Home
ಸುದ್ದಿಜಾಲ

ಕಡಿಮೆ ಬೆಲೆಯಲ್ಲಿ ಲಾಂಚ್‌ ಆಯ್ತು moto g35 5G!..50MP ಕ್ಯಾಮೆರಾ ಇದೆ!

ಲೀಡಿಂಗ್‌ ಮೊಬೈಲ್‌ ಬ್ರ್ಯಾಂಡ್‌ಗಳ ಸಾಲಿನಲ್ಲಿ ಕಾಣಿಸಿಕೊಂಡಿರುವ ಮೊಟೊರೊಲಾ ಸಂಸ್ಥೆಯು ತನ್ನ G ಸರಣಿಯಲ್ಲಿ ಈಗಾಗಲೇ ಹಲವು ಮೊಬೈಲ್‌ಗಳನ್ನು ಪರಿಚಯಿಸಿದೆ. ಇದೀಗ ಈ ಸರಣಿಗೆ ಹೊಸದಾಗಿ ಮೊಟೊ g35 5G (moto g35 5G) ಸ್ಮಾರ್ಟ್‌ಫೋನ್‌ ಅನ್ನು ಸೇರ್ಪಡೆ ಮಾಡಿದೆ. ಅಂದಹಾಗೆ ಇದು ಎಂಟ್ರಿ ಲೆವೆಲ್‌ ಸ್ಮಾರ್ಟ್‌ಫೋನ್‌ ಆಗಿದ್ದು, ಇದು Unisoc T760 SoC ಚಿಪ್‌ಸೆಟ್‌ ಪ್ರೊಸೆಸರ್‌ ಪವರ್‌ ಪಡೆದಿದೆ.

ಹೌದು, ಮೊಟೊರೊಲಾ ಸಂಸ್ಥೆಯು ದೇಶಿಯ ಮಾರುಕಟ್ಟೆಯಲ್ಲಿ ಇಂದು ಮೊಟೊ g35 5G (moto g35 5G) ಫೋನ್‌ ಅನ್ನು ಬಿಡುಗಡೆ ಮಾಡಿದೆ. ಈ ಮೊಬೈಲ್‌ 4GB RAM + 128GB ಸ್ಟೋರೇಜ್‌ ಆಯ್ಕೆಯನ್ನು ಪಡೆದಿದ್ದು, ಇದರೊಂದಿಗೆ ಅನ್ನು ಪಡೆದುಕೊಂಡಿದೆ. ಹಾಗೆಯೇ 50 ಮೆಗಾ ಪಿಕ್ಸಲ್‌ ಪ್ರಾಥಮಿಕ ಕ್ಯಾಮೆರಾ ರಚನೆ ಅನ್ನು ಪಡೆದುಕೊಂಡಿದೆ.

ಕಡಿಮೆ ಬೆಲೆಯಲ್ಲಿ ಲಾಂಚ್‌ ಆಯ್ತು moto g35 5G!..50MP ಕ್ಯಾಮೆರಾ ಇದೆ!

ಇನ್ನು ಈ ಮೊಬೈಲ್‌ 120Hz ರಿಫ್ರೆಶ್‌ ರೇಟ್‌ ಸೌಲಭ್ಯ ಪಡೆದಿದ್ದು, ಹಾಗೆಯೇ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಒಳಗೊಂಡಿದೆ. ಇದರೊಂದಿಗೆ 20W ಚಾರ್ಜಿಂಗ್ ಸೌಲಭ್ಯವನ್ನು ಇದು ಪಡೆದುಕೊಂಡಿದೆ. ಹಾಗಾದರೇ ಮೊಟೊ g35 5G (moto g35 5G) ಫೋನಿನ ಇತರೆ ಫೀಚರ್ಸ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

120Hz ರಿಫ್ರೆಶ್‌ ರೇಟ್‌ ಡಿಸ್‌ಪ್ಲೇ

ಮೊಟೊ g35 5G ಮೊಬೈಲ್‌ 6.7 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಅನ್ನು ಪಡೆದುಕೊಂಡಿದ್ದು, ಈ ಡಿಸ್‌ಪ್ಲೇಯು ಉತ್ತಮ ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್ ಸಪೋರ್ಟ್‌ ಹೊಂದಿದೆ. ಇದಲ್ಲದೆ ಈ ಡಿಸ್‌ಪ್ಲೇ 120Hz ರಿಫ್ರೆಶ್‌ ರೇಟ್‌ ಹೊಂದಿದ್ದು, 240Hz ಟಚ್‌ ಸ್ಯಾಂಪಲ್‌ ರೇಟ್‌ ಸೌಲಭ್ಯ ಹೊಂದಿದೆ. ಅಲ್ಲದೇ ಡಿಸ್‌ಪ್ಲೇ 1,000nits ಬ್ರೈಟ್ನೆಸ್‌ ಹಾಗೂ ಗೊರಿಲ್ಲಾ ಗ್ಲಾಸ್‌ 3 ಪ್ರೊಟೆಕ್ಷನ್‌ ಪಡೆದಿದೆ.

ಪ್ರೊಸೆಸರ್‌ ಯಾವುದು

ಮೊಟೊ g35 5G ಮೊಬೈಲ್‌ Unisoc T760 SoC ಚಿಪ್‌ಸೆಟ್‌ ಪ್ರೊಸೆಸರ್‌ ಸಾಮರ್ಥ್ಯದಲ್ಲಿ ಕೆಲಸ ಮಾಡಲಿದ್ದು, ಇದಕ್ಕೆ ಬೆಂಬಲವಾಗಿ ಆಂಡ್ರಾಯ್ಡ್‌ 14 ಓಎಸ್‌ ಸೌಲಭ್ಯ ಇದೆ. ಹಾಗೆಯೇ ಇದು 4GB + 128GB ಆಂತರೀಕ ಸ್ಟೋರೇಜ್‌ ಆಯ್ಕೆ ಅನ್ನು ಒಳಗೊಂಡಿದೆ.

ಕ್ಯಾಮೆರಾ ಸೆನ್ಸಾರ್‌ ಮಾಹಿತಿ

ಮೊಟೊ g35 5G ಸ್ಮಾರ್ಟ್‌ಫೋನ್‌ ಡ್ಯುಯಲ್‌ ಕ್ಯಾಮೆರಾ ರಚನೆ ಅನ್ನು ಪಡೆದಿದ್ದು, ಇದರ ಮೊದಲ ಕ್ಯಾಮೆರಾ 50 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸೌಲಭ್ಯ ಪಡೆದಿದೆ. ದ್ವಿತೀಯ ಕ್ಯಾಮೆರಾವು 8 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ನಲ್ಲಿ ಇವೆ. ಇನ್ನು ಮುಂಭಾಗದಲ್ಲಿ 16 ಮೆಗಾಪಿಕ್ಸೆಲ್‌ ಸೆನ್ಸಾರ್‌ನ ಸೆಲ್ಫಿ ಕ್ಯಾಮೆರಾ ಒದಗಿಸಲಾಗಿದೆ.

ಬಿಗ್‌ ಬ್ಯಾಟರಿ ಸೌಲಭ್ಯ

ಮೊಟೊ g35 5G ಮೊಬೈಲ್ 5000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಹೊಂದಿದ್ದು, ಇದು ಹೈಲೈಟ್‌ ಫೀಚರ್‌ ಎನಿಸಿದೆ. ಇದಕ್ಕೆ ಪೂರಕವಾಗಿ 20W ಚಾರ್ಜಿಂಗ್ ಸೌಲಭ್ಯ ಸಹ ಒದಗಿಸಲಾಗಿದೆ. ಇದಲ್ಲದೇ ಕನೆಕ್ಟಿವಿಟಿ ಸೌಲಭ್ಯಗಳಲ್ಲಿ 5G, Wi-Fi, ಬ್ಲೂಟೂತ್ 5.3, NFC, GPS ಮತ್ತು USB ಟೈಪ್-C ಪೋರ್ಟ್ ಸೇರಿವೆ. ಇದು Dolby Atmos ಆಡಿಯೋ, ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸರ್‌ ಸೌಲಭ್ಯ, ಅಕ್ಸೆಲೆರೊಮೀಟರ್, ಆಂಬಿಯೆಂಟ್ ಲೈಟ್, ಗೈರೊಸ್ಕೋಪ್, SAR ಸೆನ್ಸಾರ್‌ಗಳನ್ನು ಪಡೆದಿದೆ.

ಬೆಲೆ ಹಾಗೂ ಲಭ್ಯತೆ

ಮೊಟೊ g35 5G ಮೊಬೈಲ್ 4GB + 128GB ಸ್ಟೋರೇಜ್‌ ಬೆಲೆಯು 9,999ರೂ. ಆಗಿದೆ. ಇನ್ನು ಈ ಫೋನ್‌ ಗುವಾ ರೆಡ್, ಲೀಫ್ ಗ್ರೀನ್ ಮತ್ತು ಮಿಡ್‌ನೈಟ್ ಬ್ಲ್ಯಾಕ್ ಬಣ್ಣಗಳ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ. ಇನ್ನು ಈ ಫೋನ್‌ ಇದೇ ಡಿಸೆಂಬರ್‌ 16 ರಂದು ಮಾರಾಟ ಶುರು ಮಾಡಲಿದ್ದು, ಫ್ಲಿಪ್‌ಕಾರ್ಟ್ ಮತ್ತು ಅಧಿಕೃತ ಮೊಟೊರೊಲಾ ವೆಬ್‌ಸೈಟ್‌ ಸ್ಟೋರ್ ಮೂಲಕ ಖರೀದಿಗೆ ಲಭ್ಯ ಆಗಲಿದೆ.

Best Mobiles in India

English summary
Moto g35 5G launched in India. Check out Price, offer, Specifications and more.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+