ಇಂದು ಮೊಟೊ G34 5G ಫಸ್ಟ್ ಸೇಲ್; ಆಫರ್ ಬೆಲೆ ತಿಳಿದ್ರೆ, ವಾವ್ ಅಂತೀರಾ!
ಮೊಟೊ ಕಂಪನಿಯು ಇತ್ತೀಚಿಗೆ ಹೊಸದಾಗಿ 'ಮೊಟೊ G34 5G' ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದ್ದು, ಭಿನ್ನ ಫೀಚರ್ಸ್‌ಗಳಿಂದ ಗ್ರಾಹಕರನ್ನು ಆಕರ್ಷಿಸಿದೆ. ಈ ಫೋನ್ ಇಂದು ಫ್ಲಿಪ್‌ಕಾರ್ಟ್ ಇ ಕಾಮರ್ಸ್ ಪ್ಲಾಟ್‌ಫಾರ್ಮ್ ಮೂಲಕ ಭಾರತದಲ್ಲಿ ಮೊದಲ ಮಾರಾಟ ಪ್ರಾರಂಭಿಸಲಿದೆ.
ಹೌದು, ಮೊಟೊ ಸಂಸ್ಥೆಯ ಇತ್ತೀಚಿನ ಮೊಟೊ G34 5G ಫೋನಿನ ಫಸ್ಟ್ ಸೇಲ್ ಇಂದು (ಜ 17) ಫ್ಲಿಪ್‌ಕಾರ್ಟ್ ಇ ಕಾಮರ್ಸ್ ಪ್ಲಾಟ್‌ಫಾರ್ಮ್ ಮೂಲಕ ಮಧ್ಯಾಹ್ನ 12 ಗಂಟೆಗೆ ಶುರುವಾಗಿಲಿದೆ. ಖರೀದಿದಾರರಿಗೆ ಫ್ಲಿಪ್‌ಕಾರ್ಟ್ ತಾಣದಲ್ಲಿ ರಿಯಾಯಿತಿ ಸಹ ಲಭ್ಯ ಆಗಿಲಿದೆ. ಅಂದಹಾಗೆ ಈ ಫೋನಿನ ಆರಂಭಿಕ 4GB + 128GB ಸ್ಟೋರೇಜ್ ವೇರಿಯಂಟ್ ಬೆಲೆಯು 10,999ರೂ. ಆಗಿದೆ.

ಇನ್ನು ಈ ಫೋನ್ ಸ್ನಾಪ್‌ಡ್ರಾಗನ್ 695 5G SoC ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್ 14 ಓಎಸ್ ಕೆಲಸ ನಿರ್ವಹಿಸಲಿದೆ. ಹಾಗೆಯೇ ಮೊಟೊ G34 5G ಫೋನಿನ ಪ್ರಾಥಮಿಕ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದಲ್ಲಿದೆ. ಇನ್ನುಳಿದಂತೆ ಮೊಟೊ G34 5G ಫೋನಿನ ಇತರೆ ಫೀಚರ್ಸ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ಮೊಟೊ G34 5G - ಫೀಚರ್ಸ್
ಮೊಟೊ G34 5G ಮೊಬೈಲ್ 6.5 ಇಂಚಿನ HD+ ಡಿಸ್‌ಪ್ಲೇ ಅನ್ನು ಹೊಂದಿದೆ. ಇದು ಪಂಚ್-ಹೋಲ್ ವಿನ್ಯಾಸದೊಂದಿಗೆ ಫ್ಲಾಟ್ ಡಿಸ್‌ಪ್ಲೇ ಎನಿಸಿಕೊಂಡಿದೆ. ಇನ್ನು ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್ ಬೆಂಬಲಿಸಲಿದ್ದು, 1600 × 720 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಅನ್ನು ಪಡೆದಿದೆ. ಇದಲ್ಲದೆ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಒಳಗೊಂಡಿದೆ.

ಮೊಟೊ G34 5G ಮೊಬೈಲ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 695 SoC ಪ್ರೊಸೆಸರ್‌ನಲ್ಲಿ ಕಾರ್ಯ ನಿರ್ವಹಿಸಲಿದೆ. ಇದು ಆಂಡ್ರಾಯ್ಡ್ 14 ಓಎಸ್ ನೊಂದಿಗೆ ಸಪೋರ್ಟ್ ಮಾಡಲಿದೆ. ಹಾಗೆಯೇ 8GB RAM ಮತ್ತು 128GB ಆಂತರೀಕ ಸ್ಟೋರೇಜ್ ಸಾಮರ್ಥ್ಯದಲ್ಲಿದೆ. ಇದಲ್ಲದೆ 8GB ವರ್ಚುವಲ್ RAM ನಿಂದ ಬೆಂಬಲಿತವಾಗಿದೆ. ಇದರೊಂದಿಗೆ ಮೈಕ್ರೊ SD ಕಾರ್ಡ್ ಮೂಲಕ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.
ಮೊಟೊ G34 5G ಮೊಬೈಲ್ ಡ್ಯುಯಲ್ ರಿಯರ್ ಕ್ಯಾಮೆರಾ ಪಡೆದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ ಹಾಗೂ ದ್ವಿತೀಯ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಮ್ಯಾಕ್ರೋ ಲೆನ್ಸ್ ಅನ್ನು ಒಳಗೊಂಡಿದೆ. ಇದಲ್ಲದೆ 16 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಪಡೆದುಕೊಂಡಿದೆ. ಇದರೊಂದಿಗೆ ಎಲ್‌ಇಡಿ ಫ್ಲ್ಯಾಷ್ ಅನ್ನು ಸಹ ನೀಡಲಾಗಿದೆ.
ಮೊಟೊ G34 5G ಮೊಬೈಲ್ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಒಳಗೊಂಡಿದ್ದು, ಇದು USB-C ಪೋರ್ಟ್ ಮೂಲಕ 18W ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಡ್ಯುಯಲ್ 4G VoLTE, Wi-Fi 802.11 ac (2.4GHz + 5GHz), ಬ್ಲೂಟೂತ್ 5, GPS, ಹೆಡ್‌ಫೋನ್ ಜ್ಯಾಕ್ ಅನ್ನು ಒಳಗೊಂಡಿದೆ.
ಇದಲ್ಲದೆ ಹೆಚ್ಚುವರಿ ಭದ್ರತೆಗಾಗಿ ಸೈಡ್-ಫೇಸಿಂಗ್ ಫಿಂಗರ್‌ಪ್ರಿಂಟ್ ಸೆನ್ಸಾರ್ ಅನ್ನು ಪಡೆದುಕೊಂಡಿದೆ. ಇದರೊಂದಿಗೆ ಆಡಿಯೊಫೈಲ್‌ಗಳಿಗಾಗಿ, ಸಾಧನವು ಡಾಲ್ಬಿ ಅಟ್ಮಾಸ್-ಟ್ಯೂನ್ಡ್ ಡ್ಯುಯಲ್ ಸ್ಟಿರಿಯೊ ಸ್ಪೀಕರ್ ಹೊಂದಿದೆ.
ಮಾರುಕಟ್ಟೆಯಲ್ಲಿ ಮೊಟೊ G34 5G ಸ್ಮಾರ್ಟ್‌ಫೋನ್ 8GB + 128GB ಆಂತರೀಕ ಸ್ಟೋರೇಜ್ ರೂಪಾಂತರದ ಆಯ್ಕೆಯನ್ನು ಪಡೆದುಕೊಂಡಿದೆ. ಅಂದಹಾಗೆ ಈ ಫೋನ್ ಸ್ಟಾರ್ ಬ್ಲ್ಯಾಕ್ ಮತ್ತು ಸೀ ಬ್ಲೂ ಕಲರ್ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ ಇದೆ. ಗ್ರಾಹಕರು ಫ್ಲಿಪ್‌ಕಾರ್ಟ್ ಮೂಲಕ ಖರೀದಿ ಮಾಡಬಹುದು.


Click it and Unblock the Notifications








