Home
ಸುದ್ದಿಜಾಲ

ಇಂದು ಮೋಟೋ G52 ಸ್ಮಾರ್ಟ್‌ಫೋನ್‌ ಫಸ್ಟ್‌ ಸೇಲ್‌! ಆಫರ್‌ ಏನಿದೆ?

ಮೊಟೊರೊಲಾ ಕಂಪೆನಿ ಕೆಲ ದಿನಗಳ ಹಿಂದೆ ಭಾರತದಲ್ಲಿ ಹೊಸ ಮೋಟೋ G52 ಫೋನ್‌ ಬಿಡುಗಡೆ ಮಾಡಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ತನ್ನ ಆಕರ್ಷಕ ಫೀಚರ್ಸ್‌ಗಳ ಮೂಲಕ ಗಮನ ಸೆಳೆದಿದೆ. ಈ ಸ್ಮಾರ್ಟ್‌ಫೋನ್‌ ಇಂದು (ಮೇ.3) ಮಧ್ಯಾಹ್ನ 12ರಿಂದ ಭಾರತದಲ್ಲಿ ಫ್ಲಿಪ್‌ಕಾರ್ಟ್ ಮೂಲಕ ಫಸ್ಟ್‌ ಸೇಲ್‌ ನಡೆಸಲಿದೆ. ಇನ್ನು ಈ ಸ್ಮಾರ್ಟ್‌ಫೋನಿನ ಆರಂಭಿಕ ಬೆಲೆ 14,499ರೂ.ಆಗಿದೆ. ಹಾಗೆಯೇ ಲಾಂಚ್‌ ಆಫರ್‌ನಲ್ಲಿ ಹೆಚ್‌ಡಿಎಫ್‌ಸಿ ಕ್ರೆಡಿಟ್‌ ಕಾರ್ಡ್‌ ಮೂಲಕ ಖರೀದಿಸುವ ಗ್ರಾಹಕರು 1,000ರೂ.ಗಳ ತ್ವರಿತ ರಿಯಾಯಿತಿಯನ್ನು ಪಡೆದುಕೊಳ್ಳಬಹುದಾಗಿದೆ.

ಮೋಟೋ G52 ಸ್ಮಾರ್ಟ್‌ಫೋನ್‌

ಹೌದು, ಮೋಟೋ G52 ಸ್ಮಾರ್ಟ್‌ಫೋನ್‌ ಇಂದು ಮೊದಲ ಮಾರಾಟ ನಡೆಸಲಿದೆ. ಈ ಫೋನ್‌ ಹಿಂಬದಿಯಲ್ಲಿ ತ್ರಿವಳಿ ಕ್ಯಾಮೆರಾ ಸೆಟಪ್‌ ಅನ್ನು ಒಳಗೊಂಡಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 33W ವೇಗದ ಚಾರ್ಜಿಂಗ್ ಬೆಂಬಲವನ್ನು ಒಳಗೊಂಡಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ವಿಶೇಷತೆ ಏನು? ಲಾಂಚ್‌ ಆಫರ್‌ ಏನಿದೆ? ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಒದಿರಿ

ಡಿಸ್‌ಪ್ಲೇ ವಿಶೇಷ

ಡಿಸ್‌ಪ್ಲೇ ವಿಶೇಷ

ಮೋಟೋ G52 ಸ್ಮಾರ್ಟ್‌ಫೋನ್‌ 6.6 ಇಂಚಿನ ಫುಲ್‌ HD+ ಪೋಲ್ಡ್ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 1,080x2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಒಳಗೊಂಡಿದೆ. ಇದು 20:9 ರಚನೆಯ ಅನುಪಾತ ಮತ್ತು 90Hz ರಿಫ್ರೆಶ್ ರೇಟ್‌ ಒಳಗೊಂಡಿದೆ. ಜೊತೆಗೆ 360Hz ಟಚ್ ಸ್ಯಾಂಪ್ಲಿಂಗ್ ರೇಟ್‌, DCI-P3 ಕಲರ್‌ ಹರವು ಮತ್ತು DC ಡಿಮ್ಮಿಂಗ್‌ ಅನ್ನು ಹೊಂದಿದೆ.

ಪ್ರೊಸೆಸರ್‌ ಯಾವುದು?

ಪ್ರೊಸೆಸರ್‌ ಯಾವುದು?

ಮೋಟೋ G52 ಸ್ಮಾರ್ಟ್‌ಫೋನ್‌ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 680 SoC ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್‌ 12 ಬೆಂಬಲದೊಂದಿಗೆ ಕಾರ್ಯನಿರ್ವಹಿಲಿದೆ. ಹಾಗೆಯೇ 4GB RAM ಮತ್ತು 128 GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯ ವನ್ನು ಹೊಂದಿದೆ. ಇದಲ್ಲದೆ ಮೈಕ್ರೋ ಎಸ್‌ಡಿ ಕಾರ್ಡ್‌ ಮೂಲಕ 1TB ವರೆಗೆ ಸಂಗ್ರಹ ಸಾಮರ್ಥ್ಯ ವನ್ನು ವಿಸ್ತರಿಸುವುದಕ್ಕೆ ಅವಕಾಶ ನೀಡಲಿದೆ.

ಟ್ರಿಪಲ್‌ ಕ್ಯಾಮೆರಾ

ಟ್ರಿಪಲ್‌ ಕ್ಯಾಮೆರಾ

ಮೋಟೋ G52 ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಲೆನ್ಸ್‌ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಒಳಗೊಂಡಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಮೋಟೋ G52 ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 33W ವೇಗದ ಚಾರ್ಜಿಂಗ್ ಬೆಂಬಲವನ್ನು ನೀಡುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4 ಜಿ ಎಲ್ ಟಿಇ, ವೈ-ಫೈ 802.11 ಬಿ / ಜಿ / ಎನ್, ಬ್ಲೂಟೂತ್ ವಿ 5.0, ಜಿಪಿಎಸ್ / ಎ-ಜಿಪಿಎಸ್, ಮೈಕ್ರೋ-ಯುಎಸ್ಬಿ ಮತ್ತು 3.5 ಎಂಎಂ ಹೆಡ್ಫೋನ್ ಜ್ಯಾಕ್ ಸೇರಿವೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಭಾರತದಲ್ಲಿ ಮೋಟೋ G52 ಸ್ಮಾರ್ಟ್‌ಫೋನ್‌ ಬೆಲೆ 4GB + 64GB ಸ್ಟೋರೇಜ್ ಮಾದರಿಗೆ 14,499ರೂ.ಆಗಿದೆ. ಇನ್ನು 6GB + 128GB ಸ್ಟೋರೇಜ್ ಮಾದರಿಗೆ 16,499ರೂ.ಬೆಲೆ ಪಡೆದುಕೊಂಡಿದೆ. ಈ ಫೋನ್‌ ಚಾರ್ಕೋಲ್ ಗ್ರೇ ಮತ್ತು ಪಿಂಗಾಣಿ ವೈಟ್ ಕಲರ್‌ ಆಯ್ಕೆಯಲ್ಲಿ ಲಭ್ಯವಾಗಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಖರೀದಿಸುವವರು HDFC ಕ್ರೆಡಿಟ್ ಕಾರ್ಡ್ ಬಳಸಿದರೆ ಗ್ರಾಹಕರಿಗೆ 1,000 ತ್ವರಿತ ರಿಯಾಯಿತಿ ದೊರೆಯಲಿದೆ. ಇದಲ್ಲದೆ ಜಿಯೋ ಬಳಕೆದಾರರು 2,549ರೂ. ಮೌಲ್ಯದ ಪ್ರಯೋಜನಗಳನ್ನು ಪಡೆಯುತ್ತಾರೆ ಎಂದು ಹೇಳಲಾಗುತ್ತದೆ.

Best Mobiles in India

English summary
Moto G52 to go on sale in India for the first time today at 12pm
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+