ಮಾರುಕಟ್ಟೆಯಲ್ಲಿ ಅಬ್ಬರಿಸಲು ಇಂದು ಬರ್ತಿದೆ 'ಮೊಟೊ G34 5G' ಫೋನ್!
ಜನಪ್ರಿಯ ಮೊಟೊ ಮೊಬೈಲ್ ಸಂಸ್ಥೆಯು ಈಗಾಗಲೇ ಕೆಲವು ಅತ್ಯುತ್ತಮ ಮಾದರಿಯ ಮೊಬೈಲ್‌ಗಳನ್ನು ಮಾರುಕಟ್ಟೆಗೆ ಪರಿಚಯಿಸಿ ಸೈ ಗ್ರಾಹಕರಿಂದ ಮೆಚ್ಚುಗೆ ಪಡೆದಿದೆ. ಮೊಟೊ ಸಂಸ್ಥೆಯು ಅದರ ಮುಂದುವರಿದ ಭಾಗವಾಗಿ ಭಾರತೀಯ ಮಾರುಕಟ್ಟೆಯಲ್ಲಿ ಇದೀಗ ಮೊಟೊ G34 5G ಮೊಬೈಲ್ ಬಿಡುಗಡೆ ಮಾಡಲು ರೆಡಿಯಾಗಿದೆ. ಈ ಬಹುನಿರೀಕ್ಷಿತ ಫೋನ್ ಸರಣಿಯು ಇಂದು (ಜ. 9 ರಂದು) ಲಾಂಚ್ ಆಗಲಿದೆ.
ಹೌದು, ಮೊಟೊ ಮೊಬೈಲ್ ಸಂಸ್ಥೆಯು ತನ್ನ ನೂತನ ಮೊಟೊ G34 5G ಮೊಬೈಲ್ ಅನ್ನು ಇಂದು ಫ್ಲಿಪ್‌ಕಾರ್ಟ್ ಇ ಕಾಮರ್ಸ್ ತಾಣದ ಮೂಲಕ ಭಾರತೀಯ ಮಾರಕಟ್ಟೆಗೆ ಬಿಡುಗಡೆ ಮಾಡಲಿದೆ. ಇನ್ನು ಮೊಟೊ G34 5G ಮೊಬೈಲ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 695 SoC ಪ್ರೊಸೆಸರ್‌ನಲ್ಲಿ ಕೆಲಸ ಮಾಡಲಿದೆ. ಅಂದಹಾಗೆ ಇತ್ತೀಚಿಗಷ್ಟೆ ಈ ಫೋನ್ ಚೀನಾ ಮಾರುಕಟ್ಟೆಯಲ್ಲಿ ಲಾಂಚ್ ಆಗಿದೆ.

ಇನ್ನು ಮೊಟೊ G34 5G ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ರಚನೆ ಪಡೆದಿದ್ದು, ಪ್ರಾಥಮಿಕ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದಲ್ಲಿ ಇದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್ ಒಳಗೊಂಡಿರಲಿದೆ ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.
ಮೊಟೊ G34 5G ಫೀಚರ್ಸ್ ಮಾಹಿತಿ
ಮೊಟೊ G34 5G ಮೊಬೈಲ್ 6.5 ಇಂಚಿನ HD+ ಡಿಸ್‌ಪ್ಲೇ ಅನ್ನು ಪಡೆದಿದ್ದು, ಇದು ಪಂಚ್-ಹೋಲ್ ವಿನ್ಯಾಸದೊಂದಿಗೆ ಫ್ಲಾಟ್ ಡಿಸ್‌ಪ್ಲೇ ಎನಿಸಿಕೊಂಡಿದೆ. ಇನ್ನು ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್ ಬೆಂಬಲಿಸಲಿದ್ದು, 1600 × 720 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಅನ್ನು ಪಡೆದಿದೆ. ಇದರ ಜೊತೆಗೆ ಇದಲ್ಲದೆ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಒಳಗೊಂಡಿದೆ.

ಮೊಟೊ G34 5G ಮೊಬೈಲ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 695 SoC ಪ್ರೊಸೆಸರ್‌ನಲ್ಲಿ ಕೆಲಸ ನಿರ್ವಹಿಸಲಿದ್ದು, ಇದು ಆಂಡ್ರಾಯ್ಡ್ 14 ಓಎಸ್ ಸಪೋರ್ಟ್‌ನಲ್ಲಿ ಕೆಲಸ ಮಾಡಲಿದೆ. ಹಾಗೆಯೇ 8GB RAM ಮತ್ತು 128GB ಆಂತರೀಕ ಸ್ಟೋರೇಜ್ ಸಾಮರ್ಥ್ಯದಲ್ಲಿದೆ. ಇದಲ್ಲದೆ 8GB ವರ್ಚುವಲ್ RAM ನಿಂದ ಬೆಂಬಲಿತವಾಗಿದೆ. ಇದರೊಂದಿಗೆ ಮೈಕ್ರೊ SD ಕಾರ್ಡ್ ಮೂಲಕ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.
ಮೊಟೊ G34 5G ಮೊಬೈಲ್ ಡ್ಯುಯಲ್ ರಿಯರ್ ಕ್ಯಾಮೆರಾ ರಚನೆ ಪಡೆದಿದ್ದು, ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ ಆಗಿದೆ. ಇದರ ಸೆಕೆಂಡರಿ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಮ್ಯಾಕ್ರೋ ಲೆನ್ಸ್ ಅನ್ನು ಒಳಗೊಂಡಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಪಡೆದುಕೊಂಡಿದೆ. ಇದರೊಂದಿಗೆ ಎಲ್‌ಇಡಿ ಫ್ಲ್ಯಾಷ್ ಅನ್ನು ಸಹ ಒದಗಿಸಲಾಗಿದೆ.

ಮೊಟೊ G34 5G ಮೊಬೈಲ್ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಒಳಗೊಂಡಿದೆ. ಇದು USB-C ಪೋರ್ಟ್ ಮೂಲಕ 18W ಚಾರ್ಜಿಂಗ್ ಅನ್ನು ಸಪೋರ್ಟ್ ಮಾಡಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಡ್ಯುಯಲ್ 4G VoLTE, Wi-Fi 802.11 ac (2.4GHz + 5GHz), ಬ್ಲೂಟೂತ್ 5, GPS, ಹೆಡ್‌ಫೋನ್ ಜ್ಯಾಕ್ ಅನ್ನು ಒಳಗೊಂಡಿದೆ.
ಹಾಗೆಯೇ ಈ ಫೋನ್ ಹೆಚ್ಚುವರಿ ಭದ್ರತೆಗಾಗಿ ಸೈಡ್-ಫೇಸಿಂಗ್ ಫಿಂಗರ್‌ಪ್ರಿಂಟ್ ಸೆನ್ಸಾರ್ ಅನ್ನು ಪಡೆದುಕೊಂಡಿದೆ. ಇದರೊಂದಿಗೆ ಆಡಿಯೊಫೈಲ್‌ಗಳಿಗಾಗಿ, ಸಾಧನವು ಡಾಲ್ಬಿ ಅಟ್ಮಾಸ್-ಟ್ಯೂನ್ಡ್ ಡ್ಯುಯಲ್ ಸ್ಟಿರಿಯೊ ಸ್ಪೀಕರ್ ಹೊಂದಿದೆ.
ಮೊಟೊ G34 5G ಸ್ಮಾರ್ಟ್‌ಫೋನ್ ದೇಶೀಯ ಮಾರುಕಟ್ಟೆಯಲ್ಲಿ 8GB + 128GB ಸ್ಟೋರೇಜ್ ವೇರಿಯಂಟ್ ಆಯ್ಕೆಯಲ್ಲಿ ಬಿಡುಗಡೆ ಆಗುವ ನಿರೀಕ್ಷೆಗಳಿವೆ. ಇನ್ನು ಈ ಫೋನ್ ಸ್ಟಾರ್ ಬ್ಲ್ಯಾಕ್ ಮತ್ತು ಸೀ ಬ್ಲೂ ಕಲರ್ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ ಆಗಲಿದೆ.


Click it and Unblock the Notifications








