Just In
- 5 hrs ago
ಜಬ್ರೋನಿಕ್ಸ್ ಡ್ರಿಪ್ ಸ್ಮಾರ್ಟ್ವಾಚ್ ಬಿಡುಗಡೆ! ಲಾಂಗ್ ಬ್ಯಾಟರಿ ಬ್ಯಾಕ್ಅಪ್ ವಿಶೇಷ!
- 7 hrs ago
ಡಿಜಿಟಲ್ ಇಂಡಿಯಾಗಾಗಿ ನಾಲ್ಕು ಹೊಸ ಯೋಜನೆಗಳನ್ನು ಪರಿಚಯಿಸಿದ ಪ್ರಧಾನಿ ಮೋದಿ!
- 8 hrs ago
ಭಾರತದಲ್ಲಿ ಬಹುನಿರೀಕ್ಷಿತ ಐಫೋನ್ 14 ಪ್ರೊ ಬೆಲೆ ಎಷ್ಟಿರಬಹುದು?..ಫೀಚರ್ಸ್ ಏನು?
- 10 hrs ago
ಸಾರ್ವಜನಿಕರೇ ನಿಮ್ಮ ಮನೆ ಮೇಲೆ ಮೊಬೈಲ್ ಟವರ್ ಹಾಕಿಸುವ ಮುನ್ನ ಎಚ್ಚರ?
Don't Miss
- Sports
ಇಂಗ್ಲೆಂಡ್ ವಿರುದ್ಧದ ಹೀನಾಯ ಸೋಲು, ಟೀಂ ಇಂಡಿಯಾಗೆ ನೋವುಂಟು ಮಾಡಿದೆ: ಇರ್ಫಾನ್ ಪಠಾಣ್
- News
ಯುಎಪಿಎ ಅಡಿ ಯಾವುದೇ ವಕ್ತಿಯನ್ನು ವಿಚಾರಣೆಗೊಳಪಡಿಸಬಹುದು-ಹೈಕೋರ್ಟ್ ಆದೇಶ
- Movies
ಹಿಂದಿಗೆ ಹೋಗುತ್ತಿದೆ ಏಳು ವರ್ಷ ಹಳೆಯ ಕನ್ನಡ ಸಿನಿಮಾ: ಅಕ್ಷಯ್-ಶಾಹಿದ್ ನಡುವೆ ಪೈಪೋಟಿ!
- Finance
ಸರ್ವೀಸ್ ಚಾರ್ಜ್ ಬಗ್ಗೆ ಗ್ರಾಹಕರು ದೂರು ನೀಡುವುದು ಹೇಗೆ?
- Lifestyle
ಯಾರೂ ಇಲ್ಲದಿದ್ದಾಗ ಪುರುಷ ಈ ರೀತಿ ವಿಲಕ್ಷಣವಾಗಿ ವರ್ತಿಸುತ್ತಾನೆ, ಗೊತ್ತಾ? ಇದನ್ನು ಓದಿದ್ರೆ ನೀವು ಶಾಕ್ ಆಗೋದು ಪಕ್ಕಾ!
- Automobiles
ದೇಶದ ಮೊದಲ 150kWh ಡಿಸಿ ಇವಿ ಫಾಸ್ಟ್ ಚಾರ್ಜರ್ ಸ್ಥಾಪಿಸಿದ ಕಿಯಾ ಇಂಡಿಯಾ
- Education
Karnataka Second PUC Results 2022 : ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಉತ್ತರ ಪತ್ರಿಕೆಯ ಪ್ರತಿಗಳು ಜು.6ರಿಂದ ಲಭ್ಯ
- Travel
ಸೂರ್ಯ, ಅಲೆಗಳು ಮತ್ತು ಮರಳು ಇವುಗಳ ಸಮ್ಮಿಲನ ಕಡಲತೀರದ ಪಟ್ಟಣ - ಮಲ್ಪೆ
ಭಾರತದಲ್ಲಿ ಮೋಟೋ G51 5G ಸ್ಮಾರ್ಟ್ಫೋನ್ ಬಿಡುಗಡೆ! ಬೆಲೆ ಎಷ್ಟು?
ಭಾರತದ ಸ್ಮಾರ್ಟ್ಫೋನ್ ಮಾರುಕಟ್ಟೆಯಲ್ಲಿ ಮೊಟೊರೊಲಾ ಕಂಪೆನಿ ಭಿನ್ನ ಮಾದರಿಯ ಸ್ಮಾರ್ಟ್ಫೋನ್ಗಳಿಗೆ ಹೆಸರುವಾಸಿಯಾಗಿದೆ. ಈಗಾಗಲೇ ಹಲವು ಆಕರ್ಷಕ ಸ್ಮಾರ್ಟ್ಫೋನ್ಗಳನ್ನು ಪರಿಚಯಿಸಿ ತನ್ನ ಸ್ಥಾನ ಭದ್ರಪಡಿಸಿಕೊಂಡಿದೆ. ಸದ್ಯ ಇದೀಗ ಭಾರತದಲ್ಲಿ ಹೊಸ ಮೋಟೋ G51 5G ಸ್ಮಾರ್ಟ್ಫೋನ್ ಅನ್ನು ಲಾಂಚ್ ಮಾಡಿದೆ. ಇನ್ನು ಈ ಸ್ಮಾರ್ಟ್ಫೋನ್ ಮೊಟೊರೊಲಾ ಭಾರತದಲ್ಲಿ ಪರಿಚಯಿಸಿರುವ ಅತ್ಯಂತ ಕಡಿಮೆ ಬೆಲೆಯಲ್ಲಿ ಕೈಗೆಟುಕುವ 5G ಫೋನ್ ಆಗಿದೆ.
ಹೌದು, ಮೊಟೊರೊಲಾ ಕಂಪೆನಿ ಹೊಸ ಮೋಟೋ G51 5G ಸ್ಮಾರ್ಟ್ಫೋನ್ ಬಿಡುಗಡೆ ಮಾಡಿದೆ. ಇನ್ನು ಈ ಸ್ಮಾರ್ಟ್ಫೋನ್ ಕ್ವಾಲ್ಕಾಮ್ ಸ್ನಾಪ್ಡ್ರಾಗನ್ 480 ಪ್ಲಸ್ SoC ಪ್ರೊಸೆಸರ್ ಬಲವನ್ನು ಪಡೆದುಕೊಂಡಿದೆ. ಇದು 120Hz ಡಿಸ್ಪ್ಲೇಯನ್ನು ಹೊಂದಿದ್ದು, ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಜೊತೆಗೆ ಈ ಸ್ಮಾರ್ಟ್ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 20W ರಾಪಿಡ್ ಚಾರ್ಜಿಂಗ್ ಬೆಂಬಲಿಸಲಿದೆ. ಹಾಗಾದ್ರೆ ಈ ಸ್ಮಾರ್ಟ್ಫೋನ್ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್ಪ್ಲೇ ರಚನೆ ಮತ್ತು ವಿನ್ಯಾಸ
ಮೋಟೋ G51 5G ಸ್ಮಾರ್ಟ್ಫೋನ್ 1,080 x 2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.8-ಇಂಚಿನ ಫುಲ್ HD+ ಡಿಸ್ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್ಪ್ಲೇ ಮ್ಯಾಕ್ಸ್ ವಿಷನ್ ಡಿಸ್ಪ್ಲೇ ಆಗಿದೆ. ಇದು 20:9 ರಚನೆಯ ಅನುಪಾತವನ್ನು ಹೊಂದಿದ್ದು, 120Hz ರಿಫ್ರೆಶ್ ರೆಟ್ ಅನ್ನು ಒಳಗೊಂಡಿದೆ.

ಪ್ರೊಸೆಸರ್ ಯಾವುದು?
ಮೋಟೋ G51 5G ಸ್ಮಾರ್ಟ್ಫೋನ್ ಕ್ವಾಲ್ಕಾಮ್ ಸ್ನಾಪ್ಡ್ರಾಗನ್ 480 ಪ್ಲಸ್ SoC ಪ್ರೊಸೆಸರ್ ಬಲವನ್ನು ಪಡೆದುಕೊಂಡಿದೆ. ಇದು ಆಂಡ್ರಾಯ್ಡ್11 ನಲ್ಲಿ My UX ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 4GB RAM ಮತ್ತು 64GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಪಡೆದುಕೊಂಡಿದೆ.

ಕ್ಯಾಮೆರಾ ವಿಶೇಷ
ಇನ್ನು ಈ ಸ್ಮಾರ್ಟ್ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ f/1.8 ಲೆನ್ಸ್ ಹೊಂದಿದೆ. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಮತ್ತು ಡೆಪ್ತ್ ಶೂಟರ್ ಹಾಗೂ ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಶೂಟರ್ ಅನ್ನು ಹೊಂದಿದೆ. ಇದಲ್ಲದೆ 13 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ
ಮೋಟೋ G51 5G ಸ್ಮಾರ್ಟ್ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 20W ರಾಪಿಡ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 802.11ac, ಬ್ಲೂಟೂತ್ v5.1, GPS/ A-GPS, NFC, FM ರೇಡಿಯೋ, USB ಟೈಪ್-C, ಮತ್ತು 3.5mm ಹೆಡ್ಫೋನ್ ಜ್ಯಾಕ್ ಬೆಂಬಲಿಸಲಿದೆ. ಇದಲ್ಲದೆ ಅಕ್ಸೆಲೆರೊಮೀಟರ್, ಆಂಬಿಯೆಂಟ್ ಲೈಟ್, ಗೈರೊಸ್ಕೋಪ್, ಮ್ಯಾಗ್ನೆಟೋಮೀಟರ್ ಮತ್ತು ಪ್ರಾಕ್ಸಿಮಿಟಿ ಸೆನ್ಸಾರ್ ಅನ್ನು ಒಳಗೊಂಡಿದೆ. ಇನ್ನು ಈ ಫೋನ್ 170.47x76.54x9.13mm ಅಳತೆ ಮತ್ತು 208 ಗ್ರಾಂ ತೂಕವನ್ನು ಪಡೆದಿದೆ.

ಬೆಲೆ ಮತ್ತು ಲಭ್ಯತೆ
ಭಾರತದಲ್ಲಿ ಮೋಟೋ G51 5G ಸ್ಮಾರ್ಟ್ಫೋನ್ 4GB RAM + 64GB ಇಂಟರ್ ಸ್ಟೋರೇಜ್ ಆಯ್ಕೆಗೆ 14,999ರೂ. ಬೆಲೆಯನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್ಫೋನ್ ಆಕ್ವಾ ಬ್ಲೂ ಮತ್ತು ಇಂಡಿಗೊ ಬ್ಲೂ ಬಣ್ಣಗಳಲ್ಲಿ ಬರುತ್ತದೆ. ಇದು ಇದೇ ಡಿಸೆಂಬರ್ 16 ರಂದು ಮಧ್ಯಾಹ್ನ 12 ಗಂಟೆಗೆ (ಮಧ್ಯಾಹ್ನ) ಫ್ಲಿಪ್ಕಾರ್ಟ್ ಮೂಲಕ ದೇಶದಲ್ಲಿ ಖರೀದಿಗೆ ಲಭ್ಯವಿರುತ್ತದೆ.

ಇನ್ನು ಮೊಟೊರೊಲಾ ಕಂಪೆನಿ ಇತ್ತೀಚಿಗೆ ಭಾರತದಲ್ಲಿ ಮೊಟೊ G31 ಸ್ಮಾರ್ಟ್ಫೋನ್ ಬಿಡುಗಡೆ ಮಾಡಿತ್ತು. ಇನ್ನು ಈ ಸ್ಮಾರ್ಟ್ಫೋನ್ ಈಗಾಗಲೇ ಮಾರುಕಟ್ಟೆಯಲ್ಲಿ ಖರೀದಿಗೆ ಲಭ್ಯವಿದೆ. ಈ ಫೋನ್ 1080 x 2400 ಪಿಕ್ಸಲ್ ರೆಸಲ್ಯೂಶನ್ ಸಫೋರ್ಟ್ ಪಡೆದಿದ್ದು, 6.4 ಇಂಚಿನ ಪೂರ್ಣ ಹೆಚ್ಡಿ OLED ಡಿಸ್ಪ್ಲೇ ಪಡೆದಿದೆ. ಇದು ಮೀಡಿಯಾ ಟೆಕ್ ಹಿಲಿಯೋ G85 ಪ್ರೊಸೆಸರ್ ವೇಗವನ್ನು ಹೊಂದಿದೆ. ಈ ಸ್ಮಾರ್ಟ್ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್ಅಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸಲ್ ಸೆನ್ಸಾರ್ನಲ್ಲಿದೆ. ಜೊತೆಗೆ ಈ ಸ್ಮಾರ್ಟ್ಫೋನ್ 5,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್ಅಪ್ ಅನ್ನು ಹೊಂದಿದೆ. ಹಾಗೆಯೇ 20W ಸಾಮರ್ಥ್ಯದ ಫಾಸ್ಟ್ ಚಾರ್ಜಿಂಗ್ ಸೌಲಭ್ಯವನ್ನು ಪಡೆದಿದೆ. 4GB RAM + 64GB ಸ್ಟೋರೇಜ್ ವೇರಿಯಂಟ್ನ ಬೆಲೆಯು 12,999ರೂ. ಆಗಿದೆ.
-
54,999
-
36,599
-
39,999
-
38,990
-
1,29,900
-
79,990
-
38,900
-
18,999
-
19,300
-
69,999
-
44,999
-
15,999
-
20,449
-
7,332
-
18,990
-
31,999
-
54,999
-
17,091
-
17,091
-
13,999
-
31,830
-
31,499
-
26,265
-
24,960
-
21,839
-
15,999
-
11,570
-
11,700
-
7,070
-
7,086