ನಾಳೆ Moto G35 5G ಲಾಂಚ್; 10 ಸಾವಿರಕ್ಕಿಂತ ಕಡಿಮೆ ಬೆಲೆ.. ವಿಶೇಷತೆಗಳೇನು?
ಮೊಟೊರೊಲಾ ಭಾರತದಲ್ಲಿ ಹೊಸ ಫೋನ್ ಬಿಡುಗಡೆಗೆ ಸಜ್ಜಾಗಿದೆ. ಇದು ಮೊಟೊ G35 5G (Moto G35 5G) ಹೆಸರಿನೊಂದಿಗೆ ಮಾರುಕಟ್ಟೆಗೆ ಲಗ್ಗೆ ಇಡಲಿದೆ. ಹೌದು, ಕಂಪನಿಯು ನಾಳೆ (ಡಿಸೆಂಬರ್ 10) ಮೊಟೊ G35 5G ಅನ್ನು ಅಧಿಕೃತವಾಗಿ ಅನಾವರಣಗೊಳಿಸಲಿದೆ. ವಿಶೇಷವೆಂದರೆ, ಈ ಮೊಬೈಲ್ 10 ಸಾವಿರ ರೂ.ಗಿಂತ ಕಡಿಮೆ ಬೆಲೆಯನ್ನು ಹೊಂದಿರಲಿದೆ. ಇದು ಕಡಿಮೆ ಬಜೆಟ್ ಸ್ಮಾರ್ಟ್‌ಫೋನ್ ಆಗಿದ್ದರೂ, ತನ್ನ ಸ್ಟೈಲಿಶ್ ಲುಕ್ ಮತ್ತು ಅತ್ಯಾಕರ್ಷಕ ವೈಶಿಷ್ಟ್ಯಗಳೊಂದಿಗೆ ಮೊಬೈಲ್ ಪ್ರಿಯರನ್ನು ಸೆಳೆಯುತ್ತಿದೆ.
ಮೊಟೊ G35 5G ಮೊಬೈಲ್ ಎರಡು ಸ್ಟೋರೇಜ್ ರೂಪಾಂತರಗಳಲ್ಲಿ ಬಿಡುಗಡೆಯಾಗಲಿದೆ. ನೀವು ಕಪ್ಪು, ಹಸಿರು ಮತ್ತು ಕೆಂಪು ಬಣ್ಣಗಳಲ್ಲಿ ಈ ಫೋನನ್ನು ಖರೀದಿಸಬಹುದು. ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಕ್ಯಾಮೆರಾ ಮತ್ತು 16 ಮೆಗಾಪಿಕ್ಸೆಲ್ ಸೆಲ್ಫಿ ಶೂಟರ್ ಲಭ್ಯವಿರುತ್ತದೆ. ಇದು ಯುನಿಸೊಕ್ T760 ಪ್ರೊಸೆಸರ್‌ನಲ್ಲಿ ಕೆಲಸ ಮಾಡುತ್ತದೆ. ಜೊತೆಗೆ 6.72 ಇಂಚಿನ ಡಿಸ್ಪ್ಲೇ, 256GB ಸ್ಟೋರೇಜ್, 5000mAh ಬ್ಯಾಟರಿ ಮತ್ತು 20W ಫಾಸ್ಟ್ ಚಾರ್ಜಿಂಗ್ ಸೇರಿದಂತೆ ಹಲವು ವೈಶಿಷ್ಟ್ಯಗಳು ಲಭ್ಯವಿರುತ್ತವೆ.

ಮೊಟೊ G35 5G ಬೆಲೆ (ನಿರೀಕ್ಷಿತ)
ಕಂಪನಿಯು ಡಿಸೆಂಬರ್ 10 ರಂದು (ನಾಳೆ) ಮಧ್ಯಾಹ್ನ 12 ಗಂಟೆಗೆ ಮೊಟೊ G35 5G ಅನ್ನು ಅದ್ದೂರಿಯಾಗಿ ಬಿಡುಗಡೆ ಮಾಡಲಿದೆ. ಅಗ್ಗದ ಬೆಲೆಯಲ್ಲಿ 5G ಫೋನ್ ಖರೀದಿಸುವ ಗ್ರಾಹಕರಿಗೆ ಇದು ಉತ್ತಮ ಆಯ್ಕೆಯಾಗಿದೆ. ಈ ಮೊಬೈಲ್ 10,000ಕ್ಕಿಂತ ಕಡಿಮೆ ಬೆಲೆಯಲ್ಲಿ ಖರೀದಿಗೆ ಲಭ್ಯವಿರುತ್ತದೆ. ಈಗಾಗಲೇ, ಫೋನಿನ 4GB + 128GB ಸ್ಟೋರೇಜ್ ರೂಪಾಂತರವು ಜಾಗತಿಕ ಮಾರುಕಟ್ಟೆಯಲ್ಲಿ 17,700 ರೂ.ಗೆ ಮಾರಾಟವಾಗುತ್ತಿದೆ. ಭಾರತದಲ್ಲಿ ಕೇವಲ 10,999 ರೂ. ಬೆಲೆಗೆ ಮಾರಾಟವಾಗುವ ಸಾಧ್ಯತೆಯಿದೆ. ಬಿಡುಗಡೆಯ ಬಳಿಕ ನೀವು, ಫ್ಲಿಪ್‌ಕಾರ್ಟ್‌ನಲ್ಲಿ ಕೊಳ್ಳಬಹುದು.
ಮೊಟೊ G35 5G ವೈಶಿಷ್ಟ್ಯಗಳು
ಡಿಸ್ಪ್ಲೇ ವಿವರ
ಮೊಟೊ G35 5G ಮೊಬೈಲ್ 6.72 ಇಂಚಿನ ಡಿಸ್ಪ್ಲೇ ಹೊಂದಿದೆ. ಇದು ಪೂರ್ಣ ಹೆಚ್‌ಡಿ ಪ್ಲಸ್ ಐಪಿಎಸ್ ಎಲ್‌ಸಿಡಿ ಡಿಸ್ಪ್ಲೇ ಆಗಿದೆ. ಡಿಸ್ಪ್ಲೇಯು 1000 ನಿಟ್ಸ್ ಬ್ರೈಟ್‌ನೆಸ್ ಮತ್ತು 120Hz ರಿಫ್ರೆಶ್ ದರದ ಬೆಂಬಲ ಹೊಂದಿದೆ. ಇದು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 3 ರಕ್ಷಣೆ ಪಡೆದಿದೆ.
ಪ್ರೊಸೆಸರ್ ಸಾಮರ್ಥ್ಯ
ಮೊಟೊ G35 5G ಫೋನ್ ಯುನಿಸೊಕ್ T760 ಪ್ರೊಸೆಸರ್‌ನೊಂದಿಗೆ ಬಿಡುಗಡೆಯಾಗಲಿದೆ. ಇದನ್ನು 6 ನ್ಯಾನೊಮೀಟರ್ ಫ್ಯಾಬ್ರಿಕೇಶನ್‌ಗಳಲ್ಲಿ ತಯಾರಿಸಲಾಗಿದೆ. ಈ ಸ್ಮಾರ್ಟ್‌ಫೋನ್ ಆಂಡ್ರಾಯ್ಡ್ 14 ಆಧಾರಿತ ಹಲೋ ಯುಐ ಓಎಸ್‌ನಲ್ಲಿ ಕೆಲಸ ನಿರ್ವಹಿಸಲಿದೆ. ಮೊಟೊ G34 5G ಫೋನ್ ಸ್ನಾಪ್‌ಡ್ರಾಗನ್ 695 ಪ್ರೊಸೆಸರ್‌ನೊಂದಿಗೆ ಬಿಡುಗಡೆಯಾಗಿದೆ.
ಸ್ಟೋರೇಜ್ ಆಯ್ಕೆ
ಮುಂಬರುವ ಮೊಟೊ G35 5G ಸ್ಮಾರ್ಟ್‌ಫೋನ್ 4GB RAM ಹೊಂದಿದೆ. ಇದರಲ್ಲಿ 128GB ಸ್ಟೋರೇಜ್ ಮತ್ತು 256GB ಸ್ಟೋರೇಜ್ ಆಯ್ಕೆ ಲಭ್ಯವಿರುತ್ತದೆ. ಮೈಕ್ರೋ ಎಸ್‌ಡಿ ಕಾರ್ಡ್ ಮೂಲಕ 1TB ವರೆಗೆ ಸ್ಟೋರೇಜ್ ಹೆಚ್ಚಿಸಬಹುದು.
ಕ್ಯಾಮೆರಾ ಸೆಟಪ್
ಮೊಟೊ G35 5G ಫೋನ್ OIS ಜೊತೆಗೆ 50 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ ಹೊಂದಿದೆ. ಇದರಲ್ಲಿ 8 ಮೆಗಾಪಿಕ್ಸೆಲ್ ದ್ವಿತೀಯ ಕ್ಯಾಮೆರಾ ಇರಲಿದೆ. ಈ ಫೋನ್ ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, 16 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಹೊಂದಿದೆ.
ಬ್ಯಾಟರಿ ಮತ್ತು ಚಾರ್ಜಿಂಗ್
ಮೊಟೊ G35 5G ಮೊಬೈಲ್ 5000mAh ಸಾಮರ್ಥ್ಯದ ಬ್ಯಾಟರಿಯೊಂದಿಗೆ ಬಿಡುಗಡೆಯಾಗಲಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, 20W ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗಿದೆ. ಈ ಫೋನ್ ಯುಎಸ್‌ಬಿ ಟೈಪ್ ಸಿ ಪೋರ್ಟ್ ಹೊಂದಿದೆ.


Click it and Unblock the Notifications








