Home
ಸುದ್ದಿಜಾಲ

ಭಾರತದಲ್ಲಿ ಬಜೆಟ್‌ ದರದಲ್ಲಿ ಮೊಟೊ G40 ಸ್ಮಾರ್ಟ್‌ಫೋನ್ ಬಿಡುಗಡೆ!

ಪ್ರತಿಷ್ಠಿತ ಮೊಬೈಲ್ ತಯಾರಿಕಾ ಸಂಸ್ಥೆಗಳಲ್ಲಿ ಒಂದಾದ ಮೊಟೊರೊಲಾ ಕಂಪೆನಿಯ ತನ್ನ ಬಹುನಿರೀಕ್ಷಿತ ಮೊಟೊ G60 ಮತ್ತು G40 ಸ್ಮಾರ್ಟ್‌ಫೋನ್‌ಗಳನ್ನು ಅನ್ನು ಭಾರತದಲ್ಲಿ ಇಂದು (ಏ. 20) ಬಿಡುಗಡೆ ಮಾಡಿದೆ. ಅವುಗಳಲ್ಲಿ ಮೊಟೊ G40 ಫ್ಯೂಷನ್ ಸ್ಮಾರ್ಟ್‌ಫೋನ್ ಬಜೆಟ್‌ ಪ್ರೈಸ್‌ಟ್ಯಾಗ್‌ನಲ್ಲಿ ಕಾಣಿಸಿಕೊಂಡಿದ್ದು, ಆಕರ್ಷಕ ಫೀಚರ್ಸ್‌ಗಳನ್ನು ಒಳಗೊಂಡದೆ. ಮುಖ್ಯವಾಗಿ ಸ್ನ್ಯಾಪ್‌ಡ್ರಾಗನ್ 732G SoC ಪ್ರೊಸೆಸರ್‌ ಹಾಗೂ ಟ್ರಿಪಲ್ ಕ್ಯಾಮೆರಾ ಆಯ್ಕೆ ಪ್ಲಸ್‌ ಪಾಯಿಂಟ್ ಆಗಿದೆ.

ದೇಶಿಯ

ಹೌದು, ಮೊಟೊರೊಲಾ ಕಂಪೆನಿ ನೂತನವಾಗಿ ಮೊಟೊ G40 ಫ್ಯೂಷನ್ ಸ್ಮಾರ್ಟ್‌ಫೋನ್‌ ಅನ್ನು ದೇಶಿಯ ಮಾರುಕಟ್ಟೆಯಲ್ಲಿ ಲಾಂಚ್ ಮಾಡಿದೆ. ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದಿದ್ದು, ಮುಖ್ಯ ಕ್ಯಾಮೆರಾವು 64ಎಂಪಿ ಸೆನ್ಸಾರ್‌ನಲ್ಲಿದೆ. ಇದರೊಂದಿಗೆ 6,000mAh ಬ್ಯಾಟರಿ ಬಾಳಿಕೆ ಪಡೆದಿರುವುದು ಮತ್ತೊಂದು ಹೈಲೈಟ್‌ ಆಗಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್‌ ಒಳಗೊಂಡಿದೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಡಿಸ್‌ಪ್ಲೇ ರಚನೆ ಹೇಗಿದೆ

ಡಿಸ್‌ಪ್ಲೇ ರಚನೆ ಹೇಗಿದೆ

ಮೊಟೊ G40 ಫ್ಯೂಷನ್ ಸ್ಮಾರ್ಟ್‌ಫೋನ್‌ 1080x2460 ಪಿಕ್ಸಲ್ ರೆಸಲ್ಯೂಶನ್ ಸಫೋರ್ಟ್‌ ಪಡೆದಿದ್ದು, 6.8 ಇಂಚಿನ ಪೂರ್ಣ ಹೆಚ್‌ಡಿ ಡಿಸ್‌ಪ್ಲೇ ಪಡೆದಿದೆ. ಡಿಸ್‌ಪ್ಲೇಯು 120Hz ರಿಫ್ರೆಶ್ ರೇಟ್‌ ಅನ್ನು ಹೊಂದಿದೆ. ಹಾಗೆಯೇ ಈ ಫೋನ್ ಡಿಸ್‌ಪ್ಲೇಯು HDR10 ಸಪೋರ್ಟ್‌ ಸಹ ಪಡೆದಿದೆ.

ಪ್ರೊಸೆಸರ್‌ ಕಾರ್ಯವೇನು

ಪ್ರೊಸೆಸರ್‌ ಕಾರ್ಯವೇನು

ಮೊಟೊ G40 ಫ್ಯೂಷನ್ ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್ಡ್ರಾಗನ್ 732G SoC ಪ್ರೊಸೆಸರ್‌ ವೇಗವನ್ನು ಹೊಂದಿದೆ. ಅಲ್ಲದೆ ಆಂಡ್ರಾಯ್ಡ್‌ 11 ಓಎಸ್‌ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ ಈ ಸ್ಮಾರ್ಟ್‌ಫೋನ್‌ 4GB RAM + 64GB ಮತ್ತು 6GB + 128GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆಗಳನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್‌ ಮೆಮೊರಿ ಕಾರ್ಡ್‌ ಮೂಲಕ ಸಂಗ್ರಹ ವಿಸ್ತರಣೆಗೆ ಅವಕಾಶ ನೀಡಿದೆ.

ಟ್ರಿಪಲ್ ಪಲ್ ಕ್ಯಾಮೆರಾ ರಚನೆ

ಟ್ರಿಪಲ್ ಪಲ್ ಕ್ಯಾಮೆರಾ ರಚನೆ

ಮೊಟೊ G40 ಫ್ಯೂಷನ್ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64ಎಂಪಿ ಸೆನ್ಸಾರ್‌ನಲ್ಲಿದೆ. ಎರಡನೇ ಕ್ಯಾಮೆರಾ 8 ಮೆಗಾ ಪಿಕ್ಸೆಲ್ ಸೆನ್ಸಾರ್‌ನಲ್ಲಿದೆ. ಮೂರನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಟೆಲಿಫೋಟೋ ಶೂಟರ್ ಹಾಗೂ ನಾಲ್ಕನೇ ಬೇಸಿಕ್ ಕ್ಯಾಮೆರಾ ಸೆನ್ಸಾರ್‌ ಅನ್ನು ಹೊಂದಿದೆ. ಇದರೊಂದಿಗೆ ಸೆಲ್ಫಿ ಕ್ಯಾಮೆರಾ 16 ಎಂಪಿ ಸೆನ್ಸಾರ್‌ನಲ್ಲಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಮೊಟೊ G40 ಫ್ಯೂಷನ್ ಸ್ಮಾರ್ಟ್‌ಫೋನ್‌ 6,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದೆ. ಹಾಗೆಯೇ 20W ಸಾಮರ್ಥ್ಯದ ಟರ್ಬೋ ಪವರ್ ಫಾಸ್ಟ್‌ ಚಾರ್ಜಿಂಗ್ ಸೌಲಭ್ಯವನ್ನು ಪಡೆದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4 ಜಿ, ವೈ-ಫೈ, ಬ್ಲೂಟೂತ್ 5.0, ಎನ್‌ಎಫ್‌ಸಿ, ಜಿಪಿಎಸ್, 3.5 ಎಂಎಂ ಹೆಡ್‌ಫೋನ್ ಜ್ಯಾಕ್ ಮತ್ತು ಯುಎಸ್‌ಬಿ ಟೈಪ್-ಸಿ ಪೋರ್ಟ್ ಸೇರಿವೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಮೊಟೊ G40 ಫ್ಯೂಷನ್ ಸ್ಮಾರ್ಟ್‌ಫೋನ್‌ 4GB RAM + 64GB ಸ್ಟೋರೇಜ್‌ ವೇರಿಯಂಟ್‌ ಬೆಲೆಯು ಭಾರತದಲ್ಲಿ 13,999 ರೂ. ಆಗಿದೆ. ಹಾಗೆಯೇ 6GB + 128GB ವೇರಿಯಂಟ್ ದರವು 15,999ರೂ. ಆಗಿದೆ. ಇನ್ನು ಈ ಫೋನ್ ಡೈನಾಮಿಕ್ ಗ್ರೇ ಹಾಗೂ ಫ್ರೋಸ್ಟರ್ ಕ್ಯಾಂಪೆನ್ ಬಣ್ಣಗಳ ಆಯ್ಕೆಗಳನ್ನು ಹೊಂದಿದೆ. ಇನ್ನು ಈ ಫೋನ್ ಇದೇ ಮೇ 1 ರಂದು ಫ್ಲಿಪ್‌ಕಾರ್ಟ್‌ ತಾಣದ ಮೂಲಕ ಮೊದಲ ಸೇಲ್ ಶುರು ಮಾಡಲಿದೆ.

Best Mobiles in India

English summary
The new Moto G60 is priced in India at Rs. 17,999 for the 6GB + 128GB storage model.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+