Just In
- 10 hrs ago
ಅಜ್ಜಿಗೆ ಆಪ್ಗಳ ಬಗ್ಗೆ ತಿಳಿಸಿಕೊಟ್ಟ ಯುವಕ; ವೈರಲ್ ಆಯ್ತು ವಿಡಿಯೋ!
- 12 hrs ago
ಜಿಯೋದ ಈ ಪ್ಲ್ಯಾನ್ ಸಖತ್ ಆಗಿದೆ!..ರೀಚಾರ್ಜ್ ಮಾಡಬೇಕಾ?.ಬೇಡವೇ?
- 12 hrs ago
ದೃಷ್ಟಿಹೀನರಿಗಾಗಿ ಹೊಸ ಸ್ಮಾರ್ಟ್ವಾಚ್; ಇದು ಹೇಗೆಲ್ಲಾ ಕೆಲಸ ಮಾಡಲಿದೆ!?
- 14 hrs ago
Vivo X90 Pro : ಲಾಂಚ್ ಆಗಿಯೇ ಬಿಡ್ತು 'ವಿವೋ X90 ಪ್ರೊ' ಫೋನ್; ಖರೀದಿಗೆ ಕ್ಯೂ ಖಚಿತ!
Don't Miss
- Sports
ಗೆದ್ದ ಜಯ್ ಶಾ ಹಠ, ಪಾಕ್ಗೆ ಹಿನ್ನೆಡೆ; ತಟಸ್ಥ ಸ್ಥಳದಲ್ಲಿ 2023ರ ಏಷ್ಯಾಕಪ್ ಆಯೋಜಿಸಲು ನಿರ್ಧಾರ
- Lifestyle
Horoscope Today 5 Feb 2023: ಭಾನುವಾರ : ದ್ವಾದಶ ರಾಶಿಗಳ ರಾಶಿಫಲ ಹೇಗಿದೆ?
- Movies
Ramachari Serial: ವಿಹಾನ್ ಬಳಿ ಸತ್ಯ ಹೇಳಿಬಿಟ್ಟ ಚಾರು!
- News
ಗುಜರಾತ್ಗೆ ಬರಲಿದ್ದಾರೆ ಯುಎಸ್ ಮಾಜಿ ವಿದೇಶಾಂಗ ಕಾರ್ಯದರ್ಶಿ ಹಿಲರಿ ಕ್ಲಿಂಟನ್
- Finance
ಅದಾನಿ ಸ್ಟಾಕ್ ಕುಸಿತ: 'ನಿಯಂತ್ರಕರು ಅವರ ಕೆಲಸ ಮಾಡುತ್ತಾರೆ', ಎಂದ ವಿತ್ತ ಸಚಿವೆ
- Automobiles
ಬೆಲೆ ಏರಿಕೆ ಪಡೆದುಕೊಂಡ ಬಹುಬೇಡಿಕೆಯ ಟೊಯೊಟಾ ಹೈರೈಡರ್ ಎಸ್ಯುವಿ
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ಇಂದು ಮೊಟೊ G32 ಫೋನ್ ಫಸ್ಟ್ ಸೇಲ್!..ಏನಾದ್ರೂ ಆಫರ್ ಸಿಗುತ್ತಾ?
ಭಾರತದಲ್ಲಿ ಮೊಟೊರೊಲಾ ಮೊಬೈಲ್ ಸಂಸ್ಥೆಯು ಈಗಾಗಲೇ ಹಲವು ಭಿನ್ನ ಶ್ರೇಣಿಯಲ್ಲಿ ಫೋನ್‌ಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿದೆ. ಆ ಪೈಕಿ ಇತ್ತೀಚಿಗಷ್ಟೆ ಮೊಟೊ G ಸರಣಿಯಲ್ಲಿ ಬಿಡುಗಡೆ ಮಾಡಿರುವ ಮೊಟೊ G32 ಸ್ಮಾರ್ಟ್‌ಫೋನ್ ಕೆಲವು ಆಕರ್ಷಕ ಫೀಚರ್ಸ್‌ಗಳಿಂದ ಗ್ರಾಹಕರನ್ನು ಸೆಳೆದಿದೆ. ಇನ್ನು ಈ ಫೋನ್ ಇ ಕಾಮರ್ಸ್ ದೈತ್ಯ ಫ್ಲಿಪ್‌ಕಾರ್ಟ್ ಮೂಲಕ ಇಂದು (ಆಗಷ್ಟ್ 16) ಫಸ್ಟ್ ಸೇಲ್ ಪ್ರಾರಂಭಿಸಲಿದೆ.

ಹೌದು, ಮೊಟೊ G32 ಸ್ಮಾರ್ಟ್‌ಫೋನ್ ಇಂದು ಮಧ್ಯಾಹ್ನ 12ಕ್ಕೆ ಫ್ಲಿಪ್‌ಕಾರ್ಟ್‌ನಲ್ಲಿ ಫಸ್ಟ್ ಸೇಲ್ ಶುರು ಮಾಡಲಿದೆ. ಇನ್ನು ಈ ಫೋನ್ 90Hz ರೀಫ್ರೇಶ್ ರೇಟ್ ಡಿಸ್‌ಪ್ಲೇ ಒಳಗೊಂಡಿದ್ದು, ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 680 SoC ಪ್ರೊಸೆಸರ್‌ನಲ್ಲಿ ಕಾರ್ಯ ನಿರ್ವಹಿಸಲಿದೆ. ಇದರೊಂದಿಗೆ ಟ್ರಿಪಲ್ ರಿಯರ್ ಕ್ಯಾಮೆರಾ ರಚನೆಯನ್ನು ಒಳಗೊಂಡಿದ್ದು, ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದಲ್ಲಿದೆ.

ಹಾಗೆಯೇ ಈ ಫೋನ್ ಸ್ಮಾರ್ಟ್‌ಫೋನ್ 5,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಒಳಗೊಂಡಿದೆ. ಇದಕ್ಕೆ ಪೂರಕವಾಗಿ ಈ ಫೋನ್ ಇದು 33W ಟರ್ಬೋಪವರ್ ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಹಾಗಾದರೇ ಮೊಟೊ G32 ಸ್ಮಾರ್ಟ್‌ಫೋನ್ ಬೆಲೆ ಎಷ್ಟು?..ಈ ಫೋನಿನ ಫೀಚರ್ಸ್‌ಗಳೇನು? ಏನಾದ್ರೂ ಆಫರ್ ಇದೆಯಾ? ಈ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ಮೊಟೊ G32 ಸ್ಮಾರ್ಟ್‌ಫೋನ್ 6.5 ಇಂಚಿನ ಫುಲ್ HD+ ಎಲ್‌ಸಿಡಿ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 1,080 x 2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದು 90Hz ರಿಫ್ರೆಶ್ ರೇಟ್ ಮತ್ತು 20:9 ರಚನೆಯ ಅನುಪಾತವನ್ನು ಒಳಗೊಂಡಿದೆ. ಇನ್ನು ಈ ಡಿಸ್‌ಪ್ಲೇ 85.48 % ಸ್ಕ್ರೀನ್ ಟು ಬಾಡಿ ನಡುವಿನ ಅನುಪಾತವನ್ನು ಪಡೆದುಕೊಂಡಿದೆ.

ಪ್ರೊಸೆಸರ್ ಯಾವುದು?
ಮೊಟೊ G32 ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 680 SoC ಪ್ರೊಸೆಸರ್ ಬಲವನ್ನು ಪಡೆದುಕೊಂಡಿದೆ. ಇದು ಆಂಡ್ರಾಯ್ಡ್ 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇದು 4GB RAM ಮತ್ತು 64GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ ಮೈಕ್ರೋ ಎಸ್‌ಡಿ ಕಾರ್ಡ್ ಮೂಲಕ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವುದಕ್ಕೆ ಅವಕಾಶ ಕೂಡ ನೀಡಲಾಗಿದೆ.

ಕ್ಯಾಮೆರಾ ಸೆಟ್‌ಅಪ್ ಎಷ್ಟಿದೆ?
ಮೊಟೊ G32 ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಪಡೆದಿದೆ. ಇನ್ನು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.

ಬ್ಯಾಟರಿ ಮತ್ತು ಇತರೆ ಫೀಚರ್ಸ್
ಮೊಟೊ G32 ಸ್ಮಾರ್ಟ್‌ಫೋನ್ 5,000mAh ಬ್ಯಾಟರಿ ಸಾಮರ್ಥ್ಯವನ್ನು ಹೊಂದಿದೆ. ಇದು 33W ಟರ್ಬೋಪವರ್ ವೇಗದ ಚಾರ್ಜಿಂಗ್ ಟೆಕ್ನಾಲಜಿಯನ್ನು ಹೊಂದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಡ್ಯುಯಲ್-ಬ್ಯಾಂಡ್ Wi-Fi, 4G LTE, ಬ್ಲೂಟೂತ್ v5.2, 3.5mm ಹೆಡ್‌ಫೋನ್ ಪೋರ್ಟ್ ಮತ್ತು USB ಟೈಪ್-C ಅನ್ನು ಒಳಗೊಂಡಿದೆ. ಇದಲ್ಲದೆ ಫಿಂಗರ್‌ಪ್ರಿಂಟ್ ರೀಡರ್, ಪ್ರಾಕ್ಸಿಮಿಟಿ ಸೆನ್ಸಾರ್, ವೇಗವರ್ಧಕ, ಆಂಬಿಯೆಂಟ್ ಲೈಟ್ ಸೆನ್ಸಾರ್, ಗೈರೊಸ್ಕೋಪ್ ಸೆನ್ಸಾರ್ ಮತ್ತು ಇ-ಕಂಪಾಸ್ ಅನ್ನು ಒಳಗೊಂಡಿದೆ.

ಬೆಲೆ ಮತ್ತು ಲಭ್ಯತೆ
ಭಾರತದಲ್ಲಿ ಮೊಟೊ G32 ಸ್ಮಾರ್ಟ್‌ಫೋನ್ 4GB RAM + 64GB ಸ್ಟೋರೇಜ್ ಸಾಮರ್ಥ್ಯದ ಏಕೈಕ ರೂಪಾಂತರಕ್ಕೆ 12,999ರೂ. ಬೆಲೆಯನ್ನು ಹೊಂದಿದೆ. ಇದು ಮಿನರಲ್ ಗ್ರೇ ಮತ್ತು ಸ್ಯಾಟಿನ್ ಸಿಲ್ವರ್ ಬಣ್ಣದ ಆಯ್ಕೆಗಳಲ್ಲಿ ಲಭ್ಯವಾಗಲಿದೆ. ಇನ್ನು ಈ ಸ್ಮಾರ್ಟ್‌ಫೋನ್ ಭಾರತದಲ್ಲಿ ಆಗಸ್ಟ್ 16 ರಿಂದ ಫ್ಲಿಪ್‌ಕಾರ್ಟ್ ಮತ್ತು ಪ್ರಮುಖ ಆಫ್‌ಲೈನ್ ಔಟ್‌ಲೆಟ್‌ಗಳಲ್ಲಿ ಖರೀದಿಗೆ ಲಭ್ಯವಾಗಲಿದೆ.

ಲಾಂಚ್ ಆಫರ್ ಏನಿದೆ?
ಮೊಟೊ G32 ಇಂದು ಫ್ಲಿಪ್‌ಕಾರ್ಟ್ ಮೂಲಕ ಮಾರಾಟ ಆರಂಭಿಸಲಿದೆ. ಮೊಟೊ HDFC ಬ್ಯಾಂಕ್‌ನೊಂದಿಗೆ ಪಾಲುದಾರಿಕೆ ಹೊಂದಿದ್ದು, ಕ್ರೆಡಿಟ್ ಕಾರ್ಡ್ ವಹಿವಾಟಿನ ಮೂಲಕ 1,250 ರೂ. ರಿಯಾಯಿತಿ ಸಿಗಲಿದೆ. ಹಾಗೆಯೇ ಮೊಟೊ G32 ಖರೀದಿದಾರರು ಗೂಗಲ್ ನೆಸ್ಟ್ ಹಬ್ ಮತ್ತು ಗೂಗಲ್ ನೆಸ್ಟ್ ಮಿನಿ ಅನ್ನು ಕ್ರಮವಾಗಿ 4,999 ರೂ. ಮತ್ತು 1,999 ರೂ. ಪಡೆಯುತ್ತಾರೆ.
-
54,999
-
36,599
-
39,999
-
38,990
-
1,29,900
-
79,990
-
38,900
-
18,999
-
19,300
-
69,999
-
79,900
-
1,09,999
-
1,19,900
-
21,999
-
1,29,900
-
12,999
-
44,999
-
15,999
-
7,332
-
17,091
-
29,999
-
7,999
-
8,999
-
45,835
-
77,935
-
48,030
-
29,616
-
57,999
-
12,670
-
79,470