಸಾರ್‌ನಲ್ಲಿದೆ. ಹಾಗೆಯೇ ಇದು 5,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್ ಅನ್ನು ಹೊಂದಿದೆ.

ಹಾಗೆಯೇ 20W ಸಾಮರ್ಥ್ಯದ ಫಾಸ್ಟ್ ಚಾರ್ಜಿಂಗ್ ಸೌಲಭ್ಯವನ್ನು ಪಡೆದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4 ಜಿ, ವೈ-ಫೈ, ಬ್ಲೂಟೂತ್ 5.0, ಎನ್‌ಎಫ್‌ಸಿ, ಜಿಪಿಎಸ್, 3.5 ಎಂಎಂ ಹೆಡ್‌ಫೋನ್ ಜ್ಯಾಕ್ ಮತ್ತು ಯುಎಸ್‌ಬಿ ಟೈಪ್ ಸಿ ಪೋರ್ಟ್ ಸೇರಿವೆ. ಬಜೆಟ್ ಬೆಲೆಯಲ್ಲಿ ಅಧಿಕ ಬ್ಯಾಟರಿ ನೀಡಿರುವುದು ಪ್ಲಸ್ ಪಾಯಿಂಟ್ ಆಗಿದೆ. ಇನ್ನು ಈ ಫೋನ್ ಡಾರ್ಕ್ ಪರ್ಲ್ ಮತ್ತು ಪ್ಯಾಸ್ಟಲ್ ಸ್ಕೈ ಕಲರ್ ಆಯ್ಕೆಗಳನ್ನು ಹೊಂದಿದೆ.


Click it and Unblock the Notifications








