ಸಿಹಿಸುದ್ದಿ.. 10,000ಕ್ಕಿಂತ ಕಡಿಮೆ! 1TB ಸ್ಟೋರೇಜ್.. 50MP ಕ್ಯಾಮೆರಾ.. ಬರ್ತಿದೆ ಹೊಸ Moto ಫೋನ್!
ಮತ್ತೊಂದು ಮೊಟೊ ಹೊಸ ಫೋನ್ ಮಾರುಕಟ್ಟೆಗೆ ಬರಲಿದೆ. ಇದು 10,000 ರೂ.ಗಿಂತ ಕಡಿಮೆ ಬೆಲೆಯಲ್ಲಿ ಗ್ರಾಹಕರ ಕೈ ಸೇರಲಿದೆ. ಹೌದು, ಮೊಟೊ G35 5G (Moto G35 5G) ಸ್ಮಾರ್ಟ್‌ಫೋನ್ ಡಿಸೆಂಬರ್ 10 ರಂದು ಭಾರತದಲ್ಲಿ ಬಿಡುಗಡೆಯಾಗಲಿದೆ. ಕಂಪನಿಯು ಈಗಾಗಲೇ, ಫೋನಿನ ಪ್ರಮುಖ ವಿಶೇಷತೆಗಳನ್ನು ಬಹಿರಂಗಪಡಿಸಿದೆ. ಇದೀಗ, ಈ ಮೊಬೈಲ್‌ನ ಬೆಲೆ ಕೂಡ ಬಹಿರಂಗವಾಗಿದೆ. ಇದು ಕಡಿಮೆ ಬಜೆಟ್ ಸ್ಮಾರ್ಟ್‌ಫೋನ್ ಆಗಿದ್ದು, ಸ್ಟೈಲಿಶ್ ಲುಕ್ ಮತ್ತು ಆಕರ್ಷಕ ವೈಶಿಷ್ಟ್ಯಗಳನ್ನು ಹೊಂದಿದೆ. ಈ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.
ಹೌದು, ಮೊಟೊ G35 5G ಫೋನ್ ಡಿ.10 ರಂದು ಮಧ್ಯಾಹ್ನ 12 ಗಂಟೆಗೆ ಬಿಡುಗಡೆಯಾಗಲಿದೆ. ನೀವು, ಅಗ್ಗದ ಬೆಲೆಯಲ್ಲಿ 5G ಫೋನ್ ಖರೀದಿಸಲು ಬಯಸಿದರೆ, ಇದು ಉತ್ತಮ ಆಯ್ಕೆಯಾಗಿದೆ. ಈ ಸ್ಮಾರ್ಟ್‌ಫೋನ್ 50 ಮೆಗಾಪಿಕ್ಸೆಲ್ ಕ್ಯಾಮೆರಾ ಹೊಂದಿದೆ. ಇದು ಯುನಿಸೊಕ್ T760 ಪ್ರೊಸೆಸರ್‌ನಲ್ಲಿ ಕೆಲಸ ಮಾಡುತ್ತದೆ. ಫೋನಿನಲ್ಲಿ 6.72 ಇಂಚಿನ ಡಿಸ್ಪ್ಲೇ ಲಭ್ಯವಿದೆ. ಹಾಗೆಯೇ, 256GB ಸ್ಟೋರೇಜ್, 5000mAh ಬ್ಯಾಟರಿ ಮತ್ತು 20W ಫಾಸ್ಟ್ ಚಾರ್ಜಿಂಗ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ.

ಮೊಟೊ G35 5G ಬೆಲೆ ಎಷ್ಟಿರಲಿದೆ?
ಮೊಟೊ G35 5G ಮೊಬೈಲ್ 10 ಸಾವಿರ ರೂ.ಗಿಂತ ಕಡಿಮೆ ಬೆಲೆಯಲ್ಲಿ ಖರೀದಿಗೆ ಲಭ್ಯವಿರುತ್ತದೆ. ಫೋನಿನ 4GB + 128GB ಸ್ಟೋರೇಜ್ ರೂಪಾಂತರವನ್ನು ಜಾಗತಿಕ ಮಾರುಕಟ್ಟೆಯಲ್ಲಿ 17,700 ರೂ.ಗೆ ಬಿಡುಗಡೆ ಮಾಡಲಾಗಿದೆ. ಆದರೆ, ಭಾರತದಲ್ಲಿ ಕೇವಲ 10,999 ರೂ. ಬೆಲೆಯನ್ನು ಹೊಂದಿರಲಿದೆ. ಬಿಡುಗಡೆಯ ಬಳಿಕ ಫ್ಲಿಪ್‌ಕಾರ್ಟ್ ಮೂಲಕ ಮಾರಾಟವಾಗಲಿದೆ. ನೀವು ಕಪ್ಪು, ಹಸಿರು ಮತ್ತು ಕೆಂಪು ಬಣ್ಣಗಳಲ್ಲಿ ಈ ಫೋನನ್ನು ಖರೀದಿಸಬಹುದು.
ಈ ಸುದ್ದಿ ಓದಿದ್ದೀರಾ?: ವಿವೋ ಪ್ರಿಯರಿಗೆ ಸಿಹಿಸುದ್ದಿ.. ಈ 5G ಫೋನಿಗೆ ಭಾರೀ ರಿಯಾಯಿತಿ.. ಈಗ ಬಿಟ್ಟರೆ ಮತ್ತೆ ಸಿಗಲ್ಲ!
ಮೊಟೊ G35 5G ವೈಶಿಷ್ಟ್ಯಗಳು
ಡಿಸ್ಪ್ಲೇ ಹೇಗಿರಲಿದೆ
ಮೊಟೊ G35 5G ಫೋನ್ 6.72 ಇಂಚಿನ ಡಿಸ್ಪ್ಲೇ ಹೊಂದಿದೆ. ಇದು ಪೂರ್ಣ ಹೆಚ್‌ಡಿ ಪ್ಲಸ್ ಐಪಿಎಸ್ ಎಲ್‌ಸಿಡಿ ಡಿಸ್ಪ್ಲೇ ಆಗಿದೆ. ಡಿಸ್ಪ್ಲೇಯು 120Hz ರಿಫ್ರೆಶ್ ದರ ಮತ್ತು 1,000 ನಿಟ್ಸ್ ಬ್ರೈಟ್‌ನೆಸ್ ಬೆಂಬಲ ಹೊಂದಿದೆ. ಇದು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 3 ರಕ್ಷಣೆ ಪಡೆದಿದೆ.
ಪ್ರೊಸೆಸರ್ ಯಾವುದು?
ಕಂಪನಿಯು ಮೊಟೊ G35 5G ಮೊಬೈಲ್ ಅನ್ನು ಯುನಿಸೊಕ್ T760 ಪ್ರೊಸೆಸರ್‌ನೊಂದಿಗೆ ಬಿಡುಗಡೆ ಮಾಡಲಿದೆ. ಇದನ್ನು 6 ನ್ಯಾನೊಮೀಟರ್ ಫ್ಯಾಬ್ರಿಕೇಶನ್‌ಗಳಲ್ಲಿ ತಯಾರಿಸಲಾಗಿದೆ. ಈ ಸ್ಮಾರ್ಟ್‌ಫೋನ್ ಆಂಡ್ರಾಯ್ಡ್ 14 ಆಧಾರಿತ ಹಲೋ ಯುಐ ಓಎಸ್‌ನಲ್ಲಿ ಕೆಲಸ ಮಾಡುತ್ತದೆ. ಮೊಟೊ G34 5G ಫೋನ್ ಸ್ನಾಪ್‌ಡ್ರಾಗನ್ 695 ಪ್ರೊಸೆಸರ್ ಹೊಂದಿದೆ.

ಸ್ಟೋರೇಜ್ ಆಯ್ಕೆ
ಮೊಟೊ G35 5G ಸ್ಮಾರ್ಟ್‌ಫೋನ್ 4GB RAM ಹೊಂದಿದೆ. ಇದರಲ್ಲಿ 128GB ಸ್ಟೋರೇಜ್ ಮತ್ತು 256GB ಸ್ಟೋರೇಜ್ ಆಯ್ಕೆ ಲಭ್ಯವಿರುತ್ತದೆ. ಮೈಕ್ರೋ ಎಸ್‌ಡಿ ಕಾರ್ಡ್ ಮೂಲಕ 1TB ವರೆಗಿನ ಸ್ಟೋರೇಜ್ ಹೆಚ್ಚಿಸಬಹುದು.
16MP ಸೆಲ್ಫಿ ಕ್ಯಾಮೆರಾ
ಮೊಟೊ G35 5G ಮೊಬೈಲ್ OIS ಜೊತೆಗೆ 50 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ ಹೊಂದಿದೆ. ಇದರಲ್ಲಿ 8 ಮೆಗಾಪಿಕ್ಸೆಲ್ ದ್ವಿತೀಯ ಕ್ಯಾಮೆರಾ ಇರಲಿದೆ. ಈ ಫೋನ್ ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, 16 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಹೊಂದಿದೆ.
ಅದ್ಭುತ ಬ್ಯಾಟರಿ ಬ್ಯಾಕಪ್
ಮುಂಬರುವ ಮೊಟೊ G35 5G ಫೋನ್ 5000mAh ಸಾಮರ್ಥ್ಯದ ಬ್ಯಾಟರಿಯೊಂದಿಗೆ ಬಿಡುಗಡೆಯಾಗಲಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, 20W ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗಿದೆ. ಈ ಫೋನ್ ಯುಎಸ್‌ಬಿ ಟೈಪ್ ಸಿ ಪೋರ್ಟ್ ಹೊಂದಿದೆ.


Click it and Unblock the Notifications








