Home
ಸುದ್ದಿಜಾಲ

ಭಾರತದಲ್ಲಿ ಮೋಟೋ G42 ಬಿಡುಗಡೆ! 30 ಗಂಟೆಗಳ ಬ್ಯಾಟರಿ ಬ್ಯಾಕ್‌ಅಪ್‌!

ಮೊಟೊರೊಲಾ ಕಂಪೆನಿಯ ಸ್ಮಾರ್ಟ್‌ಫೋನ್‌ಗಳು ಮಾರುಕಟ್ಟೆಯಲ್ಲಿ ತನ್ನದೇ ಆದ ಜನಪ್ರಿಯತೆಯನ್ನು ಪಡೆದುಕೊಂಡಿವೆ. ವಿಭಿನ್ನ ಮಾದರಿಯ ಸ್ಟೈಲಿಶ್‌ ಲುಕ್‌ ಹಾಗೂ ವಿನ್ಯಾಸದ ಕಾರಣಕ್ಕೆ ಗಮನ ಸೆಳೆದಿವೆ. ಇನ್ನು ಭಾರತದ ಮಾರುಕಟ್ಟೆಯಲ್ಲೂ ಕೂಡ ಮೊಟೊರೊಲಾ ಕಂಪೆನಿ ಪ್ರಸಿದ್ಧಿಯನ್ನು ಪಡೆದುಕೊಂಡಿದೆ. ಈಗಾಗಲೇ ಹಲವು ಆಯ್ಕೆಯ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿದೆ. ಸದ್ಯ ಇದೀಗ ಭಾರತದಲ್ಲಿ ಹೊಸ ಮೋಟೋ G42 ಸ್ಮಾರ್ಟ್‌ಫೋನ್‌ ಲಾಂಚ್‌ ಮಾಡಿದೆ. ಈ ಸ್ಮಾರ್ಟ್‌ಫೋನ್‌ ಮೋಟೋ G41 ಫೋನಿನ ಉತ್ತರಾಧಿಕಾರಿಯಾಗಿದೆ.

ಮೊಟೊರೊಲಾ

ಹೌದು, ಮೊಟೊರೊಲಾ ಕಂಪೆನಿ ಭಾರತದಲ್ಲಿ ಹೊಸ ಮೋಟೋ G42 ಫೋನ್‌ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್‌ 60Hz ರಿಫ್ರೆಶ್‌ ರೇಟ್‌ ಬೆಂಬಲಿಸುವ ಅಮೋಲೆಡ್‌ ಡಿಸ್‌ಪ್ಲೇ ಹೊಂದಿದೆ. ಇದು ಆಕ್ಟಾ-ಕೋರ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 680 SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಒಳಗೊಂಡಿದೆ. ಜೊತೆಗೆ 20W ವೇಗದ ಚಾರ್ಜಿಂಗ್ ಬೆಂಬಲಿಸುವ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಪಡೆದಿದೆ.

ಮೊಟೊರೊಲಾ

ಮೊಟೊರೊಲಾ ಕಂಪೆನಿಯ ಹೊಸ ಮೋಟೋ G42 ಸ್ಮಾರ್ಟ್‌ಫೋನ್‌ 30 ಗಂಟೆಗಳ ಬ್ಯಾಕಪ್‌ ಅನ್ನು ನೀಡಲಿದೆ. ಇದು ಡ್ಯುಯಲ್‌ ಸ್ಟಿರಿಯೊ ಸ್ಪೀಕರ್‌ಗಳನ್ನು ಹೊಂದಿದ್ದು, ಡಾಲ್ಬಿ ಅಟ್ಮೋಸ್‌ ಬೆಂಬಲವನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ನಲ್ಲಿ ನೀವು ಮೈಕ್ರೋ ಎಸ್‌ಡಿ ಕಾರ್ಡ್‌ ಮೂಲಕ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವ ಆಯ್ಕೆಯನ್ನು ನೀಡಲಾಗಿದೆ. ಮೋಟೋ G42 ಸ್ಮಾರ್ಟ್‌ಫೋನ್‌ 13,999ರೂ.ಆರಂಭಿಕ ಬೆಲೆಯನ್ನು ಹೊಂದಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನಿನ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಮೋಟೋ G42 ಸ್ಮಾರ್ಟ್‌ಫೋನ್‌ 6.4 ಇಂಚಿನ ಫುಲ್‌ ಹೆಚ್‌ಡಿ+ ಅಮೋಲೆಡ್‌ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 1,080x2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಅನ್ನು ಹೊಂದಿದೆ. ಜೊತೆಗೆ ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಪಡೆದಿದೆ. ಇದಲ್ಲದೆ 60Hz ರಿಪ್ರೆಶ್‌ ರೇಟ್‌ ಅನ್ನು ಬೆಂಬಲಿಸಲಿದೆ. ಈ ಫೋನಿನ ಡಿಸ್‌ಪ್ಲೇ ಸ್ಕ್ರೀನ್‌ ಟು ಬಾಡಿ ನಡುವಿನ ಅನುಪಾತ 83.9% ಆಗಿದೆ. ಇದು 411 ಪಿಪಿಐ ಸಾಂದ್ರತೆಯನ್ನು ಹೊಂದಿದೆ.

ಪ್ರೊಸೆಸರ್‌ ಯಾವುದು?

ಪ್ರೊಸೆಸರ್‌ ಯಾವುದು?

ಮೋಟೋ G42 ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 680 SoC ಪ್ರೊಸೆಸರ್‌ ಅನ್ನು ಹೊಂದಿದೆ. ಇದು ಆಂಡ್ರಾಯ್ಡ್ 12 ನಲ್ಲಿ ಕಾಯರ್ಯನಿರ್ವಹಿಸಲಿದೆ. ಈ ಫೋನ್‌ ಆಂಡ್ರೆನೊ 610 GPU ಸಪೋರ್ಟ್‌ ಹೊಂದಿದೆ. ಹಾಗೆಯೇ 4GB RAM ಮತ್ತು 64GB ಆನ್‌ಬೋರ್ಡ್ uMCP ಸ್ಟೋರೇಜ್ ಅನ್ನು ಹೊಂದಿದೆ. ಇದಲ್ಲದೆ ಮೆಮೊರಿ ಕಾರ್ಡ್‌ ಬಳಸಿ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಿಕೊಳ್ಳುವುದಕ್ಕೆ ಅವಕಾಶ ನೀಡಲಾಗಿದೆ.

ಕ್ಯಾಮೆರಾ ಹೇಗಿದೆ?

ಕ್ಯಾಮೆರಾ ಹೇಗಿದೆ?

ಇದು ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ f/1.8 ಲೆನ್ಸ್‌ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಲೆನ್ಸ್‌ ಹೊಂದಿದೆ. ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್‌ ಮೈಕ್ರೊ ಲೆನ್ಸ್‌ ಅನ್ನು ಹೊಂದಿದೆ. ಇದಲ್ಲದೆ ವೀಡಿಯೊ ಕರೆ ಹಾಗೂ ಸೆಲ್ಫಿಗಾಗಿ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ನೀಡಲಾಗಿದೆ. ಇದು f/2.2 ಲೆನ್ಸ್‌ನೊಂದಿಗೆ ಬರುತ್ತದೆ.

ಬ್ಯಾಟರಿ ಸಾಮರ್ಥ್ಯ

ಬ್ಯಾಟರಿ ಸಾಮರ್ಥ್ಯ

ಮೋಟೋ G42 ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 20W ಟರ್ಬೊಪವರ್‌ ವೇಗದ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ. ಈ ಬ್ಯಾಟರಿ ಸಿಂಗಲ್‌ ಚಾರ್ಜ್‌ನಲ್ಲಿ 30 ಗಂಟೆಗಳ ಬ್ಯಾಕಪ್ ಅನ್ನು ನೀಡಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G LTE, Wi-Fi 802.11ac, ಬ್ಲೂಟೂತ್ v5.0, FM ರೇಡಿಯೋ, GPS/ A-GPS, NFC, USB ಟೈಪ್-C, ಮತ್ತು 3.5mm ಹೆಡ್‌ಫೋನ್ ಜ್ಯಾಕ್ ಅನ್ನು ಒಳಗೊಂಡಿದೆ.

ಇತರೆ ಫೀಚರ್ಸ್‌

ಇತರೆ ಫೀಚರ್ಸ್‌

ಇದಲ್ಲದೆ ಅಕ್ಸಿಲೆರೊಮೀಟರ್, ಆಂಬಿಯೆಂಟ್ ಲೈಟ್ ಸೆನ್ಸಾರ್‌, ಗೈರೊಸ್ಕೋಪ್ ಸೆನ್ಸಾರ್‌, ಮ್ಯಾಗ್ನೆಟೋಮೀಟರ್ ಮತ್ತು ಪ್ರಾಕ್ಸಿಮಿಟಿ ಸೆನ್ಸಾರ್‌ ಅನ್ನು ಒಳಗೊಂಡಿದೆ. ಈ ಸ್ಮಾರ್ಟ್‌ಫೋನ್ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್‌ನೊಂದಿಗೆ ಬರುತ್ತದೆ. ಇದು ಡ್ಯುಯಲ್ ಸ್ಟಿರಿಯೊ ಸ್ಪೀಕರ್‌ಗಳನ್ನು ಹೊಂದಿದ್ದು, ಡಾಲ್ಬಿ ಅಟ್ಮೋಸ್‌ ಅನ್ನು ಬೆಂಬಲಿಸಲಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್ IP52-ರೇಟೆಡ್ ವಾಟರ್-ರೆಪೆಲ್ಲೆಂಟ್ ಬಿಲ್ಡ್ ಅನ್ನು ಹೊಂದಿದೆ. ಈ ಫೋನ್‌ನಲ್ಲಿ My UX ಫೀಚರ್ಸ್‌ ನೀಡಲಾಗಿದ್ದು, ಇದರ ಮೂಲಕ ನಿಮ್ಮ ಡಿವೈಸ್‌ ಅನ್ನು ನೀವು ಸನ್ನೆಗಳ ಮೂಲಕ ಕಂಟ್ರೋಲ್‌ ಮಾಡಬಹುದಾಗಿದೆ. ಜೊತೆಗೆ ಎಂಟರ್‌ಟೈನ್‌ಮೆಂಟ್‌ ಅನ್ನು ಕಸ್ಟ್‌ಮೈಸ್‌ ಮಾಡುವುದಕ್ಕೆ ಕೂಡ ಸಾದ್ಯವಾಗಲಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಭಾರತದಲ್ಲಿ ಮೋಟೋ G42 ಸ್ಮಾರ್ಟ್‌ಫೋನ್‌ 4GB RAM + 64GB ಸ್ಟೋರೇಜ್ ರೂಪಾಂತರದ ಆಯ್ಕೆಗೆ 13,999ರೂ. ಬೆಲೆ ಹೊಂದಿದೆ. ಈ ಸ್ಮಾರ್ಟ್‌ಫೋನ್‌ ಅಟ್ಲಾಂಟಿಕ್ ಗ್ರೀನ್ ಮತ್ತು ಮೆಟಾಲಿಕ್ ರೋಸ್ ಬಣ್ಣಗಳ ಆಯ್ಕೆಯಲ್ಲಿ ಬರುತ್ತದೆ. ಇನ್ನು ಈ ಫೋನ್‌ ಇದೇ ಜುಲೈ 11 ರಿಂದ ಫ್ಲಿಪ್‌ಕಾರ್ಟ್ ಮತ್ತು ದೇಶದ ಆಯ್ದ ರಿಟೇಲ್‌ ಸ್ಟೋರ್‌ಗಳ ಮೂಲಕ ಫಸ್ಟ್‌ ಸೇಲ್‌ ನಡೆಸಲಿದೆ.

ಲಾಂಚ್‌ ಆಫರ್‌ ಏನಿದೆ?

ಲಾಂಚ್‌ ಆಫರ್‌ ಏನಿದೆ?

ಮೋಟೋ G42 ಸ್ಮಾರ್ಟ್‌ಫೋನ್‌ ಲಾಂಚ್‌ ಆಫರ್‌ನಲ್ಲಿ ನಿಮಗೆ 1,000ರೂ.ವರೆಗೆ ರಿಯಾಯಿತಿ ದೊರೆಯಲಿದೆ. ಇದು SBI ಕಾರ್ಡ್‌ಗಳನ್ನು ಬಳಸುವ ಗ್ರಾಹಕರಿಗೆ ಅನ್ವಯಿಸುತ್ತದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್ 2,549 ರೂ ಮೌಲ್ಯದ ಪ್ರಯೋಜನಗಳನ್ನು ಸಹ ನೀಡಲಿದೆ. ಅಂದರೆ ಜಿಯೋ ಬಳಕೆದಾರರು ಈ ಸ್ಮಾರ್ಟ್‌ಫೋನ್‌ ಖರೀದಿಸಿದರೆ 419ರೂ ಬೆಲೆಯ ಪ್ಲಾನ್‌ ಲಭ್ಯವಾಗಲಿದೆ. ಇನ್ನು ಫ್ಲಿಪ್‌ಕಾರ್ಟ್‌ ಆಕ್ಸಿಸ್‌ ಬ್ಯಾಕ್‌ ಕಾರ್ಡ್‌ ಮೂಲಕ ಖರೀದಿಸಿದರೆ ನಿಮಗೆ ಬ್ಯಾಂಕ್ 5% ಕ್ಯಾಶ್‌ಬ್ಯಾಕ್ ಆಫರ್ ನೀಡಲಿದೆ. ಇದರೊಂದಿಗೆ ಫ್ಲಿಪ್‌ಕಾರ್ಟ್‌ನ ಪೇ ಲೇಟರ್‌ ಮೂಲಕ ಖರೀದಿಸಿದರೆ ನಿಮಗೆ 100 ಮೌಲ್ಯದ ಫ್ಲಿಪ್‌ಕಾರ್ಟ್ ಗಿಫ್ಟ್ ಕಾರ್ಡ್ ದೊರೆಯಲಿದೆ.

Best Mobiles in India

English summary
The new smartphone comes as Motorola's latest model in the budget segment.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+