ಮೋಟೋ G51 ಸ್ಮಾರ್ಟ್‌ಫೋನ್‌ ಅನಾವರಣ! ಪ್ರೊಸೆಸರ್‌ ಯಾವುದು?

|

ಮೊಟೊರೊಲಾ ಕಂಪೆನಿ ಜನಪ್ರಿಯ ಸ್ಮಾರ್ಟ್‌ಫೋನ್‌ ತಯಾರಕ ಎನಿಸಿಕೊಂಡಿದೆ. ಈಗಾಗಲೇ ಹಲವು ಆಕರ್ಷಕ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಮಾರುಕಟ್ಟೆಯಲ್ಲಿ ತನ್ನದೇ ಆದ ಪ್ರಾಬಲ್ಯ ಸಾಧಿಸಿದೆ. ಸದ್ಯ ಇದೀಗ ತನ್ನ ಹೊಸ ಮೋಟೋ G51 ಸ್ಮಾರ್ಟ್‌ಫೋನ್‌ ಲಾಂಚ್‌ ಮಾಡಿದೆ. ಈ ಸ್ಮಾರ್ಟ್‌ಫೋನ್ 6.8-ಇಂಚಿನ LCD ಡಿಸ್‌ಪ್ಲೇಯನ್ನು ಹೊಂದಿದೆ. ಇದು ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 480+ SoC ಪ್ರೊಸೆಸರ್‌ ಬಲವನ್ನು ಹೊಂದಿದೆ.

ಮೊಟೊರೊಲಾ

ಹೌದು, ಮೊಟೊರೊಲಾ ಕಂಪೆನಿ ಹೊಸ ಮೋಟೋ G51 ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಿದೆ. ಸದ್ಯ ಚೀನಾ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಿರುವ ಈ ಸ್ಮಾರ್ಟ್‌ಫೋನ್‌ ಹೋಲ್-ಪಂಚ್ ಡಿಸ್ಪ್ಲೇ ನಾಚ್ ವಿನ್ಯಾಸವನ್ನು ಹೊಂದಿದೆ. ಇದು ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್‌ ಸೆನ್ಸಾರ್‌ ಹೊಂದಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ವಿಶೇಷತೆ ಪಡೆದುಕೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಮೊಟೊ G51 ಸ್ಮಾರ್ಟ್‌ಫೋನ್‌ 720 x 1600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.8-ಇಂಚಿನ LCD ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ ಹೋಲ್‌-ಪಂಚ್‌ ಡಿಸ್‌ಪ್ಲೇ ನಾಚ್‌ ವಿನ್ಯಾಸವನ್ನು ಹೊಂದಿದೆ. ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್ ಮತ್ತು 240Hz ಟಚ್ ಸ್ಯಾಂಪ್ಲಿಂಗ್ ರೇಟ್‌ ಅನ್ನು ಒಳಗೊಂಡಿದೆ. ಈ ಡಿಸ್‌ಪ್ಲೇ ವೀಡಿಯೋ ಕರೆ ಮತ್ತು ಗೇಮಿಂಗ್‌ಗೆ ಅನುಕೂಲಕರವಾದ ವಿನ್ಯಾಸಹೊಂದಿದೆ.

ಪ್ರೊಸೆಸರ್‌ ಯಾವುದು?

ಪ್ರೊಸೆಸರ್‌ ಯಾವುದು?

ಈ ಸ್ಮಾರ್ಟ್‌ಫೋನ್‌ 2.2GHz ಆಕ್ಟಾ-ಕೋರ್‌ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 480+ SoC ಪ್ರೊಸೆಸರ್‌ ಹೊಂದಿದೆ. ಇದು ಆಂಡ್ರಾಯ್ಡ್‌ v11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಹೊಂದಿದೆ.

ಕ್ಯಾಮೆರಾ ಹೇಗಿದೆ?

ಕ್ಯಾಮೆರಾ ಹೇಗಿದೆ?

ಮೋಟೋ G51 ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ S5JKN1 ಸೆನ್ಸಾರ್‌ ಹೊಂದಿದೆ. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಇದಲ್ಲದೆ 13 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಒಳಗೊಂಡಿದೆ. ಇನ್ನು ಕ್ಯಾಮೆರಾ ಫೀಚರ್ಸ್‌ಗಳಲ್ಲಿ ಆಟೋ ಫೋಕಸ್‌, ಫ್ಲ್ಯಾಶ್‌, ಅನ್ನು ಪಡೆದುಕೊಂಡಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಮೋಟೋ G51 ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಪಡೆದುಕೊಂಡಿದೆ. ಇದು 10W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ ಎಂದು ಹೇಳಲಾಗಿದೆ. ಇದು ಡಾಲ್ಬಿ ಅಟ್ಮಾಸ್ ಅನ್ನು ಬೆಂಬಲಿಸುತ್ತದೆ ಎಂದು ಸಹ ಹೇಳಲಾಗುತ್ತದೆ. ಇನ್ನು ಈ ಸ್ಮಾರ್ಟ್‌ಫೋನ್‌ ರಿಯರ್‌ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಅನ್ನು ಹೊಂದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G ಬೆಂಬಲ, Wi-Fi 5, ಬ್ಲೂಟೂತ್ v5.2, GPS, USB ಟೈಪ್-C ಪೋರ್ಟ್ ಮತ್ತು 3.5mm ಆಡಿಯೊ ಜಾಕ್‌ ಅನ್ನು ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಚೈನೀಸ್ ಬ್ಲಾಗರ್ WHYLAB ವರದಿಯ ಪ್ರಕಾರ ಹೊಸ Moto G51 ಚೀನಾದಲ್ಲಿ CNY 1,499 (ಸುಮಾರು 17,500ರೂ) ಬೆಲೆ ಹೊಂದಿದೆ ಎನ್ನಲಾಗಿದೆ. ಇದು ಬ್ಲೂ ಮತ್ತು ಬೂದು ಗ್ರೇಡಿಯಂಟ್ ವರ್ಣಗಳಲ್ಲಿ ಬಿಡುಗಡೆಯಾಗಿದೆ. ಈ ಸ್ಮಾರ್ಟ್‌ಫೋನ್‌ ಯಾವಾಗ ಸೇಲ್‌ ಆಗಲಿದೆ, ಭಾರತದಲ್ಲಿ ಯಾವಾಗ ಲಭ್ಯವಾಗಲಿದೆ ಎಂಬುದರ ಬಗ್ಗೆ ಯಾವುದೇ ಮಾಹಿತಿ ಇಲ್ಲ.

ಮೋಟೋ E40 ಸ್ಮಾರ್ಟ್‌ಫೋನ್‌

ಇನ್ನು ಇತ್ತೀಚಿಗೆ ಭಾರತದಲ್ಲಿ ಮೋಟೋ E40 ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಿತ್ತು. ಇನ್ನು ಈ ಸ್ಮಾರ್ಟ್‌ಫೋನ್‌ 720x1,600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5-ಇಂಚಿನ ಮ್ಯಾಕ್ಸ್ ವಿಷನ್ ಹೆಚ್‌ಡಿ+ ಪ್ಲಸ್‌ ಡಿಸ್‌ಪ್ಲೇ ಹೊಂದಿದೆ. ಇದು ಯೂನಿಸೋಕ್ T700 SoC ಪ್ರೊಸೆಸರ್‌ ಸಾಮರ್ಥ್ಯವನ್ನು ಹೊಂದಿದ್ದು, ಆಂಡ್ರಾಯ್ಡ್‌ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಜೊತೆಗೆ 4GB RAM ಮತ್ತು 64GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ ಮೈಕ್ರೋ ಎಸ್‌ಡಿ ಕಾರ್ಡ್‌ ಬಳಸಿ ಸಂಗ್ರಹ ಸಾಮರ್ಥ್ಯವನ್ನು 1TB ವರೆಗೆ ವಿಸ್ತರಿಸಬಹುದಾಗಿದೆ. ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಪ್ರಾಥಮಿಕ ಸೆನ್ಸಾರ್ ಜೊತೆಗೆ f/1.79 ಲೆನ್ಸ್ ಹೊಂದಿದೆ. ಜೊತೆಗೆ ಮೋಟೋ E40 ಸ್ಮಾರ್ಟ್‌ಫೋನ್‌ 5,000 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 10W ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಭಾರತದಲ್ಲಿ ಮೊಟೊರೊಲಾ ಮೋಟೋ E40 ಸ್ಮಾರ್ಟ್‌ಫೋನ್‌ 4GB RAM + 64GB ಸ್ಟೋರೇಜ್ ರೂಪಾಂತರಕ್ಕೆ 9,499.ರೂ ಬೆಲೆ ಹೊಂದಿದೆ.

Best Mobiles in India

English summary
Moto G51 is powered by the Qualcomm Snapdragon 480+ SoC.to know more visit to kannada.gizbot.com.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X