Home
ಸುದ್ದಿಜಾಲ

ಇಂದು ಮೊಟೊ G51 5G ಸ್ಮಾರ್ಟ್‌ಫೋನ್‌ ಮೊದಲ ಸೇಲ್!..ಆಫರ್ ಇದೆಯಾ?

ಮೊಟೊರೊಲಾ ಸಂಸ್ಥೆಯು ಭಾರತದಲ್ಲಿ ಹೊಸದಾಗಿ ಬಿಡುಗಡೆ ಮಾಡಿರುವ ಮೊಟೊ G51 5G ಸ್ಮಾರ್ಟ್‌ಫೋನ್ ಆಕರ್ಷಕ ಫೀಚರ್ಸ್‌ಗಳಿಂದ ಈಗಾಗಲೇ ಗ್ರಾಹಕರನ್ನು ಸೆಳೆದಿದೆ. ಈ ಸ್ಮಾರ್ಟ್‌ಫೋನ್‌ ಮೊದಲ ಮಾರಾಟ ಇಂದು ಮಧ್ಯಾಹ್ನ 12 ರಿಂದ ಇ ಕಾಮರ್ಸ್‌ ತಾಣ ಫ್ಲಿಪ್‌ಕಾರ್ಟ್‌ ತಾಣದಲ್ಲಿ ಮಾರಾಟ ಪ್ರಾರಂಭವಾಗಲಿದೆ. ಇನ್ನು ನೂತನ ಮೊಟೊ G51 5G ಸ್ಮಾರ್ಟ್‌ಫೋನ್ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 480 ಪ್ಲಸ್‌ SoC ಪ್ರೊಸೆಸರ್‌ ಅನ್ನು ಹೊಂದಿದೆ.

ಹೊಂದಿದ್ದು

ಮೊಟೊರೊಲಾ ಕಂಪೆನಿ ನೂತನವಾಗಿ ಮೊಟೊ G51 5G ಸ್ಮಾರ್ಟ್‌ಫೋನ್‌ ಮೊದಲ ಮಾರಾಟ ಇಂದು (ಡಿ.16) ನಡೆಯಲಿದೆ. ಈ ಫೋನ್ 4GB RAM + 64GB ವೇರಿಯಂಟ್ ಆಯ್ಕೆ ಹೊಂದಿದ್ದು, ಹಾಗೆಯೇ ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟ್‌ಅಪ್ ಹೊಂದಿದೆ. ಜೊತೆಗೆ ಈ ಫೋನ್ ಆಕ್ವಾ ಬ್ಲೂ ಮತ್ತು ಇಂಡಿಗೋ ಬ್ಲೂ ಬಣ್ಣಗಳ ಆಯ್ಕೆ ಅನ್ನು ಒಳಗೊಂಡಿದೆ. ಹಾಗಾದರೇ ಮೊಟೊ G51 5G ಸ್ಮಾರ್ಟ್‌ಫೋನಿನ ಫೀಚರ್ಸ್‌ಗಳು ಹೇಗಿವೆ ಮತ್ತು ಬೆಲೆ ಎಷ್ಟು? ಎಂಬುದನ್ನು ತಿಳಿಯಲು ಮುಂದೆ ಓದಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಮೊಟೊ G51 5G ಸ್ಮಾರ್ಟ್‌ಫೋನ್‌ 1,080 x 2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.8-ಇಂಚಿನ ಫುಲ್‌ HD+ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ ಮ್ಯಾಕ್ಸ್ ವಿಷನ್ ಡಿಸ್‌ಪ್ಲೇ ಆಗಿದೆ. ಇದು 20:9 ರಚನೆಯ ಅನುಪಾತವನ್ನು ಹೊಂದಿದ್ದು, 120Hz ರಿಫ್ರೆಶ್ ರೆಟ್‌ ಅನ್ನು ಒಳಗೊಂಡಿದೆ.

ಪ್ರೊಸೆಸರ್‌ ಪವರ್ ಯಾವುದು

ಪ್ರೊಸೆಸರ್‌ ಪವರ್ ಯಾವುದು

ಮೊಟೊ G51 5G ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 480 ಪ್ಲಸ್‌ SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದೆ. ಇದು ಆಂಡ್ರಾಯ್ಡ್‌11 ನಲ್ಲಿ My UX ಬೆಂಬಲದೊಂದಿಗೆ ಕಾರ್ಯ ನಿರ್ವಹಿಸಲಿದೆ. ಹಾಗೆಯೇ 4GB RAM ಮತ್ತು 64GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ.

ಟ್ರಿಪಲ್ ಕ್ಯಾಮೆರಾ ಸೆನ್ಸಾರ್

ಟ್ರಿಪಲ್ ಕ್ಯಾಮೆರಾ ಸೆನ್ಸಾರ್

ಮೊಟೊ G51 5G ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ f/1.8 ಲೆನ್ಸ್‌ ಹೊಂದಿದೆ. ಎರಡನೇ ಕ್ಯಾಮೆರಾ 8 ಮೆಗಾ ಪಿಕ್ಸೆಲ್ ಅಲ್ಟ್ರಾ ವೈಡ್ ಮತ್ತು ಡೆಪ್ತ್ ಶೂಟರ್ ಹಾಗೂ ಮೂರನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಮ್ಯಾಕ್ರೋ ಶೂಟರ್ ಅನ್ನು ಹೊಂದಿದೆ. ಇದಲ್ಲದೆ 13 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು

ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು

ಮೊಟೊ G51 5G ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 20W ರಾಪಿಡ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 802.11ac, ಬ್ಲೂಟೂತ್ v5.1, GPS/ A-GPS, NFC, FM ರೇಡಿಯೋ, USB ಟೈಪ್-C, ಮತ್ತು 3.5mm ಹೆಡ್‌ಫೋನ್ ಜ್ಯಾಕ್ ಬೆಂಬಲಿಸಲಿದೆ. ಇದಲ್ಲದೆ ಅಕ್ಸೆಲೆರೊಮೀಟರ್, ಆಂಬಿಯೆಂಟ್ ಲೈಟ್, ಗೈರೊಸ್ಕೋಪ್, ಮ್ಯಾಗ್ನೆಟೋಮೀಟರ್ ಮತ್ತು ಪ್ರಾಕ್ಸಿಮಿಟಿ ಸೆನ್ಸಾರ್‌ ಅನ್ನು ಒಳಗೊಂಡಿದೆ. ಇನ್ನು ಈ ಫೋನ್‌ 170.47x76.54x9.13mm ಅಳತೆ ಮತ್ತು 208 ಗ್ರಾಂ ತೂಕವನ್ನು ಪಡೆದಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಭಾರತದಲ್ಲಿ ಮೊಟೊ G51 5G ಸ್ಮಾರ್ಟ್‌ಫೋನ್‌ 4GB RAM + 64GB ಇಂಟರ್‌ ಸ್ಟೋರೇಜ್ ಆಯ್ಕೆಗೆ 14,999ರೂ. ಬೆಲೆಯನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್ ಆಕ್ವಾ ಬ್ಲೂ ಮತ್ತು ಇಂಡಿಗೊ ಬ್ಲೂ ಬಣ್ಣಗಳ ಆಯ್ಕೆ ಪಡೆದಿದೆ. ಇದು ಇಂದು ಡಿಸೆಂಬರ್ 16 ರಂದು ಮಧ್ಯಾಹ್ನ 12 ಗಂಟೆಗೆ (ಮಧ್ಯಾಹ್ನ) ಫ್ಲಿಪ್‌ಕಾರ್ಟ್ ಮಾರಾಟ ಶುರು ಮಾಡಲಿದೆ. ಇನ್ನು ಫ್ಲಿಪ್‌ಕಾರ್ಟ್ ಮೊಟೊ G51 5G ಫೋನ್‌ಗೆ EMI ಯೋಜನೆ ಆಕರ್ಷಕ ನೀಡಿದೆ. ಆರಂಭಿಕ ಇಎಮ್ಐ 520 ರೂ. ಆಗಿದೆ. ಜೊತೆಗೆ ಮೊಟೊ ಹ್ಯಾಂಡ್‌ಸೆಟ್‌ನಲ್ಲಿ 12 ತಿಂಗಳ ವಾರಂಟಿ ಮತ್ತು ಬಿಡಿಭಾಗಗಳ ಮೇಲೆ ಆರು ತಿಂಗಳ ವಾರಂಟಿಯನ್ನು ನೀಡಲಾಗುತ್ತದೆ.

Best Mobiles in India

English summary
Moto G51 5G to Go on Sale for the First Time in India Today: Price, Offer.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+