Just In
Don't Miss
- News
ಭಾರತದಲ್ಲಿ 196 ಕೋಟಿ ದಾಟಿದ ಕೋವಿಡ್ ಲಸಿಕಾ ಅಭಿಯಾನ
- Automobiles
ಬರೋಬ್ಬರಿ 40 ವೆರಿಯೆಂಟ್ಗಳನ್ನು ಹೊಂದಿರಲಿದೆ ಹೊಸ ಮಹೀಂದ್ರಾ ಸ್ಕಾರ್ಪಿಯೋ-ಎನ್
- Finance
ಅತೀ ಕಡಿಮೆ ಬಡ್ಡಿದರದಲ್ಲಿ ವೈಯಕ್ತಿಕ ಸಾಲ ನೀಡುತ್ತೆ ಈ ಬ್ಯಾಂಕುಗಳು!
- Sports
1983ರ ವಿಶ್ವಕಪ್ ವಿಜಯೋತ್ಸವಕ್ಕೆ 39 ವರ್ಷಗಳು: ಇಡೀ ದೇಶಕ್ಕೆ ಸ್ಫೂರ್ತಿ ನೀಡಿದ್ದ ಕಪಿಲ್ ದೇವ್ ತಂಡ!
- Movies
ಹಿಟ್ಲರ್ ಕಲ್ಯಾಣ: ತನ್ನ ತಾಯಿಗೆ ಪಾಠ ಕಲಿಸುತ್ತಾಳ ಲೀಲಾ?
- Education
BIMS Belagavi Recruitment 2022 : 10 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
- Lifestyle
ಪುರುಷರಲ್ಲಿ ಲೈಂಗಿಕ ಶಕ್ತಿಯ ಸಮಸ್ಯೆಗೆ ಈ ಹಣ್ಣುಗಳೇ ಪವರ್ಫುಲ್ ಮದ್ದು
- Travel
ನಿಮ್ಮ ಮುಂದಿನ ಪ್ರವಾಸದ ಪಟ್ಟಿಯಲ್ಲಿ ಕರ್ನಾಟಕದ ಬಾದಾಮಿ ಯಾಕಿರಬೇಕು? ಇಲ್ಲಿದೆ ಕಾರಣ!
ಶೀಘ್ರದಲ್ಲೇ ಭಾರತಕ್ಕೆ ಎಂಟ್ರಿ ನೀಡಲಿದೆ ಮೋಟೋ G52 ಸ್ಮಾರ್ಟ್ಫೋನ್!
ಮೊಟೊರೊಲಾ ಕಂಪೆನಿ ಭಾರತದ ಸ್ಮಾರ್ಟ್ಫೋನ್ ಮಾರುಕಟ್ಟೆಯಲ್ಲಿ ವಿಶೇಷ ಸ್ಥಾನವನ್ನು ಪಡೆದಿದೆ. ತನ್ನ ಭಿನ್ನ ಮಾದರಿಯ ಸ್ಮಾರ್ಟ್ಫೋನ್ಗಳಿಂದ ಮಾರುಕಟ್ಟೆಯಲ್ಲಿ ತನ್ನ ಸ್ಥಾನವನ್ನು ಭದ್ರಪಡಿಸಿಕೊಂಡಿದೆ. ಸದ್ಯ ಇದೀಗ ಭಾರತದ ಮಾರುಕಟ್ಟೆಯಲ್ಲಿ ತನ್ನ ಹೊಸ ಮೋಟೋ G52 ಫೋನ್ ಬಿಡುಗಡೆ ಮಾಡಲು ಸಿದ್ಧತ ನಡೆಸಿದೆ. ಈ ಸ್ಮಾರ್ಟ್ಫೋನ್ ಈ ತಿಂಗಳಾಂತ್ಯದಲ್ಲಿ ಭಾರತದಲ್ಲಿ ಬಿಡುಗಡೆಯಾಗುವ ನಿರೀಕ್ಷೆಯಿದೆ. ಇನ್ನು ಈ ಸ್ಮಾರ್ಟ್ಫೋನ್ ಕಳೆದ ವರ್ಷ ಭಾರತದಲ್ಲಿ ಅನಾವರಣಗೊಂಡ ಮೋಟೋ G51 ನ ಉತ್ತರಾಧಿಕಾರಿಯಾಗಿದೆ.

ಹೌದು, ಮೊಟೊರೊಲಾ ಕಂಪೆನಿ ಭಾರತದಲ್ಲಿ ಸದ್ಯದಲ್ಲೇ ಮೋಟೋ G52 ಫೋನ್ ಬಿಡುಗಡೆ ಮಾಡಲಿದೆ. ಇದು ಕ್ವಾಲ್ಕಾಮ್ ಸ್ನಾಪ್ಡ್ರಾಗನ್ 680SoC ಪ್ರೊಸೆಸರ್ ಹೊಂದಿದೆ. ಇನ್ನು ಈ ಸ್ಮಾರ್ಟ್ಫೋನ್ 6.6 ಇಂಚಿನ ಫುಲ್ HD+ ಅಮೋಲೆಡ್ ಡಿಸ್ಪ್ಲೇಯನ್ನು ಹೊಂದಿದೆ. ಈ ಡಿಸ್ಪ್ಲೇ 90hZ ರಿಫ್ರೆಶ್ ರೇಟ್ ಅನ್ನು ಒಳಗೊಂಡಿರಲಿದೆ. ಇದಲ್ಲದೆ ಈ ಸ್ಮಾರ್ಟ್ಫೋನ್ ಟ್ರಿಪಲ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇನ್ನುಳಿದಂತೆ ಈ ಸ್ಮಾರ್ಟ್ಫೋನ್ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್ಪ್ಲೇ ರಚನೆ ಮತ್ತು ವಿನ್ಯಾಸ
ಮೋಟೋ G52 ಸ್ಮಾರ್ಟ್ಫೋನ್ 1080 x 2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.6 ಇಂಚಿನ ಫುಲ್ HD+ ಅಮೋಲೆಡ್ ಡಿಸ್ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್ಪ್ಲೇ 90Hz ರಿಫ್ರೆಶ್ ರೇಟ್ ಅನ್ನು ಬೆಂಬಲಿಸಲಿದೆ. ಈ ಡಿಸ್ಪ್ಲೇಯು 402ppi ಪಿಕ್ಸೆಲ್ ಸಾಂದ್ರತೆಯನ್ನು ಒಳಗೊಂಡಿದೆ. ಜೊತೆಗೆ ಈ ಡಿಸ್ಪ್ಲೇ 87.70% ಸ್ಕ್ರೀನ್-ಟು-ಬಾಡಿ ಅನುಪಾತವನ್ನು ಹೊಂದಿದ್ದು, 20:9 ರಚನೆಯ ಅನುಪಾತವನ್ನು ಹೊಂದಿದೆ.

ಪ್ರೊಸೆಸರ್ ಯಾವುದು?
ಮೋಟೋ G52 ಸ್ಮಾರ್ಟ್ಫೋನ್ ಕ್ವಾಲ್ಕಾಮ್ ಸ್ನಾಪ್ಡ್ರಾಗನ್ 680 SoC ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್ 12 ಬೆಂಬಲದೊಂದಿಗೆ ಕಾರ್ಯನಿರ್ವಹಿಲಿದೆ. ಹಾಗೆಯೇ 4GB RAM ಮತ್ತು 128GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ ಮೈಕ್ರೋ ಎಸ್ಡಿ ಕಾರ್ಡ್ ಮೂಲಕ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವುದಕ್ಕೆ ಅವಕಾಶ ನೀಡಲಿದೆ.

ಕ್ಯಾಮೆರಾ ವಿಶೇಷ
ಮೋಟೋ G52 ಸ್ಮಾರ್ಟ್ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯವನ್ನು ಹೊಂದಿದೆ. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಆಂಗಲ್ ಡೆಪ್ತ್ ಸೆನ್ಸಾರ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಸೆನ್ಸಾರ್ ಅನ್ನು ಒಳಗೊಂಡಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ
ಮೋಟೋ G52 ಸ್ಮಾರ್ಟ್ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 30W ಟರ್ಬೋಪವರ್ ಚಾರ್ಜಿಂಗ್ಗೆ ಬೆಂಬಲವನ್ನು ನೀಡಲಿದೆ. ಇನ್ನು ಈ ಸ್ಮಾರ್ಟ್ಫೋನ್ IP52 ರೇಟಿಂಗ್ ಅನ್ನು ಹೊಂದಿದ್ದು, ಡಾಲ್ಬಿ ಅಟ್ಮೋಸ್ ಬೆಂಬಲವನ್ನು ಒಳಗೊಂಡಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್ಸ್ಪಾಟ್, ವೈಫೈ, ಬ್ಲೂಟೂತ್, ಹೆಡ್ಫೋನ್ ಜ್ಯಾಕ್ ಅನ್ನು ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ
ಮೋಟೋ G52 ಸ್ಮಾರ್ಟ್ಫೋನ್ ತನ್ನ ಏಕೈಕ 4GB + 128GB ಸ್ಟೋರೇಜ್ ರೂಪಾಂತರಕ್ಕಾಗಿ ಯುರೋಪ್ನಲ್ಲಿ EUR 249 (ಸುಮಾರು 20,600ರೂ) ಬೆಲೆಯಲ್ಲಿ ಬಿಡುಗಡೆಯಾಗಿದೆ. ಅಲ್ಲದೆ ಚಾರ್ಕೋಲ್ ಗ್ರೇ ಮತ್ತು ಪಿಂಗಾಣಿ ವೈಟ್ ಸೇರಿದಂತೆ ಎರಡು ಬಣ್ಣದ ಆಯ್ಕೆಗಳಲ್ಲಿ ಲಭ್ಯವಿದೆ. ಇನ್ನು ಭಾರತದಲ್ಲಿ ಶೀಘ್ರದಲ್ಲೇ ಬಿಡುಗಡೆಯಾಗಲಿದ್ದು, ಬೆಲೆ ಹಾಗೂ ಲಬ್ಯತೆ ವಿವರ ಇನ್ನು ಕೂಡ ಲಭ್ಯವಾಗಿಲ್ಲ.
-
54,535
-
1,19,900
-
54,999
-
86,999
-
49,975
-
49,990
-
20,999
-
1,04,999
-
44,999
-
64,999
-
20,699
-
49,999
-
11,499
-
54,999
-
7,999
-
8,980
-
17,091
-
10,999
-
34,999
-
39,600
-
25,750
-
33,590
-
27,760
-
44,425
-
13,780
-
1,25,000
-
45,990
-
1,35,000
-
82,999
-
17,999