ಭಾರತಕ್ಕೆ ಎಂಟ್ರಿ ಕೊಟ್ಟ ಮೊಟೊ G32 ಸ್ಮಾರ್ಟ್‌ಫೋನ್‌! ಬೆಲೆ ಎಷ್ಟು?

|

ಭಾರತದ ಸ್ಮಾರ್ಟ್‌ಫೋನ್‌ ಮಾರುಕಟ್ಟೆಯಲ್ಲಿ ಮೊಟೊರೊಲಾ ಸ್ಮಾರ್ಟ್‌ಫೋನ್‌ಗಳಿಗೆ ಉತ್ತಮ ಬೇಡಿಕೆಯಿದೆ. ಇದೇ ಕಾರಣಕ್ಕೆ ಮೊಟೊರೊಲಾ ಕಂಪೆನಿ ಭಾರತದಲ್ಲಿ ವಿವಿಧ ಮಾದರಿಯ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸುತ್ತಾ ಬಂದಿದೆ. ಪ್ರತಿ ಭಾರಿಯು ತನ್ನ ಸ್ಮಾರ್ಟ್‌ಫೋನ್‌ಗಳಲ್ಲಿ ಆಕರ್ಷಕ ಫೀಚರ್ಸ್‌ಗಳನ್ನು ಸೇರ್ಪಡೆ ಮಾಡುವ ಮೂಲಕ ಗಮನಸೆಳೆದಿದೆ. ಸದ್ಯ ಇದೀಗ ಭಾರತದಲ್ಲಿ ಮಾರುಕಟ್ಟೆಯಲ್ಲಿ ಹೊಸ ಮೊಟೊ G32 ಸ್ಮಾರ್ಟ್‌ಫೋನ್‌ ಲಾಂಚ್‌ ಮಾಡಿದೆ. ಈ ಸ್ಮಾರ್ಟ್‌ಫೋನ್‌ ಥಿಂಕ್‌ಶೀಲ್ಡ್ ಸೆಕ್ಯುರಿಟಿ ಸಲ್ಯೂಶನ್‌ ಅನ್ನು ಒಳಗೊಂಡಿದೆ.

ಮೊಟೊರೊಲಾ

ಹೌದು, ಮೊಟೊರೊಲಾ ಕಂಪೆನಿ ಭಾರತದಲ್ಲಿ ಮೊಟೊ G32 ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಿದೆ. ಇದು 90Hz ರಿಫ್ರೆಶ್‌ ರೇಟ್‌ ಡಿಸ್‌ಪ್ಲೇ ಹೊಂದಿದೆ. ಈ ಸ್ಮಾರ್ಟ್‌ಫೋನ್‌ ಹಿಂಬದಿಯಲ್ಲಿ ತ್ರಿವಳಿ ಕ್ಯಾಮೆರಾಗಳನ್ನು ಒಳಗೊಂಡಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 33W ಟರ್ಬೋ ಪವರ್ ವೇಗದ ಚಾರ್ಜಿಂಗ್‌ ಬೆಂಬಲಿಸಲಿದೆ. ಇನ್ನು ಮೊಟೊ G32 ಸ್ಮಾರ್ಟ್‌ಫೋನ್‌ 12,999ರೂ. ಬೆಲೆಯಲ್ಲಿ ಲಬ್ಯವಾಗಲಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಮೊಟೊ G32 ಸ್ಮಾರ್ಟ್‌ಫೋನ್‌ 6.5 ಇಂಚಿನ ಫುಲ್‌ HD+ ಎಲ್‌ಸಿಡಿ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 1,080x2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದು 90Hz ರಿಫ್ರೆಶ್ ರೇಟ್‌ ಮತ್ತು 20:9 ರಚನೆಯ ಅನುಪಾತವನ್ನು ಒಳಗೊಂಡಿದೆ. ಇನ್ನು ಈ ಡಿಸ್‌ಪ್ಲೇ 85.48 % ಸ್ಕ್ರೀನ್‌ ಟು ಬಾಡಿ ನಡುವಿನ ಅನುಪಾತವನ್ನು ಪಡೆದುಕೊಂಡಿದೆ.

ಪ್ರೊಸೆಸರ್‌ ಯಾವುದು?

ಪ್ರೊಸೆಸರ್‌ ಯಾವುದು?

ಮೊಟೊ G32 ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್ 680 SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದೆ. ಇದು ಆಂಡ್ರಾಯ್ಡ್‌ 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇದು 4GB RAM ಮತ್ತು 64GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ ಮೈಕ್ರೋ ಎಸ್‌ಡಿ ಕಾರ್ಡ್‌ ಮೂಲಕ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವುದಕ್ಕೆ ಅವಕಾಶ ಕೂಡ ನೀಡಲಾಗಿದೆ.

ಕ್ಯಾಮೆರಾ ಸೆಟ್‌ಅಪ್‌ ಎಷ್ಟಿದೆ?

ಕ್ಯಾಮೆರಾ ಸೆಟ್‌ಅಪ್‌ ಎಷ್ಟಿದೆ?

ಮೊಟೊ G32 ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಪಡೆದಿದೆ. ಇನ್ನು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್‌ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.

ಬ್ಯಾಟರಿ ಮತ್ತು ಇತರೆ ಫೀಚರ್ಸ್‌

ಬ್ಯಾಟರಿ ಮತ್ತು ಇತರೆ ಫೀಚರ್ಸ್‌

ಮೊಟೊ G32 ಸ್ಮಾರ್ಟ್‌ಫೋನ್‌ 5,000mAh ಬ್ಯಾಟರಿ ಸಾಮರ್ಥ್ಯವನ್ನು ಹೊಂದಿದೆ. ಇದು 33W ಟರ್ಬೋಪವರ್ ವೇಗದ ಚಾರ್ಜಿಂಗ್ ಟೆಕ್ನಾಲಜಿಯನ್ನು ಹೊಂದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಡ್ಯುಯಲ್-ಬ್ಯಾಂಡ್ Wi-Fi, 4G LTE, ಬ್ಲೂಟೂತ್ v5.2, 3.5mm ಹೆಡ್‌ಫೋನ್ ಪೋರ್ಟ್ ಮತ್ತು USB ಟೈಪ್-C ಅನ್ನು ಒಳಗೊಂಡಿದೆ. ಇದಲ್ಲದೆ ಫಿಂಗರ್‌ಪ್ರಿಂಟ್ ರೀಡರ್, ಪ್ರಾಕ್ಸಿಮಿಟಿ ಸೆನ್ಸಾರ್‌, ವೇಗವರ್ಧಕ, ಆಂಬಿಯೆಂಟ್‌ ಲೈಟ್‌ ಸೆನ್ಸಾರ್‌, ಗೈರೊಸ್ಕೋಪ್ ಸೆನ್ಸಾರ್‌ ಮತ್ತು ಇ-ಕಂಪಾಸ್‌ ಅನ್ನು ಒಳಗೊಂಡಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಭಾರತದಲ್ಲಿ ಮೊಟೊ G32 ಸ್ಮಾರ್ಟ್‌ಫೋನ್‌ 4GB RAM + 64GB ಸ್ಟೋರೇಜ್ ಸಾಮರ್ಥ್ಯದ ಏಕೈಕ ರೂಪಾಂತರಕ್ಕೆ 12,999ರೂ. ಬೆಲೆಯನ್ನು ಹೊಂದಿದೆ. ಇದು ಮಿನರಲ್ ಗ್ರೇ ಮತ್ತು ಸ್ಯಾಟಿನ್ ಸಿಲ್ವರ್ ಬಣ್ಣದ ಆಯ್ಕೆಗಳಲ್ಲಿ ಲಭ್ಯವಾಗಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಭಾರತದಲ್ಲಿ ಆಗಸ್ಟ್ 16 ರಿಂದ ಫ್ಲಿಪ್‌ಕಾರ್ಟ್ ಮತ್ತು ಪ್ರಮುಖ ಆಫ್‌ಲೈನ್ ಔಟ್‌ಲೆಟ್‌ಗಳಲ್ಲಿ ಖರೀದಿಗೆ ಲಭ್ಯವಾಗಲಿದೆ.

ಲಾಂಚ್‌ ಆಫರ್‌ ಏನಿದೆ?

ಲಾಂಚ್‌ ಆಫರ್‌ ಏನಿದೆ?

ಇನ್ನು ಮೊಟೊ G32 ಸ್ಮಾರ್ಟ್‌ಫೋನ್‌ ಅನ್ನು HDFC ಬ್ಯಾಂಕ್ ಕಾರ್ಡ್ ಮೂಲಕ ಖರೀದಿಸಿದರೆ 10% ಡಿಸ್ಕೌಂಟ್‌ ಪಡೆದುಕೊಳ್ಳಬಹುದು. ಇದರಿಂದ ಈ ಸ್ಮಾರ್ಟ್‌ಫೋನ್‌ ನಿಮಗೆ ಪ್ರಾರಂಭದಲ್ಲಿ ಕೇವಲ 11,749ರೂ. ಬೆಲೆಗೆ ದೊರೆಯಲಿದೆ. ಇನ್ನು ಈ ಹ್ಯಾಂಡ್‌ಸೆಟ್ ಖರೀದಿಸುವಾಗ ಜಿಯೋ ಜೊತೆಗೆ ಆಫರ್ ಕೂಡ ಲಭ್ಯವಿದೆ. ಇದರಲ್ಲಿ ಗ್ರಾಹಕರು 2,000ರೂ. ರೀಚಾರ್ಜ್‌ಗಳ ಮೇಲೆ ಕ್ಯಾಶ್‌ಬ್ಯಾಕ್ ಪಡೆದುಕೊಳ್ಳಬಹುದು. ಜೊತೆಗೆ Zee5 ವಾರ್ಷಿಕ ಚಂದಾದಾರಿಕೆಯ ಮೇಲೆ ಕೂಡ ಕ್ಯಾಶ್‌ಬ್ಯಾಕ್‌ ದೊರೆಯಲಿದೆ.

Best Mobiles in India

English summary
Moto G32 price in India has been set at Rs. 12,999 for the lone 4GB RAM + 64GB storage variant. It comes in Mineral Grey and Satin Silver colour options.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X