ಮೋಟೊ G32 ಸ್ಮಾರ್ಟ್‌ಫೋನ್ ಬಿಡುಗಡೆ! ಆಕರ್ಷಕ ಫೀಚರ್ಸ್!
ಮೊಟೊರೊಲಾ ಕಂಪೆನಿ ತನ್ನ ಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳಿಂದ ಗಮನ ಸೆಳೆದಿದೆ. ಈಗಾಗಲೇ ಹಲವು ಆಕರ್ಷಕ ಸ್ಮಾರ್ಟ್‌ಫೋನ್‌ಗಳನ್ನು ಮಾರುಕಟ್ಟೆಯಲ್ಲಿ ಪರಿಚಯಿಸಿ ತನ್ನ ಸ್ಥಾನ ಭದ್ರಪಡಿಸಿಕೊಂಡಿದೆ. ಸ್ಫರ್ಧಾತ್ಮಕ ಪೈಪೋಟಿ ಹೊಂದಿರುವ ಮೊಬೈಲ್ ಮಾರುಕಟ್ಟೆಯಲ್ಲಿ ತನ್ನದೇ ಆದ ಗ್ರಾಹಕವರ್ಗವನ್ನು ಪಡೆದುಕೊಂಡಿದೆ. ಸದ್ಯ ಇದೀಗ ತನ್ನ ಹೊಸ ಮೋಟೋ G32 ಸ್ಮಾರ್ಟ್‌ಫೋನ್ ಅನ್ನು ಲಾಂಚ್ ಮಾಡಿದೆ. ಈ ಸ್ಮಾರ್ಟ್‌ಫೋನ್ ಮೂಲಕ ಮಾರುಕಟ್ಟೆಯಲ್ಲಿ ಮತ್ತೆ ಹೊಸ ಸಂಚಲನ ಮೂಡಿಸುವ ಸುಳಿವು ನೀಡಿದೆ.

ಹೌದು, ಸ್ಮಾರ್ಟ್‌ಫೋನ್ ಮಾರುಕಟ್ಟೆಯಲ್ಲಿ ಇದೀಗ ಎಲ್ಲಾ ಕಡೆ ನಥಿಂಗ್ ಸ್ಮಾರ್ಟ್‌ಫೋನ್ ಸುದ್ದಿ ಜೋರಾಗಿದೆ. ಇದರ ನಡುವೆ ಅನೇಕ ಆಂಡ್ರಾಯ್ಡ್ ಫೋನ್‌ಗಳು ಎಂಟ್ರಿ ನೀಡುತ್ತಲೇ ಇವೆ. ಇದೀಗ ಮೊಟೊರೊಲಾ ಕಂಪೆನಿ ಹೊಸ ಮೋಟೋ G32 ಫೋನ್ ಮೂಲಕ ಸದ್ದು ಮಾಡಲು ಹೊರಟಿದೆ. ಈ ಸ್ಮಾರ್ಟ್‌ಫೋನ್ 90Hz ರಿಫ್ರೆಶ್ ರೇಟ್ ಒಳಗೊಂಡಿರುವ ಡಿಸ್‌ಪ್ಲೇ ಮತ್ತು ಡಾಲ್ಬಿ ಅಟ್ಮಾಸ್ ಟ್ಯೂನ್ಡ್ ಸ್ಪೀಕರ್‌ಗಳನ್ನು ಒಳಗೊಂಡಿದೆ. ಇದು ಕ್ವಾಲ್ಕಾಮ್ ಸ್ನಾಪ್ಡ್ರಾಗನ್ 680 ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ.

ಇನ್ನು ಮೊಟೊರೊಲಾ ಮೋಟೋ G32 ಸ್ಮಾರ್ಟ್‌ಫೋನ್ ಮಿಡ್ ರೇಂಜ್ ಫೋನ್‌ಗಳನ್ನು ಒಳಗೊಂಡಿರುವ G-ಸರಣಿಗಳಲ್ಲಿ ಒಂದಾಗಿದೆ. ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 30W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ಯಾವೆಲ್ಲಾ ವಿಶೇಷತೆಯನ್ನು ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಲೇ ರಚನೆ ಏನಿದೆ?
ಮೋಟೋ G32 ಸ್ಮಾರ್ಟ್‌ಫೋನ್ 6.5 ಇಂಚಿನ ಫುಲ್‌ಹೆಚ್‌ಡಿ ಪ್ಲಸ್ ಎಲ್‌ಸಿಡಿ ಡಿಸ್‌ಪ್ಲೇಯನ್ನು ಹೊಂದಿದೆ. ಇದು 1,080x2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 90Hz ಸ್ಕ್ರೀನ್ ರಿಫ್ರೆಶ್ ರೇಟ್ ಮತ್ತು 20:9 ರಚನೆಯ ಅನುಪಾತವನ್ನು ಒಳಗೊಂಡಿದೆ. ಈ ಸ್ಮಾರ್ಟ್‌ಫೋನ್ ಡಿಸ್‌ಪ್ಲೇ 85.4% ಸ್ಕ್ರೀನ್-ಟು-ಬಾಡಿ ನಡುವಿನ ಅನುಪಾತವನ್ನು ಪಡೆದುಕೊಂಡಿದೆ.

ಪ್ರೊಸೆಸರ್ ಯಾವುದು?
ಮೋಟೋ G32 ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 680 ಪ್ರೊಸೆಸರ್ ಬಲವನ್ನು ಪಡೆದುಕೊಂಡಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 4GB RAM ಮತ್ತು 128GB ಇಂಟರ್‌ನಲ್ ಸ್ಟೋರೇಜ್ ಅನ್ನು ಹೊಂದಿದೆ. ಇದಲ್ಲದೆ ಮೆಮೊರಿ ಕಾರ್ಡ್ ಮೂಲಕ ಸಂಗ್ರಹ ಸಾಮರ್ಥ್ಯವನ್ನು 1TB ವರೆಗೆ ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ಸೆಟ್‌ಅಪ್ ಎಷ್ಟಿದೆ?
ಮೋಟೋ G32 ಸ್ಮಾರ್ಟ್‌ಫೋನ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ F1.8 ಲೆನ್ಸ್ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ F2.2 ಲೆನ್ಸ್ ಹೊಂದಿರುವ 8 ಮೆಗಾಪಿಕ್ಸೆಲ್ ಅಲ್ಟ್ರಾವೈಡ್ ಸೆನ್ಸಾರ್ ಹೊಂದಿದೆ. ಮೂರನೇ ಕ್ಯಾಮೆರಾ F2 ಜೊತೆಗೆ 2-ಮೆಗಾಪಿಕ್ಸೆಲ್ ಮ್ಯಾಕ್ರೋ ಸೆನ್ಸಾರ್ ಅನ್ನು ಒಳಗೊಂಡಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.

ಬ್ಯಾಟರಿ ಬ್ಯಾಕ್‌ಅಪ್ ಏನಿದೆ?
ಮೋಟೋ G32 ಸ್ಮಾರ್ಟ್‌ಫೋನ್ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 30W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಈ ಸ್ಮಾರ್ಟ್‌ಫೋನ್ ಚಾರ್ಜಿಂಗ್ ಮತ್ತು ಡೇಟಾ ವರ್ಗಾವಣೆಗಾಗಿ USB-C ಪೋರ್ಟ್ ಅನ್ನು ಬಳಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಡ್ಯುಯಲ್-ಬ್ಯಾಂಡ್ ವೈಫೈ, ಬ್ಲೂಟೂತ್ 5.2 ಮತ್ತು ಎನ್‌ಎಫ್‌ಸಿಗೆ ಬೆಂಬಲವನ್ನು ನೀಡಲಿದೆ.

ಬೆಲೆ ಮತ್ತು ಲಭ್ಯತೆ
ಮೋಟೋ G32 ಸ್ಮಾರ್ಟ್‌ಫೋನ್ ಪ್ರಸ್ತುತ ಯುರೋಪಿಯನ್ ಮಾರುಕಟ್ಟೆಯಲ್ಲಿ 4GB RAM ಮತ್ತು 128GB ಸ್ಟೋರೇಜ್ ಆಯ್ಕೆಗೆ EUR 209.99 (ಅಂದಾಜು 17,000ರೂ.) ಬೆಲೆಯನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್ ಸ್ಯಾಟಿನ್ ಸಿಲ್ವರ್ ಮತ್ತು ಮಿನರಲ್ ಗ್ರೇ ಬಣ್ಣಗಳಲ್ಲಿ ಬರುತ್ತದೆ. ಇನ್ನು ಈ ಸ್ಮಾರ್ಟ್‌ಫೋನ್ ಶೀಘ್ರದಲ್ಲೇ ಭಾರತದ ಮಾರುಕಟ್ಟೆಗೂ ಲಗ್ಗೆ ಇಡುವ ಸಾಧ್ಯತೆ ಇದೆ.

ಇನ್ನು ಮೊಟೊರೊಲಾ ಕಂಪೆನಿ ಭಾರತದಲ್ಲಿ ಇತ್ತೀಚಿಗೆ ಮೋಟೋ G42 ಸ್ಮಾರ್ಟ್‌ಫೋನ್ ಪರಿಚಯಿಸಿದೆ. ಈ ಸ್ಮಾರ್ಟ್‌ಫೋನ್ 6.4 ಇಂಚಿನ ಫುಲ್ ಹೆಚ್‌ಡಿ+ ಅಮೋಲೆಡ್ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ ಸ್ಕ್ರೀನ್ ಟು ಬಾಡಿ ನಡುವಿನ ಅನುಪಾತ 83.9% ಆಗಿದೆ. ಇದು 411 ಪಿಪಿಐ ಸಾಂದ್ರತೆಯನ್ನು ಹೊಂದಿದೆ. ಮೋಟೋ G42 ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 680 SoC ಪ್ರೊಸೆಸರ್ ಅನ್ನು ಹೊಂದಿದ್ದು, ಆಂಡ್ರಾಯ್ಡ್ 12 ನಲ್ಲಿ ಕಾಯರ್ಯನಿರ್ವಹಿಸಲಿದೆ. ಈ ಫೋನ್ ಆಂಡ್ರೆನೊ 610 GPU ಸಪೋರ್ಟ್ ಹೊಂದಿದೆ.

ಇದು ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ f/1.8 ಲೆನ್ಸ್ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಲೆನ್ಸ್ ಹೊಂದಿದೆ. ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಮೈಕ್ರೊ ಲೆನ್ಸ್ ಅನ್ನು ಹೊಂದಿದೆ. ಇದಲ್ಲದೆ ವೀಡಿಯೊ ಕರೆ ಹಾಗೂ ಸೆಲ್ಫಿಗಾಗಿ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ನೀಡಲಾಗಿದೆ. ಇದು f/2.2 ಲೆನ್ಸ್‌ನೊಂದಿಗೆ ಬರುತ್ತದೆ.

ಮೋಟೋ G42 ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 20W ಟರ್ಬೊಪವರ್ ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಈ ಬ್ಯಾಟರಿ ಸಿಂಗಲ್ ಚಾರ್ಜ್‌ನಲ್ಲಿ 30 ಗಂಟೆಗಳ ಬ್ಯಾಕಪ್ ಅನ್ನು ನೀಡಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G LTE, Wi-Fi 802.11ac, ಬ್ಲೂಟೂತ್ v5.0, FM ರೇಡಿಯೋ, GPS/ A-GPS, NFC, USB ಟೈಪ್-C, ಮತ್ತು 3.5mm ಹೆಡ್‌ಫೋನ್ ಜ್ಯಾಕ್ ಅನ್ನು ಒಳಗೊಂಡಿದೆ. ಭಾರತದಲ್ಲಿ ಮೋಟೋ G42 ಸ್ಮಾರ್ಟ್‌ಫೋನ್ 4GB RAM + 64GB ಸ್ಟೋರೇಜ್ ರೂಪಾಂತರದ ಆಯ್ಕೆಗೆ 13,999ರೂ. ಬೆಲೆ ಹೊಂದಿದೆ.


Click it and Unblock the Notifications








