ಆಯ್ದ ಮಾರುಕಟ್ಟೆಗಳಲ್ಲಿ ಮೋಟೋ G42 ಸ್ಮಾರ್ಟ್‌ಫೋನ್‌ ಅನಾವರಣ! ಫೀಚರ್ಸ್‌ ಹೇಗಿದೆ?

|

ಟೆಕ್‌ ಮಾರುಕಟ್ಟೆಯಲ್ಲಿ ಬಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳಿಗೆ ಮೊಟೊರೊಲಾ ಕಂಪೆನಿ ಸೈ ಎನಿಸಿಕೊಂಡಿದೆ. ಈಗಾಗಲೇ ಹಲವು ಆಕರ್ಷಕ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಸ್ಮಾರ್ಟ್‌ಫೋನ್‌ ಪ್ರಿಯರ ಗಮನ ಸೆಳೆದಿದೆ. ಸದ್ಯ ಇದೀಗ ತನ್ನ ಹೊಸ ಮೋಟೋ G42 ಸ್ಮಾರ್ಟ್‌ಫೋನ್‌ ಲಾಂಚ್‌ ಮಾಡಿದೆ. ಈ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಒಳಗೊಂಡಿದೆ. ಇದು ಕ್ವಾಡ್ ಪಿಕ್ಸೆಲ್ ಟೆಕ್ನಾಲಜಿಯನ್ನು ಬೆಂಬಲಿಸಲಿದೆ.

ಮೊಟೊರೊಲಾ

ಹೌದು, ಮೊಟೊರೊಲಾ ಕಂಪೆನಿ ಹೊಸ ಮೋಟೋ G42 ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 680 4G SoC ಪ್ರೊಸೆಸರ್‌ ಸಾಮರ್ಥ್ಯವನ್ನು ಹೊಂದಿದೆ. ಇದು ಡಾಲ್ಬಿ ಅಟ್ಮೋಸ್‌ ಬೆಂಬಲಿಸುವ ಡ್ಯುಯಲ್‌ ಸ್ಟಿರಿಯೊ ಸ್ಪೀಕರ್‌ ಸೆಟಪ್‌ ಅನ್ನು ಒಳಗೊಂಡಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, ಟರ್ಬೋಪವರ್ ಫಾಸ್ಟ್ ಚಾರ್ಜಿಂಗ್ ಬೆಂಬಲಿಸಲಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಮೋಟೋ G42 ಸ್ಮಾರ್ಟ್‌ಫೋನ್‌ 6.4 ಇಂಚಿನ ಹೆಚ್‌ಡಿ ಪ್ಲಸ್‌ OLED ಡಿಸ್‌ಪ್ಲೇಯನ್ನು ಹೊಂದಿದೆ. ಇದು 2,400 x 1,080 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಒಳಗೊಂಡಿದೆ. ಇದು SGS ಪ್ರಮಾಣೀಕೃತ ಕಡಿಮೆ ನೀಲಿ ಬೆಳಕಿನ ಹೊರಸೂಸುವಿಕೆಯೊಂದಿಗೆ ಬಳಕೆದಾರರ ಕಣ್ಣುಗಳನ್ನು ರಕ್ಷಿಸಲು ನೈಟ್ ಮೋಡ್ ಅನ್ನು ಹೊಂದಿದೆ.

ಪ್ರೊಸೆಸರ್‌ ಯಾವುದು?

ಪ್ರೊಸೆಸರ್‌ ಯಾವುದು?

ಇನ್ನು ಈ ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 680 ಪ್ರೊಸೆಸರ್‌ ಅನ್ನು ಒಳಗೊಂಡಿದೆ. ಇದು ಆಂಡ್ರಾಯ್ಡ್‌ 12 ನ ಇತ್ತೀಚಿನ ಆವೃತ್ತಿಯ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 4GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಅನ್ನು ಬೆಂಬಲಿಸಲಿದೆ. ಇದಲ್ಲದೆ ಮೆಮೊರಿ ಕಾರ್ಡ್‌ ಬೆಂಬಲದೊಂದಿಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವುದಕ್ಕೆ ಅವಕಾಶ ಲಭ್ಯವಾಗಲಿದೆ.

ಕ್ಯಾಮೆರಾ ಯಾವುದು?

ಕ್ಯಾಮೆರಾ ಯಾವುದು?

ಇದು ಮೋಟೋ G42 ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಇನ್ನು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಡೆಪ್ತ್ ಸೆನ್ಸಾರ್‌ ಅನ್ನು ಹೊಂದಿದೆ. ಇದು ಕ್ವಾಡ್ ಪಿಕ್ಸೆಲ್ ಟೆಕ್ನಾಲಜಿಯನ್ನು ಹೊಂದಿದೆ. ಜೊತೆಗೆ ಲೋ ಲೈಟ್‌ ಸ್ಟೇಟಸ್‌ನಲ್ಲಿ ಫೋಟೋಗಳನ್ನು ಕ್ಲಿಕ್ ಮಾಡಲು ನೈಟ್ ವಿಷನ್ ಮೋಡ್ ಅನ್ನು ಒಳಗೊಂಡಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಮೋಟೋ G42 ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, ಟರ್ಬೋಪವರ್ ಫಾಸ್ಟ್ ಚಾರ್ಜಿಂಗ್ ಬೆಂಬಲದೊಂದಿಗೆ ಬರುತ್ತದೆ. ಒಟ್ಟಾರೆ ಬ್ಯಾಟರಿ ಕಾರ್ಯಕ್ಷಮತೆಯಲ್ಲಿ 20 ಪ್ರತಿಶತದಷ್ಟು ವರ್ಧಕವನ್ನು ನೀಡುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ಬ್ಲೂಟೂತ್‌, ವೈಫೈ ಯನ್ನು ಬೆಂಬಲಿಸಲಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್‌ ಡಾಲ್ಬಿ ಅಟ್ಮೋಸ್‌ ಬೆಂಬಲದೊಂದಿಗೆ ಡ್ಯುಯಲ್ ಸ್ಟಿರಿಯೊ ಸ್ಪೀಕರ್ ಸೆಟಪ್ ಅನ್ನು ಹೊಂದಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಮೊಟೊರೊಲಾ ಕಂಪೆನಿ ಬಿಡುಗಡೆ ಮಾಡಿರುವ ಹೊಸ ಮೋಟೋ G42 ಫೋನ್‌ ಮುಂಬರುವ ದಿನಗಳಲ್ಲಿ ಬ್ರೆಜಿಲ್‌ನಲ್ಲಿ ಲಭ್ಯವಿರುತ್ತದೆ ಎಂದು ಘೋಷಿಸಿದೆ. ಇದು ಮುಂಬರುವ ವಾರಗಳಲ್ಲಿ ಯುರೋಪ್, ಲ್ಯಾಟಿನ್ ಅಮೇರಿಕಾ, ಏಷ್ಯಾ, ಭಾರತ ಮತ್ತು ಮಧ್ಯಪ್ರಾಚ್ಯದ ಆಯ್ದ ಮಾರುಕಟ್ಟೆಗಳಲ್ಲಿ ಅನಾವರಣಗೊಳ್ಳಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಮಾರುಕಟ್ಟೆಯಲ್ಲಿ ಯಾವ ಬೆಲೆ ಹೊಂದಿದೆ ಎಂಬುದರ ಬಗ್ಗೆ ಇನ್ನು ಯಾವುದೇ ಮಾಹಿತಿ ಬಹಿರಂಗವಾಗಿಲ್ಲ.

Best Mobiles in India

Read more about:
English summary
Moto G42 With 5,000mAh Battery Launched:specifications

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X