Moto G35 5G ಬಿಡುಗಡೆಗೆ ಮುಹೂರ್ತ ಫಿಕ್ಸ್; 50MP ಕ್ಯಾಮೆರಾ.. 5000mAh ಬ್ಯಾಟರಿ.. ಕಡಿಮೆ ಬೆಲೆ!
ಮೊಟೊರೊಲಾ ಹೊಸ ಫೋನ್ ಬಿಡುಗಡೆಗೆ ಸಜ್ಜಾಗಿದೆ. ಅಧಿಕೃತ ಬಿಡುಗಡೆ ದಿನಾಂಕವನ್ನು ಸಹ ಘೋಷಿಸಿದೆ. ಹೌದು, ನೂತನ ಮೊಟೊ G35 5G (Moto G35 5G) ಮೊಬೈಲ್ ಡಿಸೆಂಬರ್ 10 ರಂದು ಭಾರತದಲ್ಲಿ ಲೋಕಾರ್ಪಣೆಗೊಳ್ಳಲಿದೆ. ಈ ಫೋನ್ ಇ-ಕಾಮರ್ಸ್ ಸೈಟ್ ಫ್ಲಿಪ್‌ಕಾರ್ಟ್ ಮತ್ತು ಮೊಟೊರೊಲಾ ಇಂಡಿಯಾ ವೆಬ್‌ಸೈಟ್ ಮೂಲಕ ಮಾರಾಟವಾಗಲಿದೆ. ಕಂಪನಿಯು, ಬಿಡುಗಡೆ ದಿನಾಂಕದ ಜೊತೆಗೆ ಪ್ರಮುಖ ವಿಶೇಷತೆಗಳನ್ನು ಬಹಿರಂಗಪಡಿಸಿದೆ. ಈಗಾಗಲೇ ಮೊಬೈಲ್ ಪ್ರಿಯರನ್ನು ಆಕರ್ಷಿಸಿದೆ. ಬನ್ನಿ, ಈ ಫೋನಿನ ಬೆಲೆ ಮತ್ತು ವೈಶಿಷ್ಟ್ಯಗಳನ್ನು ತಿಳಿಯೋಣ.
ಮೊಟೊ G35 5G ಬಜೆಟ್ ಸ್ನೇಹಿ ಸ್ಮಾರ್ಟ್‌ಫೋನ್ ಆಗಿದೆ. ಈಗಾಗಲೇ, ಫ್ಲಿಪ್‌ಕಾರ್ಟ್‌ನಲ್ಲಿ ಮೈಕ್ರೋಸೈಟ್ ಲೈವ್ ಆಗಿದೆ. ಕಂಪನಿಯು 'ಎಕ್ಸ್ಟ್ರಾ ಹೈ' ಎಂದು ಟ್ಯಾಗ್‌ಲೈನ್ ನೀಡಿದೆ. ಈ ಮೊಬೈಲ್ 50 ಮೆಗಾಪಿಕ್ಸೆಲ್ ಕ್ಯಾಮೆರಾ ಹೊಂದಿದೆ. ಇದು ಯುನಿಸೊಕ್ T760 ಪ್ರೊಸೆಸರ್‌ನಲ್ಲಿ ಕೆಲಸ ಮಾಡುತ್ತದೆ. ಫೋನಿನಲ್ಲಿ 6.72 ಇಂಚಿನ ಡಿಸ್ಪ್ಲೇ ಲಭ್ಯವಿದೆ. ಹಾಗೆಯೇ, 4GB RAM + 256GB ಸ್ಟೋರೇಜ್, 5000mAh ಬ್ಯಾಟರಿ ಮತ್ತು 18W ಫಾಸ್ಟ್ ಚಾರ್ಜಿಂಗ್ ಸೇರಿದಂತೆ ಹಲವು ವೈಶಿಷ್ಟ್ಯಗಳೊಂದಿಗೆ ಬಿಡುಗಡೆಗೆ ಸಜ್ಜಾಗಿದೆ.

ಮೊಟೊ G35 5G ಫೋನಿನ ಬೆಲೆ
ಮೊಟೊ G35 5G ಫೋನ್ ಮೂರು ಬಣ್ಣಗಳಲ್ಲಿ ಬಿಡುಗಡೆಯಾಗಲಿದೆ. ನೀವು ಹಸಿರು, ಕೆಂಪು ಮತ್ತು ಕಪ್ಪು ಬಣ್ಣದಲ್ಲಿ ಖರೀದಿಸಬಹುದು. ಕಂಪನಿಯು ಈ ಫೋನಿನ ಬೆಲೆ ಬಗ್ಗೆ ಮಾಹಿತಿ ನೀಡಿಲ್ಲ. ಜಾಗತಿಕ ಮಾರುಕಟ್ಟೆಯಲ್ಲಿ ಮೊಟೊ G35 5G ಅನ್ನು 17,700 ರೂ.ಗೆ ಬಿಡುಗಡೆ ಮಾಡಲಾಗಿದೆ. ಅಧಿಕೃತ ಬೆಲೆ ಡಿಸೆಂಬರ್ 10 ರಂದು ಬಹಿರಂಗವಾಗಲಿದೆ.
ಮೊಟೊ G35 5G ಫೋನಿನ ವೈಶಿಷ್ಟ್ಯಗಳು
ಡಿಸ್ಪ್ಲೇ ವಿವರ
ಮೊಟೊ G35 5G ಮೊಬೈಲ್ 6.72 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್ ಡಿಸ್ಪ್ಲೇಯನ್ನು ಹೊಂದಿದೆ. ಇದು ರೌಂಡ್ ಎಡ್ಜ್ ಫ್ಲಾಟ್ ಪಂಚ್ ಹೋಲ್ ಐಪಿಎಸ್ ಎಲ್‌ಸಿಡಿ ಡಿಸ್ಪ್ಲೇ ಆಗಿದೆ. ಈ ಡಿಸ್ಪ್ಲೇಯು 120Hz ರಿಫ್ರೆಶ್ ದರ ಮತ್ತು 1000 ನಿಟ್ಸ್ ಬ್ರೈಟ್‌ನೆಸ್ ಬೆಂಬಲ ಪಡೆದಿದೆ. ಇದು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 3 ರಕ್ಷಣೆ ಹೊಂದಿದೆ.
ಪ್ರೊಸೆಸರ್ ಸಾಮರ್ಥ್ಯ
ಮುಂಬರುವ ಮೊಟೊ G35 5G ಫೋನನ್ನು ಯುನಿಸೊಕ್ T760 ಪ್ರೊಸೆಸರ್‌ನೊಂದಿಗೆ ಬಿಡುಗಡೆ ಮಾಡಲಾಗುತ್ತದೆ. ಇದನ್ನು 6 ನ್ಯಾನೊಮೀಟರ್ ಫ್ಯಾಬ್ರಿಕೇಶನ್‌ಗಳಲ್ಲಿ ತಯಾರಿಸಲಾಗಿದೆ. ಈ ಸ್ಮಾರ್ಟ್‌ಫೋನ್ ಆಂಡ್ರಾಯ್ಡ್ 14 ಆಧಾರಿತ ಹಲೋ ಯುಐ ಓಎಸ್‌ನಲ್ಲಿ ಕೆಲಸ ಮಾಡುತ್ತದೆ.

ಸ್ಟೋರೇಜ್ ಆಯ್ಕೆ
ಮೊಟೊ G35 5G ಸ್ಮಾರ್ಟ್‌ಫೋನ್ 4GB RAM ನೊಂದಿಗೆ ಬಿಡುಗಡೆಯಾಗಲಿದೆ. ಇದು 128GB ಸ್ಟೋರೇಜ್ ಮತ್ತು 256GB ಸ್ಟೋರೇಜ್ ಆಯ್ಕೆ ಒಳಗೊಂಡಿದೆ. ನೀವು, ಮೈಕ್ರೋ ಎಸ್‌ಡಿ ಕಾರ್ಡ್ ಮೂಲಕ 1TB ವರೆಗಿನ ಸ್ಟೋರೇಜ್ ಹೆಚ್ಚಿಸಬಹುದು.
ಕ್ಯಾಮೆರಾ ಸೆಟಪ್
ಮೊಟೊ G35 5G ಮೊಬೈಲ್ OIS ಬೆಂಬಲದೊಂದಿಗೆ 50 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ ಹೊಂದಿದೆ. ಜೊತೆಗೆ 8 ಮೆಗಾಪಿಕ್ಸೆಲ್ ದ್ವಿತೀಯ ಕ್ಯಾಮೆರಾ ಲಭ್ಯವಿದೆ. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, ಈ ಫೋನ್ 16 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಹೊಂದಿದೆ.
ಬ್ಯಾಟರಿ ಮತ್ತು ಚಾರ್ಜಿಂಗ್
ಕಂಪನಿಯು ಮೊಟೊ G35 5G ಫೋನನ್ನು 5000mAh ಸಾಮರ್ಥ್ಯದ ಬ್ಯಾಟರಿಯೊಂದಿಗೆ ಮಾರುಕಟ್ಟೆಗೆ ಪರಿಚಯಿಸಲಿದೆ. ಈ ಫೋನ್ ಯುಎಸ್‌ಬಿ ಟೈಪ್ ಸಿ ಪೋರ್ಟ್ ಹೊಂದಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, 18W ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗಿದೆ.


Click it and Unblock the Notifications








